ಬೆಂಗಳೂರು: ಹ್ಯಾಟ್ರಿಕ್ ಹೀರೊ ನಟ ಶಿವರಾಜ್‌ಕುಮಾರ್ (Shivaraj Kumar) ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಶಿವಣ್ಣ 125ನೇ ಸಿನಿಮಾ ‘ವೇದ’ ಡಿಸೆಂಬರ್‌ನಲ್ಲಿ ತೆರೆ ಕಾಣಲು ಸಜ್ಜಾಗಿ ನಿಂತಿದೆ. ʻಘೋಸ್ಟ್ʼ, ʻನೀ ಸಿಗೋವರೆಗೂʼ, ʻಫಾರ್ಟಿಫೈವ್ʼ, ʻಕರಟಕ ದಮನಕʼ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಚಿತ್ರಕ್ಕೆ ಶಿವಣ್ಣ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕಾರ್ತಿಕ್ ಅದ್ವೈತ್ ಅವರು ಶಿವಣ್ಣ ಅವರೊಂದಿಗೆ ಸಿನಿಮಾ ಮಾಡಲು ರೆಡಿಯಾಗಿದ್ದಾರೆ.
ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ ‘ಪಾಯುಮ್ ಒಲಿ ನೀ ಎನಕ್ಕು’ ಚಿತ್ರ ನಿರ್ದೇಶಿಸಿದ್ದಾರೆ. ಇದೀಗ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಡುತ್ತಿರುವ ಕಾರ್ತಿಕ್ ಅವರಿಗೆ ನಿರ್ದೇಶಕನಾಗಿ ಇದು ಎರಡನೇ ಸಿನಿಮಾ.
ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್‌ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಸಿಗಲಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ಸಿನಿಮಾ ತಂಡ ನಿರತವಾಗಿದೆ. ಮುಂದಿನ ವರ್ಷದಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ತಂಡ ಹೇಳಿಕೊಂಡಿದೆ.
ಇದನ್ನೂ ಓದಿ | Shivaraj Kumar Birthday |ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡ ಶಿವರಾಜ್ ಕುಮಾರ್
ತಮಿಳಿನಲ್ಲಿ ಈಗಾಗಲೇ ನೆಲ್ಸನ್ ನಿರ್ದೇಶನದ ‘ಜೈಲರ್’ ಸಿನಿಮಾದಲ್ಲಿ ನಟ ರಜನಿಕಾಂತ್ ಜತೆ ಶಿವಣ್ಣ ನಟಿಸುವುದು ಪಕ್ಕಾ ಆಗಿದೆ. ಚಿತ್ರದ ಶೀರ್ಷಿಕೆ, ನಾಯಕಿ, ತಾರಾಬಳಗ, ತಾಂತ್ರಿಕ ವರ್ಗ ಇದೆಲ್ಲದರ ಬಗ್ಗೆ ಮುಂಬರುವ ದಿನಗಳಲ್ಲಿ ಮಾಹಿತಿ ಹಂಚಿಕೊಳ್ಳುವುದಾಗಿ ನಿರ್ದೇಶಕ ಕಾರ್ತಿಕ್ ಅದ್ವೈತ್ ಹೇಳಿದ್ದಾರೆ. ಶಿವಣ್ಣ ಅಭಿನಯದ ‘ಕಿಲ್ಲಿಂಗ್ ವೀರಪ್ಪನ್’ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿದ್ದ ಹಾಗೂ ತೆಲುಗಿನಲ್ಲಿ ‘ಆಫೀಸರ್’, ‘ಗುಡ್ ಲಕ್ ಸಖಿ’ ಸಿನಿಮಾ ನಿರ್ಮಿಸಿರುವ ನಿರ್ಮಾಪಕ ಸುಧೀರ್ ಚಂದ್ರ ಪಡಿರಿ ‘ಸುಧೀರ್ ಚಂದ್ರ ಫಿಲಂ ಕಂಪನಿ’ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಇದನ್ನೂ ಓದಿ | Shivaraj Kumar | ಸೆಟ್ಟೇರಲಿವೆ ಬರ್ತ್‌ಡೇ ಬಾಯ್ ಸಾಲು ಸಾಲು ಚಿತ್ರಗಳು, ಆ್ಯಕ್ಷನ್ ಕಟ್ ಹೇಳಲಿರುವ ಅರ್ಜುನ್ ಜನ್ಯ