Soundarya Jagadish: ಸೌಂದರ್ಯ ಜಗದೀಶ್ ನಿವಾಸಕ್ಕೆ ನಟ ದರ್ಶನ್‌ ಸಹಿತ ಚಿತ್ರರಂಗದ ಗಣ್ಯರ ಭೇಟಿ; ಅಂತಿಮ ನಮನ - Vistara News

ಸಿನಿಮಾ

Soundarya Jagadish: ಸೌಂದರ್ಯ ಜಗದೀಶ್ ನಿವಾಸಕ್ಕೆ ನಟ ದರ್ಶನ್‌ ಸಹಿತ ಚಿತ್ರರಂಗದ ಗಣ್ಯರ ಭೇಟಿ; ಅಂತಿಮ ನಮನ

Soundarya Jagadish: ಸ್ಯಾಂಡಲ್‌ವುಡ್‌ ನಿರ್ಮಾಪಕ, ಉದ್ಯಮಿ  ಸೌಂದರ್ಯ ಜಗದೀಶ್ ಅವರು ಇಂದು (ಏ. 14) ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಅವರ ಮನೆಗೆ ತೆಗೆದುಕೊಂಡು ಬರಲಾಗಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ ದರ್ಶನ್‌ ಸಹಿತ ಅನೇಕ ಗಣ್ಯರು ಅಂತಿಮ ನಮನ ಸಲ್ಲಿಸಿದರು. ಏಪ್ರಿಲ್​ 15ರಂದು ಸೌಂದರ್ಯ ಜಗದೀಶ್​ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Soundarya Jagadish
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadish) ಇಂದು (ಏ. 14) ಮಹಾಲಕ್ಷ್ಮೀ ಲೇಔಟ್‌ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಅಗಲಿಕೆಗೆ ಕನ್ನಡ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಸೌಂದರ್ಯ ಜಗದೀಶ್​ ಅವರ ಮೃತದೇಹವನ್ನು ಅವರ ಮನೆಗೆ ತೆಗೆದುಕೊಂಡು ಬರಲಾಗಿದೆ. ಬಳಿಕ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಸಹಿತ ಅನೇಕ ಕಲಾವಿದರು ಆಗಮಿಸಿದ ಅಂತಿಮ ದರ್ಶನ ಪಡೆದುಕೊಂಡರು.

ಇತೀಚೆಗಷ್ಟೇ ಎಡಗೈ ಸರ್ಜರಿಗೆ ಒಳಗಾಗಿದ್ದ ದರ್ಶನ್‌ ಆಗಮಿಸಿ ಸೌಂದರ್ಯ ಜಗದೀಶ್ ಅವರಿಗೆ ಕಂಬನಿ ಮಿಡಿದರು. ಒಂದು ತಿಂಗಳು ವಿಶ್ರಾಂತಿ ಅಗತ್ಯ ಎಂದು ವೈದ್ಯರು ಹೇಳಿದ್ದರೂ ಆಗಮಿಸಿದ ದರ್ಶನ್‌ ಅಂತಿಮ ನಮನ ಸಲ್ಲಿಸಿದರು. ದರ್ಶನ್‌ ಮಾತ್ರವಲ್ಲ ಚಿತ್ರರಂಗದ ಗಣ್ಯರಾದ ಶ್ರೀನಗರ ಕಿಟ್ಟಿ, ಶ್ರೀಮುರಳಿ, ದರ್ಶನ್​, ಉಪೇಂದ್ರ, ಗುರುಕಿರಣ್​, ತರುಣ್​ ಸುಧೀರ್​, ಸಾರಾ ಗೋವಿಂದು, ಕೆ.ಮಂಜು ಮುಂತಾದವರು ಬಂದು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ನಾಳೆ (ಏಪ್ರಿಲ್​ 15) ಸೌಂದರ್ಯ ಜಗದೀಶ್​ ಅವರ ಅಂತ್ಯಕ್ರಿಯೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಯಿಂದ 1 ಗಂಟೆ ಒಳಗೆ ಅಂತ್ಯಕ್ರಿಯೆ ನಡೆಯಲಿದೆ. ಹೀಗಾಗಿ ನಾಳೆ ಬೆಳಗ್ಗೆ 9 ಗಂಟೆವರೆಗೆ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆತ್ಮಹತ್ಯೆಗೆ ಕಾರಣವೇನು?

