Site icon Vistara News

Kantara Movie | ಸ್ವಾತಂತ್ರ್ಯ ದಿನಾಚರಣೆಗೆ ಸಿಹಿ ಸುದ್ದಿ ಹಂಚಿಕೊಂಡ ಕಾಂತಾರ

Kantara Movie

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಯಲ್ಲಿ ಕಾಂತಾರ (Kantara Movie) ಚಿತ್ರತಂಡ ಸಿಹಿ ಸುದ್ದಿಯನ್ನು ನೀಡಿದೆ. ಸ್ಯಾಂಡಲ್‌ವುಡ್‌ಗೆ ಕೆಜಿಎಫ್‌ನಂಥ ಸೂಪರ್‌ ಹಿಟ್‌ ಚಿತ್ರವನ್ನು ನೀಡಿದ ಹೊಂಬಾಳೆ ಫಿಲ್ಮ್ಸ್‌ ಕಾಂತಾರ ಚಿತ್ರದ ಮೊದಲ ಹಾಡು ಸ್ವಾತಂತ್ರ್ಯ ದಿನಾಚರಣೆ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಿಷಬ್‌ ಶೆಟ್ಟಿ ನಿರ್ದೇಶನದ ಜತೆ, ನಾಯಕನಾಗಿಯೂ ನಟಿಸಿದ್ದಾರೆ.

ಪ್ರಮೋದ್‌ ಮರವಂತೆ ರಚಿಸಿರುವ ʻʻಸಿಂಗಾರ ಸಿರಿಯೆʼʼ ಎಂಬ ಮನಮೋಹಕ ಹಾಡಿನಲ್ಲಿ ಜಾನಪದ ಸೊಗಡನ್ನು ಎತ್ತಿ ಹಿಡಿಯಲಾಗಿದೆ. ಗಾಯಕ ವಿಜಯ್ ಪ್ರಕಾಶ್, ಅನನ್ಯ ಭಟ್ ಹಾಗೂ ನಾಗರಾಜ್ ಪನ್ನಾರ್ ವಲ್ಟುರ್ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. 

ಇದನ್ನೂ ಓದಿ | ದಸರಾ ಹಬ್ಬಕ್ಕೆ ಬರಲಿದೆ ರಿಷಭ್‌ ಶೆಟ್ಟಿಯ ಕಾಂತಾರ, ಕಥೆ ಏನಿರಬಹುದು?

ಈ ಹಿಂದೆ ಸಿನಿಮಾದ ಟೀಸರ್‌ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ರಂಜಿಸಿದ್ದು, ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಈ ಸಿನಿಮಾ ಕೇವಲ ಕನ್ನಡದಲ್ಲಿ ಮಾತ್ರವಲ್ಲ, ಬೇರೆ ಭಾಷೆಗಳ ಪ್ರೇಕ್ಷಕರನ್ನೂ ರಂಜಿಸಲಿದೆಯಂತೆ. ಅಂದಹಾಗೆ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಸೆಪ್ಟೆಂಬರ್ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ರಿಷಭ್‌ ಶೆಟ್ಟಿ ಅವರ ನಿರ್ದೇಶನ ಹಾಗೂ ಅಭಿನಯದ ಕಾಂತಾರ ಚಿತ್ರವು ಕರಾವಳಿ ಪ್ರಾಂತ್ಯದ ಸಾಂಪ್ರದಾಯಿಕ ಶ್ರೀಮಂತಿಕೆಯನ್ನು ಹೊತ್ತುಕೊಂಡಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ | Kantara Movie | ಇದೀಗ ಶೆಟ್ರು ಹರಿ ಅಲ್ಲ, ಶಿವ: ರಿಷಬ್‌ ಶೆಟ್ಟಿ ಅವರ ಫೈರಿ ಲುಕ್‌ ಹಂಚಿಕೊಂಡ ಹೊಂಬಾಳೆ ಫಿಲ್ಮ್ಸ್‌

Exit mobile version