ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ವೈಯಕ್ತಿಕ ಜೀವನ ಆಗಾಗ ಚರ್ಚೆಯಲ್ಲಿ ಇರುತ್ತದೆ. ದರ್ಶನ್ ಜತೆ 10 ವರ್ಷಗಳಿಂದ ರಿಲೇಷನ್‌ಶಿಪ್‌ನಲ್ಲಿ ಇದ್ದೆ ಎಂದು ಪವಿತ್ರಾ ಗೌಡ ಹೇಳಿಕೆ ನೀಡಿದ್ದರು. ಇದಾದ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಪವಿತ್ರಾ ನಡುವೆ ಸೋಷಿಯಲ್ ಮೀಡಿಯಾದಲ್ಲಿ ವಾರ್ ನಡೆದೇ ಹೋಯ್ತು. ಶ್ರೀರಂಗಪಟ್ಟಣದಲ್ಲಿ ನಡೆದ ಬೆಳ್ಳಿಪರ್ವ ಕಾರ್ಯಕ್ರಮದಲ್ಲಿ ನಟ ದರ್ಶನ್ ಪರೋಕ್ಷವಾಗಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದರು. ಇದೂ ಕೂಡ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಇದೀಗ ಏಕಾಏಕಿ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮೀ ಜತೆ ಸ್ಟೆಪ್ಸ್ ಹಾಕಿರುವ ವಿಡಿಯೊ ವೈರಲ್ ಆಗಿದೆ.
ಈಗಾಗಲೇ ದರ್ಶನ್ ವಿರುದ್ಧ ಹಲವು ಕೇಸ್‌ಗಳು ದಾಖಲಾಗಿವೆ. ಇಷ್ಟೆಲ್ಲ ರಂಪಾಟ ನಡೆದಿದ್ದರೂ ಸ್ನೇಹಿತರ ಬರ್ತ್‌ಡೇ ಪಾರ್ಟಿಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಜತೆ ಕುಣಿದು ಕುಪ್ಪಳಿಸಿದ್ದಾರೆ. ವಿಜಯಲಕ್ಷ್ಮಿ ಜತೆ ವೇದಿಕೆ ಏರಿ ರೊಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿದ್ದಾರೆ. ಆ ವಿಡಿಯೋ ಈಗ ವೈರಲ್ ಆಗುತ್ತಿದೆ. ʻಬಾಸ್- ಅತ್ತಿಗೆ ಡ್ಯಾನ್ಸ್ ಸೂಪರ್ʼ ಎಂದು ಅಭಿಮಾನಿಗಳು ಖುಷಿಯಾಗಿದ್ದಾರೆ. ತಮ್ಮ ಬಗ್ಗೆ ಮಾತನಾಡುವವರಿಗೆ ತಮ್ಮದೇ ಸ್ಟೈಲ್‌ನಲ್ಲಿ ಬಾಸ್ ಉತ್ತರ ಕೊಡುತ್ತಾರೆ ಎಂದು ಕಮೆಂಟ್ ಮಾಡುತ್ತಿದ್ದಾರೆ. ಮತ್ತೊಬ್ಬರು ʻʻತೊಡೆ ತಟ್ಟೋರ್ಗೆಲ್ಲಾ ಜಗಜಟ್ಟಿ ಮಲ್ಲ ಸಾಮ್ರಾಟ ಇವನು ಸಾಟಿ ಯಾರಿಲ್ಲʼʼಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Actor Darshan: ದೇಹ ಅಷ್ಟೇ ಅಲ್ಲ, ಮಾತೂ ತೂಕ ಇರ್ಬೇಕು; ದರ್ಶನ್‌ಗೆ ಉಮಾಪತಿ ತಿರುಗೇಟು!