ಈ ಬಗ್ಗೆ ಡಿಸಿಪಿ ಸೈಯದ್ ಉಲ್ಲಾ ಅದಾವತ್ ಮಾಧ್ಯಮದ ಜತೆ ಮಾತನಾಡಿ ʻʻಬೆಳಗ್ಗೆ 9.45ಕ್ಕೆ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅವರ ಮಡದಿ ಈಗಾಗಲೇ ದೂರು ಕೊಟ್ಟಿದ್ದಾರೆ. ಮಡದಿ ಕೂಡ ಇದು ಸೂಸೈಡ್ ಎಂದು ಕ್ಲೀಯರ್ ಕಟ್ ಆಗಿಯೇ ಹೇಳಿದ್ದಾರೆ. ಇತ್ತೀಚಿಗೆ ಸೌಂದರ್ಯ ಜಗದೀಶ್‌ ಅವರು ಮಾನಸಿಕವಾಗಿ ತುಂಬಾ ನೊಂದಿದ್ದರು. ಅತ್ತೆ ಜತೆ ತುಂಬ ಅಟಾಚ್‌ಮೆಂಟ್‌ ಹೊಂದಿದ್ದರು. ಅತ್ತೆಯ ಸಾವಿನ‌ ಬಳಿಕ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ನಾವು ಕೇಸ್‌ ದಾಖಲಿಸಿಕೊಂಡು ತನಿಖೆ ಮಾಡುತ್ತ ಇದ್ದೇವೆʼʼ ಎಂದು ಹೇಳಿದ್ದಾರೆ.

ಮೊದಲಿಗೆ ಸೌಂದರ್ಯ ಜಗದೀಶ್ ಅವರು ಆರ್ಥಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬಂದವು. ಈ ಬಗ್ಗೆ ಸೌಂದರ್ಯ ಜಗದೀಶ್‌ ಅವರ ಸ್ನೇಹಿತ ಶ್ರೇಯಸ್​ ಪ್ರತಿಕ್ರಿಯಿಸಿ, ʻʻಸೌಂದರ್ಯ ಜಗದೀಶ್ ಅವರಿಗೆ ಯಾವುದೇ ಆರೋಗ್ಯ ಸಂಬಂಧಿ ಕಾಯಿಲೆ ಇರಲಿಲ್ಲ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ನಿಜ. ಕೂಡಲೇ ನಾವು ಆಸ್ಪತ್ರೆಗೆ ಕರೆದುಕೊಂಡು ಬಂದ್ವಿ. ಅವರು ನಿಧನರಾಗಿದ್ದಾರೆ ಎಂದು ಆಸ್ಪತ್ರೆಯವರು ತಿಳಿಸಿದರು. ಈಗಲೇ ನಾವು ಏನು ಎಂಬುದನ್ನು ಹೇಳಲು ಆಗಲ್ಲ. ಹೃದಯಾಘಾತ ಆಗಿದೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ. ಬ್ಯಾಂಕ್​ ನೋಟಿಸ್​ಗೂ ಆತ್ಮಹತ್ಯೆಗೂ ಸಂಬಂಧ ಇಲ್ಲʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Soundarya Jagadish: ಖ್ಯಾತ ನಿರ್ಮಾಪಕ, ಜೆಟ್ ಲ್ಯಾಗ್‌ ಮಾಲೀಕ ಸೌಂದರ್ಯ ಜಗದೀಶ್ ಆತ್ಮಹತ್ಯೆ

ಚಿತ್ರ ನಿರ್ಮಾಣದ ಜತೆಗೆ ಉದ್ಯಮಿ, ಬಿಲ್ಡರ್‌ ಕೂಡ ಆಗಿರುವ ಸೌಂದರ್ಯ ಜಗದೀಶ್ ʻಅಪ್ಪು ಆ್ಯಂಡ್‌ ಪಪ್ಪು, ʻಮಸ್ತ್ ಮಜಾ ಮಾಡಿʼ, ʻರಾಮ್‌ಲೀಲಾʼ, ʻಸ್ನೇಹಿತರುʼ ಮುಂತಾದ ಜನಪ್ರಿಯ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ಅವರ ಮಗಳ ಮದುವೆಯನ್ನು ನೆರವೇರಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

