Kiran Raj | ಸೆಟ್ ಏರಿತು ಕನ್ನಡದ ʼಶೇರ್ʼ; ಕಿರಣ್‌ ರಾಜ್‌ ಹೇಳಿದ್ದೇನು? - Vistara News

ಸಿನಿಮಾ

Kiran Raj | ಸೆಟ್ ಏರಿತು ಕನ್ನಡದ ʼಶೇರ್ʼ; ಕಿರಣ್‌ ರಾಜ್‌ ಹೇಳಿದ್ದೇನು?

ಕನ್ನಡತಿ ಧಾರಾವಾಹಿ ಖ್ಯಾತಿಯ ಕಿರಣ್ ರಾಜ್ ಶೇರ್‌ ಚಿತ್ರದ ಮೂಲಕ ಮತ್ತೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಆಗಸ್ಟ್‌ 22ರಂದು ಚಿತ್ರೀಕರಣ ಆರಂಭವಾಗಲಿದೆ.

VISTARANEWS.COM


on

ಕಿರಣ್ ರಾಜ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಿರುತೆರೆ ಕನ್ನಡತಿ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದುಕೊಂಡಿರುವ ನಟ ಕಿರಣ್ ರಾಜ್ ಅವರ ನೂತನ ಸಿನಿಮಾ ಸೆಟ್ಟೇರಿದೆ. ಬಡ್ಡಿಸ್ ಚಿತ್ರದಿಂದ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದ ಅವರು, ಈಗ ಶೇರ್ ಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇದರ ಮುಹೂರ್ತ ಕಾರ್ಯಕ್ರಮ ನಿರ್ವಿಘ್ನವಾಗಿ ನೆರವೇರಿದೆ.

ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದ್ದು, ಆಗಸ್ಟ್‌ 22ಕ್ಕೆ ಚಿತ್ರೀಕರಣ ಆರಂಭವಾಗಲಿದೆ. ಭರ್ಜರಿ ಗಂಡು ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಸುರೇಖಾ ಶೇರ್‌ನಲ್ಲಿ ನಾಯಕಿಯಾಗಿದ್ದಾರೆ.

ಡಾ.ಸುದರ್ಶನ್ ಸುಂದರ್ ರಾಜ್ ನಿರ್ಮಾಣದಲ್ಲಿ ಸಿನಿಮಾ ಮೂಡಿಬರುತ್ತಿದ್ದು, ತನಿಶಾ ಕುಪ್ಪಂಡ, ಯಶ್ ಶೆಟ್ಟಿ, ಬಾಲ ರಾಜವಾಡಿ ಮತ್ತು ಶರತ್ ಲೋಹಿತಾಶ್ವ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಭರ್ಜರಿ ಗಂಡು ಸೆಪ್ಟೆಂಬರ್‌ನಲ್ಲಿ ಬಿಡುಗಡೆಗೆ ಯೋಜಿಸಿದ್ದರೆ, ಅವರ ಇತರ ಚಿತ್ರಗಳಾದ ಬಡ್ಡಿಸ್, ಚಿಕನ್ ಪುಳಿಯೊಗರೆ, ಚತುಷ್ಪಥ ಮತ್ತು ವಿಕ್ರಮ್ ಗೌಡ ನಿರ್ಮಾಣದ ವಿವಿಧ ಹಂತಗಳಲ್ಲಿವೆ ಎಂದು ಕಿರಣ್‌ ರಾಜ್‌ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ | Buddies : ಕಿರುತೆರೆ ನಟ ಕಿರಣ್‌ರಾಜ್ ಈಗ ಸ್ಯಾಂಡಲ್‌ವುಡ್‌ಗೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Ramana Avatara Movie: ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ; ‘ರಾಮನ ಅವತಾರ’ ಚಿತ್ರ ನಿಷೇಧಿಸಲು ಆಗ್ರಹ!

Ramana Avatara Movie: ʼರಾಮನ ಅವತಾರ’ ಕನ್ನಡ ಚಲನಚಿತ್ರವನ್ನು ನಿಷೇಧಿಸಬೇಕು ಎಂದು ಕರ್ನಾಟಕ ಚಲನಚಿತ್ರ ಮಂಡಳಿಗೆ ಹಿಂದು ಜನಜಾಗೃತಿ ಸಮಿತಿ ಮನವಿ ಮಾಡಿದೆ. ಚಿತ್ರದ ವಿರುದ್ಧ ಹಿಂದುಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ.

VISTARANEWS.COM


on

Ramana Avatara Movie
Koo

ಬೆಂಗಳೂರು: ಕೋಟ್ಯಂತರ ಹಿಂದುಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ ಮಾಡಿರುವ ʼರಾಮನ ಅವತಾರ’ (Ramana Avatara Movie) ಕನ್ನಡ ಚಲನಚಿತ್ರವನ್ನು ನಿಷೇಧಿಸಬೇಕು ಎಂದು ಹಿಂದು ಜನಜಾಗೃತಿ ಸಮಿತಿ ಒತ್ತಾಯಿಸಿದೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್ ಅವರಿಗೆ ಹಿಂದು ಜನಜಾಗೃತಿ ಸಮಿತಿಯ ಶರತ್ ಕುಮಾರ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.

