Shiva Rajkumar: ನಾಳೆ ಶಿವಣ್ಣ ʻಘೋಸ್ಟ್‌ʼ ಅದ್ಧೂರಿ ತೆರೆಗೆ; ಲಿಯೋ ಸಿನಿಮಾಗೆ ಹೆಚ್ಚು ಸ್ಕ್ರೀನ್‌! Vistara News

South Cinema

Shiva Rajkumar: ನಾಳೆ ಶಿವಣ್ಣ ʻಘೋಸ್ಟ್‌ʼ ಅದ್ಧೂರಿ ತೆರೆಗೆ; ಲಿಯೋ ಸಿನಿಮಾಗೆ ಹೆಚ್ಚು ಸ್ಕ್ರೀನ್‌!

Shiva Rajkumar: ನಿಶಾನ್ ರೈ ಸಾಹಿತ್ಯ ಬರೆದು, ಹಾಡಿರುವ ಈ ಓಜಿಎಂ ಬಿಡುಗಡೆಯಾಗಿದ್ದು, ಜನರಲ್ಲಿ ಮತ್ತಷ್ಟು ಕುತೂಹಲ ಹುಟ್ಟು ಹಾಕಿದೆ. ಘೋಸ್ಟ್‌ ಜತೆಗೆ ದಳಪತಿ ವಜಯ್‌ ಅವರ ಲಿಯೋ ಕೂಡ ಬಿಡುಗಡೆಯಾಗುತ್ತಿದೆ.

VISTARANEWS.COM


on

Shiva Rajkumar ghost Cinema
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು; ಹ್ಯಾಟ್ರಿಕ್‌ ಹೀರೊ ಶಿವ ರಾಜ್‌ಕುಮಾರ್‌ (Shiva Rajkumar) ಅಭಿನಯದ `ಘೋಸ್ಟ್‌’ ಸಿನಿಮಾ ನಾಳೆ ಅದ್ಧೂರಿಯಾಗಿ ತೆರೆ ಕಾಣುತ್ತಿದೆ. ಅ. 19ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ರಿಲೀಸ್‌ ಆಗುತ್ತಿದೆ. ಈಗಾಗಲೇ ಮುಂಬೈನಲ್ಲಿ ಪ್ರಚಾರ ಮಾಡಿದ್ದಾಗಿದೆ. ಇದರ ಬೆನ್ನಲ್ಲೇ ನಿಶಾನ್ ರೈ ಸಾಹಿತ್ಯ ಬರೆದು, ಹಾಡಿರುವ ಈ ಓಜಿಎಂ ಬಿಡುಗಡೆಯಾಗಿದ್ದು, ಜನರಲ್ಲಿ ಮತ್ತಷ್ಟು ಕುತೂಹಲ ಹುಟ್ಟು ಹಾಕಿದೆ. ಘೋಸ್ಟ್‌ ಜತೆಗೆ ದಳಪತಿ ವಿಜಯ್‌ ಅವರ ಲಿಯೋ ಕೂಡ ಬಿಡುಗಡೆಯಾಗುತ್ತಿದೆ.

ಶಿವರಾಜ್ ಕುಮಾರ್ ಅಭಿನಯದ ಘೋಷ್ಟ್ ಮಧ್ಯರಾತ್ರಿ 12.15ರಿಂದಲೇ ಶೋ ಪ್ರಾರಂಭಗೊಳ್ಳಲಿದೆ. ದಸರಾ ರಜೆಯ ಕಾರಣಗಳಿಂದ, ತಮಿಳಿನ ಲಿಯೋ, ಕನ್ನಡದ ಘೋಷ್ಟ್, ತೆಲುಗಿನಲ್ಲಿ ಬಾಲಯ್ಯ ಮತ್ತು ರವಿತೇಜಾ ಸಿನಿಮಾಗಳು ಇದೇ ವಾರ ರಿಲೀಸ್ ಆಗಲಿದೆ. ಕರ್ನಾಟಕ ಮತ್ತು ಆಂಧ್ರ, ತೆಲಂಗಾಣದಲ್ಲಿ ಅಲ್ಲಿನ ಸಿನಿಮಾಗಿಂತ ಹೆಚ್ಚಿನ ಸ್ಕ್ರೀನ್‌ಗಳು ಲಿಯೋ ಸಿನಿಮಾಗೆ ಸಿಗುತ್ತಿದೆ. ಈ ಸಿನಿಮಾದ ಕನ್ನಡ ಡಬ್ಬಿಂಗ್ ಕೂಡಾ ರಿಲೀಸ್ ಆಗುತ್ತಿರುವುದರಿಂದ ಕನ್ನಡ ಸ್ಕ್ರೀನಿಂಗ್‌ಗೆ ಹನ್ನೆರಡು ಥಿಯೇಟರ್‌ಗಳು ಸಿಕ್ಕರೆ, ತಮಿಳು ವರ್ಸನ್‌ಗೆ 105ಕ್ಕೂ ಹೆಚ್ಚು ಸ್ಕ್ರೀನ್‌ಗಳು ಸಿಕ್ಕಿವೆ.

ಘೋಸ್ಟ್‌ ಸಿನಿಮಾದಲ್ಲಿ ಶಿವಣ್ಣ ಯಂಗ್‌ ಲುಕ್‌ನಲ್ಲಿ ಕಂಡಿದ್ದಾರೆ. ಎರಡು ಶೇಡ್‌ಗಳಲ್ಲಿ ಶಿವಣ್ಣ ಕಾಣಿಸಿಕೊಂಡಿದ್ದು, ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಿವಣ್ಣ ರೆಟ್ರೋ ಲುಕ್‌ ಕಂಡರೆ ಅವರ ಕೆಲವು ಹಳೆಯ ಸಿನಿಮಾಗಳು ನೆನಪಿಸುವಂತಿದೆ. ಶಿವಣ್ಣ ಅವರನ್ನು ಮತ್ತೊಮ್ಮೆ ದೊಡ್ಡ ಪರದೆ ಮೇಲೆ ನೋಡಲು ಫ್ಯಾನ್ಸ್​ ಕಾದಿದ್ದಾರೆ. ಈಗಾಗಲೇ ಸಿನಿಮಾದ ಥಿಯೇಟ್ರಿಕಲ್, ಸ್ಯಾಟಲೈಟ್ ಹಾಗೂ ಡಿಜಿಟಲ್ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಿಸಿರುವ, ಶ್ರೀನಿ ನಿರ್ದೇಶನದ ಈ ಸಿನಿಮಾ ಮತ್ತೆ ಸುದ್ದಿಯಲ್ಲಿದೆ .”ಆರ್ ಆರ್ ಆರ್”, “ಜವಾನ್” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ವಿತರಣೆ ಮಾಡಿರುವ ಪೆನ್ ಸ್ಟುಡಿಯೊ ಸಂಸ್ಥೆ ಈಗ “ಘೋಸ್ಟ್” ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡಿದೆ.