VISTARANEWS.COM


on


ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ದರ್ಶನ್‌ ಕಾರಾಗೃಹ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ತನ್ನ ಪತ್ನಿ ವಿಜಯಲಕ್ಷ್ಮಿ ಮತ್ತು ಮಗನನ್ನು ಜೈಲಿನ ಕೊಠಡಿಯ ಒಳಗೆ ಭೇಟಿ ಮಾಡಲು, ಅವರೊಂದಿಗೆ ಪ್ರತ್ಯೇಕವಾಗಿ ಮಾತನಾಡಲು ಅವಕಾಶ ಕೋರಿ ಕೇಂದ್ರ ಕಾರಾಗೃಹ ಎಸ್‌ಪಿ ಅಂಶುಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕೈದಿಗಳನ್ನು ಭೇಟಿ ಮಾಡುವ ಸಂದರ್ಶನ ಕೊಠಡಿ ಬದಲು ಪ್ರತ್ಯೇಕವಾಗಿ ಸೆಲ್‌ ಒಳಗೆ ಭೇಟಿ ಅವಕಾಶ ಬೇಕೆಂದು ಕೋರಿದ್ದಾರೆ.
ಡಿಜಿಪಿ ಅಲೋಕ್‌ ಕುಮಾರ್‌ ಭೇಟಿ ಮಾಡಿದ ವಿಜಯಲಕ್ಷ್ಮಿ
ದರ್ಶನ್‌ ಜೈಲಧಿಕಾರಗಳಿಗೆ ಪತ್ರ ಬರೆದಿದ್ದರೆ. ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರು ಮೇ.16ರಂದು ಡಿಜಿಪಿ ಅಲೋಕ್‌ ಕುಮಾರ್‌ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ದರ್ಶನ್‌ ಅವರನ್ನು ಜೈಲಿನ ಕೊಠಡಿಯ ಒಳಗೆ ಭೇಟಿ ಮಾಡಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆಂದು ಮಾಹಿತಿ ತಿಳಿದುಬಂದಿದೆ.

ನಾಳೆ ಮೇ 19 ದರ್ಶನ್‌, ವಿಜಯಲಕ್ಷ್ಮಿ ಅವರ 23ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ದರ್ಶನ್‌ ಭೇಟಿಗೆ ಅವರ ಪತ್ನಿ, ಮಗನಿಗೆ ಅವಕಾಶ ಸಿಗಲಿ ಅಂತ ಅಭಿಮಾನಿಗಳು ಬಯಸುತ್ತಿದ್ದಾರೆ.

Continue Reading

Latest

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

VISTARANEWS.COM


on

ನಟ ದರ್ಶನ್‌ ಅವರಿಗೆ ಜಾಮೀನು ನಿರಾಕರಣೆಯಾದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರು ತಮ್ಮ ಇನ್ಸ್‌ಟಾ ಪೇಜ್‌ನಲ್ಲಿ ಹಾರ್ಟ್‌ ಬ್ರೇಕ್‌ ಇಮೋಜಿ ಮತ್ತು ದರ್ಶನ್‌ ಭಾವಚಿತ್ರ ಹಂಚಿಕೊಂಡಿದ್ದಾರೆ.

ಜೈಲಿನಲ್ಲಿರುವ ದರ್ಶನ್‌ಗೆ ವಿಜಯಲಕ್ಷ್ಮಿ ಅವರು ಆಗಾಗ ಧೈರ್ಯ ತುಂಬುತ್ತಿದ್ದರು. ಕುಟುಂಬದ ಬೆಂಬಲವೇ ಅವರಿಗೆ ದೊಡ್ಡ ಶಕ್ತಿಯಾಗಿತ್ತು ಎನ್ನಲಾಗುತ್ತಿದೆ.

ಆದರೆ ಇತ್ತೀಚಿನ ಬೆಳವಣಿಗೆಗಳ ನಂತರ ದರ್ಶನ್‌ ಮೌನವಾಗಿದ್ದು, ಜೈಲಿನಲ್ಲಿ ಯಾರೊಂದಿಗೂ ಹೆಚ್ಚು ಮಾತನಾಡುತ್ತಿಲ್ಲ ಎಂಬ ಮಾಹಿತಿ ಕೇಳಿಬರುತ್ತಿದೆ. ಇದೇ ವೇಳೆ ವಿಜಯಲಕ್ಷ್ಮಿಯವರು ಸಹ ಮೌನಕ್ಕೆ ಜಾರಿದ್ದು, ಇದೀಗ ಈ ಪೋಸ್ಟ್‌ ಮೂಲಕ ತಮ್ಮ ಭಾವನೆಯನ್ನು ಹಂಚಿಕೊಂಡಿದ್ದಾರೆ.

