Site icon Vistara News

Shilpa Shetty: ಮೈಸೂರಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಧ್ಯಾನ

Shilpa Shetty Visiting Nanjundeshwara Temple

ಬೆಂಗಳೂರು: ಮೈಸೂರಿನಲ್ಲಿ `ಕೆಡಿ’ ಸಿನಿಮಾ (KD cinema) ಚಿತ್ರೀಕರಣ ನಟಿ ಶಿಲ್ಪಾ ಶೆಟ್ಟಿ ತಂಗಿದ್ದಾರೆ. ಈ ವೇಳೆ ನಟಿ ಬಿಡುವು ಮಾಡಿಕೊಂಡು ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ (Nanjundeshwara Temple) ಬಂದಿದ್ದಾರೆ. ಪೂಜೆ ಸಲ್ಲಿಸಿ, ದೇವಸ್ಥಾನದ ಆವರಣದಲ್ಲಿ ಶಿಲ್ಪಾ ಶೆಟ್ಟಿ ಅವರು ಧ್ಯಾನ ಮಾಡಿದ್ದಾರೆ. ಶಿಲ್ಪಾ ಶೆಟ್ಟಿ ಬಂದಿರುವ ವಿಷಯ ತಿಳಿದು, ಫ್ಯಾನ್ಸ್​ ಮುಗಿಬಿದ್ದಿದ್ದರು.

 ಈ ಮಧ್ಯೆ ಶಿಲ್ಪಾ ಶೆಟ್ಟಿ ಅವರು ಆಗಾಗ ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ. ಇತ್ತೀಚೆಗೆ ಮಂಗಳೂರಿಗೆ ತೆರಳಿ ಭೂತ ಕೋಲ ವೀಕ್ಷಿಸಿದ್ದರು. ಈಗ ಅವರು ಮೈಸೂರಿನಲ್ಲಿ ನಂಜನಗೂಡು ನಂಜುಡೇಶ್ವರನ ಸನ್ನಿಧಾನಕ್ಕೆ ತೆರಳಿದ್ದಾರೆ. ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಹಾಗೂ ನಿರ್ದೇಶಕ ಪ್ರೇಮ್‌ ಕಾಂಬಿನೇಶನ್‌ ಇರುವ ʻಕೆಡಿ’ ಸಿನಿಮಾದಲ್ಲಿ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್-ಇಂಡಿಯಾ ಸಿನಿಮಾವಾದ ಕೆಡಿ ಸಿನಿಮಾದಲ್ಲಿ ಸತ್ಯವತಿ ಪಾತ್ರದಲ್ಲಿ ಮಿಂಚುತ್ತಿದ್ದಾರೆ .ಯುಗಾದಿ ಹಬ್ಬದಂದು ಚಿತ್ರತಂಡ, ಶಿಲ್ಪಾ ಶೆಟ್ಟಿ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿತ್ತು. ಶಿಲ್ಪಾ ಶೆಟ್ಟಿ ಕೂಡಾ ತಮ್ಮ ಪೋಸ್ಟರನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡು ಬಹಳ ಎಕ್ಸೈಟ್‌ ಆಗಿದ್ದರು. ರೆಟ್ರೋ ಲುಕ್‌ನಲ್ಲಿ ಕಾರೊಂದರ ಮುಂದೆ ಬ್ಯಾಗ್‌ ಹಿಡಿದು ನಿಂತಿರುವ ಶಿಲ್ಪಾ ಶೆಟ್ಟಿ ಲುಕ್‌ಗೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು.ಶಿಲ್ಪಾ ಶೆಟ್ಟಿ 17 ವರ್ಷಗಳ ನಂತರ ಇದೀಗ ಕೆಡಿ’ ಸಿನಿಮಾದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರೀತ್ಸೋದ್ ತಪ್ಪಾ? ಆಟೋ ಶಂಕರ್, ಒಂದಾಗೋಣ ಬಾ ಸಿನಿಮಾಗಳಲ್ಲಿ ಶಿಲ್ಪಾ ಅಭಿನಯಿಸಿದ್ದಾರೆ.

ಇದನ್ನೂ ಓದಿ: Shilpa Shetty : 3.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​​ ಕಾರು ಖರೀದಿಸಿದ ಶಿಲ್ಪಾ ಶೆಟ್ಟಿ; ವಿಡಿಯೊ ನೋಡಿ

ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

Exit mobile version