Actress Nayanthara: ನಿವಿನ್ ಪೌಲ್‌-ನಯನತಾರಾ ಹೊಸ ಸಿನಿಮಾ ಅನೌನ್ಸ್‌! - Vistara News

ಕಾಲಿವುಡ್

Actress Nayanthara: ನಿವಿನ್ ಪೌಲ್‌-ನಯನತಾರಾ ಹೊಸ ಸಿನಿಮಾ ಅನೌನ್ಸ್‌!

Actress Nayanthara: ಈ ಸಿನಿಮಾ ಮೊದಲು ನಯನತಾರಾ ಮತ್ತು ನಿವಿನ್ ಪೌಲ್‌ 2019 ರಲ್ಲಿ ‘ಲವ್ ಆ್ಯಕ್ಷನ್ ಡ್ರಾಮಾ’ ನಲ್ಲಿ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. ಈ ಸಿನಿಮಾಗೆ ಧ್ಯಾನ್ ಶ್ರೀನಿವಾಸನ್ ನಿರ್ದೇಶನವಿತ್ತು. ಇದೀಗ ಮತ್ತೆ ತೆರೆ ಮೇಲೆ ಮಿಂಚಲು ಜೋಡಿ ರೆಡಿಯಾಗಿದೆ.

VISTARANEWS.COM


on

Dear Students Nayanthara and Nivin Pauly reunite after five years
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ನಟಿ ನಯನತಾರಾ (Actress Nayanthara ) ಮತ್ತು ನಿವಿನ್ ಪೌಲ್‌ ಮುಂಬರುವ ಮಲಯಾಳಂ ಚಿತ್ರ ‘ಡಿಯರ್ ಸ್ಟೂಡೆಂಟ್ಸ್’ಗ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಏಪ್ರಿಲ್ 14ರಂದು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಸಂದೀಪ್ ಕುಮಾರ್ ಮತ್ತು ಜಾರ್ಜ್ ಫಿಲಿಪ್ ಜೋಡಿ ಈ ಸಿನಿಮಾ ನಿರ್ದೇಶಿಸಲಿದ್ದಾರೆ. ನಯನತಾರಾ ಮತ್ತು ನಿವಿನ್ ಪೌಲಿ ಅವರು ಚಿತ್ರದಲ್ಲಿ ನಟಿಸಿರುವುದಲ್ಲದೇ ತಮ್ಮ ನಿರ್ಮಾಣ ಸಂಸ್ಥೆಗಳ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.

ಈ ಸಿನಿಮಾ ಮೊದಲು ನಯನತಾರಾ ಮತ್ತು ನಿವಿನ್ ಪೌಲ್‌ 2019 ರಲ್ಲಿ ‘ಲವ್ ಆ್ಯಕ್ಷನ್ ಡ್ರಾಮಾ’ ನಲ್ಲಿ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. ಈ ಸಿನಿಮಾಗೆ ಧ್ಯಾನ್ ಶ್ರೀನಿವಾಸನ್ ನಿರ್ದೇಶನವಿತ್ತು. ಇದೀಗ ಮತ್ತೆ ತೆರೆ ಮೇಲೆ ಮಿಂಚಲು ಜೋಡಿ ರೆಡಿಯಾಗಿದೆ. “ಆತ್ಮೀಯ ವಿದ್ಯಾರ್ಥಿಗಳ ಮೋಜಿನ ಜಗತ್ತಿನಲ್ಲಿʼʼ ಎಂದು ಸಣ್ಣ ವಿಡಿಯೊ ಹಂಚಿಕೊಂಡಿದ್ದಾರೆ ನಯನತಾರಾ.

ಮಲಯಾಳಂನಲ್ಲಿ, ನಯನತಾರಾ ಕೊನೆಯ ಬಾರಿಗೆ ನಿರ್ದೇಶಕ ಅಲ್ಫೋನ್ಸ್ ಪುತ್ರೇನ್ ಅವರ ‘ಗೋಲ್ಡ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್ ಸುಕುಮಾರನ್ ನಾಯಕರಗಿದ್ದರು. ಸಿನಿಮಾ ನೆಗೆಟಿವ್‌ ವಿಮರ್ಶೆಯನ್ನು ಪಡೆದುಕೊಂಡಿತ್ತು.

