Anushka Shetty: ಬಿಜೆಪಿ ಬೆಂಬಲಿತ ಪವನ್ ಕಲ್ಯಾಣ್ ಪಕ್ಷ ಸೇರಲಿದ್ದಾರಂತೆ ನಟಿ ಅನುಷ್ಕಾ ಶೆಟ್ಟಿ! - Vistara News

South Cinema

Anushka Shetty: ಬಿಜೆಪಿ ಬೆಂಬಲಿತ ಪವನ್ ಕಲ್ಯಾಣ್ ಪಕ್ಷ ಸೇರಲಿದ್ದಾರಂತೆ ನಟಿ ಅನುಷ್ಕಾ ಶೆಟ್ಟಿ!

ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಪವನ್ ಕಲ್ಯಾಣ್ ಅವರ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿಯಲಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

VISTARANEWS.COM


on

Anushka Shetty pawan kalyan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜನ ಸೇನಾ ಪಕ್ಷದ (Jana Sena Party) ಮುಖ್ಯಸ್ಥ ಪವನ್ ಕಲ್ಯಾಣ್ (Pawan Kalyan) ಈ ವರ್ಷ ನಡೆಯಲಿರುವ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ (Andhra Pradesh assembly election) ಪೀಠಂಪುರಂ ಕ್ಷೇತ್ರದಿಂದ (Anushka Shetty) ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಇದೀಗ ನಟಿ ಅನುಷ್ಕಾ ಶೆಟ್ಟಿ (Anushka Shetty) ಟಾಲಿವುಡ್ ಪವರ್​ ಸ್ಟಾರ್ ಪವನ್ ಕಲ್ಯಾಣ್ ಅವರ ಜನ ಸೇನಾ ಪಕ್ಷದ ಮೂಲಕ ರಾಜಕೀಯ ಅಖಾಡಕ್ಕೆ ಧುಮುಕಲಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಪವನ್ ಕಲ್ಯಾಣ್ ಅವರ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿಯಲಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ನಟಿ ರಾಜಕೀಯ ಎಂಟ್ರಿಗೆ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ನಟಿ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಇದನ್ನೂ ಓದಿ: Kannada New Movie: ಸೆಟ್ಟೇರಿತು ಪವನ್ ಒಡೆಯರ್ ನಿರ್ಮಾಣದ ಮತ್ತೊಂದು ಸಿನಿಮಾ

ಚಿತ್ತೂರು ಜಿಲ್ಲೆ ಎಪಿಯಲ್ಲಿ ಸಚಿವೆ ಹಾಗೂ ನಟಿ ರೋಜಾ (ವೈಎಸ್‌ಆರ್‌ಸಿಪಿ) ಅವರಿಗೆ ಸ್ಪರ್ಧಿಸಲು ಅನುಷ್ಕಾ ಅವರನ್ನು ಕಣಕ್ಕಿಳಿಸಲು ಜನ ಸೇನಾ ಮುಂದಾಗಿದೆ ಎನ್ನಲಾಗಿದೆ.

ಸದ್ಯ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ಚಂದ್ರಬಾಬು ನಾಯ್ಡು ಅವರ ʻತೆಲುಗು ದೇಶಂʼ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಆಂಧ್ರಪ್ರದೇಶದಲ್ಲಿ ಒಟ್ಟು 25 ಲೋಕಸಭಾ ಕ್ಷೇತ್ರ ಮತ್ತು ಒಟ್ಟು 175 ವಿಧಾನಸಭಾ ಕ್ಷೇತ್ರಗಳಿವೆ. ವಿಧಾನಸಭಾ ಚುನಾವಣೆಯಲ್ಲಿ ಪವನ್‌ ಕಲ್ಯಾಣ್ ಅವರ ಜನಸೇನಾ ಪಕ್ಷವು ಒಟ್ಟು 175 ಸ್ಥಾನಗಳ ಪೈಕಿ 21 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಜೆಪಿ 10 ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಟಿಡಿಪಿ 144 ಸ್ಥಾನಗಳಲ್ಲಿ ಕಣಕ್ಕಿಳಿಯಲಿದೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 6 ಕಡೆ ಸ್ಪರ್ಧಿಸಲಿದೆ. ಟಿಡಿಪಿ 17 ಕ್ಷೇತ್ರ ಮತ್ತು ಜನಸೇನಾ ಪಕ್ಷವು 2 ಕಡೆ ಕಣಕ್ಕಿಳಿಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Vijay Deverakonda: ಮೃಣಾಲ್ – ವಿಜಯ್ ದೇವರಕೊಂಡ ಅಭಿನಯದ ʻಫ್ಯಾಮಿಲಿ ಸ್ಟಾರ್ʼ ಒಟಿಟಿ ರಿಲೀಸ್‌ ಡೇಟ್‌ ಫಿಕ್ಸ್‌!