ಇದನ್ನೂ ಓದಿ: Shiva Rajkumar: ʻಟೈಗರ್‌ʼ ಸಲ್ಮಾನ್‌ ಖಾನ್‌ರನ್ನು ಭೇಟಿ ಮಾಡಿದ ʻಘೋಸ್ಟ್‌ʼ ಶಿವಣ್ಣ!

‘ಘೋಸ್ಟ್’ ಚಿತ್ರದ ತೆಲುಗು ಹಾಗೂ ಹಿಂದಿಯ ವಿತರಣಾ ಹಕ್ಕನ್ನು ಪಡೆದುಕೊಂಡಿದೆ ಎಂದು ಸಂದೇಶ್ ತಿಳಿಸಿದ್ದಾರೆ. ಅಂದಹಾಗೆ, ಎಷ್ಟು ಕೋಟಿ ಬ್ಯುಸಿನೆಸ್ ಆಗಿದೆ ಎನ್ನುವ ಲೆಕ್ಕಾಚಾರವನ್ನು ತಂಡದವರು ನೀಡಿಲ್ಲ. ಇತ್ತೀಚೆಗೆ ಪೆನ್ ಸ್ಟುಡಿಯೊ ಸಂಸ್ಥೆ ಮುಖ್ಯಸ್ಥರಾದ ಜಯಂತಿ ಲಾಲ್ ಗಡ ಹಾಗೂ ನಿರ್ಮಾಪಕ ಸಂದೇಶ್ ಈ ಕುರಿತು ಮಾತನಾಡಿದ್ದರು.

ಬಾಲಿವುಡ್‌ ನಟ ಅನುಪಮ್‌ ಖೇರ್‌, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.ಕೆಜಿಎಫ್‌ ಖ್ಯಾತಿಯ ನಟಿ ಅರ್ಚನಾ ಜೋಯಿಸ್ ಕಾಣಿಸಿಕೊಳ್ಳಲಿದ್ದಾರೆ. ಟೋಪಿವಾಲ, ಶ್ರೀನಿವಾಸ ಕಲ್ಯಾಣ, ಓಲ್ಡ್‌ ಮಾಂಕ್‌ ಸಿನಿಮಾ ಖ್ಯಾತಿಯ ಎಂ.ಜಿ.ಶ್ರೀನಿವಾಸ್‌ ಅವರು ಘೋಸ್ಟ್‌ ಸಿನಿಮಾನವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾಗೆ ಅರ್ಜುನ್‌ ಜನ್ಯಾ ಸಂಗೀತ ಇದ್ದರೆ, ಸಂದೇಶ್‌ ನಾಗರಾಜ್‌ ನಿರ್ಮಾಪಕರಾಗಿದ್ದಾರೆ. ಅಕ್ಟೋಬರ್ 19ರಂದು ಸಿನಿಮಾ ರಿಲೀಸ್ ಆಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

South Cinema

Kannada New Movie: ಟೀಸರ್ ಮೂಲಕ ಕೌತುಕದ ಕಿಡಿ ಹೊತ್ತಿಸಿದ `ಕೆಂಡ’!

Kannada New Movie: ಕೆಂಡ ಚಿತ್ರದ ಟೀಸರ್ ಅದನ್ನು ಅಕ್ಷರಶಃ ಸಾಧ್ಯವಾಗಿಸಿದಂತಿದೆ. ಓರ್ವ ಸಾಮಾನ್ಯ ಹುಡುಗ ವ್ಯವಸ್ಥೆಯ ಅಡಕತ್ತರಿಗೆ ಸಿಕ್ಕು ಅಸಾಮಾನ್ಯವಾಗಿ ಠೇಂಕರಿಸುವ ಕಥೆ ಕೆಂಡದ ಜೀವಾಳ. ಈ ಬಗ್ಗೆ ಚಿತ್ರತಂಡವೇ ಒಂದಷ್ಟು ಮಾಹಿತಿಗಳನ್ನು ಬಿಟ್ಟುಕೊಟ್ಟಿತ್ತು.

VISTARANEWS.COM


on

Kenda teaser kannada
Koo

ಬೆಂಗಳೂರು: ಒಂದೇ ಒಂದು ಮೋಷನ್ ಪೋಸ್ಟರ್ (Kannada New Movie) ಮೂಲಕ ಅಗಾಧ ಪ್ರಮಾಣದಲ್ಲಿ ಸಿನಿರಸಿಕರಿಗೆ ಕುತೂಹಲ ಮೂಡಿಸಿತ್ತು ಚಿತ್ರ ʻಕೆಂಡ’. ಇದೀಗ ಕೆಂಡದ ಟೀಸರ್ ಬಿಡುಗಡೆಗೊಂಡಿದೆ. ಮಾಸ್ ಸೇರಿದಂತೆ ಎಲ್ಲ ಅಂಶಗಳನ್ನೂ ಒಳಗೊಂಡಿರುವ, ಗಹನವಾದ ಕಥೆಯ ಸುಳಿವಿನೊಂದಿಗೆ ಕೆಂಡ ಮತ್ತೊಮ್ಮೆ ಪ್ರೇಕ್ಷಕರ ಗಮನ ಸೆಳೆದಿದೆ.