ಇದನ್ನೂ ಓದಿ: Nayanthara and Vignesh: ಪತಿಯನ್ನು ಅನ್‌ಫಾಲೋ ಮಾಡಿ ಭಾವುಕ ಪೋಸ್ಟ್‌ ಹಂಚಿಕೊಂಡ ನಯನತಾರ!

ಇತ್ತೀಚೆಗೆ ನಿರ್ದೇಶಕ ವಿನೀತ್ ಶ್ರೀನಿವಾಸನ್ ಅವರ ‘ವರ್ಷಂಗಲ್ಕ್ಕು ಶೇಷಂ’ ಚಿತ್ರದಲ್ಲಿ ನಿವಿನ್ ಪೌಲಿ ಕಾಣಿಸಿಕೊಂಡಿದ್ದರು. ಚಿತ್ರಮಂದಿರಗಳಲ್ಲಿ ಈ ಸಿನಿಮಾ ಇನ್ನೂ ಯಶಸ್ವಿಯಾಗಿ ಓಡುತ್ತಿದೆ.

‘ಬೈಜು ಬವ್ರಾ’ ಚಿತ್ರದಲ್ಲಿ ನಟಿಸುತ್ತಾರಾ ನಯನತಾರಾ?

ಸದ್ಯ ಕೇಳಿ ಬಂದಿರುವ ಸುದ್ದಿಯ ಪ್ರಕಾರ ನಯನತಾರಾ ಅವರು ಸಂಜಯ್ ಲೀಲಾ ಬನ್ಸಾಲಿ ಅವರ ಬಹು ನಿರೀಕ್ಷಿತ ‘ಬೈಜು ಬವ್ರಾ’ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಚಿತ್ರದಲ್ಲಿ ರಣವೀರ್‌ ಸಿಂಗ್‌ ಮತ್ತು ಆಲಿಯಾ ಭಟ್‌ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಬಹಳ ಹಿಂದಿನಿಂದಲೇ ಕೇಳಿ ಬರುತ್ತಿತ್ತು. ಇದೀಗ ಈ ಬಹು ನಿರೀಕ್ಷಿತ ಪ್ರಾಜೆಕ್ಟ್‌ನಲ್ಲಿ ನಯನತಾರಾ ಕೂಡ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದೆ.

ತಮ್ಮ ಎರಡನೇ ಬಾಲಿವುಡ್‌ ಚಿತ್ರದ ಬಗ್ಗೆ ಸಂಜಯ್‌ ಲೀಲಾ ಬನ್ಸಾಲಿ ಜತೆ ಈಗಾಗಲೇ ನಯನತಾರಾ ಚರ್ಚೆ ನಡೆಸಿ ನಟಿಸಲು ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಣವೀರ್‌ ಸಿಂಗ್‌ ಟೈಟಲ್‌ ರೋಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು 1952ರಲ್ಲಿ ತೆರೆಕಂಡ ‘ಬೈಜು ಬವ್ರಾ’ ಚಿತ್ರದ ರಿಮೇಕ್‌ ಎನ್ನಲಾಗಿದ್ದು, ಮೂಲ ಚಿತ್ರದಲ್ಲಿ ಭರತ್ ಭೂಷಣ್-ಮೀನಾ ಕುಮಾರಿ ನಟಿಸಿದ್ದರು. ಸಂಗೀತಗಾರನೊಬ್ಬನ ಜೀವನದ ಬಗ್ಗೆ ಈ ಚಿತ್ರ ಬೆಳಕು ಚೆಲ್ಲಿತ್ತು. ಈ ಚಿತ್ರದ ಪ್ರಮುಖ ಪಾತ್ರ ನಿರ್ವಹಿಸುವಂತೆ ನಯನತಾರಾ ಅವರನ್ನು ಸಂಪರ್ಕಿಸಲಾಗಿದೆ. ಅವರು ಇನ್ನೂ ತಮ್ಮ ನಿರ್ಧಾರವನ್ನು ಅಂತಿಮಗೊಳಿಸಿಲ್ಲ. ಮಾರ್ಚ್‌ನಲ್ಲಿ ನಯನತಾರಾ, ಪತಿ ವಿಘ್ನೇಶ್‌ ಶಿವನ್‌ ಜತೆ ಸಂಜಯ್‌ ಲೀಲಾ ಬನ್ಸಾಲಿ ಅವರನ್ನು ಭೇಟಿಯಾಗಿ ಈ ಸಿನಿಮಾ ಕುರಿತು ಮಾತುಕತೆ ನಡೆಸಿದ್ದರು ಎಂದು ಮೂಲಗಳು ವರದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