Vijay Deverakonda: ಕೆಲವರು ಇದು ಸರಾಸರಿಗಿಂತ ಕಡಿಮೆ ಚಿತ್ರ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಈ ಚಿತ್ರಕ್ಕಿಂತ ಧಾರಾವಾಹಿ ಉತ್ತಮವಾಗಿದೆ ಎಂದು ಕಮೆಂಟ್ ಮಾಡಿದ್ದರು. ಸಂಗೀತ ಅಷ್ಟಾಗಿ ಆಕರ್ಷಣೀಯವಾಗಿಲ್ಲ ಎಂಬ ಮಾತು ಕೂಡ ಇದೆ. ಈ ಸಿನಿಮಾ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ, ಹೊಸತನವೇನೂ ಇಲ್ಲ ಎಂದಿದ್ದರು.

VISTARANEWS.COM


on

Vijay Deverakonda Mrunal Thakur The Family Star to release on OTT
Koo

ಬೆಂಗಳೂರು: ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಇದೀಗ ಸಿನಿಮಾ ಒಟಿಟಿಗೆ ಲಗ್ಗೆ ಇಡಲು ಸಜ್ಜಾಗಿದೆ. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಲಿದೆ. ತೆಲುಗು ಆವೃತ್ತಿಯ ಈ ಸಿನಿಮಾ ತಮಿಳು, ಮಲಯಾಳಂ ಮತ್ತು ಕನ್ನಡ ಡಬ್ಬಿಂಗ್ ಆವೃತ್ತಿಗಳೊಂದಿಗೆ ಲಭ್ಯವಿರಲಿದೆ.

ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಒಬ್ಬರು ʻʻಸಿನಿಮಾ ಫಸ್ಟ್‌ ಹಾಪ್‌ ಹಾಗೂ ಕಾಮಿಡಿ ಚೆನ್ನಾಗಿದೆʼʼಎಂದು ಬರೆದುಕೊಂಡಿದ್ದರು. ʻವಿಜಯ್ ಮತ್ತು ಮೃಣಾಲ್ ಅಭಿನಯ ಸೂಪರ್‌ʼ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದರು. ʻʻನನ್ನ ರೇಟಿಂಗ್ – 3.5/5. ಕೌಟುಂಬಿಕ ಮನರಂಜನೆ ಸಿನಿಮಾ ಇದುʼʼಮತ್ತೊಬ್ಬರು ಬರೆದುಕೊಂಡಿದ್ದರು.

ಕೆಲವರು ಇದು ಸರಾಸರಿಗಿಂತ ಕಡಿಮೆ ಚಿತ್ರ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಈ ಚಿತ್ರಕ್ಕಿಂತ ಧಾರಾವಾಹಿ ಉತ್ತಮವಾಗಿದೆ ಎಂದು ಕಮೆಂಟ್ ಮಾಡಿದ್ದರು. ಸಂಗೀತ ಅಷ್ಟಾಗಿ ಆಕರ್ಷಣೀಯವಾಗಿಲ್ಲ ಎಂಬ ಮಾತು ಕೂಡ ಇದೆ. ಈ ಸಿನಿಮಾ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ, ಹೊಸತನವೇನೂ ಇಲ್ಲ ಎಂದಿದ್ದರು.

ಇದನ್ನೂ ಓದಿ: Vijay Deverakonda: ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ ವಿಜಯ್ ದೇವರಕೊಂಡ!

ʻಹಾಯ್ ನಾನ್ನʼ (2023), ʻಸೀತಾ ರಾಮಂʼ (2022)ಬಳಿಕ ಮೃಣಾಲ್ ಠಾಕೂರ್ ಅವರ ಮೂರನೇ ತೆಲುಗು ಚಿತ್ರ ಇದು. ʻಫ್ಯಾಮಿಲಿ ಸ್ಟಾರ್ʼ ಸಿನಿಮಾವನ್ನು ಪರುಶುರಾಮ್ ನಿರ್ದೇಶಿಸಿದ್ದಾರೆ. ಈ ಮುಂಚೆ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ʻಗೀತ ಗೋವಿಂದಂʼ (2018) ಸಿನಿಮಾಗೆ ನಿರ್ದೇಶನ ಮಾಡಿದ್ದರು.

