ಬೆಂಗಳೂರು: ನಟಿ ಜ್ಯೋತಿಕಾ (Jyotika Trolled) ಅವರು ಹಿಂದಿಯ ‘ಶ್ರೀಕಾಂತ್’ ಹೆಸರಿನ ( Srikanth with Rajkummar Rao) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಆನ್ಲೈನ್ನಲ್ಲಿ ವೋಟ್ ಮಾಡಿದ್ದೇನೆ ಎಂದು ಹೇಳುವ ಮೂಲಕ ಜ್ಯೋತಿಕಾ ಟ್ರೋಲ್ ಆಗಿದ್ದಾರೆ. ಕಳೆದ ತಿಂಗಳು, ನಟ ಸೂರ್ಯ ಚೆನ್ನೈನ ಮತಗಟ್ಟೆಯಲ್ಲಿ ಮತದಾನ ಮಾಡಲು ಆಗಮಿಸಿದ್ದರು. ಆದರೆ, ಅವರ ಪತ್ನಿ ಜ್ಯೋತಿಕಾ ಏಕೆ ಮತ ಹಾಕಲಿಲ್ಲ ಎಂದು ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದರು. ಶ್ರೀಕಾಂತ್ ಸಿನಿಮಾ ಪ್ರಚಾರ ಕಾರ್ಯಕ್ರಮವೊಂದರಲ್ಲಿ, ನಟಿ ಏಕೆ ಮತದಾನ ಮಾಡಲಿಲ್ಲ ಎಂಬ ಪ್ರಶ್ನೆ ಎದುರಾಗಿದೆ. ʻಆನ್ಲೈನ್ನಲ್ಲಿ ವೋಟ್ ಮಾಡಿದ್ದೇನೆʼ ಎಂದು ನಟಿ ಉತ್ತರ ನೀಡಿದ್ದಾರೆ. ಹೀಗಾಗಿ ನಟಿ ಜ್ಯೋತಿಕಾ ಟ್ರೋಲ್ ಆಗಿದ್ದಾರೆ.
ಈವೆಂಟ್‌ನ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವರದಿಗಾರರೊಬ್ಬರು ಜ್ಯೋತಿಕಾ ಅವರಿಗೆ ಏಕೆ ವೋಟ್ ಮಾಡಲು ಬರಲಿಲ್ಲ? ಎಂದು ಕೇಳಿದ್ದರು. ಆಗ ನಟಿ ʻʻನಾನು ಪ್ರತಿ ವರ್ಷ ವೋಟ್ ಮಾಡುತ್ತೇನೆʼʼಎಂದಿದ್ದಾರೆ. ನಂತರ ಮತದಾನ ಪ್ರತಿ ವರ್ಷ ನಡೆಯಲ್ಲ ಎಂದು ಸಂದರ್ಶಕರು ಹೇಳಿದರು.ಇದನ್ನು ಜ್ಯೋತಿಕಾ ಒಪ್ಪಿಕೊಂಡಿದ್ದಾರೆ.
ಯಾಕೆ ಮತ ಹಾಕಲಿಲ್ಲ ಎಂಬುದನ್ನು ವಿವರಿಸಿದ ಜ್ಯೋತಿಕಾ ʻʻಕೆಲವೊಮ್ಮೆ ನಾವು ನಮ್ಮ ರಾಜ್ಯದಲ್ಲಿ ಇಲ್ಲದೆ ಬೇರೆ ರಾಜ್ಯಕ್ಕೆ ಹೋಗಿರಬಹುದು. ನಾವು ಅನಾರೋಗ್ಯಕ್ಕೆ ಒಳಗಾಗಬಹುದು, ಇದು ಖಾಸಗಿ ವಿಷಯವಾಗಿದೆʼʼಎಂದಿದ್ದಾರೆ ನಟಿ.
ಇದನ್ನೂ ಓದಿ: Jyotika and Suriya: ಸೂರ್ಯ ಜತೆ ಜಿಮ್‌ನಲ್ಲಿ ನಟಿ ಜ್ಯೋತಿಕಾ ಹೆವಿ ವರ್ಕೌಟ್!
ಇದೀಗ ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಟಿಯನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ. ಒಬ್ಬರು ʻʻನಟಿಯ ಆರೋಗ್ಯ ಹದೆಗಟ್ಟಿದ್ದರಿಂದ ವೋಟ್ ಹಾಕದೇ ಇರಬಹುದುʼʼ ಎಂದು ಕಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ʻʻಇದೇನು ಬಿಗ್ ಬಾಸ್‌ನಲ್ಲಿ ಮತ ಚಲಾಯಿಸಿದಂತೆಯಾ?ʼʼಎಂದು ಕಮೆಂಟ್ ಮಾಡಿದ್ದಾರೆ. `ಜ್ಯೋತಿಕಾ ರೀತಿ ಆನ್‌ಲೈನ್ ವೋಟ್ ಮಾಡೋದು ಹೇಗೆ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.‘ಸಮಾಜ ಸುಧಾರಕಿ ಜ್ಯೋತಿಕಾ, ಅಶಿಕ್ಷಿತರಿಗೂ ಗೊತ್ತು ಚುನಾವಣೆ ಪ್ರತಿ ವರ್ಷಕ್ಕೆ ಅಲ್ಲ, 5 ವರ್ಷಕ್ಕೊಮ್ಮೆ ಎಂದು. ನಾನು ಭಾರತದಲ್ಲಿ ಈವರೆಗೆ ಆನ್‌ಲೈನ್ ಮತದಾನದ ಬಗ್ಗೆ ಕೇಳಿಲ್ಲ’ ಎಂದಿದ್ದಾರೆ ಅವರು. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.
ಜ್ಯೋತಿಕಾ ಕೊನೆಯದಾಗಿ ʻಶೈತಾನ್ʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.ಈ ಚಿತ್ರದಲ್ಲಿ ಆರ್ ಮಾಧವನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಹಿಂದಿಯ ‘ಶ್ರೀಕಾಂತ್’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ತುಶಾರ್ ಹಿರಾನಂದನಿ ಇದನ್ನು ನಿರ್ದೇಶನ ಮಾಡಿದ್ದು, ರಾಜ್ಕುಮಾರ್ ರಾವ್, ಅಲಾಯ ಎಫ್, ಶರದ್ ಕೇಲ್ಕರ್ ಈ ಚಿತ್ರದಲ್ಲಿ ನಟಿಸಿದ್ದಾರೆ.