ಕೆಂಡ ಚಿತ್ರದ ಟೀಸರ್ ಅದನ್ನು ಅಕ್ಷರಶಃ ಸಾಧ್ಯವಾಗಿಸಿದಂತಿದೆ. ಓರ್ವ ಸಾಮಾನ್ಯ ಹುಡುಗ ವ್ಯವಸ್ಥೆಯ ಅಡಕತ್ತರಿಗೆ ಸಿಕ್ಕು ಅಸಾಮಾನ್ಯವಾಗಿ ಠೇಂಕರಿಸುವ ಕಥೆ ಕೆಂಡದ ಜೀವಾಳ. ಈ ಬಗ್ಗೆ ಚಿತ್ರತಂಡವೇ ಒಂದಷ್ಟು ಮಾಹಿತಿಗಳನ್ನು ಬಿಟ್ಟುಕೊಟ್ಟಿತ್ತು.

ಈ ಹಿಂದೆ ಕ್ಯಾರೆಕ್ಟರ್ ರಿವೀಲಿಂಗ್ ವಿಡಿಯೋ ಬಿಡುಗಡೆಯಾದಾಗಲೇ ಇದೊಂದು ವಿಶಿಷ್ಟವಾದ ಚಿತ್ರವೆಂಬ ಸ್ಪಷ್ಟ ಸುಳಿವು ಸಿಕ್ಕಿತ್ತು. ಈ ಟೀಸರ್ ಅದನ್ನು ಮತ್ತಷ್ಟು ನಿಚ್ಚಳವಾಗಿಸಿದೆ. ಅಷ್ಟಕ್ಕೂ ಕೆಂಡ ಸಿನಿಮಾ ಪ್ರೇಕ್ಷಕರ ಪಾಲಿಗೆ ಇಷ್ಟು ಮುಖ್ಯವಾಗಲು ಕಾರಣವಿದೆ. ಈ ಹಿಂದೆ ಗಂಟುಮೂಟೆ ಎಂಬ ಚಿತ್ರವನ್ನು ರೂಪಿಸಿದ್ದ ತಂಡವೇ ಕೆಂಡದ ಹಿಂದಿರುವುದನ್ನು ಪ್ರಧಾನ ಕಾರಣವಾಗಿ ಪರಿಗಣಿಸಬಹುದು. ಆ ಚಿತ್ರವನ್ನು ನಿರ್ದೇಶನ ಮಾಡಿ ಸೈ ಅನ್ನಿಸಿಕೊಂಡಿದ್ದ ರೂಪಾ ರಾವ್ ಕೆಂಡ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಗಂಟುಮೂಟೆ ಚಿತ್ರದ ನಿರ್ಮಾಪಕರಲ್ಲೊಬ್ಬರಾಗಿದ್ದುಕೊಂಡು, ಛಾಯಾಗ್ರಾಹಕರಾಗಿಯೂ ಕಾರ್ಯ ನಿರ್ವಹಿಸಿದ್ದ ಸಹದೇವ್ ಕೆಲವಡಿ ಕೆಂಡದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಅವರು ಮೊದಲ ಹೆಜ್ಜೆಯಲ್ಲಿಯೇ ಭಿನ್ನ ಕಥಾನಕವನ್ನು ಮುಟ್ಟಿರುವ ಸೂಚನೆ ಈ ಟೀಸರ್ ಮೂಲಕ ಸ್ಪಷ್ಟವಾಗಿಯೇ ಕಾಣಿಸಿದೆ.

ಇದನ್ನೂ ಓದಿ: Kannada New Movie: ’ಕ್ಲಾಂತ’ ಮೂಲಕ ಕನ್ನಡಕ್ಕೆ ಬಂದ ತುಳು ಹೀರೊ!

ರಂಗಭೂಮಿ ಪ್ರತಿಭೆಗಳೇ ಈ ಚಿತ್ರದಲ್ಲಿ ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ರವೀಂದ್ರನ್, ಗೋಪಾಲ ದೇಶಪಾಂಡೆ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ. ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಅವರ ಪುತ್ರ ರಿತ್ವಿಕ್ ಕಾಯ್ಕಿಣಿ ಈ ಸಿನಿಮಾ ಮೂಲಕ ಸಂಗೀತ ನಿರ್ದೇಶಕರಾಗುತ್ತಿದ್ದಾರೆ. ಕಥೆಯೊಂದಿಗೇ ಹೊಸೆದುಕೊಂಡಂಥಾ ಎರಡು ಹಾಡುಗಳಿಗೆ ಖುದ್ದು ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎಲಿಫೆಂಟ್ ವಿಸ್ಪರ್ಸ್ ಚಿತ್ರದ ಭಾಗವಾಗಿದ್ದ ಶ್ರೇಯಾಂಕ್ ನಂಜಪ್ಪ ಕೆಂಡ ಚಿತ್ರಕ್ಕೆ ಶಬ್ಧ ಸಂಯೋಜನೆ ಮಾಡಿದ್ದಾರೆ. ಅಂತೂ ಈ ಟೀಸರ್ ಮೂಲಕ ಕೆಂಡದ ಬಗ್ಗೆ ಅತೀವ ಕುತೂಹಲದ ಪರ್ವವೊಂದಕ್ಕೆ ಚಾಲನೆ ಸಿಕ್ಕಂತಾಗಿದೆ.

Continue Reading

South Cinema

Rishab Shetty: ಪರೋಕ್ಷವಾಗಿ ರಶ್ಮಿಕಾ, ಪ್ರಶಾಂತ್‌ ನೀಲ್‌ಗೆ ತಿರುಗೇಟು ಕೊಟ್ರಾ ರಿಷಬ್‌! ಸ್ಪಷ್ಟನೆ ಏನು?

