ಬೆಂಗಳೂರು: ಈಗಾಗಲೇ ಸೂರ್ಯ ಅಭಿನಯದ ಕಂಗುವ ಸಿನಿಮಾ (Kanguva vs Alia Bhatt) ರಿಲೀಸ್ ಡೇಟ್ ಅನೌನ್ಸ್ ಆಗಿದೆ. “ಕಂಗುವ” ಪ್ರೇಕ್ಷಕರಿಗೆ ಹೆಚ್ಚು ನಿರೀಕ್ಷಿತ ಚಿತ್ರವಾಗಿದೆ. ಶಿವ ನಿರ್ದೇಶನದ ಈ ಚಿತ್ರದಲ್ಲಿ ಸೂಪರ್‌ಸ್ಟಾರ್ ಸೂರ್ಯ ಸಂಪೂರ್ಣವಾಗಿ (Kanguva Movie) ಹೊಸ ಅವತಾರದಲ್ಲಿ ನಟಿಸಿದ್ದಾರೆ. ಮೂರು ಅವತಾರದಲ್ಲಿ ಸೂರು ಮಿಂಚುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಸೂರ್ಯ ಅವರ ಪ್ರತಿಯೊಂದು ಪಾತ್ರವು ಹಿಂದೆಂದೂ ನೋಡಿರದ ವಿಭಿನ್ನ ಲುಕ್ ಇರಲಿದೆ ಎಂದಿದ್ದಾರೆ.
ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ.
ಮೂಲಗಳ ಪ್ರಕಾರ ಅಮೆಜಾನ್ ಪ್ರೈಂ ಸಂಸ್ಥೆ ಬರೋಬ್ಬರಿ 80 ಕೋಟಿ ರೂ. ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.
ಕಂಗುವ ಈ ವರ್ಷದ ಅತಿ ದೊಡ್ಡ ಮತ್ತು ದುಬಾರಿ ಚಿತ್ರ. ಅಂದಾಜು 350 ಕೋಟಿ ಬಜೆಟ್‌ನೊಂದಿಗೆ, ಇದು ಪುಷ್ಪ, ಸಿಂಗಂ ಮತ್ತು ಇತರ ಹಲವಾರು ದೊಡ್ಡ ಚಿತ್ರಗಳಿಗಿಂತ ದೊಡ್ಡ ಬಜೆಟ್ ಸಿನಿಮಾ ಅದಾಗಿದೆ. ಇದಲ್ಲದೆ, ಚಿತ್ರವನ್ನು ಏಳು ವಿವಿಧ ದೇಶಗಳಲ್ಲಿ ಚಿತ್ರೀಕರಿಸಲಾಗಿದೆ. 10,000 ಕ್ಕೂ ಹೆಚ್ಚು ಜನರನ್ನು ಒಳಗೊಂಡಿರುವ ಅತ್ಯಂತ ದೊಡ್ಡ ಬಜೆಟ್ ಸಿನಿಮಾ.
ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಹಲ್ಲೆ ದೃಶ್ಯ ಐಫೋನ್‌ನಲ್ಲಿ ರೆಕಾರ್ಡ್; ಸಿನಿಮಾ ಶೈಲಿಯಲ್ಲಿ ನಡೆದಿತ್ತು ಕೃತ್ಯ!
ವೆಟ್ರಿ ಪಳನಿಸಾಮಿ ಅವರ ಅದ್ಭುತ ಛಾಯಾಗ್ರಹಣ ಮತ್ತು ಗಾಯಕ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಅವರ ಸಂಗೀತ ಸಂಯೋಜನೆಯಲ್ಲಿ ಈ ಚಿತ್ರವು ಹೆಚ್ಚು ಪ್ರದರ್ಶನವನ್ನು ಕಾಣುವ ನಿರೀಕ್ಷೆಯಿದೆ.
ಸ್ಟುಡಿಯೋ ಗ್ರೀನ್ ಬೆಂಬಲದಿಂದ ನಿರ್ದೇಶಕ ಶಿವ ಅವರ ವಿಶಿಷ್ಟ ಕಲ್ಪನೆಗೆ ಜೀವ ತುಂಬಿದೆ. ಹಾಲಿವುಡ್ ಶೈಲಿಯಲ್ಲಿ ಮೂಡಿ ಬಂದಿರುವ ಚಿತ್ರ ಸಿನಿರಸಿಕರ ಮನ ಗೆಲ್ಲುವುದರಲ್ಲಿ ಸಂದೇಹವಿಲ್ಲ.
ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಪ್ರಮುಖರಾಗಿರುವ ಸ್ಟುಡಿಯೋ ಗ್ರೀನ್ ಮಾಲಕ ಕೆ.ಇ. ಜ್ಞಾನವೇಲ್ ರಾಜಾ ಅವರು ಕಳೆದ 16 ವರ್ಷಗಳಲ್ಲಿ ಸತತವಾಗಿ “ಸಿಂಗಂ” ಸರಣಿ, “ಪರುತಿ ವೀರನ್,” “ಸಿರುತೈ,” “ಕೊಂಬನ್,” “ನಾನ್ ಮಹನ್ ಅಲ್ಲಾ,” “ಮದ್ರಾಸ್,” “ಟೆಡ್ಡಿ,” ಮತ್ತು ತೀರಾ ಇತ್ತೀಚೆಗೆ ಬ್ಲಾಕ್ಬಸ್ಟರ್ ಹಿಟ್ ಗಳನ್ನು ನೀಡಿದ್ದಾರೆ.
“ಪಾತು ತಾಲಾ.” ಅವರು “ಬಾಹುಬಲಿ: ದಿ ಬಿಗಿನಿಂಗ್” ನಂತಹ ಪ್ರಮುಖ ಬ್ಲಾಕ್‌ಬಸ್ಟರ್‌ಗಳನ್ನು ವಿತರಿಸಿದ ಕಾರಣ ಅವರಿಂದಲೇ ಚಿತ್ರ ಬಿಡುಗಡೆ ಮಾಡಿಸಬೇಕು ಎಂದು ಹಲವಾರು ಮಂದಿ ನಿರ್ದೇಶಕರು ಕಾಯುವಂತಾಗಿದೆ.
ಸ್ಟುಡಿಯೋ ಗ್ರೀನ್ ಕಂಗುವಕ್ಕಾಗಿ ವಿಶ್ವದಾದ್ಯಂತ ಇರುವ ