Site icon Vistara News

Kiara Advani | ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಆಡ್ವಾಣಿ ಮದುವೆ ಡೇಟ್‌ ಫಿಕ್ಸ್‌?

Kiara Advani

ಬೆಂಗಳೂರು : ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಆಡ್ವಾಣಿ (Kiara Advani ) ಅವರ ಮದುವೆ ಗಾಸಿಪ್‌ಗಳು ಕೆಲವು ದಿನಗಳಿಂದ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದೀಗ ವರದಿ ಹೇಳುವಂತೆ ಜೋಡಿ ಫೆಬ್ರವರಿಯಲ್ಲಿ ಮದುವೆ ಆಗಲಿದೆ ಎನ್ನಲಾಗುತ್ತಿದೆ.

ನಟಿ ಕಿಯಾರಾ ಆಡ್ವಾಣಿ ಮತ್ತು ನಟ ಸಿದ್ಧಾರ್ಥ್ ಮಲ್ಹೋತ್ರಾ ಕೆಲವು ಸಮಯದಿಂದ ಡೇಟಿಂಗ್ ಮಾಡುತ್ತಿದ್ದು, ಈ ಜೋಡಿಯು ತಮ್ಮ ಸಂಬಂಧವನ್ನು ಈಗಾಗಲೇ ಅನೇಕ ಕಡೆಗಳಲ್ಲಿ ಖಚಿತಪಡಿಸಿದೆ. ಇದೀಗ ಜೋಡಿಯ ಮದುವೆ ರಾಜಸ್ಥಾನದ ಜೈಸಲ್ಮೇರ್ ಪ್ಯಾಲೇಸ್ ಹೋಟೆಲ್‌ನಲ್ಲಿ ಫೆಬ್ರವರಿ 6 ರಂದು ನಡೆಯಲಿದೆ ಎಂದು ವರದಿ ಆಗಿದೆ.

ಪ್ರೀ ವೆಡ್ಡಿಂಗ್‌ ಫಂಕ್ಷನ್‌ಗಳು ಫೆಬ್ರವರಿ 4 ಮತ್ತು 5 ರಂದು ನಡೆಯಲಿವೆ ಎನ್ನಲಾಗಿದೆ. ಮದುವೆ ಜೈಸಲ್ಮೇರ್ ಪ್ಯಾಲೇಸ್ ಹೋಟೆಲ್‌ನಲ್ಲಿ ನಡೆಯಲಿದೆ. ಇದು ಹೆಚ್ಚಿನ ಭದ್ರತೆಯೊಂದಿಗೆ ಅದ್ದೂರಿ ಕಾರ್ಯಕ್ರಮದ ಜತೆ ಕುಟುಂಬಸ್ಥರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ | Kiara Advani | ಹೊಸ ವರ್ಷವನ್ನು ಒಟ್ಟಿಗೆ ಆಚರಿಸಲಿದ್ದಾರಾ ಕಿಯಾರಾ-ಸಿದ್ಧಾರ್ಥ್?ವಿಡಿಯೊ ವೈರಲ್‌!

ಮುಂಬೈ ವಿಮಾನ ನಿಲ್ದಾಣದಲ್ಲಿ ಈ ಜೋಡಿ ಕಾಣಿಸಿಕೊಂಡಿದ್ದು, ಹೊಸ ವರ್ಷವನ್ನು ಇಬ್ಬರೂ ಒಟ್ಟಿಗೆ ಆಚರಿಸಲಿದ್ದಾರಾ ಎಂಬ ಗಾಸಿಪ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿತ್ತು. ಇದರ ಬೆನ್ನಲ್ಲೇ ಮದುವೆ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

‘ಷೇರ್ ಶಾ’ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಇವರಿಬ್ಬರ ಮಧ್ಯೆ ಪ್ರೀತಿ ಹುಟ್ಟಿದೆ ಎಂದು ಹೇಳಲಾಗಿತ್ತು. ಈ ಚಿತ್ರಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಸಹ ಸಿಕ್ಕಿತ್ತು. ಅಭಿಮಾನಿಗಳು ಸಹ ಈ ಜೋಡಿಯನ್ನು ಮೆಚ್ಚಿಕೊಂಡಿದ್ದಾರೆ. ನಟಿ ಕಿಯಾರಾ ಆಡ್ವಾಣಿ ಶೀಘ್ರದಲ್ಲಿಯೇ ‘ಗೋವಿಂದ ನಾಮ್ ಮೇರಾ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ನಟ ಸಿದ್ಧಾರ್ಥ್ ಮಲ್ಹೋತ್ರಾ ಅವರು ‘ಇಂಡಿಯನ್ ಪೊಲೀಸ್ ಫೋರ್ಸ್’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿದ್ಧಾರ್ಥ್ ಮಲ್ಹೋತ್ರಾ ಅವರ ʻಮಿಷನ್‌ ಮಜ್ನುʼ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ನಾಯಕಿ ರಶ್ಮಿಕಾ ಮಂದಣ್ಣ.

ಇದನ್ನೂ ಓದಿ | Kiara Advani | ಬಾಲಿವುಡ್‌ನ ಕಿಯಾರ-ಸಿದ್ಧಾರ್ಥ ಮದ್ವೆ! ನಟಿಯ ಇನ್‌ಸ್ಟಾ ಪೋಸ್ಟ್‌‌ನಲ್ಲಿ ಏನಿದೆ?

Exit mobile version