ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಹಾಗೂ ನಿರ್ದೇಶಕ ಪ್ರೇಮ್ ಕಾಂಬಿನೇಶನ್ ಇರುವ ʻಕೆಡಿ’ ಸಿನಿಮಾದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ರೆಟ್ರೊ ಲುಕ್ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದಾರೆ. ಯುಗಾದಿ ಹಬ್ಬಕ್ಕೆ ಅಭಿಮಾನಿಗಳಿಗೆ ಚಿತ್ರತಂಡ ಸಿಹಿಸುದ್ದಿ ನೀಡಿದೆ.
ಶಿಲ್ಪಾ ಶೆಟ್ಟಿ 17 ವರ್ಷಗಳ ನಂತರ ಇದೀಗ ಕೆಡಿ’ ಸಿನಿಮಾದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರೀತ್ಸೋದ್ ತಪ್ಪಾ? ಆಟೋ ಶಂಕರ್, ಒಂದಾಗೋಣ ಬಾ ಸಿನಿಮಾಗಳಲ್ಲಿ ಶಿಲ್ಪಾ ಅಭಿನಯಿಸಿದ್ದಾರೆ.
ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.
ಇದನ್ನೂ ಓದಿ: Dhruva Sarja: ʻಕೆಡಿʼ ಚಿತ್ರಕ್ಕೆ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಡಲಿದ್ದಾರಾ?
ಪ್ರೇಮ್ ಪೋಸ್ಟ್
ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್ ಟೀಸರ್ನಲ್ಲಿ ಧ್ರುವ ಸರ್ಜಾ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ. ಸದ್ಯ ಧ್ರುವ ಸರ್ಜಾ ʻಮಾರ್ಟಿನ್ʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದಾರೆ. ಎ.ಪಿ ಅರ್ಜುನ್ ಮಾರ್ಟಿನ್ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.