Rishab Shetty: ನೆಟ್ಟಿಗರು ರಿಷಬ್‌ ಅವರು ಪರೋಕ್ಷವಾಗಿ ರಶ್ಮಿಕಾ ಹಾಗೂ ಪ್ರಶಾಂತ್‌ ನೀಲ್‌ ಅವರಿಗೆ ತಿರುಗೇಟು ಕೊಟ್ಟರು ಎಂದು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಲು ಶುರು ಮಾಡಿದ್ದರು. ಇದೀಗ ರಿಷಬ್‌ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ ಎಂದು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

Rishab rashmika
Koo

ಬೆಂಗಳೂರು: ರಿಷಬ್ ಶೆಟ್ಟಿ (Rishab Shetty) ಅವರು ಇತ್ತೀಚೆಗೆ ಗೋವಾದಲ್ಲಿ ನಡೆದ IFFI 2023 (ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ)ನಲ್ಲಿ ನೀಡಿದ ಹೇಳಿಕೆಯ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಚರ್ಚೆಗಳು ಆಗಿದ್ದವು. ರಿಷಬ್‌ ಶೆಟ್ಟಿ ಅವರು ʻʻನನಗೆ ಹಿಂದಿ ಮಾತ್ರವಲ್ಲದೆ ಇತರ ಚಲನಚಿತ್ರೋದ್ಯಮಗಳಿಂದಲೂ ಆಫರ್‌ಗಳು ಬಂದವು. ನಾನು ಕನ್ನಡ ಇಂಡಸ್ಟ್ರಿಯನ್ನು ಬಿಡಬಾರದು ಎಂಬ ನಂಬಿಕೆಯಿಂದಾಗಿ ಹಲವು ಆಪರ್‌ಗಳನ್ನು ಬಿಟ್ಟೆʼʼ ಎಂದು ಹೇಳಿಕೆ ನೀಡಿದ್ದರು. ಇದಾದ ಬಳಿಕ ನೆಟ್ಟಿಗರು ರಿಷಬ್‌ ಅವರು ಪರೋಕ್ಷವಾಗಿ ರಶ್ಮಿಕಾ ಹಾಗೂ ಪ್ರಶಾಂತ್‌ ನೀಲ್‌ ಅವರಿಗೆ ತಿರುಗೇಟು ಕೊಟ್ಟರು ಎಂದು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಲು ಶುರು ಮಾಡಿದ್ದರು. ಇದೀಗ ರಿಷಬ್‌ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ ಎಂದು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ರಶ್ಮಿಕಾ ಮಂದಣ್ಣ ಮತ್ತು ಪ್ರಶಾಂತ್ ನೀಲ್ ಅವರಂತಹ ನಟಿ ಹಾಗೂ ನಿರ್ದೇಶಕರುಗಳು ಕನ್ನಡ ಚಿತ್ರರಂಗದಲ್ಲಿ ಯಸಸ್ಸು ಸಾಧಿಸಿದ ಬಳಿಕ ಬೇರೆ ಭಾಷೆಯ ಚಿತ್ರೋದ್ಯಮದಲ್ಲಿ ಹೋಗಿದ್ದಾರೆ ಎಂಬುದು ಹಲವರ ವಾದ.
ಇತ್ತೀಚೆಗೆ ನಡೆದ IFFIನಲ್ಲಿ ರಿಷಬ್‌ಗೆ ಹಿಂದಿ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಲು ಯೋಜಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದರು.

ರಿಷಬ್‌ ಮಾತನಾಡಿ ʻ ಕಾಂತಾರ ಯಶಸ್ಸಿನ ನಂತರ, ನನಗೆ ಹಿಂದಿ ಮಾತ್ರವಲ್ಲದೆ ಇತರ ಚಲನಚಿತ್ರೋದ್ಯಮಗಳಿಂದಲೂ ಆಫರ್‌ಗಳು ಬಂದವು. ಕಾಂತಾರ ಸಿನಿಮಾ ಈ ಮಟ್ಟದಲ್ಲಿ ಹಿಟ್‌ ಆಗಿದ್ದಕ್ಕೆ ನನ್ನ ಕನ್ನಡಿಗರ ಕೊಡುಗೆ ಅದರಲ್ಲಿ ಅಪಾರ ಇದೆ. ಹಾಗಾಗಿ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ನಾನು ಸದಾ ಚಿರಋಣಿ. ಒಂದು ಸಿನಿಮಾ ಹಿಟ್‌ ಆಗ್ತಿದ್ದಂತೆ, ಇಂಡಸ್ಟ್ರಿ ಬಿಟ್ಟು ಹೊರಟ ನೋಡು ಎಂಬ ಮಾತು ಬರಬಾರದುʼʼ ಎಂದಿದ್ದರು.

ಇದನ್ನೂ ಓದಿ: Rishab Shetty: ವಿಶೇಷ ಜ್ಯೂರಿ ಅವಾರ್ಡ್ ತಮ್ಮ ನೆಚ್ಚಿನ ನಟನಿಗೆ ಅರ್ಪಿಸಿದ ರಿಷಬ್‌ ಶೆಟ್ಟಿ, ಯಾರವರು?

ರಶ್ಮಿಕಾ ಮತ್ತು ಪ್ರಶಾಂತ್ ನೀಲ್‌ ಕನ್ನಡ ಚಲನಚಿತ್ರೋದ್ಯಮದಲ್ಲಿ ಭಾರಿ ಯಶಸ್ಸನ್ನು ಗಳಿಸಿದವರು. 2016ರ ಚಲನಚಿತ್ರ ʼಕಿರಿಕ್ ಪಾರ್ಟಿʼಯೊಂದಿಗೆ ರಶ್ಮಿಕಾ ಖ್ಯಾತಿಯನ್ನು ಗಳಿಸಿದರು. 2018 ಚಲೋ ಸಿನಿಮಾ ಮೂಲಕ ತೆಲುಗಿಗೆ ಪದರ್ಪಾಣೆ ಮಾಡಿದರು ರಶ್ಮಿತಾ . ಅದೇ ವರ್ಷ ಬಿಡುಗಡೆಯಾದ ʼಗೀತ ಗೋವಿಂದಂʼ ಅವರ ಜೀವನವನ್ನು ಬದಲಾಯಿಸಿತು. ಬಳಿಕ ನಟಿ ತಮಿಳು ಮತ್ತು ಹಿಂದಿಯಲ್ಲೂ ನಟಿಸಿದರು. ಅವರು ಇತ್ತೀಚೆಗೆ ಸಂದೀಪ್ ರೆಡ್ಡಿ ವಂಗಾ ಅವರ ʼಅನಿಮಲ್ʼ ಚಿತ್ರದಲ್ಲಿ ರಣಬೀರ್ ಕಪೂರ್ ಜತೆ ಕಾಣಿಸಿಕೊಂಡರು. ಮತ್ತೊಂದೆಡೆ ಪ್ರಶಾಂತ್ ನೀಲ್‌ ಅವರು ಯಶ್ ಅಭಿನಯದ ಕೆಜಿಎಫ್ ಮತ್ತು ಕೆಜಿಎಫ್ 2 ಸಿನಿಮಾ ಮೂಲಕ ಸಕ್ಸೆಸ್‌ ಕಂಡ ಬಳಿಕ ಪ್ರಭಾಸ್ ಅವರೊಂದಿಗೆ ಸಲಾರ್: ಭಾಗ 1ನಲ್ಲಿ ಕೆಲಸ ಮಾಡುತ್ತಿದ್ದಾರೆ. ಹಾಗೇ ಮುಂದೆ ಟಾಲಿವುಡ್ ಮತ್ತು ಬಾಲಿವುಡ್‌ಗೆ ಪ್ರವೇಶಿಸುತ್ತಿದ್ದಾರೆ. ಈ ಇಬ್ಬರು ತಮ್ಮ ಯಶಸ್ಸಿನ ನಂತರ ಕನ್ನಡ ಚಿತ್ರರಂಗವನ್ನು ತೊರೆಯುತ್ತಿರುವುದಕ್ಕೆ ರಿಷಬ್ ವ್ಯಂಗ್ಯವಾಡುತ್ತಿದ್ದಾರೆ ಎಂದು ನೆಟ್ಟಿಗರು ಟ್ರೋಲ್‌ ಮಾಡಲು ಶುರು ಮಾಡಿದರು. ಹಾಗೇ ಈ ಬಗ್ಗೆ ಭಾರಿ ಚರ್ಚೆಗಳು ಆಯ್ತು.

ನಟನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಲು ರಿಷಬ್ ಪ್ರತಿಕ್ರಿಯೆಯನ್ನು ಅಭಿಮಾನಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ʻʻರಿಷಬ್‌ ಅವರು ಹೇಳಿದ್ದು ಒಂದು ಹಿಟ್ ಸಿನಿಮಾ ನೀಡಿದ ನಂತರ ಉದ್ಯಮವನ್ನು ತೊರೆಯುವ ವ್ಯಕ್ತಿ ಎಂದು ಕರೆಸಿಕೊಳ್ಳಲು ನಾನು ಬಯಸುವುದಿಲ್ಲʼʼ ಎಂದು. ಅದರ ಬದಲಾಗಿ, ‘ನಾನು ಇತರರಂತೆ ಕನ್ನಡ ಇಂಡಸ್ಟ್ರಿ ತೊರೆಯುವುದಿಲ್ಲ’ ಎಂದು ಅವರು ಹೇಳಿಲ್ಲ ಎಂದು ರಿಷಬ್‌ ಪರ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: Rishab Shetty: ಕನ್ನಡಿಗ ಕಲಾವಿದರೇ ಮೊದಲ ಆದ್ಯತೆ ಎಂದ ರಿಷಬ್‌; ಹೇಗಿರಲಿದೆ ಕಾಂತಾರ ಚಾಪ್ಟರ್‌ 1?

ಈ ಟ್ವೀಟ್‌ಗೆ ರಿಷಬ್ ಕೂಡ ಪ್ರತಿಕ್ರಿಯಿಸಿ, “ತೊಂದರೆಯಿಲ್ಲ, ಕೊನೆಗೂ ನಾನು ಹೇಳಲು ಬಯಸಿದ್ದನ್ನು ಒಬ್ಬರಾದರೂ ಅರ್ಥಮಾಡಿಕೊಂಡರಲ್ಲ” ಎಂದು ಬರೆದುಕೊಂಡಿದ್ದಾರೆ.

ಈಗಾಗಲೇ ಕಾಂತಾರ ಚಾಪ್ಟರ್‌ -1 ಲುಕ್ ಔಟ್ ಆಗಿದೆ. ಪ್ರತಿಕ್ಷಣವೂ ದೈವಿಕ ಸ್ಪರ್ಶ ನೀಡುವಂತಹ ಹಿನ್ನೆಲೆ ಧ್ವನಿಯಲ್ಲಿ ತಮ್ಮ ಅವತಾರವನ್ನು ಬಹಿರಂಗಗೊಳಿಸಿದ್ದಾರೆ ರಿಷಬ್‌. ಇತಿಹಾಸದ ನಿಗೂಢ ಸತ್ಯ ಹೇಳುವುದಕ್ಕೆ ರಿಷಬ್ ಶೆಟ್ಟಿ ತಯಾರಿ ಮಾಡಿಕೊಂಡಿದ್ದಾರೆ. ವಿಶ್ವಾದ್ಯಂತ ಸಿನಿಮಾ ಏಳು ಭಾಷೆಗಳಲ್ಲಿ ರಿಲೀಸ್‌ ಆಗುತ್ತಿದೆ. ಕಾಡುಬೆಟ್ಟು ಶಿವನ ತಂದೆಯ ರಹಸ್ಯ ರಿವೀಲ್ ಮಾಡಲು ಹೊರಟ್ಟಿದ್ದಾರೆ ರಿಷಬ್‌. 2024ಕ್ಕೆ ‘ಕಾಂತಾರ-1’ ಚಿತ್ರಮಂದಿರಗಳಿಗೆ ಬರಲಿದೆ..

Continue Reading

South Cinema

Actor Yash: ಸಿಹಿ ಸುದ್ದಿ ಕೊಟ್ಟೇ ಬಿಟ್ರು ರಾಕಿಂಗ್‌ ಸ್ಟಾರ್‌ ಯಶ್‌; ಟೈಟಲ್ ಅನೌನ್ಸ್‌ಗೆ ಮುಹೂರ್ತ ಫಿಕ್ಸ್!

Actor Yash: ಪೋಸ್ಟರ್‌ ಕೆಂಪು ಬಣ್ಣವನ್ನು ಹೊಂದಿದ್ದು, ಮುಂದಿನ ಸಿನಿಮಾ ಕೂಡ ಇದೇ ಮಾದರಿಯ ಕಲರ್ ಕಾಂಬಿನೇಷನ್‌ನಲ್ಲಿ ಬರಲಿದೆ ಎಂದು ಫ್ಯಾನ್ಸ್‌ ಊಹಿಸುತ್ತಿದ್ದಾರೆ. ಕೆವಿಎನ್‌ ಪ್ರೊಡಕ್ಷನ್‌ ಹೊಸ ಸಿನಿಮಾಗೆ ಬಂಡವಾಳ ಹೂಡುತ್ತಿದೆ ಎನ್ನಲಾಗಿದೆ.