VISTARANEWS.COM


on

ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ. ಅಟ್ಲಿ ಅವರ ಪತ್ನಿ ಪ್ರಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಅಟ್ಲಿ ಹಾಗೂ ಅವರ ಪತ್ನಿ ಪ್ರಿಯಾ ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ಈ ದಂಪತಿ ಎರಡನೇ ಬಾರಿಗೆ ಪೋಷಕರಾಗಿದ್ದು, ಮುದ್ದಾದ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ವಿಶೇಷವೆಂದರೆ, ಅಟ್ಲಿ ನಿರ್ದೇಶನದ ‘ರಾಕಾ’ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಅವರು ತಮ್ಮ ಎರಡನೇ ಪ್ರೆಗ್ನೆನ್ಸಿ ಸುದ್ದಿಯನ್ನು ಹಂಚಿಕೊಂಡ ಮರುದಿನವೇ ಅಟ್ಲೀ ಕೂಡ ಈ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಪ್ರಿಯಾ ಅಟ್ಲಿ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಇಂದು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಟ್ಲಿ ಮತ್ತು ಪ್ರಿಯಾ, ತಮ್ಮ ಮನೆಗೆ ಹೆಣ್ಣು ಮಗುವಿನ ಆಗಮನವಾಗಿರುವುದನ್ನು ಖಚಿತಪಡಿಸಿದ್ದಾರೆ. ಈ ಪೋಸ್ಟ್‌ ಗೆ ‘ಧನ್ಯತೆಯ ಭಾವ ಮೂಡಿದೆ’ ಎಂದು ಕ್ಯಾಪ್ಷನ್ ನೀಡಿದ್ದಾರೆ. ತಮ್ಮ ಮೊದಲ ಪುತ್ರ ಮೀರ್ ಈಗ ದೊಡ್ಡ ಅಣ್ಣನ ಜವಾಬ್ದಾರಿ ವಹಿಸಿಕೊಳ್ಳಲು ಸಜ್ಜಾಗಿರುವ ಮುದ್ದಾದ ಪೋಸ್ಟರ್ ಒಂದನ್ನೂ ಹಂಚಿಕೊಂಡಿರುವುದು ಕುತೂಹಲ ಮೂಡಿಸಿದೆ.
ಅಟ್ಲಿ ಅವರ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಇಡೀ ದೇಶದ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಅಟ್ಲಿ ಮತ್ತು ಪ್ರಿಯಾ ಹಲವು ವರ್ಷಗಳ ಕಾಲ ಪ್ರೀತಿಸಿ 2014ರಲ್ಲಿ ವಿವಾಹವಾಗಿದ್ದರು. ಮದುವೆಯಾದ ಎಂಟು ವರ್ಷಗಳ ನಂತರ 2023ರ ಜನವರಿ 31ರಂದು ದಂಪತಿಗೆ ಮೊದಲ ಪುತ್ರ ಮೀರ್ ಜನಿಸಿದ್ದ. ಈಗ ಎರಡನೇ ಮಗುವಿನ ಆಗಮನವಾಗಿದೆ.
ಚಿತ್ರರಂಗದಲ್ಲಿಯೂ ಅಟ್ಲಿ ಅವರಿಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಈಗ ಅವರು ‘ರಾಕಾ’ ಚಿತ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಮತ್ತು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ.