💗 Exclusive 💗
— Sandy 💙 (@SandeshS1357) February 24, 2024
💥 ಬಾಸ್ and ಅತ್ತಿಗೆ ಡ್ಯಾನ್ಸ್ 💥
ಬಾಸ್ ಫ್ಯಾನ್ಸ್ ಫುಲ್ ಖುಷ್ 🥰
But
Haters ( 🐸🐕 ) Urkond Saithidare🤣🤣🤣
Boss Maja Madkond edare😍#DBoSS #DevilTheHero #KaateraOnZEE5 #BossOfSandalwood #DBoss𓃰 #BoxOfficeSulthan @dasadarshan pic.twitter.com/QDPo1BPvWx
ಬಾಸ್ ಅತ್ತಿಗೆ 🤩❤️#DBOSS #Darshan #DBoss𓃰 #DevilTheHero #Devildboss @dasadarshan pic.twitter.com/7LLWi5fJRi
— Darshan Sena Samiti Mandya Thaluk 'R' (@teamMandyaTaluk) February 24, 2024
ದರ್ಶನ್ ವಿರುದ್ಧ ಮಹಿಳೆಯರ ದೂರು
ಇವತ್ತು ಇವಳಿರ್ತಾಳೆ , ನಾಳೆ ಅವಳಿರ್ತಾಳೆ’ ಎಂದು ದರ್ಶನ್ (Actor Darshan) ಮಾತಿನ ಭರದಲ್ಲಿ ಹೇಳಿದ್ದು ಈಗ ಭಾರಿ ವಿವಾದ ಸೃಷ್ಟಿಸಿದೆ. ಈಗಾಗಲೇ ಗೌಡತಿಯರ ಸೇನೆಯಿಂದ ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆ ಆಗಿದೆ . ಇದರ ಬೆನ್ನಲ್ಲೇ ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ಮುಂಭಾಗ 50ಕ್ಕಿಂತಲೂ ಹೆಚ್ಚಿನ ಮಹಿಳೆಯರು ಜಮಾಯಿಸಿ ದರ್ಶನ್ ತಮ್ಮ ನಡವಳಿಕೆ ಸರಿಪಡಿಸಿಕೊಂಡು, ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಸ್ವಯಂ ಪ್ರೇರಿತರಾಗಿ ನಾವು ಬಂದಿದ್ದು, ಯಾವುದೇ ರಾಜಕೀಯ ಉದ್ದೇಶದಿಂದ ಇಲ್ಲಿಗೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ಅವರು ಕನ್ನಡ ಚಿತ್ರರಂಗಕ್ಕೆ (Actor Darshan) ಪದಾರ್ಪಣೆ ಮಾಡಿ 25 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಸ್ಮರಿಸಲು ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಅದ್ಧೂರಿಯಾಗಿ ʼಬೆಳ್ಳಿ ಪರ್ವ D-25ʼ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೈಯಕ್ತಿಕ ಹಾಗೂ ವೃತ್ತಿಪರ ವಿಚಾರಗಳನ್ನು ಯಾವುದೇ ಮುಚ್ಚು ಮರೆಯಿಲ್ಲದೇ ಹಂಚಿಕೊಂಡರು. ಇಷ್ಟೆಲ್ಲ ಮಾತಾಡಿ ʻʻಕೊನೆಗೆ ಫ್ಯಾಮಿಲಿ ಸಮಸ್ಯೆಗಳು, ಎಲ್ಲ ಸಮಸ್ಯೆಗಳನ್ನು ಪಕ್ಕಕ್ಕೆ ಇಡುತ್ತೇನೆ. `ಇವತ್ತು ಇವಳಿರ್ತಾಳೆ , ನಾಳೆ ಅವಳಿರ್ತಾಳೆ’. ನಾನ್ಯಾಕೆ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಲಿ. ನನಗೆ ನನ್ನ ಕೆಲಸ ಅಷ್ಟೆ ಮುಖ್ಯ ಎಂದಿದ್ದರುʼʼ ದರ್ಶನ್. ದರ್ಶನ್ ಮಾತಿನ ಭರದಲ್ಲಿ ಹೇಳಿದ ಹೇಳಿಕೆ ಈಗ ವಿವಾದ ಸೃಷ್ಟಿಯಾಗಿದೆ.