ವಿನಯ ಪಂಪಾಪತಿ ಮತ್ತು ವಿಕಾಸ ಪಂಪಾಪತಿ ನಿರ್ದೇಶನದ ಹಾಗೂ ಅಮ್ರೆಜ್ ಸೂರ್ಯವಂಶಿ ನಿರ್ಮಾಣದ ‘ರಾಮನ ಅವತಾರ’ ಎಂಬ ಕನ್ನಡ ಚಲನಚಿತ್ರ ಮೇ 10 ಕ್ಕೆ ಬಿಡುಗಡೆಗೊಳ್ಳಲಿದ್ದು, ಅದರ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರಲ್ಲಿ ಕೋಟ್ಯಂತರ ಹಿಂದುಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ ಮಾಡಲಾಗಿದೆ. ಆದ್ದರಿಂದ ಸಿನಿಮಾದ ಹೆಸರನ್ನು ಬದಲಾಯಿಸಬೇಕು ಮತ್ತು ಅದರಲ್ಲಿನ ರಾಮಾಯಣದ ಅಪಮಾನಾತ್ಮಕ ಸನ್ನಿವೇಶಗಳನ್ನು ತೆಗೆದುಹಾಕಬೇಕೆಂದು ಹಿಂದು ಜನಜಾಗೃತಿ ಸಮಿತಿ ಆಗ್ರಹಿಸಿದೆ.

ರಾಮನ ಅವತಾರ ಚಿತ್ರದಲ್ಲಿ ರಾಮನ ವೇಷದಲ್ಲಿ ನಟ ರಿಷಿ.

ಚಿತ್ರದ ಟ್ರೈಲರ್‌ನಲ್ಲಿ ‘ರಾಮ’ ಹೆಸರಿನ ಚಿತ್ರದ ನಾಯಕ ‘ಯಾವ ಊರಿನ ಜನ ನನ್ನನ್ನು ಊರಿಂದ ಹೊರಗೆ ತಳ್ಳಿದರೋ ಅದೇ ಜನ ನನಗೆ ಗೌರವ ಕೊಡುವ ತನಕ ನಾನು ಇಲ್ಲೇ ಎಲ್ಲದರೂ ರಸ್ತೆಯಲ್ಲಿ ಕಾಲ ಕಳೆಯುತ್ತೇನೆ’ ಎನ್ನುತ್ತಾನೆ, ಇದು ರಾಮಾಯಣ ಧರ್ಮಗ್ರಂಥಕ್ಕೆ ಮಾಡಿದ ಘೋರ ಅಪಮಾನವಾಗಿದೆ. ಚಿತ್ರನಟ ‘ರಾಮನ’ ಹೆಸರಿನಲ್ಲಿ ಚುನಾವಣೆಗೆ ನಿಂತಿರುತ್ತಾನೆ, ಅಲ್ಲಿ ‘ಯಾರ ಮನೆ ಮುಂದೆ ಕಸ ಇದ್ದರೆ ರಾಮನಿಗೆ ಕಾಲ್ ಮಾಡಿ’ ಎಂದು ಕರೆ ನೀಡಲಾಗುತ್ತದೆ. ಇನ್ನು ಚಿತ್ರ ನಾಯಕಿ ರಾಮಾಯಣದಂತೆ ರಾಮನನನ್ನು ಜಿಂಕೆಯ ಚಿತ್ರವಿರುವ ಕಾರಿನ ಹಿಂದೆ ಓಡಿಸಿ ನಂತರ ಅವಳನ್ನು ಕಿಡ್ನ್ಯಾಪ್ ಮಾಡುತ್ತಿರುವಂತೆ ತೋರಿಸಲಾಗಿದೆ. ಅಷ್ಟೇ ಅಲ್ಲದೆ ರಾಮನ ವೇಷದಲ್ಲಿ ಚಿತ್ರದ ನಾಯಕ ಖಳನಾಯಕರೊಂದಿಗೆ ಫೈಟಿಂಗ್ ಮಾಡುತ್ತಿರುವಂತೆ ತೋರಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ | Megha Dhade: ನಮ್ಮ ದೇಶ ಬಿಟ್ಟು ನರಕಕ್ಕೆ ಹೋಗಿ ಎಂದು ರಾಹುಲ್‌ ಗಾಂಧಿ ವಿರುದ್ಧ ʻಬಿಗ್‌ ಬಾಸ್‌ʼ ವಿಜೇತೆ ಆಕ್ರೋಶ!

