ಬೆಂಗಳೂರು: ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ (Shiva Rajkumar) ಇದೇ ಮೊದಲ ಬಾರಿಗೆ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ವಿಶೇಷ ಅಂದರೆ ಈ ಸಿನಿಮಾಗೆ ಯೋಗರಾಜ್ ಭಟ್ ಅವರ ನಿರ್ದೇಶನವಿದೆ. ಸಿನಿಮಾದ ಟೈಟಲ್ ಕೂಡ ರಿವೀಲ್ (Karataka Damanaka First Look Poster) ಆಗಿದ್ದು, ‘K ಕರಟಕ D ದಮನಕ’ (Karataka Damanaka) ಎಂದು ವಿಭಿನ್ನ ಶೀರ್ಷಿಕೆ ಇಟ್ಟಿದ್ದಾರೆ. ಹಾಗದ್ರೆ ‘K ಕರಟಕ D ದಮನಕ’ ಸಿನಿಮಾದ ಅರ್ಥ ಏನು? ಈ ಬಗ್ಗೆ ಪೋಸ್ಟ್ ಮೂಲಕ ಯೋಗರಾಜ್ ಭಟ್ ರಿವೀಲ್ ಮಾಡಿದ್ದಾರೆ.
‘ಕರಟಕ ದಮನಕ’ ಎಂದರೇನು?
ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಕರಟಕ ದಮನಕ ಎಂದರೆ ‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು ಕರಟಕ ಇನ್ನೊಂದರ ಹೆಸರು ದಮನಕ. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಈ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ. ಎಚ್ಚರಿಕೆ’ ಎಂದು ಫೋಸ್ಟ್ ಮಾಡಿದ್ದಾರೆ. ಹಲವು ದಿನಗಳಿಂದ ಈ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ರಾಕ್ ಲೈನ್ ವೆಂಕಟೇಶ್ ಕೂಡ ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಅವರು ಈ ಸಿನಿಮಾದಲ್ಲಿ ಪೊಲೀಸ್ ಆಫೀಸರ್ ಪಾತ್ರ ನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ: Shiva Rajkumar Birthday: ಈ ವರ್ಷ ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ಬರ್ತ್‌ಡೇ ಸ್ಪೆಷಲ್ ಎಂದ ಶಿವರಾಜ್ ಕುಮಾರ್!
ಸದ್ಯ ಶಿವಣ್ಣ ಅವರ ಕೈಯಲ್ಲಿ 10 ಸಿನಿಮಾಗಳಿವೆ. ಇದರ ಜತೆಗೆ ಒಂದಷ್ಟು ಹೊಸ ಸಿನಿಮಾ ಘೋಷಣೆ ಆಗಿದೆ. ಅದರಲ್ಲಿಯೂ ಇಷ್ಟು ದಿನಗಳವರೆಗೆ ಸುದೀಪ್ ಹಾಗೂ ಉಪೇಂದ್ರ ರೀತಿಯ ಸ್ಟಾರ್ ನಟರ ಜತೆ ಮಲ್ಟಿಸ್ಟಾರರ್ ಚಿತ್ರಗಳಲ್ಲಿ ನಟಿಸುತ್ತಿದ್ದ ಶಿವರಾಜ್‌ಕುಮಾರ್ ಈಗ ಗೋಲ್ಡನ್ ಸ್ಟಾರ್ ಗಣೇಶ್, ಅಜೇಯ್ ಕೃಷ್ಣ ಹಾಗೂ ಪ್ರಭುದೇವ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಶಿವರಾಜ್‌ಕುಮಾರ್ ಹಾಗೂ ಅಜೇಯ್ ರಾವ್ ಸಹ ಒಂದು ಮಲ್ಟಿಸ್ಟಾರರ್ ಚಿತ್ರಕ್ಕಾಗಿ ಒಂದಾಗುತ್ತಿದ್ದು, ಈ ಚಿತ್ರಕ್ಕೆ ಕಿರಣ್ ಎಂಬುವವರು ಬಂಡವಾಳ ಹೂಡಲು ಮುಂದಾಗಿದ್ದು, ಬಾಹುಬಲಿ ಎಸ್ ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.
ಶಿವರಾಜಕುಮಾರ್, ಪ್ರಭುದೇವ, ರವಿಶಂಕರ್, ತನಿಕೆಲ್ಲ ಭರಣಿ, ರಂಗಾಯಣ ರಘು, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ. ಯೋಗರಾಜ್ ಭಟ್ ಹಾಗೂ ರವಿ ಈ ಚಿತ್ರಕ್ಕೆ ಕಥೆ ರಚಿಸಿದ್ದು, ಚಿತ್ರಕಥೆಯನ್ನು ಯೋಗರಾಜ್ ಭಟ್, ರವಿ ಹಾಗೂ ಸುಬ್ರಹ್ಮಣ್ಯ ಬರೆದಿದ್ದಾರೆ.