ʻಫ್ಯಾಮಿಲಿ ಸ್ಟಾರ್ʼ ಚಿತ್ರಕ್ಕೆ ಗೋಪಿಸುಂದರ್ ಸಂಗೀತ ನೀಡಿದ್ದು, ಇದುವರೆಗೆ ಬಿಡುಗಡೆಯಾಗಿರುವ ಮೂರು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

Continue Reading

ಸ್ಯಾಂಡಲ್ ವುಡ್

Dhanya Ramkumar: ಕಿಶನ್ ಬಿಳಗಲಿ ಜತೆ ಡಾ. ರಾಜ್​ಕುಮಾರ್ ಮೊಮ್ಮಗಳ ಡ್ಯೂಯೆಟ್‌!

Dhanya Ramkumar: ಇದಕ್ಕೂ ಮುಂಚೆ ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ಡ್ಯಾನ್ಸರ್‌ ಕಿಶನ್‌ ಬಿಳಗಲಿ (Kishen Bilagali) ಸ್ಯಾಂಡಲ್‌ವುಡ್ ‘ಟೋಬಿ’ ಸುಂದರಿ ಚೈತ್ರಾ ಆಚಾರ್ (Chaithra J Achar) ಜತೆ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದರು. ಕಿಶನ್‌ ಬಿಳಗಲಿ ಈ ರೀತಿ ರೊಮ್ಯಾಂಟಿಕ್‌ ಹಾಡಿಗೆ ಸ್ಟೆಪ್ಸ್‌ ಹಾಕುವುದು ಹೊಸದೇನಲ್ಲ. ನಟಿ ನಮ್ರತಾ ಗೌಡ ಜತೆ ಈ ಹಿಂದೆ ಕೂಡ ಈ ರೀತಿ ನೃತ್ಯ ಮಾಡಿ ಪೋಸ್ಟ್‌ ಮಾಡಿದ್ದರು.ಇದೀಗ ಧನ್ಯಾ ರಾಮ್‌ಕುಮಾರ್ ತಾತನಿಗೆ ವಿಭಿನ್ನವಾಗಿ ವಿಶ್‌ ಮಾಡಿ ಟ್ರಿಬ್ಯೂಟ್ ನೀಡಿದ್ದಾರೆ.

VISTARANEWS.COM


on

Dhanya Ramkumar reels with Kishen Bilagali
Koo

ಬೆಂಗಳೂರು: ಡಾ. ರಾಜ್​ಕುಮಾರ್ ಅವರ ಜನ್ಮದಿನ (Rajkumar Birth Anniversary) ಹಿನ್ನೆಲೆಯಲ್ಲಿ ಅದೆಷ್ಟೋ ಅಭಿಮಾನಿಗಳು ಅಣ್ಣಾವ್ರ ಸಿನಿಮಾ ಹಾಡಿಗೆ ರೀಲ್ಸ್‌ ಮಾಡಿ ಶೇರ್‌ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಧನ್ಯಾ ರಾಮ್‌ಕುಮಾರ್ ತಾತನಿಗೆ ವಿಭಿನ್ನವಾಗಿ ವಿಶ್‌ ಮಾಡಿ ಟ್ರಿಬ್ಯೂಟ್ ನೀಡಿದ್ದಾರೆ. ಬಿಗ್‌ಬಾಸ್ ಖ್ಯಾತಿಯ ಕಿಶನ್ ಬಿಳಗಲಿ (Kishen Bilagali) ಜತೆ ‘ರಾಜ ನನ್ನ ರಾಜ’ ಚಿತ್ರದ ಸೂಪರ್ ಹಿಟ್ ಗೀತೆಗೆ ಹೆಜ್ಜೆ ಹಾಕಿದ್ದಾರೆ.

ಇತ್ತೀಚಿಗೆ ನಟಿಯರ ಜತೆ ಕಿಶನ್ ಬಿಳಗಲಿ ಡ್ಯಾನ್ಸ್ ವಿಡಿಯೋಗಳು ಬಹಳ ಸದ್ದು ಮಾಡುತ್ತಿವೆ. ಆ ಲಿಸ್ಟ್‌ಗೆ ಇದು ಸೇರಿಕೊಂಡಿದೆ. ಚಿಕ್ಕಮಗಳೂರಿನ ಕಿಶನ್ ‘ಡ್ಯಾನ್ಸ್ ದಿವಾನೆ’ ಹಿಂದಿ ರಿಯಾಲಿಟಿ ಶೋ ವಿನ್ನರ್ ಸಹ ಆಗಿದ್ದರು. ಇದೀಗ ನಟಿ ಧನ್ಯಾ ರಾಮ್‌ಕುಮಾರ್ ಜತೆ ‘ರಾಜ ನನ್ನ ರಾಜ’ ಚಿತ್ರದ ಸೂಪರ್ ಹಿಟ್ ಗೀತೆ ʻನಿನದೇ ನೆನಪು ದಿನವೂ ಮನದಲ್ಲಿʼ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ರೆಟ್ರೋ ಲುಕ್‌ನಲ್ಲಿ ಇಬ್ಬರೂ ಮಿಂಚಿದ್ದಾರೆ. ಧನ್ಯಾ ಸೀರೆಯಲ್ಲಿ ಕಂಗೊಳಿಸಿದರೆ ಕಿಶನ್ ಬೆಲ್‌ಬಾಟಂ ಪ್ಯಾಂಟ್, ಪೋಲ್ಕಾ ಡಾಟ್ ಶರ್ಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ರಾಜ್‌ಕುಮಾರ್ ಹಾಗೂ ಆರತಿ ನಟನೆಯ ‘ರಾಜ ನನ್ನ ರಾಜ’ ಸಿನಿಮಾ 1976ರಲ್ಲಿ ತೆರೆಕಂಡಿತ್ತು.