Continue Reading

ಸಿನಿಮಾ

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

Parvati Nair: ಐರ್ಲೆಂಡ್‌ನ ಇಂಡಿಯನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮಿಳು ಥ್ರಿಲ್ಲರ್ “ಊಣ್ ಪರವೈಲ್ ” ಹೆಸರು ಬಿಡುಗಡೆಯಾಗಿದೆ. ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

Parvati Nair to play dual role in suspense thriller un Paravail Tamil film

ಬೆಂಗಳೂರು: ಇತ್ತೀಚೆಗೆ ಐರ್ಲೆಂಡ್, ಡಬ್ಲಿನ್‌ನಲ್ಲಿ ನಡೆದ ಭಾರತೀಯ ಚಲನಚಿತ್ರೋತ್ಸವದಲ್ಲಿ ಬಹುನಿರೀಕ್ಷಿತ ತಮಿಳು ಥ್ರಿಲ್ಲರ್ ಮೂವಿ ” ಊಣ್ ಪರವೈಲ್ ” ಅಧಿಕೃತವಾಗಿ ಬಿಡುಗಡೆಯಾಯಿತು. ತಾಲ್ ಮತ್ತು ಕಹೋ ನಾ ಪ್ಯಾರ್ ಹೈ ಖ್ಯಾತಿಯ ಪ್ರಸಿದ್ಧ ಬಾಲಿವುಡ್ ಛಾಯಾಗ್ರಾಹಕ ಕಬೀರ್ ಲಾಲ್ ನಿರ್ದೇಶಿಸಿದ ಈ ಚಿತ್ರದಲ್ಲಿ ಪಾರ್ವತಿ ನಾಯರ್ (Parvati Nair) ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಅಸಾಧಾರಣ ನಟನಾ ಕೌಶಲ್ಯವನ್ನು ಪ್ರದ‌ರ್ಶಿಸಿದ್ದಾರೆ. ಊಣ್ ಪರವೈಲ್ ಚಿತ್ರವು ಸಸ್ಪೆನ್ಸ್, ರಹಸ್ಯ ಮತ್ತು ಭಾವನಾತ್ಮಕ ನಾಟಕದ ವಿಶಿಷ್ಟ ಮಿಶ್ರಣವಾಗಿದೆ ಎಂದು ಪಾರ್ವತಿ ನಾಯರ್ ಹೇಳಿದರು.

ಪಾರ್ವತಿ ನಾಯರ್‌ ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. “ಭವ್ಯ ಮತ್ತು ದಿವ್ಯಾ ದ್ವಿಪಾತ್ರಗಳನ್ನು ನಿರ್ವಹಿಸುವುದು ಸವಾಲಾಗಿತ್ತು. ಥ್ರಿಲ್ಲರ್‌ ಸಿನಿಮಾದಲ್ಲಿ ನನ್ನ ಅಭಿಯಾನವನ್ನು ಪ್ರದರ್ಶಿಸಲು ರೋಮಾಂಚನಗೊಂಡಿದ್ದೇನೆ ಎಂದಿದ್ದಾರೆ. ಇನ್ನು “ಊಣ್ ಪರವೈಲ್” ನಲ್ಲಿ ಪಾರ್ವತಿ ನಾಯರ್ ಅದ್ಭುತವಾಗಿ ನಟಿಸಿದ್ದಾರೆ. ಎರಡು ವಿಭಿನ್ನ ಪಾತ್ರಗಳಲ್ಲಿ ದಿವ್ಯಾ, ದೃಢಸಂಕಲ್ಪವುಳ್ಳ ಮತ್ತು ರಕ್ಷಿಸುವ ಸಹೋದರಿ ಮತ್ತು ಭವ್ಯಾ, ನಿಗೂಢ ಸಂದರ್ಭಗಳಲ್ಲಿ ದುರಂತ ಅಂತ್ಯವನ್ನು ಎದುರಿಸುವ ದೃಷ್ಟಿಹೀನ ಹುಡುಗಿಯಾಗಿದ್ದಾಳೆ. 