ಹಿಂದು ಜನಜಾಗೃತಿ ಸಮಿತಿಯ ಶರತ್ ಕುಮಾರ್ ಮಾತನಾಡಿ, ಭಾರತ ಸೇರಿ ವಿಶ್ವಾದ್ಯಂತ ಪ್ರಭು ಶ್ರೀರಾಮನನ್ನು ಪೂಜಿಸಲಾಗುತ್ತಿದೆ. ರಾಮನಿಗಾಗಿ ಸಾವಿರಾರು ಹಿಂದುಗಳು ತಮ್ಮ ಪ್ರಾಣತ್ಯಾಗ ಮಾಡಿ ಭವ್ಯ ರಾಮಮಂದಿರ ಕಟ್ಟಿದ್ದಾರೆ. ಹೀಗಿರುವಾಗ ಈ ಚಿತ್ರದಲ್ಲಿ ಶ್ರೀರಾಮನ ವೇಷವನ್ನು ನಾಯಕನಿಗೆ ತೊಡಿಸಿ, ಪೊಲೀಸರು ಶ್ರೀರಾಮನನ್ನು ಅಟ್ಟಾಡಿಸುವಂತೆ ತೋರಿಸಲಾಗಿದೆ. ಕಾಮಿಡಿ ಚಿತ್ರ ಮಾಡುವ ಗೀಳಿನಲ್ಲಿ ಪವಿತ್ರ ರಾಮಾಯಣ ಮತ್ತು ಪ್ರಭು ಶ್ರೀರಾಮನ ಘೋರ ಅಪಮಾನ ಮಾಡಿರುವುದು ಕಂಡುಬರುತ್ತದೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಇದೇ ಕಾರಣಕ್ಕೆ ಈ ಚಲನಚಿತ್ರ ಬಿಡುಗಡೆಯಾಗಲು ವಿರೋಧ ವ್ಯಕ್ತವಾಗಿತ್ತು, ಆದರೆ ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಿರುವಂತೆ ಕಂಡರೂ ಚಿತ್ರದ ಹೆಸರು ಮತ್ತು ಅದರಲ್ಲಿನ ತುಣುಕುಗಳಲ್ಲಿ ಇನ್ನೂ ರಾಮನ ಅಪಮಾನ ಎದ್ದು ಕಾಣಿಸುತ್ತಿದೆ. ಕಾಮಿಡಿ ಚಿತ್ರ ರಚಿಸುವ ಉದ್ದೇಶವಿದ್ದಿದ್ದರೆ ‘ರಾಮನ ಅವತಾರ’ವೆಂದೇ ಏಕೆ ಹೆಸರಿಡಬೇಕಿತ್ತು ? ಇತರ ಪಂಥೀಯರ ಶ್ರದ್ಧಾಸ್ಥಾನಗಳ ಮೇಲೆ ಈ ರೀತಿಯ ಕಾಮಿಡಿ ಚಿತ್ರ ರಚಿಸುವ ಧೈರ್ಯ ತೋರುವರೆ? ಕೀಳುಮಟ್ಟದ ಸಿನಿಮಾ ಪ್ರಚಾರಕ್ಕಾಗಿ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದು ಭಾರತೀಯ ದಂಡ ಸಂಹಿತೆ 295, 298 ಮತ್ತು 295 A ಪ್ರಕಾರ ಗಂಭೀರ ಅಪರಾಧವಾಗಿದೆ. ಅದಲ್ಲದೇ ಸಿನಿಮಾಟೋಗ್ರಾಫ್ ಆಕ್ಟ್ 1952 ನ ಕಲಂ 5 B ಪ್ರಕಾರ ಇದು ಸೆನ್ಸಾರ್ ಮಂಡಳಿ ನಿಯಮದ ಉಲ್ಲಂಘನೆಯಾಗಿದೆ. ದೇಶದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಸಿನಿಮಾ ಮಾಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವುದು ನೀತಿ ಸಂಹಿತೆ ಉಲ್ಲಂಘನೆ ಆಗಿದೆ. ಈ ಚಿತ್ರದ ಸೆನ್ಸಾರ್ ಪ್ರಮಾಣ ಪತ್ರ ರದ್ದುಗೊಳಿಸದಿದ್ದರೆ ರಾಜ್ಯಾದ್ಯಂತ ಆಂದೋಲನ ನಡೆಸಲಾಗುವುದು ಎಂದಿದ್ದಾರೆ.

