Sonu Srinivas Gowda: ಸೋನು ಗೌಡ ದತ್ತು ಪಡೆದ ಪ್ರಕರಣ; ಮಗುವಿನ ಪಾಲಕರಿಗೂ ಸಂಕಷ್ಟ; ಕಾನೂನು ಏನು ಹೇಳುತ್ತದೆ? - Vistara News

ಸಿನಿಮಾ

Sonu Srinivas Gowda: ಸೋನು ಗೌಡ ದತ್ತು ಪಡೆದ ಪ್ರಕರಣ; ಮಗುವಿನ ಪಾಲಕರಿಗೂ ಸಂಕಷ್ಟ; ಕಾನೂನು ಏನು ಹೇಳುತ್ತದೆ?

Sonu Srinivas Gowda: ಕಾನೂನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿ ‘ಬಿಗ್ ಬಾಸ್ ಕನ್ನಡ ಒಟಿಟಿ 1’ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅವರನ್ನು ಬಂಧಿಸಲಾಗಿದೆ. ಈ ಮಧ್ಯೆ ದತ್ತು ನೀಡಿದ ಮಗುವಿನ ತಂದೆ ತಾಯಿಗೂ ಸಂಕಷ್ಟ ಎದುರಾಗಿದೆ. ಈ ಬಗ್ಗೆ ಕಾನೂನು ಏನು ಹೇಳುತ್ತದೆ? ಇಲ್ಲಿದೆ ವಿವರ.

VISTARANEWS.COM


on

sonu srinivas gowda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಒಟಿಟಿ 1’ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರು 7 ವರ್ಷದ ಬಡ ಹುಡುಗಿಯನ್ನು ದತ್ತು ತೆಗೆದುಕೊಂಡಿರುವ ವಿಚಾರ ಸದ್ಯ ಸದ್ದು ಮಾಡುತ್ತಿದೆ. ನಿಯಮ ಉಲ್ಲಂಘನೆ ಕಾರಣಕ್ಕೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ಕಲ್ಯಾಣ ಇಲಾಖೆಯಿಂದ ಸೋನು ಗೌಡ ವಿರುದ್ಧ ದೂರ ದಾಖಲಾಗಿತ್ತು. ಅದರಂತೆ ಮಾರ್ಚ್‌ 23ರಂದು ಪೊಲೀಸರು ಸೋನು ಗೌಡ ಅವರನ್ನು ಬಂಧಿಸಿದ್ದಾರೆ. ಜೆಜೆ ಕಾಯ್ದೆ ಅಡಿಯಲ್ಲಿ ಸೋನು ಗೌಡ ಅವರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಜತೆಗೆ ಈ ಪ್ರಕರಣದಲ್ಲಿ ಬಾಲಕಿಯ ತಂದೆ ತಾಯಿಗೂ ಸಂಕಷ್ಟ ಎದುರಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ಕಲ್ಯಾಣ ಮಂಡಳಿ ಮಗುವಿನ ತಂದೆ ತಾಯಿಗೆ ನೋಟಿಸ್ ನೀಡಿದೆ.

ನಿಯಮ ಏನು ಹೇಳುತ್ತದೆ?

ದತ್ತು ತೆಗೆದುಕೊಳ್ಳಬೇಕಾದರೆ‌ ಕೆಲವೊಂದು ನಿಯಮ ಪಾಲಿಸಬೇಕಾಗುತ್ತದೆ. ದತ್ತು ತೆಗೆದುಕೊಳ್ಳುವ ತಾಯಿ ಮತ್ತು ಮಗುವಿಗೆ 25 ವರ್ಷಗಳ ಅಂತರವಿರಬೇಕು. ಆದರೆ ಇಲ್ಲಿ ಮಗುವಿಗೆ 8 ವರ್ಷ ಮತ್ತು ಆಕೆಗೆ 26 ವರ್ಷ. ಹೀಗಾಗಿ ಅದು ನಿಯಮ ಉಲ್ಲಂಘನೆ ಮಾಡಿದಂತಾಗುತ್ತದೆ. ಇನ್ನು ರೀಲ್ಸ್‌ ಮಾಡುವ ಉದ್ದೇಶದಿಂದ ಸೋನು ಮಗುವನ್ನು ತನ್ನಿಷ್ಟ ಬಂದಂತೆ ಬಳಸಿಕೊಂಡಿದ್ದಾರೆಂಬ ಆರೋಪ ಕೂಡ ಇದೆ. ಮಕ್ಕಳ ಕಲ್ಯಾಣ ಸಮಿತಿ ಈ ಎಲ್ಲ ಆಧಾರದ ಮೇಲೆ ಸೋನು ವಿರುದ್ಧ ದೂರು ದಾಖಲಿಸಿದೆ.

ಮಗುವಿನ ತಂದೆ ತಾಯಿಗೆ ಏಕೆ ನೋಟಿಸ್‌?

ತಾವು ಮಗುವನ್ನು ಹೆತ್ತರೂ ಅದನ್ನು ಬೇರೆಯವರಿಗೆ ವಹಿಸಬೇಕಾದರೆ ಕಾನೂನಿನ ನಿಯಮಗಳು ಹಾಗೂ ಪ್ರಕ್ರಿಯೆಗಳನ್ನು ಪಾಲಿಸುವುದು ಕಡ್ಡಾಯ. ಆದರೆ ಈ ಪ್ರಕರಣದಲ್ಲಿ ಇಂತಹ ಯಾವುದೇ ನಿಯಮಗಳ ಪಾಲನೆ ಆಗಿಲ್ಲ. ಹೀಗಾಗಿ ಕರ್ನಾಟಕ ರಾಜ್ಯ ಮಕ್ಕಳ ಕಲ್ಯಾಣ ಮಂಡಳಿ ಅಧಿಕಾರಿಗಳು ಮಗುವನ್ನು ದತ್ತು ಕೊಟ್ಟಿದ್ದಕ್ಕೆ ಕಾರಣ ಕೇಳಿ ನೋಟಿಸ್‌ ಕಳುಹಿಸಿದ್ದಾರೆ ಎನ್ನಲಾಗಿದೆ.

ಏನಾಗಲಿದೆ?

ಮಗುವಿನ ಪಾಲಕರ ವಿಚಾರಣೆ ವೇಳೆ ಅಧಿಕಾರಿಗಳು ಮಗುವನ್ನು ಕೊಟ್ಟಿದ್ದಕ್ಕೆ ಕಾರಣ ಕೇಳಲಿದ್ದಾರೆ. ಒಂದು ವೇಳೆ ಹಣ ಪಡೆದು ಮಗುವನ್ನು ಕೊಟ್ಟಿದ್ದರೆ ಪಾಲಕರ ವಿರುದ್ಧ ಕಾನೂನು ಪ್ರಕಾರ ದೂರು ದಾಖಲಾಗುವ ಸಾಧ್ಯತೆ ಇದೆ. ಬಡತನದ ಕಾರಣದಿಂದ ಮಗುವನ್ನ ನೋಡಿಕೊಳ್ಳಲು ಕೊಟ್ಟಿದ್ದು ಎಂದು ಹೇಳಿದರೆ ಹೆಚ್ಚೇನೂ ಸಮಸ್ಯೆಯಾಗದು ಎನ್ನುತ್ತಾರೆ ತಜ್ಞರು. ಬಡತನದ ಕಾರಣ ಕೊಟ್ಟರೆ ಅಧಿಕಾರಿಗಳು ಪಾಲಕರು ಹಾಗೂ ಮಗುವಿಗೆ ಕೌನ್ಸಿಲಿಂಗ್ ನಡೆಸಲಿದ್ದಾರೆ. ಈ ವೇಳೆ ಮಗುವನ್ನು ನೋಡಿಕೊಳ್ಳಲು ಸಾಧ್ಯವಿಲ್ಲ ಎಂದರೆ ಮಗುವಿನ ಭವಿಷ್ಯಕ್ಕೆ ಸರ್ಕಾರದಿಂದ ಅರ್ಥಿಕ ಸಹಾಯ ಒದಗಿಸುವ ಬಗ್ಗೆಯೂ ಪ್ರಸ್ತಾವ ನಡೆಸುವ ಸಾಧ್ಯತೆ ಇದೆ. ಇದಕ್ಕೂ ಪಾಲಕರು ಒಪ್ಪದಿದ್ದರೆ ಮಗುವನ್ನು ಸರ್ಕಾರ ಪೋಷಿಸಲಿದೆ.

ಇದನ್ನೂ ಓದಿ: Sonu Srinivas Gowda: ʻಬಿಗ್ ಬಾಸ್ ಕನ್ನಡ ಒಟಿಟಿ 1’ ಖ್ಯಾತಿಯ ಸೋನು ಗೌಡ ಬಂಧನ

ಸೋನು ಗೌಡ (Sonu Srinivas Gowda) ಅವರನ್ನು ನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಿದೆ. ಹೀಗಾಗಿ ಅವರನ್ನು ಪೊಲೀಸರು ಕೋರ್ಟ್‌ನಿಂದ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದಾರೆ. ಸೋಮವಾರ ಮತ್ತೆ ಕೋರ್ಟ್​ಗೆ ಹಾಜರುಪಡಿಸಲು ಸೂಚನೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಿನಿಮಾ

Sharad Kelkar: ‘ಬಾಹುಬಲಿ’ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್

ಬಾಹುಬಲಿ: ಕ್ರೌನ್ ಆ ಬ್ಲಡ್ ಅನಿಮೇಟೆಡ್ ಸರಣಿ ಡಿಸ್ನಿ+ಹಾಟ್‌ಸ್ಟಾರ್‌ ನಲ್ಲಿ ಬಿಡುಗಡೆಯಾಗಿದ್ದು, ಶರದ್ ಕೇಲ್ಕರ್ (Sharad Kelkar) ಚಿತ್ರದೊಂದಿಗಿನ ತಮ್ಮ ನಂಟನ್ನು ನೆನಪಿಸಿಕೊಂಡಿದ್ದಾರೆ.

VISTARANEWS.COM


on

By

Sharad Kelkar
Koo

ಅದ್ಧೂರಿ ಬಜೆಟ್‌ನ ʼಬಾಹುಬಲಿʼ (bahubali) ಚಿತ್ರದ ಒಂದೊಂದು ದೃಶ್ಯಗಳು ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಸಿನಿಮಾದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷ ಸಮೀಪಿಸಿದರೂ ಈಗಲೂ ಚಿತ್ರದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇದೆ. ʼಬಾಹುಬಲಿʼ ಪಾತ್ರಧಾರಿ ಪ್ರಭಾಸ್‌ಗೆ (actor prabhas) ಧ್ವನಿ ನೀಡಿರುವ ಶರದ್ ಕೇಳ್ಕರ್ (Sharad Kelkar) ತಮ್ಮ ಮರೆಯಲಾಗದ ಅನುಭವವನ್ನು ಹಂಚಿಕೊಂಡಿದ್ದಾರೆ.

ಡಿಸ್ನಿ+ಹಾಟ್‌ಸ್ಟಾರ್‌ ನಲ್ಲಿ (Disney Plus star) ಬಿಡುಗಡೆಯಾಗಿರುವ “ಬಾಹುಬಲಿ: ಕ್ರೌನ್ ಆ ಬ್ಲಡ್” (Baahubali: Crown of Blood) ಅನಿಮೇಟೆಡ್ ಸರಣಿಯು ಈಗ ಚರ್ಚೆಯಲ್ಲಿದೆ. ಬಾಹುಬಲಿ ಮತ್ತು ಮಾಹಿಷ್ಮತಿಯ ಜಗತ್ತಿನಲ್ಲಿ ಇದೂವರೆಗೂ ಕೇಳಿರದ, ಕಂಡಿರದ ಹಾಗೂ ತಿಳಿಯಲಾಗದಿದ್ದ ಅನೇಕ ಘಟನೆಗಳು ಕಥೆಗಳು ಒಂದೊಂದಾಗಿ ಕೇಳಿ ಬರುತ್ತಿವೆ.