Parvati Nair to play dual role in suspense thriller un Paravail Tamil film

ದಿವ್ಯಾ ತನ್ನ ಸಹೋದರಿ ಭವ್ಯಳ ಸಾವಿನ ಸುತ್ತಲಿನ ಸತ್ಯವನ್ನು ಆಳವಾಗಿ ಪರಿಶೀಲಿಸಿದಾಗ, ಆಕೆಯ ಹಿಂದಿನ ರಹಸ್ಯಗಳು ಮತ್ತು ಸುಳ್ಳಿನ ಸಂಕೀರ್ಣ ಜಾಲವನ್ನು ಬಹಿರಂಗಪಡಿಸುತ್ತಾರೆ. ಊಣ್ ಪರವೈಲ್ ಮಹಿಳಾ ಪ್ರಧಾನ ಚಿತ್ರವಾಗಿದ್ದು ಅದು ಮಹಿಳೆಯರ ಶಕ್ತಿ ಮತ್ತು ಸ್ಥಿತಿಸ್ಥಾಪಕತ್ವದ ಮೇಲೆ ಬೆಳಕು ಚೆಲ್ಲುತ್ತದೆ” ಎಂದು ನಿರ್ದೇಶಕ ಕಬೀರ್ ಲಾಲ್ ಹೇಳಿದರು. “ಪಾರ್ವತಿ ನಾಯರ್ ಅವರ ಗಮನಾರ್ಹ ಅಭಿನಯವು ನಿರೂಪಣೆಗೆ ಆಳ ಮತ್ತು ಸೂಕ್ಷ್ಮತೆಯನ್ನು ತರುತ್ತದೆ. ಪ್ರೇಕ್ಷಕರನ್ನು ಕೊನೆಯವರೆಗೂ ಹಿಡಿದುಇಟ್ಟುಕೊಳ್ಳಲಿದೆ. ಐರ್ಲೆಂಡ್‌ನ ಭಾರತೀಯ ಚಲನಚಿತ್ರೋತ್ಸವದಲ್ಲಿ ಚಲನಚಿತ್ರದ ಬಿಡುಗಡೆಯು ಮತ್ತಷ್ಟು ಉತ್ಸಾಹದಿಂದ ಕೂಡಿತ್ತು. ಉದ್ಯಮದ ತಜ್ಞರು ಮತ್ತು ಚಲನಚಿತ್ರ ಉತ್ಸಾಹಿಗಳು ಚಲನಚಿತ್ರದ ವಿಶಿಷ್ಟತೆಯನ್ನು ಶ್ಲಾಘಿಸಿದರು. 

ಪಾರ್ವತಿ ನಾಯರ್ ಅವರ ಅದ್ವಿತೀಯ ಅಭಿನಯದ ಕಥಾಹಂದರ ಹೊಂದಿರುವ ಈ ಚಿತ್ರ ಭಾರತದಲ್ಲಿ ಡಿಸೆಂಬರ್ 2024 ರೊಳಗೆ ಬಿಡುಗಡೆಗೊಳ್ಳಲಿದೆ. ಊಣ್ ಪರವೈಲ್ ಬಗ್ಗೆ” ಊಣ್ ಪರವೈಲ್” ಅಜಯ್ ಕುಮಾರ್ ಸಿಂಗ್ ಮತ್ತು ರೇಖಾ ಸಿಂಗ್ ನಿರ್ಮಿಸಿದ ತಮಿಳು ಥ್ರಿಲ್ಲರ್ ಆಗಿದೆ. ಚಿತ್ರದ ಹಿಡಿತದ ನಿರೂಪಣೆ ಮತ್ತು ಪಾರ್ವತಿ ನಾಯರ್ ಅವರ ಅಸಾಧಾರಣ ಅಭಿನಯವು ಪ್ರೇಕ್ಷಕರನ್ನು ಅವರ ಆಸನಗಳ ತುದಿಯಲ್ಲಿ ಇರಿಸುವ ಭರವಸೆ ನೀಡುತ್ತದೆ.

Continue Reading

ಸಿನಿಮಾ

Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರು; ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು

Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಧ್ಯರಾತ್ರಿಯೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.