ಇದನ್ನೂ ಓದಿ: Rajkumar Birth Anniversary: ಆತ್ಮಹತ್ಯೆಗೆ ಯತ್ನಿಸಿ ಅಡ್ಮಿಟ್‌ ಆದಾಗ ಅಣ್ಣಾವ್ರು ಆಶೀರ್ವಾದ ಮಾಡಿದ್ದರೆಂದ ಜಗ್ಗೇಶ್‌!

ಇದಕ್ಕೂ ಮುಂಚೆ ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ಡ್ಯಾನ್ಸರ್‌ ಕಿಶನ್‌ ಬಿಳಗಲಿ (Kishen Bilagali) ಸ್ಯಾಂಡಲ್‌ವುಡ್ ‘ಟೋಬಿ’ ಸುಂದರಿ ಚೈತ್ರಾ ಆಚಾರ್ (Chaithra J Achar) ಜತೆ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದರು. ಕಿಶನ್‌ ಬಿಳಗಲಿ ಈ ರೀತಿ ರೊಮ್ಯಾಂಟಿಕ್‌ ಹಾಡಿಗೆ ಸ್ಟೆಪ್ಸ್‌ ಹಾಕುವುದು ಹೊಸದೇನಲ್ಲ. ನಟಿ ನಮ್ರತಾ ಗೌಡ ಜತೆ ಈ ಹಿಂದೆ ಕೂಡ ಈ ರೀತಿ ನೃತ್ಯ ಮಾಡಿ ಪೋಸ್ಟ್‌ ಮಾಡಿದ್ದರು.

ʻನಿನ್ನ ಸನಿಹಕೆʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದರು ಧನ್ಯಾ. ನಿನ್ನ ಸನಿಹಕೆ ಬಳಿಕ ಧನ್ಯಾ ಅವರು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಹೈಡ್ & ಸೀಕ್’ ಸಿನಿಮಾಗೆ ಅನೂಪ್ ರೇವಣ್ಣ ಜತೆಗೆ ಧನ್ಯಾ ರಾಮ್‌ಕುಮಾರ್ ನಟಿಸಿದ್ದಾರೆ. ಸಿನಿಮಾ ಆಸಕ್ತಿ ಬಗ್ಗೆ ನಟಿ ಮಾಧ್ಯಮವೊಂದರಲ್ಲಿ ಮಾತನಾಡಿ ʻʻನಮ್ಮ ಕುಟುಂಬದಲ್ಲಿ ನಟಿಯಾಗುತ್ತಿರುವ ಮೊದಲ ಹುಡುಗಿ ನಾನು. ಈ ಹಿಂದೆ ಪಿಆರ್‌ ಆಗಿ ಕೆಲಸ ಮಾಡಿದೆ. ಆಗ ಇದು ನನ್ನ ಫೀಲ್ಡ್‌ ಅಲ್ಲ ಎನ್ನಿಸಿತು. ನಾನು ನಟಿಯಾಗ್ತೀನಿ ಅಂದಾಗ ನನ್ನ ಅಪ್ಪ, ಅಮ್ಮ ಇದರ ಬಗ್ಗೆ ಆಸಕ್ತಿ ತೋರಲಿಲ್ಲ. ಈಗ ಅವರಿಗೂ ಇಷ್ಟವಾಗಿದೆ. ನನಗೆ ನನ್ನ ಆಯ್ಕೆ ತಡವಾಯ್ತು ಎನ್ನಿಸುತ್ತಿಲ್ಲ. ಈ ಚಿತ್ರದ ಕಥೆ, ಪಾತ್ರ ನನಗೆ ಇಷ್ಟವಾದ ಕಾರಣ ಒಪ್ಪಿದೆ’ ಎಂದಿದ್ದರು.