Continue Reading

Latest

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

VISTARANEWS.COM


on

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌, ಇನ್ನು ಒಂದು ವರ್ಷ ಬಿಡುಗಡೆ ಆಗುವ ಸಾಧ್ಯತೆ ಇಲ್ಲ. ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ನಟ ದರ್ಶನ್‌ಗೆ, ನ್ಯಾಯಪೀಠ ಬಿಗ್ ಶಾಕ್ ಕೊಟ್ಟಿದೆ. ನಟ ದರ್ಶನ್ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇನ್ನು ಒಂದು ವರ್ಷ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ವಿಚಾರಣೆಯಲ್ಲಿ ಒಂದು ವರ್ಷ ಯಾವುದೇ ಪ್ರಗತಿಯಾಗದೇ ಇದ್ದಲ್ಲಿ ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಮುಂದಿನ ಒಂದು ವರ್ಷದಲ್ಲಿ ಬಾಕಿ ಇರುವ 60 ಪ್ರಮುಖ ಸಾಕ್ಷಿಗಳ ವಿಚಾರಣೆ ನಡೆಸಬೇಕು ಎಂದು ಜಿ. ಬಿ ಪಾರ್ದಿವಾಲಾ ನೇತೃತ್ವದ ನ್ಯಾಯಪೀಠ ಹೇಳಿದೆ.
ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಸುಪ್ರೀಂಕೋರ್ಟ್​​ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ, ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಾಧಿಕಾರಿಗಳಿಂದ ಅವಕಾಶ ನಿರಾಕರಣೆ, ಆರೋಗ್ಯ ಸಮಸ್ಯೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆ, ಇನ್ನೂ ಕ್ವಾರಂಟೈನ್ ಸೆಲ್​​ನಲ್ಲಿ ಇಟ್ಟಿರುವುದು ಹೀಗೆ ಹಲವು ಕಾರಣಗಳನ್ನು ನೀಡಿ ದರ್ಶನ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಆಲಿಸಿದ ಸುಪ್ರೀಂ ಕೋರ್ಟ್ ದರ್ಶನ್​​ರ ಜಾಮೀನು ಅರ್ಜಿ ವಿಚಾರಣೆ ಮುಗಿಸಲು ಒಂದು ವರ್ಷ ಕಾಲಾವಕಾಶ ಕೊಟ್ಟಿದೆ. ಅಷ್ಟರಲ್ಲಿ ಸಾಕ್ಷ್ಯಗಳ ವಿಚಾರಣೆ ಮುಗಿಯದಿದ್ದಲ್ಲಿ, ಜಾಮೀನು ಅರ್ಜಿಯನ್ನು ಪರಿಗಣಿಸುವುದಾಗಿ ಸರ್ವೋಚ್ಛ ನ್ಯಾಯಾಲಯ ಹೇಳಿದೆ.

Continue Reading

ಸಿನಿಮಾ

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

VISTARANEWS.COM


on

ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ಮಾಪಕ ದಿಲೀಪ್‌ ರಾಜ್‌ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. 47 ವರ್ಷ ವಯಸ್ಸಿನ ದಿಲೀಪ್‌ ರಾಜ್‌ ಅವರನ್ನು ಬೆಳಗಿನ ಜಾವ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.


ದಿಲೀಪ್ ರಾಜ್ ಕನ್ನಡ ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿದ್ದರು.
‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ಲವ್‌ ಮಾಕ್‌ಟೇಲ್‌-3 ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಮೂಲಕ ಮನೆಮಾತಾಗಿದ್ದರು. ನಿರ್ಮಾಪಕರಾಗಿಯೂ ಅವರು ಹಲವು ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದರು.


ಸ್ಯಾಂಡಲ್‌ವುಡ್‌ನ ನಟರು, ನಿರ್ದೇಶಕರು,ನಿರ್ಮಾಪಕರು ಸೇರಿದಂತೆ ಚಿತ್ರರಂಗ ಗಣ್ಯರು ದಿಲೀಪ್‌ ರಾಜ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದಿಲೀಪ್ ರಾಜ್ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.

Continue Reading
Advertisement
Latest9 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest11 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest13 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest15 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ1 day ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