Site icon Vistara News

Shilpa Shetty: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಭೇಟಿ; ಕುಟುಂಬಸ್ಥರೊಂದಿಗೆ ಪೂಜೆ

Shilpa Shetty visited Katilu Shri Durgaparameshwari Temple with her family

ಬೆಂಗಳೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ (Shilpa Shetty) ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭಾನುವಾರ (ಏಪ್ರಿಲ್‌ 23) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ದೇವಳದ ವತಿಯಿಂದ ಶಿಲ್ಪಾ ಅವರಿಗೆ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಆಶೀರ್ವದಿಸಲಾಯಿತು. ನಂತರ ಅವರು ಯಕ್ಷಗಾನ ವೀಕ್ಷಿಸಿದರು. ಶಿಲ್ಪಾ ಶೆಟ್ಟಿ ಜತೆ ಪತಿ ರಾಜ್ ಕುಂದ್ರ, ತಂಗಿ ಶಮಿತಾ ಶೆಟ್ಟಿ ಮತ್ತು‌ ಕುಟುಂಬ ವರ್ಗದವರು ಉಪಸ್ಥಿತರಿದ್ದರು. ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ ಉಪಸ್ಥಿತರಿದ್ದರು.

ಕಲವು ದಿನಗಳ ಹಿಂದೆ ಕೆ.ಡಿ ಸಿನಿಮಾ ಶೂಟಿಂಗ್‌ಗಾಗಿ ಬೆಂಗಳೂರಿಗೆ ಆಗಮಿಸಿದ್ದರು. ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಹಾಗೂ ನಿರ್ದೇಶಕ ಪ್ರೇಮ್‌ ಕಾಂಬಿನೇಶನ್‌ ಇರುವ ʻಕೆಡಿ’ ಸಿನಿಮಾದಲ್ಲಿ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಯುಗಾದಿ ಹಬ್ಬದಂದು ಚಿತ್ರತಂಡ, ಶಿಲ್ಪಾ ಶೆಟ್ಟಿ ಫಸ್ಟ್‌ ಲುಕ್‌ ಪೋಸ್ಟರ್‌ ಅನ್ನು ಹಂಚಿಕೊಂಡಿತ್ತು.

ಶಿಲ್ಪಾ ಶೆಟ್ಟಿ ಕೂಡಾ ತಮ್ಮ ಪೋಸ್ಟರ್‌ ಅನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡು ಬಹಳ ಎಕ್ಸೈಟ್‌ ಆಗಿದ್ದರು. ರೆಟ್ರೋ ಲುಕ್‌ನಲ್ಲಿ ಕಾರೊಂದರ ಮುಂದೆ ಬ್ಯಾಗ್‌ ಹಿಡಿದು ನಿಂತಿರುವ ಶಿಲ್ಪಾ ಶೆಟ್ಟಿ ಲುಕ್‌ಗೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Shilpa Shetty: ಮಗಳಿಗೋಸ್ಕರ ಚೆಂದವಾಗಿ ರೂಮ್‌ ಸಿದ್ಧಪಡಿಸಿದ ಶಿಲ್ಪಾ ಶೆಟ್ಟಿ: ಇಲ್ಲಿದೆ ಫೋಟೊ!

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ.

Exit mobile version