Site icon Vistara News

Kalki 2898 AD: ‘ಕಲ್ಕಿ 2898 ಎಡಿ’ಗೆ ವೀಕ್ಷಕರಿಂದ ಬಹುಪರಾಕ್ ; ಹರಿದ ಚಪ್ಪಲಿ ಫೋಟೊ ಹಂಚಿಕೊಂಡ ನಿರ್ದೇಶಕ !

Kalki 2898 AD Nag Ashwin Torn Slippers Dedication Behind

ಬೆಂಗಳೂರು: ನಾಗ್ ಅಶ್ವಿನ್ ನಿರ್ದೇಶಿಸಿದ ಕಲ್ಕಿ 2898 AD (Kalki 2898 AD:), ಎಲ್ಲಾ ಭಾಷೆಗಳಲ್ಲಿ ಮೊದಲ ದಿನದಲ್ಲಿ ಭಾರತದಲ್ಲಿ ಸುಮಾರು 95 ಕೋಟಿ ರೂಪಾಯಿ ಗಳಿಸಿದೆ, ಆದರೆ ಅದರ ಒಟ್ಟು ಸಂಗ್ರಹವು ಸುಮಾರು 115 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಒಟ್ಟಾರೆಯಾಗಿ, ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಸಿನಿಮಾವನ್ನು ಜನರು ಹಾಡಿ ಹೊಗಳುತ್ತಿದ್ದಾರೆ. ಈ ಚಿತ್ರದ ಜರ್ನಿ ಹೇಗಿತ್ತು ಎಂಬುದನ್ನು ಒಂದೇ ಒಂದು ಫೋಟೋ ಮೂಲಕ ನಿರ್ದೇಶಕ ನಾಗ್ ಅಶ್ವಿನ್ ಅವರು ವಿವರಿಸಿದ್ದಾರೆ. ಸಿನಿಮಾ ರಿಲೀಸ್ ಸಂದರ್ಭದಲ್ಲಿ ನಾಗ್ ಅಶ್ವಿನ್ ಅವರು ಹರಿದ ಚಪ್ಪಲಿ ಫೋಟೋ ಹಂಚಿಕೊಂಡಿದ್ದಾರೆ.

ಪ್ರಭಾಸ್‌ ಅವರ ಬಹುನಿರೀಕ್ಷಿತ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ನಾಗ್ ಅಶ್ವಿನ್ . ಈ ಸಿನಿಮಾ ಸೆಟ್ಟೇರಿ ಮೂರು ವರ್ಷ ಕಳೆದಿತ್ತು. ಈ ಚಿತ್ರದ ಜರ್ನಿ ಹೇಗಿತ್ತು ಎಂದು ಫೋಟೊ ಮೂಲಕ ವಿವರಣೆ ನೀಡಿದ್ದಾರೆ. ನಾಗ್ ಅಶ್ವಿನ್ ಅವರು ಇದೇ ಮೊದಲ ಬಾರಿಗೆ ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ರಿಲೀಸ್ ಸಂದರ್ಭದಲ್ಲಿ ನಾಗ್ ಅಶ್ವಿನ್ ಅವರು ಹರಿದ ಚಪ್ಪಲಿ ಫೋಟೋ ಹಂಚಿಕೊಂಡಿದ್ದಾರೆ. ‘ಇದು ತುಂಬಾನೇ ದೀರ್ಘ ರಸ್ತೆ’ ಎಂದು ಬರೆದುಕೊಂಡಿದ್ದಾರೆ. ಈ ಚಪ್ಪಲಿ ಒಂದಷ್ಟು ಕಡೆಗಳಲ್ಲಿ ಹರಿದು ಹೋಗಿದೆ. ಈ ಮೂಲಕ ತಮ್ಮ ಶ್ರಮದ ಬಗ್ಗೆ ಹೇಳಿಕೊಂಡಿದ್ದಾರೆ. ಇದೀಗ ಈ ಫೋಟೊ ಶೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಅನೇಕರು ನಾಗ್ ಅಶ್ವಿನ್ ಅವರ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ: Kalki 2898 AD: ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ ‘ಕಲ್ಕಿ 2898 ಎಡಿ’ ಸಿನಿಮಾ; ಕಲೆಕ್ಷನ್‌ ಎಷ್ಟು?

