ಬೆಂಗಳೂರು: ಕಾಲಿವುಡ್ ನಟ ಚಿಯಾನ್ ವಿಕ್ರಮ್ (Chiyaan Vikram) ನಟನೆಯ ʻʻತಂಗಲಾನ್ʼʼ ಚಿತ್ರ ಬಿಡುಗಡೆ ದಿನಾಂಕ ಘೋಷಿಸಲಾಗಿದೆ. ನಿರ್ದೇಶಕ ಪಾ ರಂಜಿತ್, ‘ತಾಂಗಾಲನ್’ ಸಿನಿಮಾ ನಿರ್ದೇಶನ ಮಾಡಿದ್ದು ಪ್ರತಿಭಾವಂತ ನಟ ಚಿಯಾನ್ ವಿಕ್ರಂ, ‘ತಂಗಾಲನ್’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ನಿಜವಾದ ‘ಕೆಜಿಎಫ್’ ಕತೆ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರ ಆಗಸ್ಟ್ 15ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ಸಿನಿಮಾ ಪ್ರಿ ರಿಲೀಸ್ ಈವೆಂಟ್ ನಡೆಯಿತು.
ಚಿತ್ರದಲ್ಲಿ ಹಾಲಿವುಡ್ ನಟ ಡೇನಿಯಲ್ ಕ್ಯಾಲ್ಟಗಿರೋನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ತಂಗಲಾನ್’ ವೇದಿಕೆಯಲ್ಲಿ ಹಾಲಿವುಡ್ ನಟ ಡೇನಿಯಲ್ ಕ್ಯಾಲ್ಟಗಿರೋನ್ ಇದ್ದಕ್ಕಿದಂತೆ ಸುಮಾ ಕೈಗೆ ಮುತ್ತಿಟ್ಟಿದ್ದಾರೆ. ಇದರಿಂದ ಒಂದು ಕ್ಷಣ ಶಾಕ್ ಆಗಿದ್ದ ಸುಮಾ ಬಳಿಕ ತಮಾಷೆಯಾಗಿ ಅದನ್ನು ತಿಳಿಗೊಳಿಸಿದ್ದಾರೆ.
ಏಕಾಏಕಿ ನಟ ನಿರೂಪಕಿ ಕೈಗೆ ಮುತ್ತು ಕೊಟ್ಟಾಗ ಸುಮಾ ಆತನಿಗೆ ಒಂದಷ್ಟು ತೆಲುಗು ಸಾಲುಗಳನ್ನು ಹೇಳಿಕೊಟ್ಟರು, ಅದನ್ನು ಹೇಳಿ ಡೇನಿಯಲ್ ಚಪ್ಪಾಳೆ ಗಿಟ್ಟಿಸಿದರು. ಈ ವೇಳೆ ಸುಮಾ ಶೇಕ್ ಹ್ಯಾಂಡ್ ಮಾಡಿ ಆತನನ್ನು ಬೀಳ್ಕೊಡಲು ಹೊರಟರು.
ಡೇನಿಯಲ್ ಆಕೆಯ ಕೈಗೆ ಮುತ್ತು ಕೊಟ್ಟಿದ್ದಾರೆ. ರಾಜಾ ನಮ್ಮ ಸಹೋದರ ಇವರು. ರಾಖಿ ಹಬ್ಬ ಬರುತ್ತಿದೆ. ‘ಅಣ್ಣಯ್ಯ’ ಎಂದು ಹಾಡು ಹಾಡಿ ತಮಾಷೆಯಾಗಿ ಹೇಳಿದರು. ಇದೀಗ ಈ ವಿಡಿಯೊ ವೈರಲ್ ಆಗುತ್ತಿದೆ.
ಇದನ್ನೂ ಓದಿ: Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್ ಕಟ್!
