ಬೆಂಗಳೂರು: ಧನುಷ್ (Actor Dhanush) ಬರೆದು ನಿರ್ದೇಶಿಸಿರುವ ಸನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ʻರಾಯನ್ʼ ಸಿನಿಮಾವನ್ನು ಕಲಾನಿಧಿ ಮಾರನ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸಿನಿಮಾ ರಿಲೀಸ್ ಆಗಿ ಭಾರತದಲ್ಲಿ 50 ಕೋಟಿ ರೂ, ಕಲೆಕ್ಷನ್ ಮಾಡಿದೆ.ಬಿಡುಗಡೆಯಾದ ಕೇವಲ ಮೂರೇ ದಿನಕ್ಕೆ ಸಿನಿಮಾ ಭರ್ಜರಿ ಗಳಿಕೆ ಕಂಡು ಮುನ್ನುಗ್ಗುತ್ತಿದೆ. ಸಿನಿಮಾ ರಿಲೀಸ್ ಆದ ಬಳಿಕ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಭಾನುವಾರ (ಜುಲೈ 28) ಬಿಡುಗಡೆಯಾದ ನಂತರ ಅತಿ ಹೆಚ್ಚು ಕಲೆಕ್ಷನ್ ದಾಖಲಿಸಿದೆ. ಮೂರು ದಿನಗಳ ಆರಂಭಿಕ ವಾರಾಂತ್ಯದ ಸಂಗ್ರಹ ಈಗ ಭಾರತದಲ್ಲಿ 42.15 ಕೋಟಿ ರೂ ಜುಲೈ 28 ರಂದು, ‘ರಾಯನ್’ ಭಾರತದಲ್ಲಿ ಸರಿಸುಮಾರು ರೂ 14.75 ಕೋಟಿ ಗಳಿಸಿತು. ಇ ದಿನ 1 ಮತ್ತು ದಿನದ 2 ಸಂಗ್ರಹಕ್ಕಿಂತ ಸ್ವಲ್ಪ ಹೆಚ್ಚಾಗಿದೆ. ಭಾನುವಾರದಂದು ಚಿತ್ರವು ಒಟ್ಟಾರೆ ಶೇಕಡಾ 67.31 ರಷ್ಟು ಆಕ್ಯುಪೆನ್ಸಿಯನ್ನು ಹೊಂದಿತ್ತು.
ಟ್ರೇಡ್ ವರದಿಗಳ ಪ್ರಕಾರ, ‘ರಾಯನ್’ ಕೇವಲ ಎರಡು ದಿನಗಳಲ್ಲಿ ವಿಶ್ವಾದ್ಯಂತ 50 ಕೋಟಿ ರೂಪಾಯಿಗಳನ್ನು ದಾಟಿದೆ. ಮುಂಬರುವ ವಾರದಲ್ಲಿ 100 ಕೋಟಿ ರೂ, ಕಲೆಕ್ಷನ್ ಮಾಡಲಿದೆ ಎಂದು ವರದಿಯಾಗಿದೆ.
ಸಂದೀಪ್ ಕಿಶನ್, ಕಾಳಿದಾಸ್ ಜಯರಾಮ್, ಎಸ್‌ಜೆ ಸೂರ್ಯ, ಪ್ರಕಾಶ್ ರಾಜ್, ದುಶಾರ ವಿಜಯನ್ ಮತ್ತು ಸೆಲ್ವರಾಘವನ್ ಪ್ರಮುಖ ಪಾತ್ರಗಳಲ್ಲಿ ಇದ್ದಾರೆ. ಚಿತ್ರವು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ ‘A’ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಸನ್ ಪಿಕ್ಚರ್ಸ್‌ಗಾಗಿ ಕಲಿನಿತಿ ಮಾರನ್ ನಿರ್ಮಿಸಿರುವ ಈ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ ಸಂಯೋಜನೆ, ಓಂ ಪ್ರಕಾಶ್ ಅವರ ಛಾಯಾಗ್ರಹಣ ಮತ್ತು ಪ್ರಸನ್ನ ಜಿಕೆ ಸಂಕಲನವಿದೆ.
ಇದನ್ನೂ ಓದಿ: Actor Dhanush: ಧನುಷ್ ಬರ್ತ್‌ಡೇ ಸ್ಪೆಷಲ್; ‘ಕುಬೇರ’ ಸಿನಿಮಾದಿಂದ ಲುಕ್ ಪೋಸ್ಟರ್ ಔಟ್!
ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ರಾಯನ್’ (Raayan). ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದರು. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್ʼ ಅವರ ಎರಡನೇ ನಿರ್ದೇಶನದ ಸಿನಿಮಾ. ಧನುಷ್ ಕೊನೆಯದಾಗಿ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಕಾಣಿಸಿಕೊಂಡರು. ಅರುಣ್ ಮಾಥೇಶ್ವರನ್ ನಿರ್ದೇಶನದ ಈ ಚಿತ್ರದಲ್ಲಿ ಶಿವ ರಾಜ್‌ಕುಮಾರ್, ಪ್ರಿಯಾಂಕಾ ಮೋಹನ್, ನಿವೇದಿತಾ ಸತೀಶ್, ಜಾನ್ ಕೊಕ್ಕೆನ್ ಮತ್ತು ಮೂರ್ ಪ್ರಮುಖ ಪಾತ್ರಗಳಲ್ಲಿದ್ದರು.
ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ.