Site icon Vistara News

Yash Birthday: ಯಶ್‌ಗೆ ಅಡ್ವಾನ್ಸ್‌ ಬರ್ತ್‌ಡೇ ವಿಶ್ ಮಾಡಿದ ಶಿವಣ್ಣ; ಫ್ಯಾನ್ಸ್‌ ಫುಲ್‌ ಖುಷ್‌!

Yash Birthday CDP

ಬೆಂಗಳೂರು: ಭಾರತೀಯ ಚಿತ್ರರಂಗದಲ್ಲಿ ಭರವಸೆಯ ನಟ ಎಂಬ ಖ್ಯಾತಿಯನ್ನು ಪಡೆದಿರುವ ಪ್ಯಾನ್‌ ಇಂಡಿಯಾ ಸಿನಿಮಾ ನಾಯಕ, ರಾಕಿಂಗ್‌ ಸ್ಟಾರ್‌ ಯಶ್‌ (Rocking Star Yash) ಅವರಿಗೆ ಜನವರಿ 8ಕ್ಕೆ ಹುಟ್ಟುಹಬ್ಬದ ಸಂಭ್ರಮ. ಆದರೆ ಯಶ್‌ ಈ ಬಾರಿ ಅಭಿಮಾನಿಗಳ ಜತೆ ಜನುಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ. ಆದರೆ ಇಂತಹ ಸಂದರ್ಭದಲ್ಲಿ ಇಡೀ ಸ್ಯಾಂಡಲ್‌ವುಡ್ ನಟ ಯಶ್ ಸಪೋರ್ಟ್‌ಗೆ ನಿಂತಿದೆ. ಶಿವರಾಜ್‌ಕುಮಾರ್ ಯಶ್ ಹುಟ್ಟುಹಬ್ಬಕ್ಕೆ ‘ಸಿಡಿಪಿ’ ಕಾಮನ್ ʻಡಿಪಿ’ಯನ್ನು ರಿಲೀಸ್ ಮಾಡಿದ್ದಾರೆ. ಈ ಮೂಲಕ ಅಡ್ವಾನ್ಸ್‌ ಆಗಿ ಬರ್ತ್‌ಡೇ ವಿಶ್ ಮಾಡಿದ್ದಾರೆ.

ನೆಚ್ಚಿನ ನಟನನ್ನು ನೋಡುವ ಕಾತುರದಲ್ಲಿದ್ದ ಅಭಿಮಾನಿಗಳಿಗೆ ರಾಕಿ ಭಾಯ್‌ಮೊನ್ನೆಯಷ್ಟೇ ಪತ್ರ ಬರೆದಿದ್ದರು. ನೂತನ ಚಿತ್ರಕ್ಕೆ (Yash 19 Movie Update) ಸಂಬಂಧಪಟ್ಟಂತೆ ಅನಿವಾರ್ಯವಾಗಿ ತಾವು ಈ ಬಾರಿಯ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಆಗುತ್ತಿಲ್ಲ ಎಂದು ಕಾರಣ ಹೇಳಿದ್ದರು. ನಿಮ್ಮೆಲ್ಲರ ಪ್ರೀತಿ ಅಭಿಮಾನವೇ ತಮಗೆ ಗಿಫ್ಟ್‌ ಎಂದು ಬರೆದುಕೊಂಡಿದ್ದರು ಟಾಕ್ಸಿಕ್‌ ಸಿನಿಮಾದ (Toxic movie) ಪ್ರಯುಕ್ತ ಬ್ಯುಸಿಯಾಗಿರುವುದಾಗಿ ಹೇಳಿದ್ದರು.

ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಯಶ್ ಅವರ ಕಾಮನ್ ಡಿಪಿ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಹುಟ್ಟುಹಬ್ಬಕ್ಕೂ ಮೊದಲೇ ರಾಕಿಂಗ್ ಸ್ಟಾರ್‌ಗೆ ಸೆಂಚುರಿ ಸ್ಟಾರ್ ಗಿಫ್ಟ್ ನೀಡಿದ್ದಾರೆ. “ಯಶ್ ಹಾಗೂ ಅವರ ಎಲ್ಲಾ ಅಭಿಮಾನಿಗಳಿಗೂ ಶುಭಾಶಯಗಳು! CDP ತುಂಬಾ ಚೆನ್ನಾಗಿದೆ”ಎಂದು ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ ಶಿವಣ್ಣ.

ಇದನ್ನೂ ಓದಿ: Yash Birthday: ಈ ಹುಟ್ಟುಹಬ್ಬಕ್ಕೂ ಇರಲ್ಲ ಯಶ್‌! ಪತ್ರ ಬರೆದ ರಾಕಿ ಭಾಯ್‌; ಅಭಿಮಾನಿಗಳಿಗೆ ಭಾರಿ ನಿರಾಸೆ

ಯಶ್‌ ಟಾಕ್ಸಿಕ್‌’ ಸಿನಿಮಾ ಅನೌನ್ಸ್‌ ಮಾಡಿದ್ದಾಗಿನಿಂದ (Yash 19 Movie Update) ಹೊಸ ಹೊಸ ಅಪ್‌ಡೇಟ್‌ಗಳು ಬರುತ್ತಲೇ ಇವೆ. ಯಶ್ ಕನ್ನಡ ಸಿನಿಮಾವನ್ನು ಗ್ಲೋಬಲ್ ಲೆವೆಲ್‌ಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದೆಲ್ಲ ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನೊಂದು ಇಂಟ್ರೆಸ್ಟಿಂಗ್ ವಿಷಯ ಅಂದರೆ, ‘ಟಾಕ್ಸಿಕ್’ ಸಿನಿಮಾವನ್ನು ಕೇವಲ ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ಅಷ್ಟೇ ನಿರ್ಮಾಣ ಮಾಡುತ್ತಿಲ್ಲ. ಕೆವಿನ್‌ ಸಂಸ್ಥೆಯ ವೆಂಕಟ್ ಕೆ. ನಾರಾಯಣ್ ಜತೆ ಯಶ್ ತಮ್ಮ ʻಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ʼ ಮೂಲಕ ಕೈ ಜೋಡಿಸಿದ್ದಾರೆ. ಹಾಗೇ ಚಿತ್ರದಲ್ಲಿ ಮಲಯಾಳಂ ಸ್ಟಾರ್‌ ನಟರೊಬ್ಬರು ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುಳಿವೂ ಕೂಡ ವೈರಲ್‌ ಆಗುತ್ತಿದೆ.

ಯಶ್ ಅವರ ಈ ಸಿನಿಮಾ ಬಜೆಟ್ ಬರೋಬ್ಬರಿ 170 ಕೋಟಿ ರೂಪಾಯಿ ಎನ್ನಲಾಗಿದೆ. ಆದರೆ, ಈ ಬಗ್ಗೆ ಕೆವಿಎನ್ ಸಂಸ್ಥೆ ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಇದರ ಜತೆಗೆ ಇನ್ನೊಂದು ಸುದ್ದಿ ಸಖತ್‌ ವೈರಲ್‌ ಆಗಿದೆ. ಮಲಯಾಳಂ ನಟ ಟೊವಿನೋ ಥಾಮಸ್ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿದೆ. ಪೂರಕವಾಗಿ, ನಟ ತಮ್ಮ ಇನ್‌ಸ್ಟಾದಲ್ಲಿ ಫಸ್ಟ್‌ ಲುಕ್‌ ವಿಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ. ಜೋಕರ್‌ ಪಾತ್ರದಲ್ಲಿ ಏನಾದರೂ ಟೊವಿನೋ ಥಾಮಸ್ ಕಾಣಿಸಿಕೊಳ್ಳಲಿದ್ದಾರಾ ಎಂದು ಕಮೆಂಟ್‌ ಮಾಡಿದ್ದಾರೆ. ಜೋಕರ್ ಝಲಕ್‌ನ ಮಾತ್ರ ಟೊವಿನೋ ಥಾಮಸ್ ಹಂಚಿಕೊಂಡಿರುವುದು ಅಭಿಮಾನಿಗಳ ಗಮನ ಸೆಳೆದಿದೆ.

ಭಾರತ, ಮಲೇಷ್ಯಾ, ಜಪಾನ್, ನ್ಯೂಜಿಲ್ಯಾಂಡ್, ಆಫ್ರಿಕಾ, ಆಸ್ಟ್ರೇಲಿಯಾ, ರಷ್ಯಾ, ಯುಕೆ, ಯೂರೋಪ್ ಸೇರಿದಂತೆ ಹಲವೆಡೆ ಟೈಟಲ್ ರಿವೀಲ್ ಆಗಿದೆ. ಇದುವರೆಗೂ ಕನ್ನಡ ಯಾವ ಸಿನಿಮಾದ ಟೈಟಲ್ ಕೂಡ ವಿಶ್ವದಾದ್ಯಂತ ಈ ರೀತಿ ರಿಲೀಸ್ ಆಗಿಲ್ಲ. ಈ ಮೂಲಕ ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ ಎನ್ನುವುದು ಕೂಡ ಕನ್ಫರ್ಮ್ ಆಗಿದೆ. ಗೀತು ಮೋಹನ್​ದಾಸ್​ ಕಲ್ಪನೆಯ ಕತೆಗೆ ಕೆವಿಎನ್ ಪ್ರೊಡಕ್ಷನ್ ಬಂಡವಾಳ ಹೂಡುತ್ತಿದೆ. 2025ರ ಏಪ್ರಿಲ್‌ 10ರಂದು ಈ ಸಿನಿಮಾ ವಿಶ್ವಾದ್ಯಂತ ರಿಲೀಸ್‌ ಆಗುತ್ತಿದೆ.

Exit mobile version