ಈ ಮನವಿಯಲ್ಲಿ ಪ್ರಭು ಶ್ರೀರಾಮನ ಹೆಸರಿನ ಮತ್ತು ರಾಮಾಯಣದ ಸನ್ನಿವೇಶಗಳಿರುವ ಹಿಂದುಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ದೃಶ್ಯಗಳನ್ನು ಚಿತ್ರದಿಂದ ತೆಗೆಯಬೇಕು ಮತ್ತು ‘ರಾಮನ ಅವತಾರ’ ಎಂದರೆ ಜನರಿಗೆ ಇದು ತ್ರೇತಾಯುಗದ ಪ್ರಭು ಶ್ರೀರಾಮನದ್ದೇ ಕಥೆಯೆಂದೆನಿಸುತ್ತದೆ, ಆದರೆ ವಾಸ್ತವದಲ್ಲಿ ಇದು ಕಾಮಿಡಿ ಚಲನಚಿತ್ರವಾಗಿರುವುದರಿಂದ ಚಿತ್ರದ ಹೆಸರು ಬದಲಿಸಬೇಕು ಎಂದು ಆಗ್ರಹಿಸಲಾಗಿದೆ.

ಇದನ್ನೂ ಓದಿ | Rahul Gandhi : ಸುಳ್ಳು ಹರಡಬೇಡಿ, ಸುಮ್ಮನಿರಿ; ರಾಹುಲ್​ ಗಾಂಧಿಗೆ ಬಹಿರಂಗ ಪತ್ರ ಬರೆದು ಕುಟುಕಿದ ಯೂನಿವರ್ಸಿಟಿಗಳ ಕುಲಪತಿಗಳು

ಮನವಿ ಸಲ್ಲಿಕೆ ವೇಳೆ ಹಿಂದು ಜನಜಾಗೃತಿ ಸಮಿತಿಯ ನೀಲೇಶ್ವರ, ನಿರಂಜನ ನಾರಾಯಣಕರ, ಪ್ರಶಾಂತ್ ದಾಸರಹಳ್ಳಿ, ರಾಷ್ಟ್ರೀಯ ಹಿಂದು ಪರಿಷತ್‌ನ ರಾಜ್ಯಾಧ್ಯಕ್ಷ ಸುರೇಶ್ ಗೌಡ, ನಗರ ಜಿಲ್ಲಾಧ್ಯಕ್ಷರಾದ ವಿಕ್ರಂ ಶೆಟ್ಟಿ ಅವರು ಉಪಸ್ಥಿತರಿದ್ದರು.

Continue Reading

ಒಟಿಟಿ

The Goat Life: ಪೃಥ್ವಿರಾಜ್ ಸುಕುಮಾರನ್ ಅಭಿನಯದ ʻಆಡುಜೀವಿತಂʼ ಒಟಿಟಿ ರಿಲೀಸ್‌ ಎಲ್ಲಿ?

The Goat Life ಆಡು ಜೀವಿತಂʼ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ.

VISTARANEWS.COM


on

The Goat Life OTT Release Date Fix
Koo

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ಮಲಯಾಳಂ ಚಿತ್ರ ʻಆಡುಜೀವಿತಂʼ (The Goat Life) ಬಿಡುಗಡೆಯಾದ ದಿನವೇ ಒಳ್ಳೆಯ ಗಳಿಕೆ ಕಂಡಿತ್ತು. ಪೃಥ್ವಿರಾಜ್ ಸುಕುಮಾರನ್ ಮುಖ್ಯ ಭೂಮಿಕೆಯಯ ಈ ಸಿನಿಮಾ 150 ಕೋಟಿ ರೂ. ಗಳಿಕೆ ಕಂಡಿತ್ತು. ನೈಜ ಘಟನೆಗಳನ್ನು ಆಧರಿಸಿ ಬರೆದ ಕಾದಂಬರಿಯನ್ನು ತೆರೆಗೆ ತಂದು ಚಿತ್ರತಂಡ ಸಕ್ಸಸ್ ಕಂಡಿತ್ತು. ಸಾಕಷ್ಟು ಜನ ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಲು ಕಾಯುತ್ತಿದ್ದಾರೆ. ಡಿಸ್ನಿ ಪ್ಲಸ್ ಹಾಟ್‌ಸ್ಟರ್‌ಗೆ ಚಿತ್ರದ ಒಟಿಟಿ ರೈಟ್ಸ್ ಮಾರಾಟವಾಗಿದೆ ಎನ್ನುವ ಚರ್ಚೆ ನಡೀತಿದೆ.

ಬ್ಲೆಸ್ಸಿ ನಿರ್ದೇಶನದ ಈ ಚಿತ್ರ ಆರು ದಿನಗಳಲ್ಲಿ ಭಾರತದಲ್ಲಿ ಸುಮಾರು 40.4 ಕೋಟಿ ರೂ. ಸಂಗ್ರಹಿಸಿತ್ತು. ಮೊದಲ ದಿನ, ʻಆಡುಜೀವಿತಂʼ ಭಾರತದಲ್ಲಿ ಒಟ್ಟು ಎಲ್ಲಾ ಭಾಷೆಗಳು ಸೇರಿದಂತೆ 7.6 ಕೋಟಿ ರೂ. ಸಂಗ್ರಹಿಸಿದರೆ, ಎರಡನೇ ದಿನ ದಿನ 6.25 ಕೋಟಿ ರೂ. ಮೂರನೇ ದಿನ 7.75 ಕೋಟಿ ರೂ. ನಾಲ್ಕು ಮತ್ತು ಐದನೇ ದಿನ 8.7 ಕೋಟಿ ರೂ. ಮತ್ತು ಆರನೇ ದಿನ 4. 5 ಕೋಟಿ ರೂ. ವ್ಯವಹಾರ ಮಾಡಿತ್ತು.