Continue Reading

ಸ್ಯಾಂಡಲ್ ವುಡ್

Rajkumar Birth Anniversary: ಆತ್ಮಹತ್ಯೆಗೆ ಯತ್ನಿಸಿ ಅಡ್ಮಿಟ್‌ ಆದಾಗ ಅಣ್ಣಾವ್ರು ಆಶೀರ್ವಾದ ಮಾಡಿದ್ದರೆಂದ ಜಗ್ಗೇಶ್‌!

Rajkumar Birth Anniversary: ತರ್ಲೆ ನನ್ಮಗ’ ಸಿನಿಮಾ ಮೂಲಕ ಜಗ್ಗೇಶ್‌ ಖ್ಯಾತಿ ಗಳಿಸಿದ್ದರು. 1994ರ ಸಮಯದಲ್ಲಿ ಅವರ ಸಿನಿಮಾಗಳು ಫ್ಲಾಪ್ ಆದವು. ಇದರಿಂದ ಬೇಸರಗೊಂಡ ಜಗ್ಗೇಶ್ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು. ಆ ವೇಳೆ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದು ಅಣ್ಣಾವ್ರು ಎಂದು ಹೇಳಿಕೊಂಡರು.ಈಗಾಗಲೇ ದೊಡ್ಮನೆ ಕುಟುಂಬ ರಾಜ್ ಕುಮಾರ್ ಸಮಾಧಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.ಬೆಂಗಳೂರಿನ ಪ್ರತಿ ಗಲ್ಲಿ ಗಲ್ಲಿಗಳಲ್ಲಿರುವ ಡಾ. ರಾಜ್‌ ಪ್ರತಿಮೆಗಳಿಗೂ ಇಂದು ವಿಶೇಷ ಅಲಂಕಾರ ಆಗುತ್ತಿದೆ. ಜತೆಗೆ ಅನ್ನ ಸಂತರ್ಪಣೆಯಂಥ ಕಾರ್ಯಕ್ರಮಗಳು ನಡೆಯಲಿವೆ.

VISTARANEWS.COM


on

Rajkumar Birth Anniversary ​​Jaggesh said that Rajkumar blessed him when he was admitted due to suicide attempt
Koo

ಬೆಂಗಳೂರು: ಡಾ. ರಾಜ್​ಕುಮಾರ್ ಅವರ ಜನ್ಮದಿನ (Rajkumar Birth Anniversary) ಹಿನ್ನೆಲೆಯಲ್ಲಿ ನವರಸ ನಾಯಕ ಜಗ್ಗೇಶ್ ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿದ್ದಾರೆ. ಡಾ. ರಾಜ್​ಕುಮಾರ್ (Dr Rajkumar) ಹಾಗೂ ಜಗ್ಗೇಶ್ ಕುಟುಂಬದ ನಡುವೆ ಒಳ್ಳೆಯ ಬಾಂಧವ್ಯ ಇದೆ. ಅದೇ ರೀತಿ ಪುನೀತ್‌ ಜತೆಗೂ ಇದೆ. ಈ ಸಂದರ್ಭದಲ್ಲಿ ಜಗ್ಗೇಶ್‌ ಅವರು ಹಳೆಯ ಘಟನೆಯೊಂದನ್ನು ನೆನಪಿಸಿಕೊಂಡರು.

‘ತರ್ಲೆ ನನ್ಮಗ’ ಸಿನಿಮಾ ಮೂಲಕ ಜಗ್ಗೇಶ್‌ ಖ್ಯಾತಿ ಗಳಿಸಿದ್ದರು. 1994ರ ಸಮಯದಲ್ಲಿ ಅವರ ಸಿನಿಮಾಗಳು ಫ್ಲಾಪ್ ಆದವು. ಇದರಿಂದ ಬೇಸರಗೊಂಡ ಜಗ್ಗೇಶ್ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು. ಆ ವೇಳೆ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದು ಅಣ್ಣಾವ್ರು ಎಂದು ಹೇಳಿಕೊಂಡರು.

ಜಗ್ಗೇಶ್‌ ಮಾತನಾಡಿ ʻʻನಮ್ಮ ತಂದೆ ಹಾಗೂ ರಾಜ್ ಕುಮಾರ್ ಅವರ ಮೂಗು ಸೇಮ್ ಇದೆ. ನನಗೆ ರಾಜಣ್ಣ ಅಂದ್ರೆ ಪಂಚ ಪ್ರಾಣ. ನಾನು ಅವರಲ್ಲಿ ಕಂಡಿದ್ದು ಏನಂದ್ರೆ ತಂದೆಯ ವಾತ್ಸಲ್ಯ. ನಾನು ಹೊಸದಾಗಿ ಮನೆ ಕಟ್ಟಿದೀನಿ ಬರ್ಬೇಕು ಅಂದಾಗ, ಸುಮಾರು 11 ಗಂಟೆಗೆ ಬಂದು ಆಶೀರ್ವದಿಸಿದ್ರು. ಮಧ್ಯಾಹ್ನ 3 ಗಂಟೆವರೆಗೂ ಕೂತು ಮಾತನಾಡಿದ್ರು. ಅನೇಕ ನೆನಪುಗಳು, ಒಡನಾಟ ಇವೆʼ ಎಂದರು.

ಇದನ್ನೂ ಓದಿ: Rajkumar Birth Anniversary: ವರನಟ ಡಾ. ರಾಜ್​ಕುಮಾರ್ ಅವರ ಟಾಪ್‌ 10 ಸಿನಿಮಾಗಳಿವು!

ʻʻ94ನೇ ಇಸವಿಯಲ್ಲಿ ನನ್ನ ಸಿನಿಮಾಗಳು ಫ್ಲಾಪ್ ಆದ ಸಮಯದಲ್ಲಿ ನಾನು ಆತ್ಮಹತ್ಯೆ ಪ್ರಯತ್ನ ಮಾಡಿದ್ದೆ. ಮಣಿಪಾಲ್ ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ರು. ಅಣ್ಣಾವ್ರು ಬಂದು ತಲೆ ಮೇಲೆ ಕೈ ಇಟ್ಟು ಒಳ್ಳೇದು ಆಗ್ಲಿ ಎಂದು ಆಶೀರ್ವಾದ ಮಾಡಿದ್ದರು. ಯಾವುದೇ ಕಾರಣಕ್ಕೂ ಅತಿಯಾದ ಆಸೆ ಬೇಡ. ಜಗತ್ತನ್ನು ಮೆಚ್ಚಿಸಿ ಬದುಕೋಕೆ ಹೋಗ್ಬಾರ್ದು ಎಂದು ನನಗೆ ದೊಡ್ಡ ಮಾನಸಿಕ ಧೈರ್ಯ ಕೊಟ್ಟಿದ್ದು ರಾಜ್ ಕುಮಾರ್. ಅಣ್ಣಾವ್ರ ಆಶೀರ್ವಾದದಿಂದ ನನ್ನ ಸಿನಿಮಾಗಳು ಹಿಟ್ ಆದವು. ರಾಜ್ ಕುಮಾರ್ ಅವರ ಕಡೆಯ ಜರ್ನಿಯಲ್ಲಿ ನಾನಿದ್ದೆ. ಅವರ ಮೃತದೇಹದ ಜತೆಗೆ ನಾನು ಇಡೀ ದಿನ ಇದ್ದೆʼʼ ಎಂದರು.

ಇದನ್ನೂ ಓದಿ: PM Narendra Modi: “ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು” ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ

ಈಗಾಗಲೇ ದೊಡ್ಮನೆ ಕುಟುಂಬ ರಾಜ್ ಕುಮಾರ್ ಸಮಾಧಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಬದುಕಿದ್ದಾಗ ನೇತ್ರದಾನದ ಮೂಲಕ ಜಾಗೃತಿ ಮೂಡಿಸಿದ್ದ ರಾಜ್‌ಕುಮಾರ್‌, ತಮ್ಮ ನಿಧನದ ಬಳಿಕ ಕಣ್ಣುಗಳನ್ನು ದಾನ ಮಾಡಿದ್ದರು. ಈಗ ಪ್ರತಿ ವರ್ಷದಂತೆ, ಸಮಾಧಿ ಬಳಿ ನೇತ್ರದಾನ ನೋಂದಣಿ, ರಕ್ತದಾನ, ಅನ್ನದಾನದ ಕಾರ್ಯಗಳು ನಡೆಯಲಿವೆ. ಪುಣ್ಯಭೂಮಿಗೆ ಬರುವ ಅಭಿಮಾನಿಗಳಿಗೆ ಅಭಿಮಾನಿಗಳಿಂದಲೇ ಅನ್ನದಾನ ನೆರವೇರಲಿದೆ. ಅಷ್ಟೇ ಅಲ್ಲ ಬೆಂಗಳೂರಿನ ಪ್ರತಿ ಗಲ್ಲಿ ಗಲ್ಲಿಗಳಲ್ಲಿರುವ ಡಾ. ರಾಜ್‌ ಪ್ರತಿಮೆಗಳಿಗೂ ಇಂದು ವಿಶೇಷ ಅಲಂಕಾರ ಆಗುತ್ತಿದೆ. ಜತೆಗೆ ಅನ್ನ ಸಂತರ್ಪಣೆಯಂಥ ಕಾರ್ಯಕ್ರಮಗಳು ನಡೆಯಲಿವೆ.

