Site icon Vistara News

Actor Dhanush | ಕಾಲಿವುಡ್‌ಗೆ ಎಂಟ್ರಿ ಕೊಟ್ಟ ಶಿವಣ್ಣ: ಧನುಷ್‌ ನಟನೆಯ ಕ್ಯಾಪ್ಟನ್ ಮಿಲ್ಲರ್‌ನಲ್ಲಿ ಸ್ಕ್ರೀನ್ ಶೇರ್!

Actor Dhanush (shivanna captain miller)

ಬೆಂಗಳೂರು : ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಇದೀಗ ಶಿವಣ್ಣ ಕಾಲಿವುಡ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅರುಣ್ ಮಾಥೇಶ್ವರನ್ ನಿರ್ದೇಶನದ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ನಟ ಧನುಷ್ (Actor Dhanush ) ಜತೆ ಶಿವಣ್ಣ ಸ್ಕ್ರೀನ್ ಶೇರ್ ಮಾಡಲಿದ್ದಾರೆ. ಧನುಷ್ ಅಣ್ಣನ ಪಾತ್ರದಲ್ಲಿ ಶಿವಣ್ಣ ಕಾಣಿಸಿಕೊಳ್ಳಲಿದ್ದಾರೆ.

ಬಗ್ಗೆ ಶಿವಣ್ಣ ಸಿನಿಮಾ ಪೋಸ್ಟರ್ ಹಂಚಿಕೊಳ್ಳುವುದರ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಇದರೊಂದಿಗೆ ಕಾಲಿವುಡ್‌ಗೆ ಶಿವಣ್ಣನ ಆಗಮನವಾಗಿದೆ. ಕ್ಯಾಪ್ಟನ್ ಮಿಲ್ಲರ್ ಚಿತ್ರಕ್ಕೆ ಸತ್ಯಜ್ಯೋತಿ ಫಿಲ್ಮ್ಸ್‌ ಬಂಡವಾಳ ಹೂಡಿದೆ. ಇನ್ನು ಸಂದೀಪ್ ಕಿಶನ್ ಮತ್ತು ಪ್ರಿಯಾಂಕಾ ಅರುಲ್ ಮೋಹನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ಈ ‘ಕ್ಯಾಪ್ಟನ್ ಮಿಲ್ಲರ್ ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನೂ ಓದಿ | Captain Miller Film | ಐತಿಹಾಸಿಕ ಕಥೆಯೊಂದಿಗೆ ಬರುತ್ತಿದ್ದಾರೆ ನಟ ಧನುಷ್‌: ಸೆಟ್ಟೇರಲಿದೆ ಕ್ಯಾಪ್ಟನ್ ಮಿಲ್ಲರ್

ಐತಿಹಾಸಿಕ ಕಥಾ ಹಂದರ ಹೊಂದಿರುವ ‘ಕ್ಯಾಪ್ಟನ್ ಮಿಲ್ಲರ್’ !
ಈ ಚಿತ್ರ 1930 ಮತ್ತು 40ರ ದಶಕದ ಮದ್ರಾಸ್‌ ಪ್ರೆಸಿಡೆನ್ಸಿ ಹಿನ್ನೆಲೆಯಲ್ಲಿ ಸೆಟ್ಟೇರಲಿದೆ. ಶೀಘ್ರದಲ್ಲಿಯೇ ಚಿತ್ರೀಕರಣ ಪ್ರಾರಂಭವಾಗುತ್ತದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರಕ್ಕೆ ಶ್ರೇಯಸ್ ಕೃಷ್ಣ ಅವರ ಛಾಯಾಗ್ರಹಣ, ನಾಗೂರನ್ ಅವರ ಸಂಕಲನ ಮತ್ತು ಜಿ ವಿ ಪ್ರಕಾಶ್ ಕುಮಾರ್ ಅವರ ಸಂಗೀತ ಸಂಯೋಜನೆ ಇದೆ. ಸತ್ಯಜ್ಯೋತಿ ಫಿಲ್ಮ್ಸ್‌ನ ಸೆಂಧಿಲ್‌ ತ್ಯಾಗರಾಜನ್‌ ಮತ್ತು ಅರ್ಜುನ್‌ ತ್ಯಾಗರಾಜನ್‌ ನಿರ್ಮಿಸಿರುವ ʻಕ್ಯಾಪ್ಟನ್‌ ಮಿಲ್ಲರ್‌ʼ 2023ರಲ್ಲಿ ತೆರೆ ಕಾಣಲಿದೆ. ಮದನ್‌ ಕರ್ಕಿ ಸಂಭಾಷಣೆ ಇದೆ. ರಾಷ್ಟ್ರ ಪ್ರಶಸ್ತಿ ವಿಜೇತೆ ಪೂರ್ಣಿಮಾ ರಾಮಸ್ವಾಮಿ ಮತ್ತು ಕಾವ್ಯ ಶ್ರೀರಾಮ್‌ ಅವರು ವಸ್ತ್ರ ವಿನ್ಯಾಸ ಮಾಡಿದ್ದಾರೆ.

ಇದೇ ಡಿಸೆಂಬರ್‌ 23ಕ್ಕೆ ವೇದ ಸಿನಿಮಾ ತೆರೆಗೆ!

ಶಿವರಾಜ್‌ ಕುಮಾರ್‌ ಅಭಿನಯದ ‘ವೇದ’ ಸಿನಿಮಾ ಇದೇ ಡಿಸೆಂಬರ್ 23ರಂದು ತೆರೆಗೆ ಬರಲು ಸಜ್ಜಾಗಿದೆ. ಇದಕ್ಕೆ ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ | Shivrajkumar | ಶಿವರಾಜ್‌ಕುಮಾರ್‌ ಅಭಿನಯದ ʻವೇದʼ ಟೀಸರ್ ರಿಲೀಸ್

Exit mobile version