Site icon Vistara News

Indian 2 box office: ನೆಲಕಚ್ಚಿದ ‘ಇಂಡಿಯನ್ 2’; ಫ್ಯಾನ್ಸ್‌ಗೆ ಭಾರಿ ನಿರಾಸೆ,  ಮೊದಲ ದಿನದ ಗಳಿಕೆ ಎಷ್ಟು?

Indian 2 box office collection Day Kamal Haasan’s critically panned

ಬೆಂಗಳೂರು: ನಟ ಕಮಲ್ ಹಾಸನ್ ಅವರ ಇತ್ತೀಚಿನ ಚಿತ್ರ, ಇಂಡಿಯನ್‌ 2 (Indian 2 box office) ಅಂತಿಮವಾಗಿ ಶುಕ್ರವಾರ (ಜು. 12) ಭಾರತದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ‘ಇಂಡಿಯನ್ 2’ ಸಿನಿಮಾ ಮೇಲೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ನಿರೀಕ್ಷೆಗಳನ್ನು ಸಿನಿಮಾ ಹುಸಿ ಮಾಡಿದೆ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ನೆಗೆಟಿವ್‌ ಪ್ರತಿಕ್ರಿಯೆ ಪಡೆದುಕೊಂಡಿದೆ. ಇಂಡಿಯನ್ 2 ಬಿಡುಗಡೆಯಾದ ಮೊದಲ ದಿನದಲ್ಲಿ ಭಾರತದಾದ್ಯಂತ 26 ಕೋಟಿ ರೂ. ಗಳಿಸಿದೆ. ಅದರಲ್ಲಿ 17 ಕೋಟಿ ರೂ. ತಮಿಳು ಆವೃತ್ತಿಯಿಂದ ಬಂದಿದೆ. 1.1 ಕೋಟಿ ರೂ. ಹಿಂದಿ ಆವೃತ್ತಿಯಿಂದ ಮತ್ತು 7.9 ಕೋಟಿ ರೂ. ತೆಲುಗು ಆವೃತ್ತಿಯಿಂದ ಬಂದಿದೆ.

ಇಂಡಿಯನ್ 2 ಸಿನಿಮಾ ಕಮಲ್ ಹಾಸನ್ ಅವರ ಕೊನೆಯ ಚಿತ್ರ ʻವಿಕ್ರಮ್ʼ ಕ್ಕಿಂತ ಕಡಿಮೆ ಗಳಿಕೆ ಕಂಡಿದೆ. 2022 ರಲ್ಲಿ ವಿಕ್ರಮ್‌ ಸಿನಿಮಾ ತನ್ನ ಆರಂಭಿಕ ದಿನದಂದು 28 ಕೋಟಿ ರೂ. ಗಳಿಕೆ ಕಂಡಿತ್ತು. ವಿಕ್ರಮ್ ಸಕಾರಾತ್ಮಕ ವಿಮರ್ಶೆಗಳನ್ನು ಪಡೆದಿತ್ತು. ವಿಶ್ವಾದ್ಯಂತ 430 ಕೋಟಿ ರೂ. ಗಳಿಕೆ ಕಂಡಿತ್ತು. ಅದಕ್ಕೂ ಮೊದಲು, ಕಮಲ್ ಹಾಸನ್ ಕೊನೆಯದಾಗಿ 2018 ರ ವಿಶ್ವರೂಪಂ ಚಿತ್ರದಲ್ಲಿ ನಟಿಸಿದ್ದರು. ಇಂಡಿಯನ್ 2’ ಸಿನಿಮಾಗೆ ಮೊದಲ ದಿನ ಕೇವಲ 26 ಕೋಟಿ ರೂಪಾಯಿ ಗಳಿಕೆ ಆಗಿದೆ. ಕಮಲ್ ಹಾಸನ್ ಅವರಂಥ ಸಿನಿಮಾಗೆ ಇದು ತುಂಬಾನೇ ಸಣ್ಣ ಮೊತ್ತ. 

