ಬೆಂಗಳೂರು: ಮರಿ ಟೈಗರ್ ವಿನೋದ್ ಪ್ರಭಾಕರ್ (vinod prabhakar) ನಟನೆಯ ಬಹುನಿರೀಕ್ಷಿತ ಸಿನಿಮಾ ಮಾದೇವ ಚಿತ್ರೀಕರಣ ಮುಗಿಸಿದೆ. ಖಾಕಿ ಚಿತ್ರದ ಮೂಲಕ ಚೊಚ್ಚಲ ನಿರ್ದೇಶಕನಾಗಿ ಗುರುತಿಕೊಂಡ ನವೀನ್ ರೆಡ್ಡಿ ಮಾದೇವ ಸಿನಿಮಾದ ಸಾರಥಿ. ಒಂದಷ್ಟು ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ (Sonal Monteiro) ಮಾದೇವ ಸಿನಿಮಾದ ಚಿತ್ರೀಕರಣ ಮುಗಿಸಿದೆ. ಕನಕಪುರ, ಚನ್ನಪಟ್ಟಣ, ಶಿವಮೊಗ್ಗ, ರಾಮೋಜಿ ಫಿಲ್ಮಂಸಿಟಿ, ಹೆಸರಘಟ್ಟ ಭಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ನೈಜ ಘಟನೆಗಳಿಂದ ಸ್ಪೂರ್ತಿ ಪಡೆದ ಈ ಸಿನಿಮಾದ ಕಥೆಯು 1965, 1980 ಮತ್ತು 1999ರ ಕಾಲಘಟ್ಟದಲ್ಲಿ ನಡೆಯಲಿದೆ. ಹಿಂದೆಂದೂ ಕಂಡಿರದಂತಹ ಲುಕ್‌ನಲ್ಲಿ ವಿನೋದ್ ಪ್ರಭಾಕರ್ ಕಾಣಿಸಿಕೊಳ್ಳಲಿದ್ದಾರಂತೆ. ಖಳನಾಯಕನಾಗಿ ಶ್ರೀನಗರಕಿಟ್ಟಿ, ಶ್ರುತಿ ಮತ್ತು ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ‘ರಾಬರ್ಟ್’ ಸಿನಿಮಾದಲ್ಲಿ ರಾಘವ್ ಮತ್ತು ತನು ಪಾತ್ರಗಳ ಮೂಲಕ ಪ್ರೇಕ್ಷಕರಿಗೆ ಸಖತ್ ಇಷ್ಟವಾಗಿದ್ದ ವಿನೋದ್ ಪ್ರಭಾಕರ್ ಮತ್ತು ಸೋನಲ್ ಮೊಂಥೆರೋ ‘ಮಾದೇವ’ ಚಿತ್ರದಲ್ಲೂ ಜೋಡಿಯಾಗಿ ಅಭಿನಯಿಸಿದ್ದಾರೆ.
ಸೋನಲ್ 80ರ ದಶಕದ ಮಧ್ಯಮ ವರ್ಗದ ಹೆಣ್ಣುಮಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ವಿನೋದ್ ಪ್ರಭಾಕರ್ ಈ ಹಿಂದಿನ ಪಾತ್ರಗಳಿಗಿಂತ ವಿಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: Sonal Monteiro: ನಟ ಕೋಮಲ್’ಗೆ ಜತೆಯಾದ ಕರಾವಳಿ ಬೆಡಗಿ ಸೋನಲ್ ಮೊಂತೆರೋ
ಬಾಹುಬಲಿ, ಆರ್‌ಆರ್‌ಆರ್ ಸಿನಿಮಾಗಳ ಛಾಯಾಗ್ರಾಹಕ ಸೆಂಥಿಲ್ ಕುಮಾರ್ ಬಳಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಬಾಲಕೃಷ್ಣ ತೋಟ ‘ಮಾದೇವ’ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ. ರಾಧಾಕೃಷ್ಣ ಬ್ಯಾನರ್‌ನಡಿ ಆರ್ ಆರ್ ಕೇಶವ ದೇವಸಂದ್ರ ಚಿತ್ರಕ್ಕೆ ಹಣ ಹಾಕಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.