Site icon Vistara News

Kannada New Movie: ನಶಾ ಜಗತ್ತಿನ ಝಲಕ್‌ಗಳೊಂದಿಗೆ ಝಗಮಗಿಸಿತು `ಕೈಲಾಸ’ ಟ್ರೈಲರ್!

Kailasa Kasidre Trailer out

ಬೆಂಗಳೂರು: ಈ ಹಿಂದೆ ಬಿಡುಗಡೆಯಾಗಿದ್ದ ಟ್ರಾನ್ಸ್ ಸಾಂಗ್ (Kannada New Movie) ಮೂಲಕ ವ್ಯಾಪಕ ಕ್ರೇಜ್ ಸೃಷ್ಟಿಸಿತ್ತು `ಕೈಲಾಸ… ಕಾಸಿದ್ರೆʼ ಸಿನಿಮಾ. ನಾಗ್ ವೆಂಕಟ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಈ ದಿನಮಾನದ ಯುವ ಜನಾಂಗದ ಕಥೆಯನ್ನೊಳಗೊಂಡಿರುವ ಸಿನಿಮಾ ಆಗಿದೆ. ಈ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ. ಯುವ ಆವೇಗದ ಕಥೆಯೊಂದರ ಸ್ಪಷ್ಟ ಸುಳಿವಿನೊಂದಿಗೆ ಈ ಟ್ರೈಲರ್ ನೋಡುಗರನ್ನೆಲ್ಲ ಸೆಳೆದುಕೊಂಡಿದೆ.

ಈ ಹಿಂದೆ ʻತಾರಕಾಸುರʼ ಚಿತ್ರದ ರಗಡ್ ಪಾತ್ರದ ಮೂಲಕ ಪ್ರೇಕ್ಷಕರಿಗೆ ಪರಿಚಯವಾಗಿದ್ದವರು ರವಿ. ಚಿತ್ರವಿಚಿತ್ರ ಪಾತ್ರಗಳ ಮೂಲಕ ಅಚ್ಚರಿ ಮೂಡಿಸಿದ್ದ ರವಿ ಈ ಟ್ರೈಲರ್ ನಲ್ಲಿ ಲವರ್ ಬಾಯ್ ಲುಕ್ಕಿನಲ್ಲಿ ಕಂಗೊಳಿಸಿದ್ದಾರೆ. ವಯಸ್ಸಿನ ತುಮುಲಗಳಿಗೆ ವಶವಾಗಿ, ನಶೆಯ ಜಗತ್ತಿನೊಳಗೆ ಪ್ರವೇಶಿಸುವ ಯುವಕನೊಬ್ಬನ ಕಥಾ ಸಾರಾಂಶವನ್ನು ಧ್ವನಿಸುವಂತಿರುವ ಈ ಟ್ರೈಲರ್ ಅನ್ನು ನಾಗ್ ವೆಂಕಟ್ ಪರಿಣಾಮಕಾರಿಯಾಗಿ ರೂಪಿಸಿದ್ದಾರೆ.

ಇದನ್ನೂ ಓದಿ: Kannada New Movie: ಸೆಟ್ಟೇರಿತು ’ನಿದ್ರಾದೇವಿ Next Door; : ಹೊಸ ಚಿತ್ರಕ್ಕೆ ಕ್ರೇಜಿಸ್ಟಾರ್ ಕ್ಲಾಪ್!