ಆಡು ಜೀವಿತಂʼ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ ಕಥೆ ಆಧರಿಸಿದ ಚಿತ್ರವಾಗಿದೆ.

ಆಡು ಜೀವಿತಂʼ ಚಿತ್ರದ ಕಥೆ ವಲಸಿಗರ ಸಮಸ್ಯೆ ಸುತ್ತ ಸುತ್ತುತ್ತದೆ. ದುಡಿಮೆಗಾಗಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಪಟ್ಟಂತ ಕಷ್ಟಗಳು ಆತನ ಪಾಸ್‌ಪೋರ್ಟ್‌ ಕಸಿದು ಆತನಿಗೆ ಕೊಟ್ಟಂತಹ ಹಿಂಸೆಗಳು, ಆ ಬಿಸಿಲಿನ ಮರುಭೂಮಿಯಲ್ಲಿ ಆತ ಅನುಭವಿಸಿದ ಸಂಕಷ್ಟಗಳ ಕಥನವೇ ಈ ಆಡು ಜೀವಿತಂ.

ಇದನ್ನೂ ಓದಿ: Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

ಒಟಿಟಿಗೆ ಯಾವಾಗ?

ಮೇ 10ಕ್ಕೆ ಸಿನಿಮಾ ಒಟಿಟಿ ಬರುತ್ತದೆ ಎನ್ನಲಾಗುತ್ತಿದೆ. ಮೇ 26ಕ್ಕೆ ಡಿಸ್ನಿ ಹಾಟ್‌ಸ್ಟರ್‌ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಎನ್ನುವ ಚರ್ಚೆ ಕೂಡ ಇದೆ. ಆದರೆ ಯಾವಾಗ ಎನ್ನುವುದು ಶೀಘ್ರದಲ್ಲೇ ರಿವೀಲ್ ಆಗಲಿದೆ.

ಏನಿದೆ ಆಡುಜೀವಿತಂ ಸಿನಿಮಾ ಕಥೆ?

ಹಣ ಸಂಪಾದಿಸಲು ಸೌದಿ ಅರೇಬಿಯಾಕ್ಕೆ ಹೋದ ಭಾರತೀಯ ವಲಸೆ ಕಾರ್ಮಿಕ ನಜೀಬ್ ಮುಹಮ್ಮದ್ ನಿಜ ಜೀವನದ ಘಟನೆ ಇದು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ವಿಧಿಯ ವೈಚಿತ್ರ್ಯದಿಂದಾಗಿ ನಜೀಬ್‌ ಗುಲಾಮನ ಬದುಕನ್ನು ಬದುಕಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಅವನು ಮರುಭೂಮಿಯ ಮಧ್ಯದಲ್ಲಿ ಮೇಕೆಗಳನ್ನು ಮೇಯಿಸಬೇಕಾಗುತ್ತದೆ. ಆಡು ಜೀವಿತಂ ಅಂದರೆ ಆಡಿನ ಬದುಕು ಅಂಥ ಅರ್ಥ. ಇಂಗ್ಲಿಷ್‌ನಲ್ಲಿ ಇದರ ಟೈಟಲ್‌ GOAT LIFE ಎಂದಿದೆ.

ಪರ್ಷಿಯನ್ ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಮನೆಗೆ ಕಳುಹಿಸುವಷ್ಟು ಹಣ ಸಂಪಾದಿಸುವುದು ನಜೀಬ್ ಅವರ ಕನಸಾಗಿತ್ತು. ಆದರೆ, ಸೌದಿ ಮರುಭೂಮಿಯ ಮಧ್ಯದಲ್ಲಿ ಆಡುಗಳನ್ನು ಮೇಯಿಸುವ ಗುಲಾಮಗಿರಿಯ ಕೆಲಸಕ್ಕೆ ಒಡ್ಡಿಕೊಳ್ಳಬೇಕಾದ ಅನಿವಾರ್ಯತೆ ಏನು ಬಂತು? ಅವನು ಕೊನೆಗೂ ತನ್ನನ್ನು ತಾನು ಹೇಗೆ ಬಂಧಮುಕ್ತಗೊಳಿಸಿಕೊಳ್ಳುತ್ತಾನೆ ಎನ್ನುವುದೊಂದು ದೊಡ್ಡ ಹೋರಾಟದ ಕಥೆ. ಅವನು ಸೆರೆಮನೆ ಸೇರಿ, ಅಲ್ಲಿಂದ ತಪ್ಪಿಸಿಕೊಳ್ಳುವ ಸಾಹಸ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ.