ಅನೇಕ ಐತಿಹಾಸಿಕ ಚಿತ್ರಗಳಿಗೆ ಧ್ವನಿ ನೀಡಿ ಖ್ಯಾತರಾಗಿರುವ ಮೂಲತಃ ನಟರೂ ಆಗಿರುವ ಶರದ್ ಕೇಳ್ಕರ್ ಅವರು ಬಾಹುಬಲಿ ನಾಯಕ ಪ್ರಭಾಸ್‌ ಅವರಿಗೆ ಕಂಠದಾನ ಮಾಡಿದ್ದರು. ಈ ಕುರಿತಂತೆ ಅವರು ತಮ್ಮ ಸಂತಸವನ್ನು ಈಗ ಹಂಚಿಕೊಂಡಿದ್ದಾರೆ.

ತನ್ನ ಬಲವಾದ ಧ್ವನಿಗಾಗಿ ಹೆಸರಾಗಿರುವ ಶರದ್ , ಐಕಾನಿಕ್ ‘ಬಾಹುಬಲಿ’ ಸರಣಿಯನ್ನು ಹಿಂದಿ ಭಾಷೆಗೆ ಡಬ್‌ ಮಾಡುವಾಗ ಚಲನಚಿತ್ರ ನಿರ್ಮಾಪಕ ಎಸ್‌.ಎಸ್. ರಾಜಮೌಳಿ ಅವರು ತಮ್ಮ ಆಯ್ಕೆ ಬಗ್ಗೆ ಮೊದಲು ಸಂದೇಹ ಪಟ್ಟಿದ್ದರು. ‘ಬಾಹುಬಲಿ: ದಿ ಬಿಗಿನಿಂಗ್’ ಮತ್ತು ‘ಬಾಹುಬಲಿ: ದಿ ಕನ್‌ಕ್ಲೂಷನ್’ ಎರಡರಲ್ಲೂ ರೆಬೆಲ್ ಸ್ಟಾರ್ ಪ್ರಭಾಸ್ ಮೂಲತಃ ಚಿತ್ರಿಸಿದ ಅಮರೇಂದ್ರ ಬಾಹುಬಲಿ ಮತ್ತು ಮಹೇಂದ್ರ ಬಾಹುಬಲಿ ಪಾತ್ರಗಳಿಗೆ ಧ್ವನಿ ನೀಡಿದ ಕೇಳ್ಕರ್‌ ಅವರು ಎಪಿಕ್ ಸಾಹಸದ ಡಬ್ಬಿಂಗ್ ಕಾರ್ಯದ ಬಗ್ಗೆ ಅನೇಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ.

ಪವನ್ ಕಲ್ಯಾಣ್ ಅಭಿನಯದ 2016 ರ ತೆಲುಗು ಆಕ್ಷನ್- ಕಾಮಿಡಿ ಚಿತ್ರ ‘ಸರ್ದಾರ್ ಗಬ್ಬರ್ ಸಿಂಗ್’ ನಲ್ಲಿ ಕೇಳ್ಕರ್ ತೊಡಗಿಸಿಕೊಂಡಿದ್ದರು. ಈ ವೇಳೆ ಸಿಬ್ಬಂದಿಯೊಬ್ಬ ಅವರ ಗಾಯನವನ್ನು ಗುರುತಿಸಿ ರಾಜಮೌಳಿ ಅವರಿಗೆ ಇವರ ಹೆಸರು ಶಿಫಾರಸು ಮಾಡಿದ್ದರು ಎನ್ನಲಾಗಿದೆ.


ನನಗೆ ‘ಬಾಹುಬಲಿ’ ಬಗ್ಗೆ ಯಾವುದೇ ಕಲ್ಪನೆ ಇರಲಿಲ್ಲ. ಆದರೆ ನಾನು ರಾಜಮೌಳಿ ಅವರ ಹಿಂದಿನ ಚಿತ್ರಗಳಾದ ‘ಮಗಧೀರ’ ನೋಡಿದ್ದೇನೆ. ಒಬ್ಬ ನಟನಾಗಿ ನಾನು ಈ ಮಾಸ್ಟರ್‌ಪೀಸ್‌ನ ಸೃಷ್ಟಿಕರ್ತನನ್ನು ಭೇಟಿಯಾಗಲು ಬಯಸಿದ್ದೆ. ಹಾಗಾಗಿ ನಾನು ನನ್ನ ಧ್ವನಿ ಪರೀಕ್ಷೆಯನ್ನು ಮಾಡಿದೆ. ಟೇಪ್ ನೊಂದಿಗೆ ಮರುದಿನ ಅವರನ್ನು ಸ್ಟುಡಿಯೋದಲ್ಲಿ ಭೇಟಿಯಾದೆ. ನೀವು ಬಾಹುಬಲಿಗಾಗಿ ಡಬ್ಬಿಂಗ್ ಮಾಡುತ್ತಿದ್ದೀರಿ ಎಂದು ಅವರು ಹೇಳಿದಾಗ ನಂಬಲು ಅಸಾಧ್ಯವಾಯಿತು ಎಂದಿದ್ದಾರೆ ಕೇಳ್ಕರ್.