ನಾಗ್ ಅಶ್ವಿನ್ ನಿರ್ದೇಶಿಸಿದ ಕಲ್ಕಿ 2898 AD, ಎಲ್ಲಾ ಭಾಷೆಗಳಲ್ಲಿ ಮೊದಲ ದಿನದಲ್ಲಿ ಭಾರತದಲ್ಲಿ ಸುಮಾರು 95 ಕೋಟಿ ರೂಪಾಯಿ ಗಳಿಸಿದೆ, ಆದರೆ ಅದರ ಒಟ್ಟು ಸಂಗ್ರಹವು ಸುಮಾರು 115 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಒಟ್ಟಾರೆಯಾಗಿ, ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಕಲ್ಕಿ 2898 ಎಡಿ ಸಿನಿಮಾ ಹಲವು ಚಿತ್ರಗಳನ್ನು ಹಿಂದಿಕ್ಕಿದೆ. ಅದರಲ್ಲಿ ಕೆಜಿಎಫ್ 2 (ರೂ. 159 ಕೋಟಿ), ಸಲಾರ್ (ರೂ. 158 ಕೋಟಿ), ಲಿಯೋ (ರೂ. 142.75 ಕೋಟಿ) ಸಿನಿಮಾಗಳ ಜಾಗತಿಕ ಆರಂಭಿಕ ದಾಖಲೆಗಳನ್ನು ಹಿಂದಿಕ್ಕಿದೆ. ಆದರೆ, ಮೊದಲ ದಿನದ ಗಳಿಕೆಯಲ್ಲಿ ‘ಆರ್​ಆರ್​ಆರ್’ (223) ಹಾಗೂ ‘ಬಾಹುಬಲಿ 2’ (217) ಚಿತ್ರವನ್ನು ಹಿಂದಿಕ್ಕಲು ಈ ಸಿನಿಮಾ ಬಳಿ ಸಾಧ್ಯವಾಗಿಲ್ಲ.

ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.

ಕಲ್ಕಿ 2898 ಎಡಿ’ ಚಿತ್ರ ಜೂನ್ 27ರಂದು ರಿಲೀಸ್ ಆಗಿದೆ. ಮೊದಲ ದಿನ ಈ ಚಿತ್ರದ ಲಕ್ಷಾಂತರ ಟಿಕೆಟ್​ಗಳು ಮಾರಾಟ ಆಗಿವೆ. ಜನರು ಚಿತ್ರಕ್ಕೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಮಹಾಭಾರತದಿಂದ ಸಿನಿಮಾದ ಕಥೆ ಆರಂಭ ಆಗಲಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನಿ ದತ್ ಬಂಡವಾಳ ಹೂಡಿದ್ದಾರೆ.

ವಿಶ್ವದಾದ್ಯಂತ (world) ತೆರೆಗೆ ಬಂದ ಅತ್ಯಂತ ದುಬಾರಿ ಚಿತ್ರ (film) ʼಕಲ್ಕಿ 2898 ಎಡಿʼ (Kalki 2898AD) ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇದು ಹಿಂದೂ ಧರ್ಮದ (hindu dharma) ವಿಷಯದ ಮೇಲೆ ಕೇಂದ್ರೀಕೃತವಾಗಿರುವುದು. ಭಗವಾನ್ ವಿಷ್ಣುವಿನ (baghavan vishnu) 10ನೇ ಅವತಾರ ಕಲ್ಕಿ (kalki). ಸದಾಚಾರ ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವ ಕಲ್ಕಿ, ಕಲಿಯುಗವನ್ನು ಕೊನೆಗೊಳಿಸಿ ಮತ್ತೆ ಸತ್ಯಯುಗದ ಸುವರ್ಣ ಯುಗವನ್ನು ಪ್ರಾರಂಭಿಸುತ್ತಾನೆ ಎಂದು ನಂಬಲಾಗಿದೆ.

Exit mobile version