VISTARANEWS.COM


on

Rocking star Yash gave sweet news new cinema Title Announcement date Fix
Koo

ಬೆಂಗಳೂರು; ನಟ ಯಶ್ (Actor Yash), ‘ಕೆಜಿಎಫ್’ ಹೊರತಾಗಿ ಇನ್ಯಾವುದೇ ಸಿನಿಮಾದಲ್ಲಿ ನಟಿಸಿರಲಿಲ್ಲ. ಮುಂದೆ ಯಾವ ಸಿನಿಮಾ ಒಪ್ಪಿಕೊಳ್ಳಲಿದ್ದಾರೆ ಎಂಬ ಕುತೂಹಲ ಅವರ ಫ್ಯಾನ್ಸ್‌ ಮಾತ್ರವಲ್ಲದೆ ಭಾರತದ ಸಿನಿಮಾ ಪ್ರೇಕ್ಷಕರಲ್ಲಿತ್ತು. (ಡಿಸೆಂಬರ್ 03) ತಮ್ಮ ಮುಂಬರುವ ಸಿನಿಮಾ ಬಗ್ಗೆ ಸುಳಿವೊಂದನ್ನು ನೀಡಿದ್ದರು. ಇದೀಗ ಯಶ್ ಸಿನಿಮಾದ ಟೈಟಲ್ ಅನೌನ್ಸ್ ಮೆಂಟ್‌ಗೆ ಮುಹೂರ್ತ ಫಿಕ್ಸ್‌ ಆಗಿದೆ. ಈ ಬಗ್ಗೆ ಯಶ್‌ ಟ್ವೀಟ್‌ ಹಂಚಿಕೊಂಡಿದ್ದಾರೆ.

ಡಿಸೆಂಬರ್ 8ರಂದು ಬೆಳಗ್ಗೆ 9:55ಕ್ಕೆ ಯಶ್ ಹೊಸ ಪ್ರಾಜೆಕ್ಟ್‌ ಅನೌನ್ಸ್‌ ಮಾಡಲಿದ್ದಾರೆ. ನಿನ್ನೆಯಷ್ಟೇ ಯಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರೊಫೈಲ್ ಪಿಕ್ಚರ್ ಬದಲಾಯಿಸಿಕೊಂಡಿದ್ದು, ‘ಲೋಡಿಂಗ್’ ಎಂದು ಬರೆದಿರುವ ಪೋಸ್ಟರ್ ಅನ್ನು ಹಂಚಿಕೊಂಡಿದ್ದರು. ಇದೀಗ ರಾಕಿಂಗ್ ಸ್ಟಾರ್ ಸಿನಿಮಾ‌ ಅನೌನ್ಸ್ ಮಾಡಲಿದ್ದಾರೆ. ಯಶ್​ ‘ಲೋಡಿಂಗ್’ ಪೋಸ್ಟರ್ ಹಂಚಿಕೊಂಡ ಕೇವಲ 40 ನಿಮಿಷದಲ್ಲಿ ಆ ಚಿತ್ರಕ್ಕೆ 30 ಸಾವಿರ ಲೈಕ್​ಗಳು ಫೇಸ್​ಬುಕ್​ನಲ್ಲಿ ಬಂದಿತ್ತು. ‘ಲೋಡಿಂಗ್’ ಪೋಸ್ಟರ್ʼ ಹಾಗೂ ಇಂದು ಹಂಚಿಕೊಂಡ ಪೋಸ್ಟರ್‌ ಕೆಂಪು ಬಣ್ಣವನ್ನು ಹೊಂದಿದ್ದು, ಮುಂದಿನ ಸಿನಿಮಾ ಕೂಡ ಇದೇ ಮಾದರಿಯ ಕಲರ್ ಕಾಂಬಿನೇಷನ್‌ನಲ್ಲಿ ಬರಲಿದೆ ಎಂದು ಫ್ಯಾನ್ಸ್‌ ಊಹಿಸುತ್ತಿದ್ದಾರೆ. ಕೆವಿಎನ್‌ ಪ್ರೊಡಕ್ಷನ್‌ ಹೊಸ ಸಿನಿಮಾಗೆ ಬಂಡವಾಳ ಹೂಡುತ್ತಿದೆ ಎನ್ನಲಾಗಿದೆ.

ಈ ಸಿನಿಮಾಕ್ಕಾಗಿ ಹಾಲಿವುಡ್​ನ ಜನಪ್ರಿಯ ಆಕ್ಷನ್ ನಿರ್ದೇಶಕರನ್ನು ಕರೆತರಲಿದ್ದಾರೆ ಎನ್ನಲಾಗಿದೆ. ಶ್ರೀಲಂಕಾದಲ್ಲಿ ಸಿನಿಮಾದ ಸಂಪೂರ್ಣ ಚಿತ್ರೀಕರಣ ನಡೆಸಲಿದ್ದು, ನಿರ್ದೇಶಕಿ ಒಬ್ಬರು ಯಶ್​ರ ಹೊಸ ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಎಂಬ ಮಾತುಗಳು ಸಹ ಹರಿದಾಡುತ್ತಿವೆ.

ಇದನ್ನೂ ಓದಿ: Actor Yash: ನಾನ್ ಯಾವತ್ತೂ ಅನೌನ್ಸ್‌ಮೆಂಟ್‌ ಮಾಡಿಲ್ಲ, ತಾಳ್ಮೆ ಇರಲಿ ಎಂದ ಯಶ್‌!

