Site icon Vistara News

Actor Dhanush: ಧನುಷ್ ಎರಡನೇ ನಿರ್ದೇಶನದ ಸಿನಿಮಾಗೆ ಟೈಟಲ್‌ ಫಿಕ್ಸ್‌; ಫಸ್ಟ್ ಲುಕ್ ಔಟ್‌!

Dhanush D50 is titled Raayan

ಬೆಂಗಳೂರು: ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ‘ಡಿ 50’ಗೆ ಟೈಟಲ್‌ ಫಿಕ್ಸ್‌ ಆಗಿದೆ. ಈ ಸಿನಿಮಾಗೆ ‘ರಾಯನ್‌’ (Raayan) ಎಂದು ಶೀರ್ಷಿಕೆ ಇಟ್ಟಿದ್ದಾರೆ. ಫೆಬ್ರವರಿ 19ರ ಸೋಮವಾರದಂದು ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರದ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ಪೋಸ್ಟರ್ ಮತ್ತು ಚಿತ್ರದ ಶೀರ್ಷಿಕೆಯನ್ನು ಹಂಚಿಕೊಂಡಿದೆ. ‘ರಾಯನ್‌’ ತಮಿಳು, ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಸನ್ ಪಿಕ್ಚರ್ಸ್‌ನ ಎಕ್ಸ್ ಹ್ಯಾಂಡಲ್‌ನಲ್ಲಿ, “D50ರಾಯನ್. ಧನುಷ್‌ ನಟನೆ ನಿರ್ದೇಶನ. ತಮಿಳು, ತೆಲುಗು ಮತ್ತು ಹಿಂದಿ ನಲ್ಲಿ ಬಿಡುಗಡೆಯಾಗುತ್ತಿದೆ.” ಎಂದು ಬರೆದುಕೊಂಡಿದೆ. ಪೋಸ್ಟರ್‌ನಲ್ಲಿ, ಧನುಷ್ ಫುಡ್ ಟ್ರಕ್‌ನ ಮುಂದೆ ನಿಂತಿರುವುದನ್ನು ಕಾಣಬಹುದು.

ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದಾರೆ. ಇನ್ನು ಸಿನಿಮಾದ ನಾಯಕಿ ಹಾಗೂ ಇನ್ನುಳಿದ ಪಾತ್ರವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ಅಪ್‌ಡೇಟ್‌ ನೀಡುವುದಾಗಿ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ.,

ಧನುಷ್‌ ಕೊನೆಯದಾಗಿ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಕಾಣಿಸಿಕೊಂಡರು. ಅರುಣ್ ಮಾಥೇಶ್ವರನ್ ನಿರ್ದೇಶನದ ಈ ಚಿತ್ರದಲ್ಲಿ ಶಿವ ರಾಜ್‌ಕುಮಾರ್, ಪ್ರಿಯಾಂಕಾ ಮೋಹನ್, ನಿವೇದಿತಾ ಸತೀಶ್, ಜಾನ್ ಕೊಕ್ಕೆನ್ ಮತ್ತು ಮೂರ್ ಪ್ರಮುಖ ಪಾತ್ರಗಳಲ್ಲಿದ್ದರು.

ಇದನ್ನೂ ಓದಿ: Actor Dhanush: ಭಿಕ್ಷುಕನ ಅವತಾರದಲ್ಲಿ ʻನಟ ಧನುಷ್‌ʼ; ತಿರುಪತಿಯಲ್ಲಿ ಭಕ್ತರ ಪರದಾಟ!

ಸೂಪರ್ ಸ್ಟಾರ್ ಧನುಷ್ (Actor Dhanush) ಅವರು ಇತ್ತೀಚೆಗೆ ತಿರುಪತಿಗೆ ಭೇಟಿ ನೀಡಿದ್ದರು. ನಿರ್ದೇಶಕ ಶೇಖರ್ ಕಮ್ಮುಲ ಜತೆ ಧನುಷ್‌ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘D 51’ ಎಂದು ಶೀರ್ಷಿಕೆ ಇಡಲಾಗಿದೆ.. ಧನುಷ್ ಅವರ ಚಿತ್ರದಲ್ಲಿ ನಾಗಾರ್ಜುನ ಮತ್ತು ಶೇಖರ್ ಕೂಡ ನಟಿಸಿದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ.ಶ್ರೀವೆಂಕಟೇಶ್ವರ ಸಿನಿಮಾಸ್​ ಮತ್ತು ಒಮಿಗೋಸ್​ ಕ್ರಿಯೇಷನ್ಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ. ಧನುಷ್‌​​ ಮತ್ತು ರಶ್ಮಿಕಾ ಮಂದಣ್ಣ ಅವರನ್ನು ಹೊರತುಪಡಿಸಿ ಬೇರೆ ಯಾವೆಲ್ಲ ಕಲಾವಿದರು ನಟಿಸುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ತಾಂತ್ರಿಕ ವರ್ಗದ ಬಗ್ಗೆಯೂ ಹೆಚ್ಚಿನ ಮಾಹಿತಿ ಹೊರಬರುವುದು ಬಾಕಿ ಇದೆ.

Exit mobile version