Continue Reading

ಸಿನಿಮಾ

Kannada New Movie: ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಸಿನಿಮಾದ ವಿಡಿಯೊ ಸಾಂಗ್‌ಗೆ ʻAIʼ ಟಚ್‌!

Kannada New Movie: ಇತ್ತೀಚಿನ ದಿನಗಳಲ್ಲಿ ಎಐ ತಂತ್ರಜ್ಞಾನ ಎಲ್ಲ ಕ್ಷೇತ್ರಗಳನ್ನೂ ಆವರಿಸಿಕೊಂಡಿದೆ. ಇದೀಗ ಇಡೀ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿ ಈ ಹಾಡಿಗೆ ಎಐ ಆನಿಮೇಷನ್ ನಡೆಸಲಾಗಿದೆ.ʻಬ್ಯಾಡ್ ಬಾಯ್ಸ್’ ಎಂಬ ವಿಡಿಯೊ ಹಾಡನ್ನು ಚಿತ್ರತಂಡ ಬಿಡುಗಡೆಗೊಳಿಸಿದ್ದು, ನೋಡುಗರಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ.

VISTARANEWS.COM


on

Kannada New Movie Vidyarthi Vidyarthiniyare Bad Boys Full Video In AI Touch
Koo

ಬೆಂಗಳೂರು: ಅರುಣ್‌ ಅಮುಕ್ತ ನಿರ್ದೇಶನದಲ್ಲಿ (Kannada New Movie) ಮೂಡಿಬಂದಿರುವ ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಸಿನಿಮಾದ (Vidyarthi Vidyarthiniyare) ʻಬ್ಯಾಡ್‌ ಬಾಯ್ಸ್‌ʼ (Bad Boys Full Video) ಹೆಸರಿನ ಹೊಸ ಹಾಡು ಬಿಡುಗಡೆಯಾಗಿದೆ. ವಿಶೇಷ ಏನೆಂದರೆ, ಈ ಹಾಡಿಗೆ AI ತಂತ್ರಜ್ಞಾನ ಇದೆ. ʻಬ್ಯಾಡ್ ಬಾಯ್ಸ್’ ಎಂಬ ವಿಡಿಯೊ ಹಾಡನ್ನು ಚಿತ್ರತಂಡ ಬಿಡುಗಡೆಗೊಳಿಸಿದ್ದು, ನೋಡುಗರಿಂದ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ.

ಯುವ ಸಮುದಾಯದ ಈಗಿನ ಮನಸ್ಥಿತಿಯನ್ನೂ ಈ ಹಾಡು ನೋಡುಗರ ಮುಂದೆ ತಂದಿರಿಸಿದೆ. ಹೆಚ್ಚೆಚ್ಚು ವೀಕ್ಷಣೆ ಪಡೆಯುತ್ತ ಮುಂದೆ ಸಾಗುತ್ತಿದೆ. ಸಾಹಿತ್ಯ, ತಾಂತ್ರಿಕತೆ ಸೇರಿದಂತೆ ಎಲ್ಲ ರೀತಿಯಿಂದಲೂ ಹೊಸತೆಂಬಂತೆ ಮೂಡಿಬಂದಿರುವ ಈ ಹಾಡಿಗೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಭರ್ಜರಿ ಚೇತನ್ ಕುಮಾರ್ ಸಾಹಿತ್ಯ ಒದಗಿಸಿರುವ ಈ ಹಾಡಿಗೆ, ವಿಜೇತ್ ಕೃಷ್ಣ, ಕೀರ್ತನಾ ಚಂದ್ರು ಮತ್ತು ಸುನೈನಾ ಹಾಡನ್ನು ಹಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಎಐ ತಂತ್ರಜ್ಞಾನ ಎಲ್ಲ ಕ್ಷೇತ್ರಗಳನ್ನೂ ಆವರಿಸಿಕೊಂಡಿದೆ. ಇದೀಗ ಇಡೀ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿ ಈ ಹಾಡಿಗೆ ಎಐ ಆನಿಮೇಷನ್ ನಡೆಸಲಾಗಿದೆ. ಇದಕ್ಕೆ ಸಿನಿಮಾ ಪ್ರೇಮಿಗಳ ಕಡೆಯಿಂದ ಪ್ರತಿಕ್ರಿಯೆ ಹೇಗಿರಬಹುದೆಂಬ ಕುತೂಹಲ ಚಿತ್ರತಂಡದಲ್ಲಿತ್ತು.

ಇದನ್ನೂ ಓದಿ: Kannada New Movie:ʻದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಫೆಸ್ಟಿವಲ್’ಗೆ ಆಯ್ಕೆಯಾದ ಕನ್ನಡದ ʻಕೆಂಡʼ ಸಿನಿಮಾ!