ಈ ಸಿನಿಮಾಕ್ಕಾಗಿ ನಿರ್ದೇಶಕ ಬ್ಲೆಸ್ಸಿ ಅವರು ತುಂಬಾ ಅಧ್ಯಯನ ಮಾಡಿದ್ದಾರೆ. ಈ ಕಥೆ ಅವರನ್ನು ಕಳೆದ 15 ವರ್ಷಗಳಿಂದ ಕೊರೆಯುತ್ತಿತ್ತಂತೆ. ಅಂತೆಯೇ ಅವರ ಕನಸಿನಲ್ಲಿ ಬಂದ ಚಿತ್ರದಂತೆ ತಮ್ಮನ್ನು ಮಾರ್ಪಾಡು ಮಾಡಿಕೊಂಡು ಹೊಸ ವ್ಯಕ್ತಿಯ ರೂಪದಲ್ಲಿ ಹೊಸ ಲುಕ್‌ನಲ್ಲಿ ಬಂದಿದ್ದಾರೆ ನಟ ಪೃಥ್ವಿರಾಜ್ ಸುಕುಮಾರನ್.

Continue Reading

ಕಿರುತೆರೆ

Puttakkana Makkalu: ಸಹನಾಳ ಸಾವಿನ ಸುದ್ದಿ ಕೇಳಿ ಮುಗಿಲುಮುಟ್ಟಿತು ಪುಟ್ಟಕ್ಕನ ಆಕ್ರಂದನ

Puttakkana Makkalu: ಮುರಳಿ-ಸಹನಾ ದಾಂಪತ್ಯ ಜೀವನದಲ್ಲಿ ಒಡಕು ಮೂಡಿದೆ. ಸಹನಾಗೆ ವಿಚ್ಛೇದನ ಬೇಕು, ಮುರಳಿಗೆ ತನ್ನ ತಪ್ಪಿನ ಅರಿವಾಗಿದೆ. ಮುರಳಿ ಜತೆ ಬಾಳಲು ರೆಡಿ ಇಲ್ಲ ಸಹನಾ. ಸಹನಾ ಈಗ ಮನೆ ಬಿಟ್ಟು ಹೋಗಿದ್ದಾಳೆ.ತಾಯಿಗೆ ಎಲ್ಲಿ ತಾನು ಭಾರವಾಗುತ್ತೇನೋ ಎಂದು ಸಹನಾ ಮನೆಯಿಂದ ಆಚೆ ನಡೆದಿದ್ದಾಳೆ. ಸದ್ಯ ಪುಟ್ಟಕ್ಕನ ಮಗಳು ಸಹನಾ ಮನೆ ಬಿಟ್ಟು ಹೋಗಿದ್ದಾಳೆ.

VISTARANEWS.COM


on

Puttakkana makkalu sahana dead
Koo
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ʻಪುಟ್ಟಕನ ಮಕ್ಕಳುʼ (Puttakkana Makkalu) ಸತತ ಎರಡನೇ ವಾರ ಒಳ್ಳೆಯ ಟಿಆರ್‌ಪಿ ಕಂಡಿದೆ. ಸದ್ಯ ಪುಟ್ಟಕ್ಕನ ಮಗಳು ಸಹನಾ ಮನೆ ಬಿಟ್ಟು ಹೋಗಿದ್ದಾಳೆ.

ಸಹನಾ ಶವ ಪತ್ತೆ ಆಗಿದೆ, ಎಲ್ಲರೂ ಮನೆ ಮಗಳನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: Puttakkana Makkalu Serial: ಅವ್ವನಂತೆ ಯಾರ ಹಂಗಿಲ್ಲದೆ ಬದುಕಲು ಮನೆ ಬಿಟ್ಟು ಹೊರಟೇ ಬಿಟ್ಟಳು ಸಹನಾ!

ಬಾಳಬೇಕಾದ ಮಗಳು ಶವವಾಗಿ ಮಲಗಿರೋದು ನೋಡಿ ಪುಟ್ಟಕ್ಕ ಅಳುತ್ತಿದ್ದಾಳೆ. ಸಹನಾ ಅಂತ್ಯಸಂಸ್ಕಾರ ಮುಗಿದಿದೆ.

ಮುರಳಿಯಿಂದ ಡಿವೋರ್ಸ್ ಪಡೆದಿರುವ ಸಹನಾ ತವರುಮನೆಗೂ ಕೂಡ ಸ್ವಲ್ಪವೂ ಭಾರವಾಗದೆ, ತನ್ನ ಜೀವನ ತಾನೇ ನಡೆಸಬೇಕು ಅಂತ ಅಂದುಕೊಂಡಿದ್ದಳು. ಹೀಗೆ ಅಂದುಕೊಂಡವಳು ಹೇಗೆ ಶವವಾದಳು. ಆದರೆ ವೀಕ್ಷಕರು ಸಹನಾ ಸತ್ತಿಲ್ಲ ಬದುಕಿದ್ದಾಳೆ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನು ಕೆಲವರು ಸಹನಾ ಮುಖ ಪ್ಲಾಸ್ಟಿಕ್‌ ಸರ್ಜರಿ ಆಗರಿಬಹುದೆಂದು ಕಮೆಂಟ್‌ ಮಾಡಿದ್ದಾರೆ!