ಕೋಲಾರದ ಚಿನ್ನದ ಗಣಿ ಕಾರ್ಮಿಕರ ಜೀವನದ ಸುತ್ತ ಸುತ್ತುವ ನೈಜ ಘಟನೆಗಳಿಂದ ಪ್ರೇರಿತವಾದ ʻʻತಂಗಲಾನ್ʼʼನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ ಚಿಯಾನ್ ವಿಕ್ರಮ್. ಪಾ ರಂಜಿತ್ ನಿರ್ದೇಶನದ ಚಿತ್ರದಲ್ಲಿ ವಿಕ್ರಮ್ ಬುಡಕಟ್ಟಿನ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ತಂಗಲಾನ್‌ನಲ್ಲಿನ ಈ ಪಾತ್ರಕ್ಕಾಗಿಯೇ ವಿಕ್ರಮ್ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು. ಬ್ರಿಟಿಷರು ಹಾಗೂ ಬುಡಕಟ್ಟು ಸಮಾಜದ ನಡುವೆ ನಡೆಯುವ ಸಂಘರ್ಷವನ್ನು ʻತಂಗಲಾನ್ʼʼ ಹೇಳುತ್ತಿದೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ನಟ ಚಿಯಾನ್ ವಿಕ್ರಮ್ ಜತೆ ಪಾರ್ವತಿ ಮೆನನ್, ಮಾಳವಿಕಾ ಮೋಹನ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಕೆಜಿಎಫ್ ಚಿತ್ರದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಕಾಲ್ಪನಿಕ ಕಥೆಯನ್ನು ಕಟ್ಟಿಕೊಟ್ಟರೆ, ಕೆಜಿಎಫ್‌ನ ನಿಜವಾದ ಕಥೆಯನ್ನು ನಿರ್ದೇಶಕ ಪಾ. ರಂಜಿತ್ ಹೇಳಲು ಹೊರಟ್ಟಿದ್ದಾರೆ ಎಂದು ಈ ಮುಂಚೆ ಸುದ್ದಿಯಾಗಿತ್ತು. ಇದೀಗ ಈ ಚಿತ್ರದ ಮೂಲಕ ಹೊಸ ಕಥೆಯನ್ನು ಹೇಳಲು ಹೊರಟ್ಟಿದ್ದಾರೆ ರಂಜಿತ್.
ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಸ್ಟುಡಿಯೋ ಗ್ರೀನ್ ಮತ್ತು ನೀಲಂ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ‘ತಂಗಲಾನ್’ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಪಾರ್ವತಿ ತಿರುವೋತ್ತು, ಮಾಳವಿಕಾ ಮೋಹನನ್, ಪಶುಪತಿ, ಡೇನಿಯಲ್ ಕಾಲ್ಟಗಿರೋನ್ ಮತ್ತು ಇನ್ನೂ ಅನೇಕರು ಇದ್ದಾರೆ. ಜಿವಿ ಪ್ರಕಾಶ್ ಕುಮಾರ್ ಚಿತ್ರಕ್ಕೆ ಸಂಗೀತವನ್ನು ರಚಿಸಿದ್ದಾರೆ.
ಅಣ್ಣಿಯಾನ್ ನಟ ಚಿತ್ರನಿರ್ಮಾಪಕ ಎಸ್‌ಯು ಅರುಣ್ ಕುಮಾರ್ ಅವರೊಂದಿಗೆ ತಾತ್ಕಾಲಿಕವಾಗಿ ʻಚಿಯಾನ್ 62ʼ ಎಂಬ ಯೋಜನೆಯಲ್ಲಿ ಕೆಲಸ ಮಾಡಲಿದ್ದಾರೆ. ಚಿತ್ರದಲ್ಲಿ ಎಸ್ ಜೆ ಸೂರ್ಯ ಮತ್ತು ಸೂರಜ್ ವೆಂಜರಮೂಡು ಪ್ರಮುಖ ಭಾಗಗಳಲ್ಲಿದ್ದಾರೆ.
ಈ ಚಿತ್ರವನ್ನು HR ಎಂಟರ್‌ಟೈನ್‌ಮೆಂಟ್‌ನ ಬ್ಯಾನರ್‌ನಡಿಯಲ್ಲಿ ಶಿಬು ಥಮೀನ್ಸ್ ಮತ್ತು ರಿಯಾ ಶಿಬು ನಿರ್ಮಿಸಿಲಿದ್ದಾರೆ.