ಈ ಪಾತ್ರವು ಕೇಳ್ಕರ್ ಅವರ ವೃತ್ತಿಜೀವನವನ್ನು ಗಮನಾರ್ಹವಾಗಿ ಹೆಚ್ಚಿಸಿತು. ಮಾತ್ರವಲ್ಲದೆ ಅವರನ್ನು ಅಪಾರ ಅಭಿಮಾನಿಗಳ ಗುಂಪಿಗೆ ಪ್ರೀತಿಸುವಂತೆ ಮಾಡಿತು, ಅವರಿಗೆ “ಬಾಹುಬಲಿಯ ಧ್ವನಿ” ಮತ್ತು ಪ್ರೀತಿಯಿಂದ “ಭಾರತದ ಧ್ವನಿ” ಎಂಬ ಬಿರುದು ಸಿಗುವಂತಾಯಿತು. ಮೊದಲು ನಾನೊಬ್ಬ ನಟ. ಉತ್ತಮವಾಗಿ ಅಭಿನಯಿಸಬಲ್ಲೆ. ವಿವಿಧ ಬಗೆಯ ಪಾತ್ರಗಳನ್ನು ಮಾಡುತ್ತಾ ಬಂದಿದ್ದೇನೆ. ಆದರೂ ಒಳ್ಳೆಯ ಕಾಲಕ್ಕೆ ಕಾಯುತ್ತಿದ್ದೇನೆ. ಅತ್ಯುತ್ತಮವಾದದ್ದು ಇನ್ನು ಬರಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ ಎನ್ನುತ್ತಾರೆ ಶರದ್.

ಇದನ್ನೂ ಓದಿ: Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

ಎ ಗ್ರಾಫಿಕ್ ಇಂಡಿಯಾ ಮತ್ತು ಆರ್ಕ ಮೀಡಿಯಾ ವರ್ಕ್ಸ್ ಪ್ರೊಡಕ್ಷನ್ ಅಡಿಯಲ್ಲಿ ಎಸ್.ಎಸ್. ರಾಜಮೌಳಿ- ಶರದ್‌ದೇವರಾಜನ್ ಕ್ರಿಯೆಟೀವ್ ಮುಖ್ಯಸ್ಥರಾಗಿದ್ದು, ಜೀವನ್ ಜೆ. ಕಾಂಗ್, ನವೀನ್ ಜಾನ್ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಇವರೆಲ್ಲರೂ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ ಎಂದು ಶರದ್ ಹೇಳಿದ್ದಾರೆ.


ಅನಿಮೇಟೆಡ್ ಸರಣಿ ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಹಿಂದಿ ಭಾಷೆಗೆ ಭಾಷಾಂತರವಾಗಿದ್ದು, ಕೇಲ್ಕರ್ ಧ್ವನಿ ನೀಡಿದ್ದಾರೆ. ಈ ಸರಣಿಯು ಮೇ 17ರಿಂದ ಡಿಸ್ನಿ ಪ್ಲಸ್‌ನಲ್ಲಿ ಪ್ರದರ್ಶನ ಕಾಣುತ್ತಿದೆ.

Continue Reading

ಸಿನಿಮಾ

‘ಸ್ಟಾರ್‌’ ಸಿನಿಮಾಗಳಿಲ್ಲದ ಕಾರಣ ಚಿತ್ರಮಂದಿರಗಳ ಬಂದ್‌ಗೆ ಚಿಂತನೆ;‌ ನಿರ್ಮಾಪಕರಿಂದ ಭಾರಿ ಆಕ್ರೋಶ!

ಐಪಿಎಲ್‌ ಅಬ್ಬರ, ಲೋಕಸಭೆ ಚುನಾವಣೆ ಭರಾಟೆ ಸೇರಿ ಹಲವು ಕಾರಣಗಳಿಂದ ಆಂಧ್ರಪ್ರದೇಶದಲ್ಲಿ ಕೆಲವು ದಿನಗಳ ಹಿಂದೆ ಚಿತ್ರಮಂದಿರಗಳನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿತ್ತು. ಇದೇ ರೀತಿ ಕರ್ನಾಟಕದಲ್ಲೂ ತಾತ್ಕಾಲಿಕವಾಗಿ ಸಿಂಗ್‌ ಸ್ಕ್ರೀನ್‌ ಥಿಯೇಟರ್‌ಗಳನ್ನು ಬಂದ್ ಮಾಡಬೇಕು ಎಂಬ ಚಿಂತನೆ ನಡೆದಿತ್ತು. ಆದರೆ, ಇದಕ್ಕೆ ಸ್ಯಾಂಡಲ್‌ವುಡ್‌ ನಿರ್ಮಾಪಕರು ವಿರೋಧ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Theatre
Koo