ಕೆಲವೊಮ್ಮೆ ಸಿನಿಮಾ ಉತ್ತಮವಾಗಿ ಇರದೇ ಇದ್ದರೂ ಹೀರೋಗಳ ಪಾತ್ರದಿಂದ ಸಿನಿಮಾ ಇಷ್ಟ ಆಗುತ್ತದೆ. ಆದರೆ, ‘ಇಂಡಿಯನ್ 2’ ಚಿತ್ರದಲ್ಲಿ ಕಮಲ್ ಹಾಸನ್ ವಿವಿಧ ಗೆಟಪ್​ನಲ್ಲಿ ಬರೋದಷ್ಟೇ ಹೊರತು ಮತ್ತಿನ್ನೇನೂ ಇಲ್ಲ ಎಂದು ಫ್ಯಾನ್ಸ್ ಮಾತನಾಡಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಊರ್ಮಿಳಾ ಮಾತೋಂಡ್ಕರ್ ಮತ್ತು ಮನೀಶಾ ಕೊಯಿರಾಲಾ ಕೂಡ ನಟಿಸಿದ್ದಾರೆ.

ಇದನ್ನೂ ಓದಿ: Indian 2: ಇಂಡಿಯನ್ 2ನಲ್ಲಿ ಸೆನ್ಸಾರ್ ಮಂಡಳಿ ಕೇಳಿದೆ ಆ ಐದು ಬದಲಾವಣೆ!

ಸ್ಯಾಕ್‌ನಿಲ್ಕ್ ಪ್ರಕಾರ, ಇಂಡಿಯನ್ 2 ತಮಿಳು ಆವೃತ್ತಿಗೆ ಒಟ್ಟಾರೆ 55% ಆಕ್ಯುಪೆನ್ಸಿಯನ್ನು ಹೊಂದಿತ್ತು, ಹೆಚ್ಚು ರಾತ್ರಿ ಪ್ರದರ್ಶನಗಳಿಂದ ಬಂದಿದೆ. ಚೆನ್ನೈ ಶೇ 68ರಷ್ಟು , ಹಿಂದಿ ಶೇ 11 ರಷ್ಟು ಆಕ್ಯುಪೆನ್ಸಿ , ಮುಂಬೈ ಮತ್ತು ದೆಹಲಿ-ಎನ್‌ಸಿಆರ್ ಕ್ರಮವಾಗಿ ಶೇ. 12.5ರಷ್ಟು ​​ಮತ್ತು ಶೇ. 8ರಷ್ಟು ಆಕ್ಯುಪೆನ್ಸಿ ಇತ್ತು. ಚಿತ್ರದ ತೆಲುಗು ಆವೃತ್ತಿಯು ಉತ್ತಮ ಪ್ರದರ್ಶನ ನೀಡಿದೆ. ಶೇ. 58ರಷ್ಟು ಆಕ್ಯುಪೆನ್ಸಿ ಇತ್ತು ಎನ್ನಲಾಗಿದೆ. ಕಮಲ್ ಹಾಸನ್ ಇತ್ತೀಚೆಗೆ ಕಲ್ಕಿ 2898 ಎಡಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ಇದು ಜಾಗತಿಕವಾಗಿ 1000 ಕೋಟಿ ರೂ. ಕಲೆಕ್ಷನ್‌ ಮಾಡಿದೆ.

ಚಿತ್ರದಲ್ಲಿ ರಕುಲ್ ಪ್ರೀತ್ ಸಿಂಗ್, ಕಾಜಲ್ ಅಗರ್ವಾಲ್, ಎಸ್.ಜೆ.ಸೂರ್ಯ, ಪ್ರಿಯಾ ಭವಾನಿ ಶಂಕರ್, ನೆಡುಮುಡಿ ವೇಣು, ವಿವೇಕ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ಸಮುದ್ರಕನಿ, ಬಾಬಿ ಸಿಂಹ, ಬ್ರಹ್ಮಾನಂದಂ, ವೆನ್ನೆಲ ಕಿಶೋರ್, ಜಾಕಿರ್ ಹುಸೇನ್, ಗುರು ಸೋಮಸುಂದರಾಮ್, ದೆಹಲಿ, ಗುರು ಸೋಮಸುಂದರಾಮ್ ಮಿಶ್ರಾ, , ಜಯಪ್ರಕಾಶ್, ಮನೋಬಾಲಾ, ಮತ್ತು ಅಶ್ವಿನಿ ತಂಗರಾಜ್ ಇದ್ದಾರೆ.

Exit mobile version