ಬೆಂಗಳೂರು: ನಟ ಸೂರ್ಯ (Actor Suriya) ಅವರು ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಅವರೊಂದಿಗೆ ಮುದಿನ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಮುಂದಿನ ಸಿನಿಮಾಗೆ ತಾತ್ಕಾಲಿಕವಾಗಿ ‘ಸೂರ್ಯ 44’ ಎಂದು ಶಿರ್ಷಿಕೆ ಇಡಲಾಗಿದೆ. ನಟ ಶೀಘ್ರದಲ್ಲೇ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ. ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಚಿತ್ರದ ಚಿತ್ರೀಕರಣಕ್ಕೆ ಸೆಟ್ ಸಿದ್ಧಪಡಿಸಿದೆ ಎನ್ನಲಾಗಿದೆ. ಸೂರ್ಯ ಇತ್ತೀಚೆಗಷ್ಟೆ ‘ಕಂಗುವ’ ಸಿನಿಮಾದ ಚಿತ್ರೀಕರಣ ಮುಗಿಸಿದ್ದು, ಹೊಸ ಸಿನಿಮಾ ಪ್ರಾರಂಭ ಮಾಡಿದ್ದಾರೆ. ಸಿನಿಮಾದ ಚಿತ್ರೀಕರಣ ಆರಂಭಕ್ಕೂ ಮುನ್ನ ದೇವಸ್ಥಾನಕ್ಕೆ ತೆರಳಿ ಪೂಜೆಯನ್ನು ಸಹ ಸೂರ್ಯ ಸಲ್ಲಿಸಿದ್ದಾರೆ.
ಇದೀಗ ನಟ ಸೂರ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿರುವ ಫೋಟೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸೂರ್ಯ ಬಿಳಿ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದಾರೆ. ಧೋತಿ ಮತ್ತು ಬಿಳಿ ಅಂಗಿಯಲ್ಲಿ ಕಂಡಿದ್ದಾರೆ.
‘ಚಿತ್ರದಲ್ಲಿ ಉರಿಯಾಡಿ ವಿಜಯ್ ಕುಮಾರ್ ಪ್ರತಿಸ್ಪರ್ಧಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿದ್ದು, ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗಿದೆ. ನಟರಾದ ಜಯರಾಮ್ ಮತ್ತು ಜೋಜು ಜಾರ್ಜ್ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಚಿತ್ರದ ತಾರಾಗಣದ ಬಗ್ಗೆ ಅಧಿಕೃತ ಮಾಹಿತಿ ಚಿತ್ರತಂಡ ಹಂಚಿಕೊಂಡಿಲ್ಲ.
ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ.
ಇದನ್ನೂ ಓದಿ: Actor Suriya: ಹೊಸ ಸಿನಿಮಾ ಅನೌನ್ಸ್ ಮಾಡಿದ ಕಾಲಿವುಡ್ ನಟ ಸೂರ್ಯ: ಅಚ್ಚರಿಯಾಗಿದೆ ಪೋಸ್ಟರ್!
ಸದ್ಯ ಸೂರ್ಯ ಅವರು ಶಿವ ನಿರ್ದೇಶನದ ‘ಕಂಗುವ’ ಚಿತ್ರದ ಬಿಡುಗಡೆಗಾಗಿ ಸೂರ್ಯ ಕಾಯುತ್ತಿದ್ದಾರೆ. ತಮಿಳು ಚಿತ್ರರಂಗದ (Tamil Cinema) ಖ್ಯಾತ ನಟ ಸೂರ್ಯ (Actor Surya) ಅವರ ಬಹು ನಿರೀಕ್ಷಿತ `ಕಂಗುವ’ (Kanguva Film) ಚಿತ್ರದ ಟೀಸರ್ ಔಟ್ ಆಗಿತ್ತು. ಬಾಲಿವುಡ್ ನಟ ಬಾಬಿ ಡಿಯೋಲ್ ಕೂಡ ಹೊಸ ಅವತಾರ ತಾಳಿದ್ದರು. ಬಾಬಿ ಡಿಯೋಲ್ ಒಳಗೊಂಡಿರುವ ಬೃಹತ್ ಯುದ್ಧದ ದೃಶ್ಯವನ್ನು ದೊಡ್ಡ ಪ್ರಮಾಣದಲ್ಲಿ ಚಿತ್ರೀಕರಿಸಲಾಗಿತ್ತು. ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದರು. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೋಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದರು.
ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.