ಬೆಂಗಳೂರು: ಐಪಿಎಲ್‌ (IPL), ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತೆಲಂಗಾಣದಲ್ಲಿ ಒಂದು ತಿಂಗಳು ಚಿತ್ರಮಂದಿರಗಳನ್ನು ಮುಚ್ಚುವ ನಿರ್ಧಾರ ತೆಗೆದುಕೊಂಡಿತ್ತು. ಇದರಂತೆ, ಐಪಿಎಲ್‌, ಚುನಾವಣೆ ಜತೆಗೆ ಸ್ಟಾರ್‌ ನಟರ ಸಿನಿಮಾಗಳ ಬಿಡುಗಡೆ ಇಲ್ಲದ ಕಾರಣ ಕರ್ನಾಟಕದಲ್ಲೂ (Karnataka) ಒಂದು ತಿಂಗಳು ಚಿತ್ರಮಂದಿರಗಳನ್ನು ಮುಚ್ಚಬೇಕು ಎಂಬ ಚಿಂತನೆ ನಡೆದಿದೆ. ಇದರ ಬೆನ್ನಲ್ಲೇ, ಫಿಲಂ ಚೇಂಬರ್‌ನಲ್ಲಿ (Film Chamber) ನಿರ್ಮಾಪಕರ ಸಭೆ ನಡೆದಿದ್ದು, ಥಿಯೇಟರ್‌ಗಳನ್ನು (Theatres) ಮುಚ್ಚುವ ಚಿಂತನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಫಿಲಂ ಚೇಂಬರ್‌ ಅಧ್ಯಕ್ಷ ಎನ್‌.ಎಂ.ಸುರೇಶ್‌ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೆದಿದೆ. “ಕನ್ನಡ ಚಿತ್ರರಂಗದ ಕುರಿತು ಇಷ್ಟು ದಿನಗಳಲ್ಲಿ ಈಗ ಸಭೆಯಾಗುತ್ತಿರುವುದು ಒಳ್ಳೆಯ ವಿಚಾರ. ತೆಲಂಗಾಣದ ಪರಿಸ್ಥಿತಿ ನಮ್ಮ ಗಮನಕ್ಕಿದೆ. ಆದರೆ, ಕರ್ನಾಟಕದಲ್ಲಿ ಚಿತ್ರಮಂದಿರಗಳನ್ನು ಬಂದ್‌ ಮಾಡುವುದು ಸರಿಯಲ್ಲ. ತಾತ್ಕಾಲಿಕವಾಗಿ ಸಿಂಗ್‌ ಸ್ಕ್ರೀನ್‌ ಥಿಯೇಟರ್‌ಗಳನ್ನು ಬಂದ್‌ ಮಾಡಿದರೆ ಕನ್ನಡ ಚಿತ್ರರಂಗದ ಮೇಲೆ ಪರಿಣಾಮ ಬೀರುತ್ತದೆ. ಪ್ರದರ್ಶಕರು, ವಿತರಕರು ಹಾಗೂ ನಿರ್ಮಾಪಕರು ಸದ್ಯಕ್ಕೆ ಯಾವ ನಿರ್ಧಾರವನ್ನೂ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿಲ್ಲ. ಸುಮಾರು 80ಕ್ಕೂ ಹೆಚ್ಚು ಸಿನಿಮಾಗಳಿಗೆ ರಿಲೀಸ್ ಪ್ಲಾನ್ ಮಾಡಲು ಆಗುತ್ತಿಲ್ಲ. ಸ್ಟಾರ್ ಚಿತ್ರಗಳು ಹೆಚ್ಚಾಗುವುದು ಮುಂದೆಯೂ ಅಸಾಧ್ಯ ಎಂಬಂತಿದೆ. ಥಿಯೇಟರ್‌ಗಳನ್ನು ಮುಚ್ಚಿದರೆ ಮುಂದಾಗುವ ಪರಿಣಾಮಗಳ ಬಗ್ಗೆಯೂ ಗಮನ ಇರಬೇಕು. ಹಾಗಾಗಿ, ಚಿತ್ರಮಂದಿರಗಳನ್ನು ಮುಚ್ಚಬಾರದು” ಎಂದು ನಿರ್ಮಾಪಕರು ಆಗ್ರಹಿಸಿದರು.

ಸ್ಟಾರ್‌ ನಟರ ಜತೆ ಚರ್ಚೆಗೆ ನಿರ್ಧಾರ

ಕರ್ನಾಟಕದಲ್ಲಿ ಸ್ಟಾರ್‌ ನಟರ ಸಿನಿಮಾಗಳ ಬಿಡುಗಡೆಯಾಗದಿರುವ ಕುರಿತು ಕೂಡ ಸಭೆಯಲ್ಲಿ ಚರ್ಚಿಸಲಾಯಿತು. ಇದರಿಂದ ಕನ್ನಡ ಚಿತ್ರರಂಗ ದಯನೀಯ ಸ್ಥಿತಿಗೆ ತಲುಪುವ ಕುರಿತು ಕೂಡ ಅಭಿಪ್ರಾಯ ವ್ಯಕ್ತವಾಯಿತು. ಸ್ಟಾರ್‌ ನಟರು ವರ್ಷಕ್ಕೆ ಎರಡು ಸಿನಿಮಾ ಮಾಡುವಂತೆ ಮನವಿ ಮಾಡಲು ಕೂಡ ನಿರ್ಧರಿಸಲಾಯಿತು. ಚಿತ್ರರಂಗದ ಉಳಿವು, ಮುಂದಿನ ದಿನಗಳಲ್ಲಿ ಮಾಡಬೇಕಾದ ಬದಲಾವಣೆಗಳು ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.

ಬಂದ್‌ ನಿರ್ಧಾರ ನಿಲ್ಲ ಎಂದ ಎನ್.ಎಂ.ಸುರೇಶ್‌

ಸಭೆಯ ಬಳಿಕ ಮಾತನಾಡಿದ ಎನ್‌.ಎಂ.ಸುರೇಶ್‌, “ಕರ್ನಾಟಕದಲ್ಲಿ ಥಿಯೇಟರ್‌ಗಳನ್ನು ಮುಚ್ಚುವ ಕುರಿತು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಕನ್ನಡ ಚಿತ್ರರಂಗದ ಸಮಸ್ಯೆಗಳ ಕುರಿತು ಚರ್ಚಿಸಿದ್ದೇವೆ. ಕನ್ನಡ ಚಿತ್ರರಂಗದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುತ್ತೇವೆ. ಟಿಕೆಟ್ ರೇಟ್ ಕಡಿಮೆ ಮಾಡುವುದು, ಯುಎಫ್ಒ, ಕ್ಯೂಬ್ ರೇಟ್ ಕಡಿಮೆ ಮಾಡುವ ಕುರಿತು ಸರ್ಕಾರಕ್ಕೆ ಕೋರಿಕೆ ಸಲ್ಲಿಸುತ್ತೇವೆ. ಕೇರಳದಲ್ಲಿ ಸರ್ಕಾರದ್ದೇ ಸ್ವಂತ ಒಟಿಟಿ ವ್ಯವಸ್ಥೆ ಇದೆ. ಇದು ಕರ್ನಾಟಕದಲ್ಲೂ ಜಾರಿಗೆ ಬರಬೇಕು. ಕಲಾವಿದರು ಕೂಡ ಸಹಕಾರ ನೀಡಬೇಕು. ಮೂರ್ನಾಲ್ಕು ದಿನದಲ್ಲಿ ಸ್ಟಾರ್‌ ನಟರ ಜತೆ ಸಭೆ ನಡೆಸಲಾಗುತ್ತದೆ” ಎಂದು ತಿಳಿಸಿದರು.