ಈ ಹಾಡಿನಲ್ಲಿ ಮನೋಜ್ ವಿವಾನ್, ಮನಸ್ವಿ, ಭಾವನಾ ಅಪ್ಪು, ಅಮರ್ ಮುಂತಾದವರು ಕಾಣಿಸಿಕೊಂಡಿದ್ದಾರೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ.

ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ , ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Continue Reading
Advertisement
Lok sabha Election
ಪ್ರಮುಖ ಸುದ್ದಿ15 mins ago

Lok Sabha Election 2024: ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ, ನಾಳೆ ಮನೆ ಮನೆ ಪ್ರಚಾರ

Narsingh Yadav
ಕ್ರೀಡೆ34 mins ago

Narsingh Yadav: ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗಕ್ಕೆ ನರಸಿಂಗ್‌ ಯಾದವ್ ಅಧ್ಯಕ್ಷ

Narendra Modi
ದೇಶ49 mins ago

Narendra Modi: ಕರ್ನಾಟಕದಲ್ಲಿ ಮುಸ್ಲಿಮರಿಗೆ ಒಬಿಸಿ ಮೀಸಲಾತಿ; ಕಾಂಗ್ರೆಸ್‌ ಒಬಿಸಿ ವಿರೋಧಿ ಎಂದ ಮೋದಿ

Neha Murder Case
ಕರ್ನಾಟಕ1 hour ago

Neha Murder Case: ಹುಬ್ಬಳ್ಳಿಯಲ್ಲಿ ಸಿಐಡಿ ಸ್ಥಳ ಮಹಜರು; ಫಯಾಜ್‌ನ ಗಲ್ಲಿಗೇರಿಸಲು ಎಬಿವಿಪಿ ಕಾರ್ಯಕರ್ತರ ಆಗ್ರಹ

IPL 2024
ಕ್ರೀಡೆ1 hour ago

IPL 2024: ಬ್ಲಾಕ್​ ಟಿಕೆಟ್ ಮಾರಾಟ ಜಾಲ ಭೇದಿಸಿದ ಚೆನ್ನೈ ಪೊಲೀಸರು; 12 ಮಂದಿ ಸೆರೆ

Pratap Dudhat
ದೇಶ1 hour ago

ರಾಹುಲ್‌ ಗಾಂಧಿ ಗಂಡಸ್ತನ ತಿಳಿಯಲು ಅವರ ಜತೆ ನಿಮ್ಮ ತಾಯಿಯನ್ನು ಮಲಗಿಸಿ ಎಂದ ಕಾಂಗ್ರೆಸ್‌ ನಾಯಕ!

Lok Sabha Election 2024 Munirathna stops Darshan from campaigning for DK Suresh
Lok Sabha Election 20241 hour ago

Lok Sabha Election 2024: ಪ್ರಚಾರಕ್ಕೆ ದರ್ಶನ್‌ ಕರೆಸುವ ಡಿ.ಕೆ. ಸುರೇಶ್‌ ಪ್ಲ್ಯಾನ್‌ ಫ್ಲಾಪ್‌ ಮಾಡಿದ ಮುನಿರತ್ನ!

Money Guide
ಮನಿ-ಗೈಡ್2 hours ago

Money Guide: ಕ್ರೆಡಿಟ್‌ ಕಾರ್ಡ್‌ ಹೊಂದಿದ್ದೀರಾ? ವಂಚಕರ ಬಲೆಗೆ ಬೀಳದಿರಲು ಈ ಟಿಪ್ಸ್‌ ಫಾಲೋ ಮಾಡಿ

Karnataka Weather
ಕರ್ನಾಟಕ2 hours ago

Karnataka Weather: ನಾಳೆ ಬೆಳಗಾವಿ, ಕೊಪ್ಪಳ ಸೇರಿ ವಿವಿಧೆಡೆ ಮಳೆ; ಮುಂದಿನ 4 ದಿನ ಶಾಖದ ಅಲೆ ತೀವ್ರತೆ ಹೆಚ್ಚಳ!

Lok Sabha Election 2024 Vote on April 26 and get 10 percent discount on these hotels
Lok Sabha Election 20242 hours ago

Lok Sabha Election 2024: ಏ. 26ಕ್ಕೆ ವೋಟ್‌ ಹಾಕಿ ಈ ಹೋಟೆಲ್‌ಗಳಿಗೆ ಬನ್ನಿ; ಏನೇ ತಿಂದ್ರೂ 10 ಪರ್ಸೆಂಟ್‌ ಡಿಸ್ಕೌಂಟ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ16 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