Site icon Vistara News

Shivrajkumar | ಶಿವರಾಜ್‌ಕುಮಾರ್‌ ಅಭಿನಯದ ʻವೇದʼ ಟೀಸರ್ ರಿಲೀಸ್

Shivrajkumar

ಬೆಂಗಳೂರು: ಹ್ಯಾಟ್ರಿಕ್‌ ಹೀರೊ ಶಿವರಾಜ್‌ ಕುಮಾರ್‌ (Shivrajkumar) ಅಭಿನಯದ ʻವೇದʼ ಸಿನಿಮಾದ ಟೀಸರ್‌ ಬಿಡುಗಡೆಗೊಂಡಿದೆ. ರಾಯಚೂರಿನಲ್ಲಿ ಪ್ರಿ ರಿಲೀಸ್‌ ಇವೆಂಟ್‌ ನಡೆಯುತ್ತಿದ್ದು, ಇಡೀ ವೇದ ಟೀಂ ಭಾಗಿಯಾಗಿದೆ. ‘ವೇದ’ ಸಿನಿಮಾ ಗೀತಾ ಪಿಕ್ಚರ್ಸ್‌ ಲಾಂಛನದಲ್ಲಿ ಮೂಡಿ ಬರುತ್ತಿದೆ. ನಿರ್ದೇಶಕ ಎ. ಹರ್ಷ ಹಾಗೂ ಶಿವರಾಜ್‌ಕುಮಾರ್‌ ಕಾಂಬಿನೇಶನ್‌ನ ನಾಲ್ಕನೇ ಸಿನಿಮಾ ಇದಾಗಿದೆ.

ಈ ಹಿಂದೆ ಅಷ್ಟೇ ಏಳೇಳು ಬೆಟ್ಟ ದಾಟ್ಕೊಂಡು ಬರ್ತಾವ್ನೆ ‘ಗಿಲ್ಲಕ್ಕೋ ಶಿವ’ ಲಿರಿಕಲ್‌ ಹಾಡು ಬಿಡುಗಡೆಗೊಂಡಿದೆ. ಈ ಹಾಡನ್ನು ಸೌತ್ ಸ್ಟಾರ್ ಮಂಗ್ಲಿ ಅವರು ಹಾಡಿದ್ದು ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಚಿತ್ರಕ್ಕೆ ಜೀ ಸ್ಟುಡಿಯೊ ಕೈ ಜೋಡಿಸಿದೆ. ಗಾನವಿ ಚಿತ್ರದ ನಾಯಕಿಯಾಗಿದ್ದು, ಅರ್ಜುನ್‌ ಜನ್ಯ ಸಂಗೀತ ಈ ಚಿತ್ರಕ್ಕಿದೆ.

ಇದನ್ನೂ ಓದಿ | Nenapirali Prem | ನೆನಪಿರಲಿ ಪ್ರೇಮ್‌ ಪುತ್ರಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ: ಯಾವ ಸಿನಿಮಾದಲ್ಲಿ ನಟನೆ?

ವೇದ ಚಿತ್ರ 1960ರ ದಶಕದಲ್ಲಿ ನಡೆಯುವ ಕ್ರೂರ ಕಥೆಯನ್ನು ಹೊಂದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರದಲ್ಲಿ ಶಿವಣ್ಣನ ಮಗಳಾಗಿ ಅರುಣ್ ಸಾಗರ್ ಪುತ್ರಿ ಅದಿತಿ ಸಾಗರ್ ಕಾಣಿಸಿಕೊಳ್ಳಲಿದ್ದಾರೆ. ಇನ್ನುಳಿದಂತೆ ಕುರಿ ಪ್ರತಾಪ್, ಜಗ್ಗಪ್ಪ, ಉಮಾಶ್ರೀ ಪ್ರಮುಖ ಪಾತ್ರದಲ್ಲಿ ಕಾಣಿಸಲಿದ್ದಾರೆ. ಡಿಸೆಂಬರ್‌ 23ರಂದು ಚಿತ್ರ ರಾಜ್ಯಾದ್ಯಂತ ತೆರೆ ಕಾಣಲಿದೆ.

ಇದನ್ನೂ ಓದಿ | Dolly Dhananjay | ಸೆಟ್ಟೇರಿತು ಡಾಲಿ ಪಿಕ್ಚರ್ಸ್ ನಿರ್ಮಾಣದ ಸಿನಿಮಾ: ಡಿಸೆಂಬರ್ ಮೊದಲ ವಾರದಿಂದ ‘ಟಗರು ಪಲ್ಯ’ ಶೂಟಿಂಗ್‌ ಶುರು

Exit mobile version