Site icon Vistara News

Puneeth Rajkumar: ಅಪ್ಪು… ನಿನ್ನ ನೆನಪುಗಳು ಎಂದಿಗೂ ಅಮರ ಎಂದು ಭಾವುಕ ಪೋಸ್ಟ್‌ ಹಂಚಿಕೊಂಡ ಶಿವಣ್ಣ

Shivanna Post about Puneethrajkumar

ಬೆಂಗಳೂರು: ಮಾರ್ಚ್​ 17ರಂದು ನಟ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ಜನುಮದಿನ. ಈ ವಿಶೇಷ ದಿನವನ್ನು ಅವರ ಅಭಿಮಾನಿಗಳು ಹಬ್ಬದಂತೆ ಆಚರಿಸುತ್ತಿದ್ದಾರೆ. ಪುನೀತ್ ಅಭಿಮಾನಿಗಳು ಅಪ್ಪು ಸಮಾಧಿಗೆ ಬಂದು ಪೂಜೆ ಸಲ್ಲಿಸುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಕಂಠೀರವ ಸ್ಟುಡಿಯೋಗೆ ಬಂದಿದ್ದಾರೆ ಅಪ್ಪು ಅಭಿಮಾನಿಗಳು. ಇದೀಗ ಶಿವಣ್ಣ ಅಪ್ಪು ನೆನೆದು ಭಾವುಕರಾಗಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

‘ನೀನು ಹುಟ್ಟಿದಾಗ ನಮ್ಮ ಮನೆಯಲ್ಲಿ ಉಲ್ಲಾಸ ಉಕ್ಕಿ ಹರಿಯುತ್ತಿತ್ತು. ನಿನ್ನ ಕಣ್ಣಲ್ಲಿದ್ದ ಹೊಳಪು ನೀನು ಪವರ್ ಸ್ಟಾರ್ ಆಗೋದನ್ನು ಆವಾಗಲೇ ಆವಾಗ್ಲೇ ಹೇಳುತ್ತ ಇತ್ತು. ನೀನು ನಕ್ಕರೆ ಎಲ್ಲರೂ ನಗುತ್ತಿದ್ದರು. ನೀನು ಕುಣಿದರೆ ಎಲ್ಲರೂ ರೋಮಾಂಚನದಿಂದ ನೋಡುತ್ತ ಇದ್ದರು, ನೀನು ಕುಣಿದರೆ ಎಲ್ಲರೂ ರೋಮಾಂಚನದಿಂದ ನೋಡುತ್ತ ಇದ್ದರು, ಮನೆಗೆ ಬಂದ ಅತಿಥಿ ನೆಂಟರುಗಳಿಗೆಲ್ಲ ನೀನೇ ಬೇಕು. ಅಂತಹ ಪುಟ್ಟ ಅಪ್ಪು ಮಿಂಚಿನಂತೆ ತೆರೆಯ ಮೇಲೆ ಬಂದು ಹೆಮ್ಮರವಾಗಿ, ಕೋಟ್ಯಾಂತರ ಜನರಿಗೆ ನೆರಳಾಗಿದ್ದನ್ನು ಹತ್ತಿರದಿಂದ ನೋಡಿದ ನಾನೇ ಪುನೀತ.

ನಿನ್ನನು ಎತ್ತಿ ಆಡಿಸಿದ ಅಣ್ಣನಾಗಿ, ನಿನ್ನ ಜತೆ ಕೂಡಿ ಆಡಿದ ಸ್ನೇಹಿತನಾಗಿ, ನಿನ್ನ ಕೆಲಸಗಳನ್ನು ಮೆಚ್ಚಿ ಅಪ್ಪಿಕೊಂಡ ಕನ್ನಡಿಗನಾಗಿ, ಹಬ್ಬ ಯಾವುದೇ ಆಗಿದ್ದರೂ ನಿನ್ನ ಹೆಸರಿನಲ್ಲಿ ಪಟಾಕಿಗಳನ್ನು ಹಚ್ಚುವ ಅಭಿಮಾನಿಗಳಲ್ಲಿ ಒಬ್ಬನಾಗಿ ಹೇಳುತ್ತ ಇದ್ದೇನೆ, ನೀನು ಹುಟ್ಟಿದ್ದೇ ಒಂದು ಉತ್ಸವ. ನೀನು ಬೆಳೆದಿದ್ದು ಇತಿಹಾಸ, ನಿನ್ನ ಜೀವನ ಒಂದು ದಂತಕಥೆ. ನಿನ್ನ ನೆನಪುಗಳು ಎಂದಿಗೂ ಅಮರ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪು’ ಎಂದು ಬರೆದುಕೊಂಡಿದ್ದಾರೆ ಶಿವಣ್ಣ.

ಇದನ್ನೂ ಓದಿ: Puneeth Rajkumar: ಯುವರತ್ನನ ಸವಿಸವಿ ನೆನಪು

ಶಿವಣ್ಣ ಪೋಸ್ಟ್‌

ಕಂಠೀರವದಲ್ಲಿ ನಿರಂತರವಾಗಿ ಅನ್ನದಾಸೋಹ ಕಾರ್ಯಕ್ರಮ ನಡೆಯಲಿದ್ದು, ಮಾರ್ಚ್‌ 18ರಂದು ಸಂಜೆ 6ರಿಂದ 10 ಗಂಟೆವರೆಗೂ ಸಂಗೀತ ಸಂಜೆ ನಡೆಯಲಿದೆ. ಅಪ್ಪು ಚಲನಚಿತ್ರಗಳ ಗೀತೆಗಳನ್ನು ಹಾಡಲಾಗುತ್ತದೆ.

Exit mobile version