ನಾಯಕ ರವಿ ಸೇರಿದಂತೆ ಒಂದಷ್ಟು ಪಾತ್ರಗಳ ಮಜಲುಗಳು ಈ ಮೂಲಕ ಪ್ರೇಕ್ಷಕರೆದುರು ತೆರೆದುಕೊಂಡಿವೆ. ಇರಲ್ಲಿಯೂ ವಿಶೇಷವಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಪಾತ್ರವಿಲ್ಲಿ ಪ್ರಧಾನವಾಗಿಯೇ ಸೆಳೆದಿದೆ. ಸೂರಜ್ ಒಂದಿಡೀ ಚಿತ್ರದ ತುಂಬಾ ಕ್ಯಾಟಿ ಆಗುವಂಥಾ ಹಾಸ್ಯ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನಿಗೆ ಸರಿ ಸಮನಾಗಿರುವ ಆ ಪಾತ್ರ ಕೂಡಾ ಈ ಟ್ರೈಲರ್ ಹೈಲೈಟ್‌ಗಳಲ್ಲೊಂದು. ಇನ್ನುಳಿದಂತೆ ಒಂದು ಪಾತ್ರದ ಸುತ್ತಲೇ ನಿರೀಕ್ಷೆ ಮೊಳೆತುಕೊಳ್ಳುವಂಥ ಅಪರೂಪದ ಸೆಳೆತವೊಂದು ಈ ಟ್ರೈಲರ್‌ನಲ್ಲಿ ಕಾಣಿಸುತ್ತದೆ. ಅದರ ಜೊತೆಜೊತೆಗೇ ಶ್ರೀಮಂತಿಕೆಯೂ ಸ್ಪಷ್ಟವಾಗಿ ಗೋಚರಿಸುವಂತಿದೆ. ಮಾಸ್ ಮಾತ್ರವಲ್ಲದೆ ಭರಪೂರ ನಗುವಿಗೂ ಕೊರತೆಯೇನಿಲ್ಲ ಎಂಬ ನಿಖರ ಸಂದೇಶವೊಂದು ಈ ಟ್ರೈಲರ್ ಮೂಲಕವೇ ರವಾನೆಯಾದಂತೆ ಭಾಸವಾಗುತ್ತಿದೆ. ಅಂದಹಾಗೆ, ಇದೊಂದು ಕ್ರೈಂ ಕಾಮಿಡಿ ಜಾನರ್‌ನ ಸಿನಿಮಾ ಎಂಬ ವಿಚಾರವನ್ನು ನಿರ್ದೇಶಕರು ಹೇಳಿಕೊಂಡಿದ್ದರು. ಅದಕ್ಕೆ ತಕ್ಕುದಾದ ಪುರಾವೆಗಳು ಟ್ರೈಲರ್‌ನಲ್ಲಿ ಕಾಣಿಸಿವೆ.

ಇದನ್ನೂ ಓದಿ: Kannada New Movie: ‘ಎಬಿ ಪಾಸಿಟಿವ್’ ಸಿನಿಮಾದಿಂದ ತೇಲಿಬಂತು ಮತ್ತೊಂದು ಚೆಂದದ ಹಾಡು!

ರವಿಗೆ ಜೋಡಿಯಾಗಿ ಸುಕನ್ಯಾ ನಟಿಸಿದ್ದಾರೆ. ಶಿವಾಜಿ ಸುರತ್ಕಲ್ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದ್ದ ಸುಕನ್ಯಾ ಈ ಮೂಲಕ ನಾಯಕಿಯಾಗಿದ್ದಾರೆ. ವಾಸಿಕ್ ಅಲ್ಸಾದ್ ನಿರ್ಮಾಣ ಮಾಡಿರುವ ʼಕೈಲಾಸʼ ಚಿತ್ರಕ್ಕೆ ಆಶಿಕ್ ಅರುಣ್ ಸಂಗೀತ, ತ್ಯಾಗರಾಜನ್ ಸಂಕಲನ, ಲೇಖಕ್ ಎಂ ಸಾಹಿತ್ಯ, ವಿನೋದ್ ರಾಜೇಂದ್ರನ್ ಛಾಯಾಗ್ರಹಣ, ಧನಂಜಯ ಬಿ ನೃತ್ಯ ನಿರ್ದೇಶನವಿದೆ. ವಾಸಿಕ್ ಅಲ್ಸಾದ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸಾಫ್ಟ್‌ವೇರ್ ಜಗತ್ತಿನಿಂದ ಆಗಮಿಸಿರುವ ನಾಗ್ ವೆಂಕಟ್ ಚೊಚ್ಚಲ ನಿರ್ದೇಶನದ ಚಿತ್ರವಿದು. ಈಗಾಗಲೇ ʻಕೈಲಾಸ ಕಾಸಿದ್ರೆʼ ಚಿತ್ರ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ತಲುಪಿಕೊಂಡಿದೆ. ಇದೇ ಮಾರ್ಚ್ 8ನೇ ತಾರೀಕಿನಂದು ಈ ಸಿನಿಮಾ ತೆರೆಗಾಣಲಿದೆ.

Exit mobile version