Site icon Vistara News

70th National Film Awards : ರಾಷ್ಟ್ರ ಪ್ರಶಸ್ತಿ ಗೆದ್ದ ಬಳಿಕ ನಿತ್ಯಾ ಮೆನನ್ ಪ್ರತಿಕ್ರಿಯಿಸಿದ್ದು ಹೀಗೆ!

70th National Film Awards Nithya Menen REACTS For 1st Time

ಬೆಂಗಳೂರು: 2022 ರಲ್ಲಿ ಬಿಡುಗಡೆಯಾದ ಚಲನಚಿತ್ರಗಳಿಗೆ 70 ನೇ ವಾರ್ಷಿಕ ರಾಷ್ಟ್ರೀಯ ಚಲನಚಿತ್ರ (70th National Film Awards) ಪ್ರಶಸ್ತಿಗಳನ್ನು ಆಗಸ್ಟ್ 16 ರಂದು ಘೋಷಿಸಲಾಯಿತು. ಫೀಚರ್ ಫಿಲ್ಮ್ಸ್ ವಿಭಾಗದಲ್ಲಿ, ನಿತ್ಯಾ ಮೆನೆನ್ ಮತ್ತು ಮಾನಸಿ ಪರೇಖ್ ಅವರು ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದುಕೊಂಡರು. ನಿತ್ಯಾ ತಿರುಚಿತ್ರಂಬಲಂ (ತಮಿಳು) ಚಿತ್ರಕ್ಕಾಗಿ ಗೆದ್ದರೆ, ಮಾನಸಿ ಕಚ್ ಎಕ್ಸ್‌ಪ್ರೆಸ್ (ಗುಜರಾತಿ) ಸಿನಿಮಾಗಾಗಿ ಪ್ರಶಸ್ತಿ ಪಡೆದರು.

ಇದೀಗ ನಟಿ ಪ್ರಶಸ್ತಿ ವಿಚಾರವಾಗಿ ಸಂತಸ ಹಂಚಿಕೊಂಡಿದ್ದಾರೆ. ʻʻಪ್ರಶಸ್ತಿಗಳನ್ನು ಘೋಷಿಸುತ್ತಿದ್ದಾರೆಂದು ನನಗೆ ತಿಳಿದಿರಲಿಲ್ಲ. ನಾನು ಅವಾರ್ಡ್ ಬರುತ್ತದೆ ಎಂದು ಊಹಿಸಿರಲಿಲ್ಲ. ನನಗೆ ಈ ವಿಚಾರ ಖುಷಿ ತಂದಿದೆ’ ಎಂದು ಅವರು ಹೇಳಿದ್ದಾರೆ.

‘ತಿರುಚಿತ್ರಂಬಲಂ’ ಚಿತ್ರದಿಂದ ನನಗೆ ಅವಾರ್ಡ್ ಸಿಕ್ಕಿದ್ದು ಹೆಮ್ಮೆ ತಂದಿದೆ. ಈ ಸಿನಿಮಾನ ಮಾಡುವಾಗ ಹಾಗೂ ನೋಡುವಾಗ ಖುಷಿ ಕೊಟ್ಟಿದೆ. ನಾನು ಪ್ರಶಸ್ತಿಗೆ ಅರ್ಹ’ ಎಂದಿದ್ದಾರೆ ಅವರು.

ಆಗಸ್ಟ್ 2022 ರಲ್ಲಿ ಹೊರಬಂದ ತಿರುಚಿತ್ರಂಬಲಂ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಹಿಟ್ ಆಗಿ ಹೊರಹೊಮ್ಮಿತು. ನಟರಾದ ಮಾನಸಿ ಪರೇಖ್ ಮತ್ತು ಧನುಷ್ ಅವರಿಗೆ ಅಪಾರ ಪ್ರಶಂಸೆಯನ್ನು ಗಳಿಸಿತು. ಕೇವಲ 30 ಕೋಟಿ ರೂಪಾಯಿಗಳ ಬಜೆಟ್‌ನಲ್ಲಿ ನಿರ್ಮಿಸಲಾದ ಈ ಸಿನಿಮಾ 100 ಕೋಟಿ ರೂ. ಗಳಿಕೆ ಕಂಡಿತು.ಪ್ರಕಾಶ್ ರಾಜ್ ಹಾಗೂ ಧನುಷ್ ‘ತಿರುಚಿತ್ರಂಬಲಂ’ ಸಿನಿಮಾದಲ್ಲಿ ಕಮಾಲ್ ಮಾಡಿದ್ದರು. ಅಪ್ಪ ಮಗನಾಗಿ ಪ್ರೇಕ್ಷಕರನ್ನು ರಂಜಿಸಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ನಿತ್ಯಾ ಮೆನನ್ ಅವರು ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ. ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ.