VISTARANEWS.COM


on

Superstar Rajinikanth is unwell Family members admitted to hospital in the middle of the night

ಸೂಪರ್‌ ಸ್ಟಾರ್‌ ರಜನಿಕಾಂತ್ (Actor Rajinikanth) ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಜನಿಕಾಂತ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ (ಸೆ.30) ಮಧ್ಯರಾತ್ರಿ ತಲೈವಾ ರಜನಿಕಾತ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೈದ್ಯ ಡಾ. ಸಾಯಿ ಸತೀಶ್ ಅವರು ರಜನಿಕಾಂತ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ರಜನಿಕಾಂತ್​ಗೆ ಕಾರ್ಡಿಯಾಕ್​ ಕ್ಯಾಥ್​ ಲ್ಯಾಬ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್‌ ಅಭಿನಯಿಸಿರುವ ವೆಟ್ಟೈಯನ್​​​ ಸಿನಿಮಾದ ಆಡಿಯೋ ಲಾಂಚ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ರಜನಿಕಾಂತ್‌ಗೆ 73 ವರ್ಷ ವಯಸ್ಸು ಆಗಿದೆ. ಇಂದು ಸಂಜೆ ಅಥವಾ ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Mallikarjun Kharge: ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಅಸ್ವಸ್ಥಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ

ಕೂಲಿ ಚಿತ್ರದಲ್ಲಿ ಸೂಪರ್‌ ಸ್ಟಾರ್‌ ತಲೈವಾ ಜತೆಗೆ ರಿಯಲ್ ಸ್ಟಾರ್

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಹೊಸ ಸಿನಿಮಾ ಕೂಲಿಯಲ್ಲಿ ಕನ್ನಡದ ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯಿಸಲಿದ್ದಾರೆ. ಈ ಕುರಿತು ಉಪೇಂದ್ರ ಅವರು ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ.

Real Star Upendra Acting with Superstar Rajinikanth Coolie Movie

ಕೂಲಿ ಸಿನಿಮಾವು ತಮಿಳು, ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರಲಿದೆ. ಲೋಕೇಶ್ ಕನಕರಾಜ್‌ ಡೈರೆಕ್ಷನ್‌ನಲ್ಲಿ ಕೂಲಿ ಸಿನಿಮಾ ಮೂಡಿಬರುತ್ತಿದೆ.

Real Star Upendra Acting with Superstar Rajinikanth Coolie Movie

ತಲೈವಾ ರಜನಿಕಾಂತ್‌ ಅವರ 171ನೇ ಸಿನಿಮಾ ಕೂಲಿ ಆಗಿದೆ. ಜೈಲರ್‌ನಂತಹ ಬ್ಲಾಕ್ ಬಸ್ಟರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದ ಸನ್ ಪಿಕ್ಚರ್ಸ್ ಕೂಲಿಯನ್ನು ನಿರ್ಮಿಸಲಿದೆ.

Real Star Upendra Acting with Superstar Rajinikanth Coolie Movie

ರಜನಿಕಾಂತ್‌ ಮತ್ತು ಲೋಕೇಶ್ ಕನಕರಾಜ್‌ ಕಾಂಬಿನೇಷನ್‌ನ ‘ಕೂಲಿ’ ಸಿನಿಮಾದಲ್ಲಿ ಕನ್ನಡದ ಸೂಪರ್‌ ಸ್ಟಾರ್‌ ಉಪೇಂದ್ರ ನಟಿಸಲಿದ್ದಾರೆ.

ಈ ಕುರಿತು ಉಪೇಂದ್ರ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಕೂಲಿ ಸಿನಿಮಾದ ಪೋಸ್ಟರ್‌ ಹಾಕಿ ತಿಳಿಸಿದ್ದಾರೆ. ತಲೈವಾ ರಜಿನಿಕಾಂತ್‌ ನಟನೆಯ ಕೂಲಿ ಚಿತ್ರದಲ್ಲಿ ಉಪೇಂದ್ರ ಕಲೀಷ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ.

Real Star Upendra Acting with Superstar Rajinikanth Coolie Movie

ನಿಮ್ಮ ಆಶೀರ್ವಾದದಿಂದ ನನ್ನ ಗುರು ನನ್ನ ಸೂಪರ್‌ ಸ್ಟಾರ್‌ ರಜಿನಿ ಸರ್‌ ಜತೆಗೆ ಕೂಲಿ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಫೀಲಿಂಗ್‌‌ ಬ್ಲೆಸ್ಡ್ ಅಂತ ಲೋಕೇಶ್‌ ಕನಕರಾಜ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Upendra : ಕೂಲಿ ಚಿತ್ರದಲ್ಲಿ ಸೂಪರ್‌ ಸ್ಟಾರ್‌ ತಲೈವಾ ಜತೆಗೆ ರಿಯಲ್ ಸ್ಟಾರ್; ಕಲೀಷ ಪಾತ್ರದಲ್ಲಿ ಮಿಂಚಲಿರುವ ಉಪೇಂದ್ರ