Continue Reading

ಸಿನಿಮಾ

Cauvery Theatre: ಬೆಂಗಳೂರಿನಲ್ಲಿ ಪ್ರದರ್ಶನ ನಿಲ್ಲಿಸಿದ ʻಕಾವೇರಿʼ ಥಿಯೇಟರ್! ಮುಂದೇನು?

Cauvery Theatre: ಡಾ.ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಸೇರಿದಂತೆ ಕನ್ನಡದ ದಿಗ್ಗಜರ ಸಿನಿಮಾಗಳು ಇದೇ ಚಿತ್ರಮಂದಿರದಲ್ಲಿ ಪ್ರದರ್ಶನ ಕಂಡಿತ್ತು. ಸಿಂಗಲ್ ಸ್ಕ್ರೀನ್ ಆಗಿದ್ದರೂ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಈ ಚಿತ್ರಮಂದಿರದಲ್ಲಿ ಇತ್ತು. ಈ ವರ್ಷ ಜನವರಿ 11ಕ್ಕೆ 50 ವರ್ಷ ಪೂರೈಸಿ, ಗೋಲ್ಡನ್ ಜ್ಯುಬಿಲಿ ಸಂಭ್ರಮಾಚರಣೆಯಲ್ಲಿತ್ತು. ಕಮಲ್ ಹಾಸನ್ ಅವರ ಇಂಡಿಯನ್ (1996) 100 ದಿನ, ಕಾಂತಾರ 50-ದಿನಗಳ ಪ್ರದರ್ಶನ ಕಂಡಿದೆ.

VISTARANEWS.COM


on

Cauvery Theatre bengaluru another single screen close
Koo

ಬೆಂಗಳೂರು: ಒಟಿಟಿ , ಮಲ್ಟಿಪ್ಲೆಕ್ ಇತ್ಯಾದಿ ಕಾರಣಗಳಿಂದ ಇತ್ತೀಚೆಗೆ ಚಿತ್ರಮಂದಿರಗಳು ಮುಚ್ಚುತ್ತಿವೆ. ಕಲೆಕ್ಷನ್ ಕೂಡ ಕಡಿಮೆಯಾಗಿದ್ದು, ಹಲವು ಚಿತ್ರಮಂದಿರಗಳು ಮುಚ್ಚುವ ನಿರ್ಧಾರಕ್ಕೆ ಬಂದಿದೆ. 1974ರ ಜನವರಿ 11ರಂದು ಡಾ. ರಾಜ್‌ಕುಮಾರ್ ನಟನೆಯ ‘ಬಂಗಾರದ ಪಂಜರ’ (Bangarada Panjara) ಸಿನಿಮಾ ಪ್ರದರ್ಶನದ ಮೂಲಕ ʻʻಕಾವೇರಿʼʼ ಚಿತ್ರಮಂದಿರ ಶುರುವಾಗಿತ್ತು. 50 ವರ್ಷದ ಇತಿಹಾಸ ಹೊಂದಿದ್ದ, ಬೆಂಗಳೂರಿನ ಅತಿದೊಡ್ಡ ಚಿತ್ರಮಂದಿರಗಳಲ್ಲಿ ಒಂದಾಗಿದ್ದ ಸ್ಯಾಂಕಿ ರಸ್ತೆಯ ʻಕಾವೇರಿʼ ಚಿತ್ರಮಂದಿರ ಈಗ ಶಾಶ್ವತವಾಗಿ ಮುಚ್ಚಿದೆ.

ಚಿತ್ರಮಂದಿರ ನಡೆಸುವುದು ಕಷ್ಟ ಎಂಬ ಕಾರಣಕ್ಕೆ ಮಾಲೀಕರು ಪ್ರದರ್ಶನ ನಿಲ್ಲಿಸಿದ್ದಾರೆ. ಆ ಜಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣವಾಗಲಿದೆ ಎನ್ನಲಾಗಿದೆ. ಮೆಜೆಸ್ಟಿಕ್‌ನ ʻಕಪಾಲಿʼ ಚಿತ್ರಮಂದಿರದ ನಂತರ ಅತಿ ಹೆಚ್ಚು ಸಿಟ್ಟಿಂಗ್‌ ವ್ಯವಸ್ಥೆ ಇದ್ದ ಈ ಚಿತ್ರಮಂದಿರ ಆರಂಭವಾಗಿದ್ದಾಗ 1300ರಷ್ಟು ಸೀಟುಗಳ ವ್ಯವಸ್ಥೆ ಇತ್ತು. ಜತೆಗೆ ಮಿನಿ ಬಾಲ್ಕನಿ ಇದ್ದ ಕೆಲವೇ ಚಿತ್ರಮಂದಿರಗಳಲ್ಲಿ ಇದೂ ಒಂದಾಗಿತ್ತು.

