ಬೆಂಗಳೂರು : ಬಾಲಿವುಡ್ ನಟ ಸೋನು ಸೂದ್ (Sonu Sood) ಅವರು, ಡಿಸೆಂಬರ್ 13 ರಂದು ಚಲಿಸುತ್ತಿರುವ ರೈಲಿನ ಫುಟ್‌ಬೋರ್ಡ್‌ನಲ್ಲಿ ಕುಳಿತು, ಬಾಗಿಲಿನ ಬಳಿ ಹ್ಯಾಂಡಲ್ ಅನ್ನು ಹಿಡಿದುಕೊಂಡು ಇಣುಕಿ ನೋಡುತ್ತಿರುವ ವಿಡಿಯೊವನ್ನು ಹಂಚಿಕೊಂಡಿದ್ದರು. ವಿಡಿಯೊ ನೋಡಿ ರೈಲ್ವೆ ಪೊಲೀಸರು ಎಚ್ಚರಿಕೆಯ ಮೆಸೇಜ್ ನೀಡಿದ್ದರು. ಇದೀಗ ನಟ ಈ ಬಗ್ಗೆ ಟ್ವೀಟ್ ಮೂಲಕ ಕ್ಷಮೆಯಾಚಿಸಿದ್ದಾರೆ.
ರೈಲಿನ ಪ್ರಯಾಣವನ್ನು ಆನಂದಿಸುತ್ತಿರುವ ವಿಡಿಯೊವನ್ನು ನಟ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಂತೆ ಚರ್ಚೆಗಳು ಶುರುವಾಗಿದ್ದವು. ಸೋನು ಸೂದ್ ವಿಡಿಯೊವನ್ನು ಹಂಚಿಕೊಂಡ ತಕ್ಷಣ, ನೆಟ್ಟಿಗರು ಸೋನು ಅವರನ್ನು ಡೌನ್ ಟು ಅರ್ಥ್ ಎಂದು ಶ್ಲಾಘಿಸಿದ್ದಾರೆ. ಇನ್ನೂ ನೆಟ್ಟಿಗರು ಛೀಮಾರಿ ಹಾಕಿದ್ದಾರೆ. ಆದರೆ ಈ ವಿಡಿಯೊ ರೈಲ್ವೆ ಅಧಿಕಾರಿಗಳ ಕಣ್ಣಿಗೂ ಬಿದ್ದಿದ್ದು ಎಚ್ಚರಿಕೆ ಮತ್ತು ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸದಂತೆ ಸಲಹೆಯೊಂದಿಗೆ ಟ್ವೀಟ್ ಹಂಚಿಕೊಂಡಿತ್ತು. ಇದೀಗ ಈ ಬಗ್ಗೆ ಸೋನು ಸೂದ್ ಟ್ವೀಟ್ ಮೂಲಕ ಕ್ಷಮೆಯಾಚಿಸಿದ್ದಾರೆ.
ಟ್ವೀಟ್‌ನಲ್ಲಿ ʻʻನಾನು ಈ ಬಗ್ಗೆ ಕ್ಷಮೆಯಾಚಿಸುತ್ತೇನೆ. ರೈಲುಗಳ ಬಾಗಿಲಿನ ಮೇಲೆ ಲಕ್ಷಾಂತರ ಬಡವರು ತಮ್ಮ ಜೀವನವನ್ನು ಹೇಗೆ ಕಳೆಯುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾನು ಕೂತಿದ್ದೆʼʼ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ | Sonu Sood | ಟಿಕ್‌ಟಾಕ್ ಸ್ಟಾರ್ ಖಾಬಿ ಜತೆ ನಟ ಸೋನು ಸೂದ್ ರೀಲ್ಸ್: ವೈರಲ್ ಆಯ್ತು ವಿಡಿಯೊ
ಆಗಿದ್ದೇನು?
ಸೋನು ಸೂದ್ ಅವರು ಫುಟ್‌ಬೋರ್ಡ್‌ನಲ್ಲಿ ಕುಳಿತು ಚಲಿಸುತ್ತಿರುವ ರೈಲಿನ ಬಾಗಿಲಿನ ಬಳಿ ಹ್ಯಾಂಡಲ್ ಅನ್ನು ಹಿಡಿದುಕೊಂಡು ಇಣುಕಿ ನೋಡುತ್ತಿರುವ ವಿಡಿಯೊವನ್ನು ಹಂಚಿಕೊಂಡಿದ್ದರು. ಆದರೆ ಈ ವಿಡಿಯೊ ರೈಲ್ವೆ ಅಧಿಕಾರಿಗಳ ಕಣ್ಣಿಗೂ ಬಿದ್ದಿದ್ದು, ಎಚ್ಚರಿಕೆ ಮತ್ತು ಸಲಹೆಯೊಂದಿಗೆ ಪ್ರತಿಕ್ರಿಯಿಸಿದ್ದರು. ಮುಂಬೈ ವಿಭಾಗದ ರೈಲ್ವೆ ಪೊಲೀಸ್ ಹ್ಯಾಂಡಲ್ ಟ್ವೀಟ್ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸದಂತೆ ನಟನಿಗೆ ಸಲಹೆ ನೀಡಿತ್ತು. ಟ್ವೀಟ್ ಮೂಲಕ ʻʻಸೋನು ಸೂದ್ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುವುದು ಚಲನಚಿತ್ರಗಳಲ್ಲಿ ‘ಮನರಂಜನೆ’ಯ ಮೂಲವಾಗಿರಬಹುದು. ನಿಜ ಜೀವನದಲ್ಲಿ ಅಲ್ಲ! ನಾವು ಎಲ್ಲಾ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸೋಣ ಮತ್ತು ಎಲ್ಲರಿಗೂ ‘ಹೊಸ ವರ್ಷದ ಶುಭಾಶಯಗಳು” ಎಂದು GRP ಹ್ಯಾಂಡಲ್ ಟ್ವೀಟ್ ಮಾಡಿತ್ತು.
ಇದನ್ನೂ ಓದಿ | Sonu Sood | ಚಲಿಸುತ್ತಿರುವ ರೈಲಿನ ಫುಟ್‌ಬೋರ್ಡ್‌ನಲ್ಲಿ ಸೋನು ಸೂದ್: ರೈಲ್ವೆ ಪೊಲೀಸ್ ಟ್ವೀಟ್‌ನಲ್ಲಿ ಹೇಳಿದ್ದೇನು