Site icon Vistara News

SK Bhagavan: ಭಗವಾನ್‌ ನಿಧನಕ್ಕೆ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರಿಂದ ಸಂತಾಪ

Bhagwan's demise Condolences from many dignitaries

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಿರ್ಮಾಪಕ ಎಸ್‌.ಕೆ. ಭಗವಾನ್‌ (SK Bhagavan) ಅವರು ನಿಧನರಾಗಿದ್ದಾರೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಿರ್ದೇಶಕ ಶ್ರೀ ಎಸ್. ಕೆ. ಭಗವಾನ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ನಲ್ಲಿ ʻʻಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಶ್ರೀ ಎಸ್. ಕೆ. ಭಗವಾನ್ ರವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬವರ್ಗದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: SK Bhagavan: ಎರಡೂ ಕಣ್ಣು ದಾನ ಮಾಡಿದ ಭಗವಾನ್: ಕೊನೆ ಆಸೆ ಈಡೇರಿಸಲು ರಾಘವೇಂದ್ರ ರಾಜಕುಮಾರ್ ನಿರ್ಧಾರ

ಬಸವರಾಜ ಬೊಮ್ಮಾಯಿ ಟ್ವೀಟ್‌ ಇಲ್ಲಿದೆ

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ ʻʻಕನ್ನಡ ಕಲಾ ಜಗತ್ತು ಮತ್ತು ಸಿನಿಮಾ ಪ್ರಪಂಚವನ್ನು ಬೆಳಗಿ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸಿದ್ದ ಹಿರಿಯ ನಿರ್ದೇಶಕ ಎಸ್.ಕೆ.ಭಗವಾನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅಭಿಮಾನಿಗಳು ಮತ್ತು ಕುಟುಂಬ ವರ್ಗಕ್ಕೆ ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆʼʼಬರೆದುಕೊಂಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಗೃಹ ಸಚಿವ ಆರಗ ಜ್ಞಾನೇಂದ್ರ ಟ್ವೀಟ್‌ ಮಾಡಿ ʻʻಖ್ಯಾತ ಚಲನಚಿತ್ರ ನಿರ್ದೇಶಕರಾದ ಶ್ರೀ ಎಸ್.ಕೆ. ಭಗವಾನ್ ಅವರ ನಿಧನದ ವಾರ್ತೆ ತಿಳಿದು ತೀವ್ರ ದುಃಖ ಉಂಟಾಗಿದೆ. ಇದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬದೊಂದಿಗೆ ದುಃಖದಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ. ಓಂ ಶಾಂತಿʼʼ ಎಂದು ಬರೆದುಕೊಂಡಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಟ್ವೀಟ್‌

ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ”ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರು, ಅನೇಕ ಸದಭಿರುಚಿಯ ಚಿತ್ರಗಳನ್ನು ಕೊಟ್ಟವರು, ವರನಟರಾದ ಡಾ.ರಾಜ್ ಕುಮಾರ್ ಅವರು ನಟಿಸಿದ ‘ ಕಸ್ತೂರಿ ನಿವಾಸ’ದಂಥ ಆವಿಸ್ಮರಣೀಯ ಚಿತ್ರವನ್ನು ನಿರ್ದೇಶನ ಮಾಡಿದ್ದ ದೊರೆ ಭಗವಾನ್ ಜೋಡಿ ಖ್ಯಾತಿಯ ಕೆ.ಎಸ್.ಭಗವಾನ್ ಅವರು ನಿಧನರಾದರೆಂಬ ಸುದ್ದಿ ಕೇಳಿ ಬಹಳ ದುಃಖವಾಯಿತು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: SK Bhagavan: ಭಗವಾನ್‌ ಒಂದು ರೂಪಾಯಿ ಕೇಳಿದರೆ ಎಂಟಾಣೆ ಕೊಟ್ಟ ದೊರೆ: ಈ ಅಪೂರ್ವ ಜೋಡಿಯ ಮೊದಲ ಭೇಟಿ ಹೀಗಿತ್ತು!

ಎಚ್​ಡಿ ಕುಮಾರಸ್ವಾಮಿ ಟ್ವೀಟ್

Exit mobile version