ಫಿಲಂ ಚೇಂಬರ್ ಅಧ್ಯಕ್ಷ ಎನ್. ಎಂ. ಸುರೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಟಗರು, UI ಚಿತ್ರಗಳ ಖ್ಯಾತಿಯ ನಿರ್ಮಾಪಕ ಕೆ.ಪಿ. ಶ್ರೀಕಾಂತ್, ಕಬ್ಜ ಖ್ಯಾತಿಯ ಆರ್. ಚಂದ್ರು, ಜಯಣ್ಣ, ತರುಣ್ ಶಿವಪ್ಪ, ಲಹರಿ ವೇಲು, ಹೊಂಬಾಳೆ ಫಿಲಮ್ಸ್‌ ಪ್ರತಿನಿಧಿ ಚಿದಾನಂದ್ ಸೇರಿ ಹಲವು ನಿರ್ಮಾಕರು ಭಾಗವಹಿಸಿದರು. ಐಪಿಎಲ್‌ ಅಬ್ಬರ, ಲೋಕಸಭೆ ಚುನಾವಣೆ ಭರಾಟೆ ಸೇರಿ ಹಲವು ಕಾರಣಗಳಿಂದ ಆಂಧ್ರಪ್ರದೇಶದಲ್ಲಿ ಕೆಲವು ದಿನಗಳ ಹಿಂದೆ ಚಿತ್ರಮಂದಿರಗಳನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿತ್ತು. ಇದೇ ರೀತಿ ಕರ್ನಾಟಕದಲ್ಲೂ ತಾತ್ಕಾಲಿಕವಾಗಿ ಸಿಂಗ್‌ ಸ್ಕ್ರೀನ್‌ ಥಿಯೇಟರ್‌ಗಳನ್ನು ಬಂದ್ ಮಾಡಬೇಕು ಎಂಬ ಚಿಂತನೆ ನಡೆದಿತ್ತು.

ಇದನ್ನೂ ಓದಿ: Blink Movie: ಹಾಫ್ ಸೆಂಚುರಿ ಬಾರಿಸಿದ ʻಬ್ಲಿಂಕ್ ʼ ಸಿನಿಮಾ; ಒಟಿಟಿಯಲ್ಲಿಯೂ ʻಬಹುಪರಾಕ್ʼ!

Continue Reading

ಸಿನಿಮಾ

Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

Kalki 2898 AD: ಪ್ರಭಾಸ್‍, ದೀಪಿಕಾ ಪಡುಕೋಣೆ, ಅಮಿತಾಭ್‍ ಬಚ್ಚನ್ ಮತ್ತಿತರರು ನಟಿಸುತ್ತಿರುವ ಬಹು ನಿರೀಕ್ಷಿತ ಚಿತ್ರ  ‘ಕಲ್ಕಿ 2898 ಎಡಿ’ಯ ಹೊಸ ಪಾತ್ರ ‘ಬುಜ್ಜಿ’ ಗಮನ ಸೆಳೆಯುತ್ತಿದೆ. ಚಿತ್ರದ ಐದನೇ ಸೂಪರ್‌ ಸ್ಟಾರ್ ‘ಬುಜ್ಜಿ’ಯನ್ನು ಚಿತ್ರತಂಡ ಅದ್ಧೂರಿ ಕಾರ್ಯಕ್ರಮದಲ್ಲಿ ಪರಿಚಯಿಸಿದೆ. ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ ಈ ಬುಜ್ಜಿ. ಬುಜ್ಜಿ ಝಳಕ್‌ ಅನ್ನು ಈ ವಿಡಿಯೊದಲ್ಲಿ ನೋಡಿ.

VISTARANEWS.COM


on

Kalki 2898 AD
Koo

ಹೈದರಾಬಾದ್: ಪ್ಯಾನ್‍ ಇಂಡಿಯಾ ಸೂಪರ್‌ ಸ್ಟಾರ್‌ ಪ್ರಭಾಸ್‍ (Actor Prabhas) ಅಭಿನಯದ ‘ಕಲ್ಕಿ 2898 ಎಡಿ’ (Kalki 2898 AD) ಚಿತ್ರ ಸದ್ಯ ಸದ್ದು ಮಾಡುತ್ತಿದೆ. ಜೂನ್ 27ರಂದು ತೆರೆಗೆ ಬರಲು ಸಜ್ಜಾಗಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಸಿನಿ ಪ್ರಿಯರ ಗಮನ ಸೆಳೆದಿದೆ. ಈ ಸಿನಿಮಾದಲ್ಲಿನ ಪ್ರಮುಖ ನಟರ ಪಾತ್ರಗಳನ್ನು ಪರಿಚಯಿಸುತ್ತಿರುವ ಚಿತ್ರತಂಡ ಬುಧವಾರ (ಮೇ 22) ಚಿತ್ರದ ಐದನೇ ಸೂಪರ್‌ ಸ್ಟಾರ್ ‘ಬುಜ್ಜಿ’ಯನ್ನು ಅನಾವರಣಗೊಳಿಸಿದೆ. ಇದಕ್ಕಾಗಿ ನಗರದ ರಾಮೋಜಿ ಫಿಲಂ ಸಿಟಿಯಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಐದನೇ ಸೂಪರ್‌ ಸ್ಟಾರ್‌ ಬುಜ್ಜಿ ಬೇರೆ ಯಾರೂ ಅಲ್ಲ ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ. ಬುಜ್ಜಿಯನ್ನು ಭವಿಷ್ಯದ ವಾಹನ ಎಂದೇ ಚಿತ್ರತಂಡ ಹೇಳಿಕೊಂಡು, ಅದರ ಕಿರು ಝಲಕ್‌ ಅನ್ನು ಅನಾವರಣಗೊಳಿಸಿದೆ. ನಿರ್ದೇಶಕ ನಾಗ್ ಅಶ್ವಿನ್, ನಿರ್ಮಾಪಕರಾದ ಸಿ. ಅಶ್ವಿನಿ ದತ್, ಸ್ವಪ್ನಾ ದತ್ ಚಲಸಾನಿ, ಪ್ರಿಯಾಂಕಾ ದತ್ ಚಲಸಾನಿ ಸೇರಿ ಸುಮಾರು ಇಪ್ಪತ್ತು ಸಾವಿರ ಪ್ರೇಕ್ಷಕರು ಮತ್ತು ಮಾಧ್ಯಮದವರ ಸಮ್ಮುಖದಲ್ಲಿ ಹೈದರಾಬಾದ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಬುಜ್ಜಿಯನ್ನು ಪ್ರೇಕ್ಷಕರ ಮುಂದಿಡಲಾಗಿದೆ.

ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಎನಿಸಿಕೊಂಡಿದೆ ಎಂದು ಚಿತ್ರ ತಂಡ ವಿವರಿಸಿದೆ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿದೆ. ವಿಡಿಯೋದಲ್ಲಿ ಬುಜ್ಜಿ ಹೇಗೆಲ್ಲ ಕೆಲಸ ಮಾಡುತ್ತೆ, ಭವಿಷ್ಯದ ಆಪ್ತ ಸ್ನೇಹಿತ ಎಂದು ಏಕೆ ಕರೆಯಲಾಗುತ್ತದೆ ಎಂಬುದು ಸ್ಪಷ್ಟವಾಗುತ್ತದೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜತೆಗೆ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ತಯಾರಾಗುತ್ತಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

ಇದನ್ನೂ ಓದಿ: Kalki 2898 AD: ʼಕಲ್ಕಿ 2898 ಎಡಿʼ ಚಿತ್ರದ ಹೊಸ ಪೋಸ್ಟರ್‌ ಔಟ್‌; ಪ್ರಭಾಸ್‌ ಪಾತ್ರದ ಹೆಸರು ರಿವೀಲ್‌

ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು. ಜತೆಗೆ ಮೊದಲ ಬಾರಿಗೆ ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ತೆರೆಮೇಲೆ ಒಂದಾಗುತ್ತಿರುವುದೂ ನಿರೀಕ್ಷೆ ಹೆಚ್ಚಿಸಿದೆ.

Continue Reading

ಸಿನಿಮಾ

Actor Dhananjay: ʻಕೋಟಿʼ ಸಿನಿಮಾದ ‘ಜನತಾ ಸಿಟಿ’ ಹಾಡು ಔಟ್‌

Actor Dhananjay: ಸದ್ಯ ಸ್ಯಾಂಡಲ್‌ವುಡ್‌ ನಟ ಧನಂಜಯ್‌ ಅಭಿನಯದ ʼಕೋಟಿʼ ಸಿನಿಮಾದಲ್ಲಿನ ಈ ನಗರದ ಬಗೆಗಿನ ಹಾಡು ‘ಜನತಾ ಸಿಟಿ’ ಈಗ ಬಿಡುಗಡೆಯಾಗಿದೆ. ವಾಸುಕಿ ವೈಭವ್ ಸಾಹಿತ್ಯ ರಚಿಸಿ, ಸಂಯೋಜಿಸಿರುವ ಈ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಕೆಲವು ದಿನಗಳ ಹಿಂದೆ ‘ಮಾತು ಸೋತು’ ಹಾಡು ಬಿಡುಗಡೆ ಮಾಡಿ ಗಮನ ಸೆಳೆದಿದ್ದ ಚಿತ್ರತಂಡ ಇದೀಗ ಮತ್ತೊಂದು ವಿಶೇಷ ಹಾಡನ್ನು ಹೊರ ತಂದಿದೆ. ʼಕೋಟಿʼ ಚಿತ್ರವನ್ನು ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ನಾಯಕಿಯಾಗಿ ಮೋಕ್ಷಾ ಕುಶಾಲ್‌ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Actor Dhananjay
Koo

ಬೆಂಗಳೂರು: ಮಹಾನಗರಗಳು ಎಂತವರನ್ನೂ ಸೆಳೆಯುತ್ತವೆ‌. ಅವುಗಳು ತಮ್ಮೊಳಗೆ ಬಚ್ಚಿಟ್ಟುಕೊಂಡಿರುವ ಕೌತುಕತೆಗೆ ಸೋಲದವರಿಲ್ಲ. ಇಂತಹ ಒಂದು ಮಹಾನಗರ ‘ಜನತಾ ಸಿಟಿ’ಯಲ್ಲಿ ‘ಕೋಟಿ’ (Kotee Movie) ಜೀವನ ನಡೆಸುತ್ತಿದ್ದಾನೆ.‌ ಇದು ಒಂದು ಭ್ರಷ್ಟ ನಗರವೂ ಹೌದು. ಸದ್ಯ ಸ್ಯಾಂಡಲ್‌ವುಡ್‌ ನಟ ಧನಂಜಯ್‌ ಅಭಿನಯದ ʼಕೋಟಿʼ ಸಿನಿಮಾದಲ್ಲಿನ ಈ ನಗರದ ಬಗೆಗಿನ ಹಾಡು ‘ಜನತಾ ಸಿಟಿ’ ಈಗ ಬಿಡುಗಡೆಯಾಗಿದೆ. ವಾಸುಕಿ ವೈಭವ್ ಸಾಹಿತ್ಯ ರಚಿಸಿ, ಸಂಯೋಜಿಸಿರುವ ಈ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೊವನ್ನು ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಿಸಬಹುದು.