ಇದನ್ನೂ ಓದಿ: Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

ಪರಭಾಷೆಯ ಸಿನಿಮಾಗಳು ಪ್ರದರ್ಶನ

ಇಲ್ಲಿ ಕನ್ನಡವೂ ಸೇರಿದಂತೆ ಹಿಂದಿ ಹಾಗೂ ಪರಭಾಷೆಯ ಸಿನಿಮಾಗಳು ಪ್ರದರ್ಶನ ಕಾಣುತ್ತಿದ್ದವು. ಡಾ. ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಸೇರಿದಂತೆ ಕನ್ನಡದ ದಿಗ್ಗಜರ ಸಿನಿಮಾಗಳು ಇದೇ ಚಿತ್ರಮಂದಿರದಲ್ಲಿ ಪ್ರದರ್ಶನ ಕಂಡಿತ್ತು. ಸಿಂಗಲ್ ಸ್ಕ್ರೀನ್ ಆಗಿದ್ದರೂ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಈ ಚಿತ್ರಮಂದಿರದಲ್ಲಿ ಇತ್ತು. ಈ ಚಿತ್ರಮಂದಿರದಲ್ಲಿ ಸಿನಿಮಾದ ಚಿತ್ರೀಕರಣ ಕೂಡ ನಡೆದಿದೆ. ಪುನೀತ್ ರಾಜ್‌ಕುಮಾರ್ ಅಭಿನಯದ ‘ಪರಮಾತ್ಮ’ ಸಿನಿಮಾದ ಆರಂಭಿಕ ಸೀನ್ ಅನ್ನು ಇಲ್ಲಿಯೇ ಶೂಟಿಂಗ್ ಮಾಡಲಾಗಿತ್ತು.

ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲಿನ ವಿಶೇಷತೆಯಾಗಿತ್ತು. ಎಲ್ಲಾ ಭಾಷೆಗಳ ಸಿನಿಮಾ ಪ್ರದರ್ಶನ ನಡೆಯುತ್ತಿದ್ದು, ಉತ್ತರ ಬೆಂಗಳೂರಿಗರಿಗೆ ಇದೊಂದು ಸಾಂಸ್ಕೃತಿಕ ಸ್ಥಳವೇ ಆಗಿತ್ತು. ‘ಬಂಗಾರದ ಪಂಜರ, ‘ಶಂಕರಾಭರಣಂ’, ‘ದಿಲ್‌ವಾಲೆ ದುಲ್ಹನಿಯಾ ಲೇ ಜಾಯೆಂಗೆ’ ಸಿನಿಮಾಗಳು ಇಲ್ಲಿ 25 ವಾರ ಪ್ರದರ್ಶನ ಕಂಡಿದ್ದವು. ಈ ವರ್ಷ ಜನವರಿ 11ಕ್ಕೆ 50 ವರ್ಷ ಪೂರೈಸಿ, ಗೋಲ್ಡನ್ ಜ್ಯುಬಿಲಿ ಸಂಭ್ರಮಾಚರಣೆಯಲ್ಲಿತ್ತು. ಕಮಲ್ ಹಾಸನ್ ಅವರ ʼಇಂಡಿಯನ್ʼ (1996) 100 ದಿನ, ʼಕಾಂತಾರʼ 50 ದಿನಗಳ ಪ್ರದರ್ಶನ ಕಂಡಿದೆ. ಮುಂದೆ ಇಲ್ಲಿ ವಾಣಿಜ್ಯ ಕಟ್ಟಡ ತಲೆ ಎತ್ತುವ ಸಾಧ್ಯತೆ ಇದೆ. ಅದರಲ್ಲಿ ಮಲ್ಟಿ ಪ್ಲೆಕ್ಸ್‌ ಚಿತ್ರ ಮಂದಿರ ನಿರ್ಮಾಣ ಆಗುವ ಸಾಧ್ಯತೆಯೂ ಇದೆ.

Continue Reading
Advertisement
Bengaluru Rain
ಕರ್ನಾಟಕ4 hours ago

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Rohit Sharma
ಪ್ರಮುಖ ಸುದ್ದಿ4 hours ago

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

PM Narendra Modi
ದೇಶ4 hours ago

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

School Children
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

IPL 2024
ಕ್ರೀಡೆ4 hours ago

IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

Narendra Modi
ದೇಶ4 hours ago

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

DK Shivakumar
ಕರ್ನಾಟಕ4 hours ago

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

T20 World Cup 2024
ಕ್ರೀಡೆ4 hours ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ5 hours ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

IPL 2024
ಪ್ರಮುಖ ಸುದ್ದಿ5 hours ago

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ9 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ9 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ10 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ23 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