ಈ ಮಧ್ಯೆ ಅವರು ಬಾಲಿವುಡ್‌ ನಿರ್ದೇಶಕ ನಿತೇಶ್‌ ತಿವಾರಿ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ʼರಾಮಾಯಣʼ (Ramayana) ಚಿತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಅದಕ್ಕಾಗಿ ಯಶ್‌ ದಾಖಲೆಯ ಬರೋಬ್ಬರಿ 150 ಕೋಟಿ ರೂ. ಸಂಭಾವನೆ ಪಡಯುತ್ತಿದ್ದಾರೆ ಎನ್ನುವ ಸುದ್ದಿ ಹಬ್ಬಿದೆ. ಮೂಲಗಳ ಪ್ರಕಾರ ರಣಬೀರ್‌ ಕಪೂರ್‌ ರಾಮನಾಗಿ, ದಕ್ಷಿಣ ಭಾರತದ ನಾಯಕಿ ಸಾಯಿ ಪಲ್ಲವಿ ಸೀತೆಯಾಗಿ ಅಭಿನಯಿಸಲಿದ್ದಾರೆ. ಇನ್ನೊಂದು ಮುಖ್ಯ ಪಾತ್ರ ರಾವಣನಾಗಿ ಯಶ್‌ ಅಬ್ಬರಿಸಲಿದ್ದಾರೆ ಎನ್ನಲಾಗುತ್ತಿದೆ. ಮುಂದಿನ ವರ್ಷದ ಫೆಬ್ರವರಿಯಲ್ಲಿ ಚಿತ್ರ ಸೆಟ್ಟೇರಲಿದೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

Continue Reading

South Cinema

Thug Life Movie: ಕಮಲ್ ಹಾಸನ್ ಸಿನಿಮಾದಲ್ಲಿ ಎಂಟ್ರಿ ಕೊಟ್ಟ ಗೌತಮ್ ಕಾರ್ತಿಕ್!

Thug Life Movie: ಇದಕ್ಕೂ ಮೊದಲು ಗೌತಮ್ ಕಾರ್ತಿಕ್ ಮಣಿರತ್ನಂ ಜತೆಗೆ 2010ರ ಚಲನಚಿತ್ರ ʻಕಡಲ್ʼನಲ್ಲಿ ಕೆಲಸ ಮಾಡಿದ್ದರು. ಇದರಲ್ಲಿ ಗೌತಮ್ ಮತ್ತು ತುಳಸಿ ನಾಯರ್ ನಟಿಸಿದ್ದಾರೆ. ಇದೀಗ ಕಮಲ್‌ ಅವರ ಥಗ್ ಲೈಫ್ ತಾರಾಗಣದಲ್ಲಿ ಗೌತಮ್ ಕೂಡ ಇರುವುದು ಖಚಿತವಾಗಿದೆ.

VISTARANEWS.COM


on

Mani Ratnam-Kamal Haasan film Thug Life
Koo

ಬೆಂಗಳೂರು: ಕಮಲ್ ಹಾಸನ್ (Thug Life Movie) ಮತ್ತು ಮಣಿರತ್ನಂ ಅವರು 1987ರ ʻನಾಯಗನ್ʼ ಚಿತ್ರದ ಬಳಿಕ ಮತ್ತೊಮ್ಮೆ ಕೈಜೋಡಿಸುತ್ತಿದ್ದಾರೆ. ತಮಿಳಿನ ಹಿರಿಯ ನಟ ಕಾರ್ತಿಕ್ ಅವರ ಪುತ್ರ ಗೌತಮ್ ಕಾರ್ತಿಕ್ ಕೂಡ ಕಮಲ್‌ ಸಿನಿಮಾ ಪಾತ್ರವರ್ಗಕ್ಕೆ ಸೇರುತ್ತಿದ್ದಾರೆ. ವರದಿಗಳ ಪ್ರಕಾರ, ಅವರು ನಿರ್ವಹಿಸುತ್ತಿರುವ ಪಾತ್ರ ಬಹು ಮುಖ್ಯವಾದದ್ದು ಎನ್ನಲಾಗಿದೆ.

ಇದಕ್ಕೂ ಮೊದಲು ಗೌತಮ್ ಕಾರ್ತಿಕ್ ಮಣಿರತ್ನಂ ಜತೆಗೆ 2010ರ ಚಲನಚಿತ್ರ ʻಕಡಲ್ʼನಲ್ಲಿ ಕೆಲಸ ಮಾಡಿದ್ದರು. ಇದರಲ್ಲಿ ಗೌತಮ್ ಮತ್ತು ತುಳಸಿ ನಾಯರ್ ನಟಿಸಿದ್ದಾರೆ. ಇದೀಗ ಕಮಲ್‌ ಅವರ ಥಗ್ ಲೈಫ್ ತಾರಾಗಣದಲ್ಲಿ ಗೌತಮ್ ಕೂಡ ಇರುವುದು ಖಚಿತವಾಗಿದೆ.

ಕಮಲ್ ಹಾಗೂ ಮಣಿರತ್ನಂ ಜೋಡಿಯ ಸಿನಿಮಾಗೆ ʼಥಗ್ ಲೈಫ್ʼ ಎಂಬ ಶೀರ್ಷಿಕೆ ಇಡಲಾಗಿದೆ. ರಂಗರಾಯ ಸತ್ಯವೇಲ್ ನಾಯಕನ್ ಆಗಿ ಎಂಟ್ರಿ ಕೊಟ್ಟಿರುವ ಕಮಲ್ ಹಾಸನ್ ತಾನೊಬ್ಬ ಗ್ಯಾಂಗ್ ಸ್ಟರ್ ಎಂದು ಪರಿಚಯ ಮಾಡಿಕೊಳ್ಳುತ್ತಾರೆ. ಭರ್ಜರಿ ಆ್ಯಕ್ಷನ್ ಮೂಲಕ ವಿರೋಧಿಗಳಿಗೆ ಟಕ್ಕರ್ ಕೊಡುವ ʼಉಳಗನಾಯಗನ್ʼ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಪಕ್ಕಾ ಆ್ಯಕ್ಷನ್ ಎಂಟರ್ ಟೈನರ್ ಕಥಾನಕ ‘ಥಗ್ ಲೈಫ್’ ಸಿನಿಮಾದಲ್ಲಿ ತ್ರಿಷಾ ಕೃಷ್ಣನ್, ದುಲ್ಕರ್ ಸಲ್ಮಾನ್, ಜಯಂರವಿ ಮತ್ತಿತರರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ. ರಾಜ್ ಕಮಲ್ ಇಂಟರ್ ನ್ಯಾಷನಲ್ ಫಿಲ್ಮ್ಸ್ ಹಾಗೂ ಮದ್ರಾಸ್ ಟಾಕೀಸ್ ನಡಿ ಕಮಲ್ ಹಾಸನ್, ಮಣಿರತ್ನಂ, ಆರ್.ಮಹೇಂದ್ರನ್ ಮತ್ತು ಶಿವ ಅನಂತಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: Actor Vinayakan: ‘ಜೈಲರ್‌’ ವಿಲನ್‌ ವಿನಾಯಕನ್‌ ಬಂಧನ; ಕುಡಿದ ಮತ್ತಲ್ಲಿ ನಟನ ಹುಚ್ಚಾಟ?