Actor Upendra : ಸೂಪರ್‌ ಸ್ಟಾರ್‌ ತಲೈವಾ ರಜಿನಿಕಾಂತ್‌ ಜತೆಗೆ ರಿಯಲ್ ಸ್ಟಾರ್ ಉಪೇಂದ್ರ ಮಿಂಚಲಿದ್ದಾರೆ. ಕೂಲಿ ಚಿತ್ರದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Real Star Upendra Acting with Superstar Rajinikanth Coolie Movie

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಹೊಸ ಸಿನಿಮಾ ಕೂಲಿಯಲ್ಲಿ ಕನ್ನಡದ ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯಿಸಲಿದ್ದಾರೆ. ಈ ಕುರಿತು ಉಪೇಂದ್ರ ಅವರು ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ.

Real Star Upendra Acting with Superstar Rajinikanth Coolie Movie

ಕೂಲಿ ಸಿನಿಮಾವು ತಮಿಳು, ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರಲಿದೆ. ಲೋಕೇಶ್ ಕನಕರಾಜ್‌ ಡೈರೆಕ್ಷನ್‌ನಲ್ಲಿ ಕೂಲಿ ಸಿನಿಮಾ ಮೂಡಿಬರುತ್ತಿದೆ.

Real Star Upendra Acting with Superstar Rajinikanth Coolie Movie

ತಲೈವಾ ರಜನಿಕಾಂತ್‌ ಅವರ 171ನೇ ಸಿನಿಮಾ ಕೂಲಿ ಆಗಿದೆ. ಜೈಲರ್‌ನಂತಹ ಬ್ಲಾಕ್ ಬಸ್ಟರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದ ಸನ್ ಪಿಕ್ಚರ್ಸ್ ಕೂಲಿಯನ್ನು ನಿರ್ಮಿಸಲಿದೆ.

Real Star Upendra Acting with Superstar Rajinikanth Coolie Movie

ರಜನಿಕಾಂತ್‌ ಮತ್ತು ಲೋಕೇಶ್ ಕನಕರಾಜ್‌ ಕಾಂಬಿನೇಷನ್‌ನ ‘ಕೂಲಿ’ ಸಿನಿಮಾದಲ್ಲಿ ಕನ್ನಡದ ಸೂಪರ್‌ ಸ್ಟಾರ್‌ ಉಪೇಂದ್ರ ನಟಿಸಲಿದ್ದಾರೆ.

ಈ ಕುರಿತು ಉಪೇಂದ್ರ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಕೂಲಿ ಸಿನಿಮಾದ ಪೋಸ್ಟರ್‌ ಹಾಕಿ ತಿಳಿಸಿದ್ದಾರೆ. ತಲೈವಾ ರಜಿನಿಕಾಂತ್‌ ನಟನೆಯ ಕೂಲಿ ಚಿತ್ರದಲ್ಲಿ ಉಪೇಂದ್ರ ಕಲೀಷ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ.

Real Star Upendra Acting with Superstar Rajinikanth Coolie Movie

ನಿಮ್ಮ ಆಶೀರ್ವಾದದಿಂದ ನನ್ನ ಗುರು ನನ್ನ ಸೂಪರ್‌ ಸ್ಟಾರ್‌ ರಜಿನಿ ಸರ್‌ ಜತೆಗೆ ಕೂಲಿ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಫೀಲಿಂಗ್‌‌ ಬ್ಲೆಸ್ಡ್ ಅಂತ ಲೋಕೇಶ್‌ ಕನಕರಾಜ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Continue Reading
Advertisement
Latest30 seconds ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest1 hour ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest18 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest18 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest19 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking19 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest21 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest22 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest23 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

Rakshit Shetty Richard Anthony Produce By Hombale
ಅವಿಭಾಗೀಕೃತ23 hours ago

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