Site icon Vistara News

Wolf Movie: ಪ್ರಭುದೇವ ಅಭಿನಯದ ‘wolf’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವರಾಜಕುಮಾರ್

#image_title

ಬೆಂಗಳೂರು: ಭಾರತದ ಮೈಕೆಲ್‌ ಜಾಕ್ಸನ್‌ ಎಂದೇ ಪ್ರಸಿದ್ಧಿ ಪಡೆದಿರುವ ಪ್ರಭುದೇವ್‌ ನಟನೆಯ ಬಹುನಿರೀಕ್ಷಿತ ಸಿನಿಮಾವಾದ ‘wolfʼನ ಫಸ್ಟ್‌ ಲುಕ್‌ ಬಿಡುಗಡೆಯಾಗಿದೆ. ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ (ShivarajKumar) ಫಸ್ಟ್‌ ಲುಕ್‌ ಬಿಡುಗಡೆ ಮಾಡಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: ರಾಜ ಮಾರ್ಗ ಅಂಕಣ : ಲೆಜೆಂಡರಿ ಸಿನಿಮಾಗಳು, ಮರೆಯಲಾಗದ ಹಾಡುಗಳು: ಕೆ. ವಿಶ್ವನಾಥ್‌ ಅಳಿದ ಮೇಲೂ ನಿತ್ಯ ನೆನಪು


ಈ ಚಿತ್ರವನ್ನು ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕರಾಗಿರುವ ಸಂದೇಶ್‌ ನಾಗರಾಜ್‌ ಅವರು ನಿರ್ಮಿಸಿದ್ದಾರೆ. ವಿನು ವೆಂಕಟೇಶ್‌ ಅವರು ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನು ಬರೆಯುವುದರ ಜತೆ ಆಕ್ಷನ್‌ ಕಟ್‌ ಕೂಡ ಹೇಳಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಬಹುಕೋಟಿ ವೆಚ್ಚವನ್ನು ಮಾಡಲಾಗಿದೆ.


ಚಿತ್ರದಲ್ಲಿ ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಪುಷ್ಪ ಖ್ಯಾತಿಯ ಅನಸೂಯ ಸೇರಿ ಅನೇಕರು ಬಣ್ಣ ಹಚ್ಚಿದ್ದಾರೆ. ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ. ಲಾರೆನ್ಸ್ ಕಿಶೋರ್ ಸಂಕಲನ, ಪ್ರದೀಪ್ ದಿನೇಶ್ ಸಾಹಸ ನಿರ್ದೇಶನ, ಮಣಿ ಮೌಳಿ ಕಲಾ ನಿರ್ದೇಶನ ಹಾಗೂ ಗಣೇಶ್, ಶ್ರೀಧರ್, ಭೂಪತಿ ರಾಜ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿರುವುದಾಗಿ ಚಿತ್ರತಂಡ ತಿಳಿಸಿದೆ.

Exit mobile version