ವಾಸುಕಿ ವೈಭವ್ ಮಾತನಾಡಿ, “ಕೋಟಿ ‘ಜನತಾಸಿಟಿ’ಯಲ್ಲಿ ಜೀವನ ನಡೆಸುತ್ತಿದ್ದಾನೆ. ಅವನಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂ. ದುಡಿಯುವ ಆಸೆ. ಈ ಹಾಡು ಅವನ ಮತ್ತು ಜನತಾ ಸಿಟಿಯ ಸಂಬಂಧವನ್ನು ಹೇಳುತ್ತದೆ. ಈ ಹಾಡನ್ನು ಬರೆದು, ಸಂಯೋಜಿಸುವುದು ತುಂಬಾ ಚಾಲೆಂಜಿಂಗ್ ಆಗಿತ್ತು. ಈ ಹಾಡಿನ ತಯಾರಿ ವೇಳೆ ಸಖತ್ ಮಜ ಮಾಡಿದೀನಿ” ಎಂದು ಹೇಳಿದ್ದಾರೆ.

“ಕೋಟಿʼ ಸಿನಿಮಾದಲ್ಲಿ ‘ಜನತಾ ಸಿಟಿ’ ಹಾಡು ನನಗೆ ತುಂಬಾ ಇಷ್ಟ. ನಾನು ಒಂದು ಸಣ್ಣ ಹಳ್ಳಿಯಿಂದ ಬೆಂಗಳೂರಿಗೆ ಬಂದವನು. ಮಹಾನಗರಗಳಿಗೆ ಏನೋ ಸೆಳೆಯುವ ಗುಣ. ಈ ಹಾಡು ಮಹಾನಗರಗಳ‌ಲ್ಲಿ ಬದುಕುವ ಎಲ್ಲರಿಗೂ ತುಂಬಾ ಹತ್ತಿರ ಆಗಲಿದೆ” ಎಂದು ʼಕೋಟಿʼಯ ನಿರ್ದೇಶಕ ‘ಪರಮ್’ ಅಭಿಪ್ರಾಯ ಪಟ್ಟರು.

ʼಕೋಟಿʼ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ʼ777 ಚಾರ್ಲಿʼ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ʼಕಾಂತಾರʼ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿ ʼಕೋಟಿʼಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮೆರಾಮನ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

ಈ ಸಿನಿಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಕೆಲವು ದಿನಗಳ ಹಿಂದೆ ʻಕೋಟಿʼ ಸಿನಿಮಾದ ಮೊದಲ ಹಾಡು ‘ಮಾತು ಸೋತು’ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ.

Continue Reading
Advertisement
Remedies For SadeSati
ಧಾರ್ಮಿಕ1 min ago

Remedies For SadeSati: ಶನಿಯ ವಕ್ರದೃಷ್ಟಿ ಕಡಿಮೆ ಮಾಡಲು ಇಲ್ಲಿದೆ ಸುಲಭ ಪರಿಹಾರ

Sharad Kelkar
ಸಿನಿಮಾ3 mins ago

Sharad Kelkar: ‘ಬಾಹುಬಲಿ’ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್

Glenn Maxwell
ಪ್ರಮುಖ ಸುದ್ದಿ19 mins ago

Glenn Maxwell : ಮ್ಯಾಕ್ಸ್​​ವೆಲ್​ಗೆ ಕೊಟ್ಟ ಹಣ ವಾಪಸ್​ ಪಡೆಯಿರಿ; ಅಭಿಮಾನಿಗಳ ಒತ್ತಾಯ

Theatre
ಸಿನಿಮಾ22 mins ago

‘ಸ್ಟಾರ್‌’ ಸಿನಿಮಾಗಳಿಲ್ಲದ ಕಾರಣ ಚಿತ್ರಮಂದಿರಗಳ ಬಂದ್‌ಗೆ ಚಿಂತನೆ;‌ ನಿರ್ಮಾಪಕರಿಂದ ಭಾರಿ ಆಕ್ರೋಶ!

Dengue Fever
ಆರೋಗ್ಯ24 mins ago

Dengue Fever: ಮಳೆಗಾಲ ಬರುತ್ತಿದೆ! ಡೆಂಗ್ಯೂ ಬಗ್ಗೆ ಇರಲಿ ಎಚ್ಚರಿಕೆ!

Star Gown Fashion
ಫ್ಯಾಷನ್39 mins ago

Star Gown Fashion: ಕೇಪ್‌ ಗೌನ್‌ನಲ್ಲಿ ತ್ರಿಲೋಕ ಸುಂದರಿಯಂತೆ ಕಂಡ ನಟಿ ನಮ್ರತಾ ಗೌಡ!

Accident Case
ಚಿಕ್ಕಮಗಳೂರು42 mins ago

Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

Jagannath Puri Temple
ಪ್ರವಾಸ51 mins ago

Jagannath Puri Temple: ಪುರಿ ಜಗನ್ನಾಥ ದೇವಸ್ಥಾನದ 7 ಅಚ್ಚರಿಯ ಸಂಗತಿಗಳಿವು!

Medical negligence death case due to doctor negligence Dead body handed over without paying 30 lakh rupees
ಕ್ರೈಂ52 mins ago

Medical negligence: ಅವಳಿ ಮಕ್ಕಳಿಗೆ ಜನ್ಮ ನೀಡಿ ಸಾವು ಕೇಸ್‌; 30 ಲಕ್ಷ ರೂ. ಕಟ್ಟಿಸಿಕೊಳ್ಳದೆ ಮೃತದೇಹ ಹಸ್ತಾಂತರ

Chardham Yatra
ಪ್ರವಾಸ53 mins ago

Chardham Yatra 2024: ಚಾರ್‌ಧಾಮ್‌, ಕೇದಾರನಾಥನ ದರ್ಶನ ಮಾಡಲು ಬಯಸಿದ್ದೀರಾ? ನಿಮಗೆ ಬೇಕಾದ ಮಾಹಿತಿ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ14 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