ಇದನ್ನೂ ಓದಿ: Kundapura Kannada Habba: ನನ್ನ ಸಿನಿಮಾ ಕಥೆಗಳಿಗೆ ಊರು, ಯಕ್ಷಗಾನವೇ ಪ್ರೇರಣೆ; ರಿಷಬ್ ಶೆಟ್ಟಿ

70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2024 ಶುಕ್ರವಾರ ಘೋಷಣೆಯಾಗಿದ್ದು (70th National Film Awards) ಮಲಯಾಳಂ ಚಿತ್ರ ‘ಆಟಂ ಅತ್ಯುತ್ತಮ ಚಲನಚಿತ್ರವಾಗಿ ಹೊರಹೊಮ್ಮಿtftu. ‘ಉಂಚೈ’ ಚಿತ್ರದ ನಿರ್ದೇಶನಕ್ಕಾಗಿ ಸೂರಜ್ ಬರ್ಜಾತ್ಯ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಪೊನ್ನಿಯಿನ್ ಸೆಲ್ವನ್ 1’, ‘ಕೆಜಿಎಫ್ 2’, ‘ಬ್ರಹ್ಮಾಸ್ತ್ರ ‘ಮತ್ತು ‘ಅಪರಾಜಿತೋ’ ಚಿತ್ರಗಳು ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಗೆದ್ದ ಇತರ ಚಿತ್ರಗಳಾಗಿವೆ.

1954 ರಲ್ಲಿ ಮೊದಲ ಬಾರಿಗೆ ನೀಡಲು ಅರಂಭಿಸಿದ ಈ ಪ್ರಶಸ್ತಿ 70ನೇ ಆವೃತ್ತಿ ಇದಾಗಿದೆ. ಆ ವರ್ಷಗಳಲ್ಲಿ, ವಿವಿಧ ಪ್ರಾದೇಶಿಕ ಭಾಷೆಗಳ ಅತ್ಯುತ್ತಮ ಚಲನಚಿತ್ರಗಳನ್ನು ಮಾತ್ರ ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿತ್ತು. . ಚಲನಚಿತ್ರಗಳಲ್ಲಿ ಕೆಲಸ ಮಾಡುವ ನಟರು ಮತ್ತು ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ಮೊದಲ ಬಾರಿಗೆ 1967 ರಲ್ಲಿ ನೀಡಲಾಯಿತು. ‘ರಾತ್ ಔರ್ ದಿನ್’ ಚಿತ್ರದಲ್ಲಿನ ಅಭಿನಯಕ್ಕಾಗಿ ನರ್ಗಿಸ್ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದ ಮೊದಲ ನಟಿಯಾಗಿದ್ದಾರೆ. ಅದೇ ವರ್ಷ ‘ಆಂಟನಿ ಫೈರಿಂಗ್’ ಮತ್ತು ‘ಚಿರಿಯಾಖಾನಾ’ ಚಿತ್ರಗಳಿಗಾಗಿ ಉತ್ತಮ್ ಕುಮಾರ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದರು.

2023 ರಲ್ಲಿ, ಪುಷ್ಪಾ: ದಿ ರೈಸ್ ಚಿತ್ರಕ್ಕಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದರೆ, ‘ಗಂಗೂಬಾಯಿ ಕಾಥಿಯಾವಾಡಿ’ ಮತ್ತು ‘ಮಿಮಿ’ ಚಿತ್ರಕ್ಕಾಗಿ ಆಲಿಯಾ ಭಟ್ ಮತ್ತು ಕೃತಿ ಸನೋನ್ ಅತ್ಯುತ್ತಮ ನಟಿ ಪ್ರಶಸ್ತಿ ಗೆದ್ದರು. ರಾಕೆಟ್ರಿ: ದಿ ನಂಬಿ ಎಫೆಕ್ಟ್ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

Exit mobile version