ಉದಯನಿಧಿ ಸ್ಟಾಲಿನ್ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಎ.ಆರ್.ರೆಹಮಾನ್ ಚಿತ್ರದ ಸಂಗೀತ ನಿರ್ದೇಶನ, ಶ್ರೀಕರ್ ಪ್ರಸಾದ್ ಸಂಕಲನ, ರವಿ ಕೆ. ಚಂದ್ರನ್ ಛಾಯಾಗ್ರಹಣ ʼಥಗ್ ಲೈಫ್ʼ ಸಿನಿಮಾದಲ್ಲಿದೆ. 1987ರಲ್ಲಿ ಕಮಲ್ ಹಾಸನ್ ನಟನೆಯ, ಮಣಿರತ್ನಂ ನಿರ್ದೇಶನದ ‘ನಾಯಕನ್’ ಸಿನಿಮಾ ರಿಲೀಸ್ ಆಗಿತ್ತು. ಇದಾದ ಬಳಿಕ ಸುಮಾರು 37 ವರ್ಷಗಳ ಬಳಿಕ ಸೂಪರ್ ಹಿಟ್ ಜೋಡಿ ಒಂದಾಗಿದ್ದು, ನಿರೀಕ್ಷೆ ಹೆಚ್ಚಿಸಿದೆ.

ಸದ್ಯ ಕಮಲ್‌ ಹಾಸನ್‌ ಎಸ್‌.ಶಂಕರ್‌ ನಿರ್ದೇಶನದ ಇಂಡಿಯನ್‌ 2 ಚಿತ್ರದಲ್ಲಿ ನಿರತರಾಗಿದ್ದಾರೆ. ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿರುವ ಈ ಚಿತ್ರ 2024ರ ಎಪ್ರಿಲ್‌ನಲ್ಲಿ ತೆರೆಗೆ ಬರಲಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಅಗರ್ವಾಲ್‌ ಕಾಣಿಸಿಕೊಂಡಿದ್ದಾರೆ. ಸಿದ್ಧಾರ್ಥ್‌, ಎಸ್‌.ಜೆ.ಸೂರ್ಯ, ರಾಕುಲ್‌ ಪ್ರೀತ್‌ ಸಿಂಗ್‌, ಪ್ರಿಯಾ ಭವಾನಿ ಶಂಕರ್‌, ನಡುಮುಡಿ ವೇಣು, ವಿವೇಕ್‌ ಮತ್ತಿತರರು ನಟಿಸಿದ್ದಾರೆ. ಸುಮಾರು 250 ಕೋಟಿ ರೂ. ವೆಚ್ಚದಲ್ಲಿ ಚಿತ್ರ ತಯಾರಾಗಲಿದೆ.

Continue Reading
Advertisement
Lighting for Suvarna Vidhana Soudha
ಕರ್ನಾಟಕ37 seconds ago

Belagavi Winter Session: ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಇನ್ಮುಂದೆ ವರ್ಷಪೂರ್ತಿ ಲೈಟಿಂಗ್ಸ್

Markram
ಕ್ರಿಕೆಟ್3 mins ago

Ind vs SA : ಭಾರತ ವಿರುದ್ಧ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ

Kenda teaser kannada
South Cinema28 mins ago

Kannada New Movie: ಟೀಸರ್ ಮೂಲಕ ಕೌತುಕದ ಕಿಡಿ ಹೊತ್ತಿಸಿದ `ಕೆಂಡ’!

CP Yogeshwar brother in law Mahadevaiah
ಕರ್ನಾಟಕ39 mins ago

Murder Case: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಭಾವ ಮಹದೇವಯ್ಯ ಕೊಲೆ!

Foeticide case and pair of pink bunny figurines
ಕರ್ನಾಟಕ1 hour ago

Belagavi Winter Session: ಭ್ರೂಣ ಹತ್ಯೆ ಕೇಸ್‌; ಕೋರ್ಟ್‌ನಲ್ಲಿ ಕೇಸ್‌ ದಾಖಲಿಸಲು ಸದನದಲ್ಲಿ ಒತ್ತಾಯ

Narendra Modi With Women
EXPLAINER1 hour ago

ಚುನಾವಣೆಯಲ್ಲಿ ಹೆಣ್ಣುಮಕ್ಕಳ ಮತಗಳನ್ನು ಸೆಳೆದ ಬಿಜೆಪಿ; ‘ಕ್ವೀನ್ಸ್’‌ ಕಿಂಗ್‌ಮೇಕರ್ಸ್‌ ಆಗಿದ್ದು ಹೇಗೆ?

Foeticide arrest
ಕರ್ನಾಟಕ1 hour ago

Foeticide Case : ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ; ಹೆಡ್‌ ನರ್ಸ್‌ ಉಷಾರಾಣಿ ಬಂಧನ

Tukali imitate sangeetha sringeri
ಬಿಗ್ ಬಾಸ್1 hour ago

BBK SEASON 10: ನಾಯಿಯಾದ ಸಂಗೀತಾ; ಅನುಕರಣೆ ಮಾಡೋದ್ರಲ್ಲಿ ತುಕಾಲಿ ಎತ್ತಿದ ಕೈ!

Revenue Minister Krishna Byre Gowda making coffee
ಕರ್ನಾಟಕ2 hours ago

Belagavi Winter Session: ಕಾವೇರಿದ ಚರ್ಚೆ ನಡುವೆ ಬಿಸಿ ಬಿಸಿ ಕಾಫಿ ಮಾಡಿಕೊಂಡು ಕುಡಿದ ಕೃಷ್ಣ ಬೈರೇಗೌಡ

Car catches fire after hitting bus
ಕರ್ನಾಟಕ2 hours ago

Video Viral : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ11 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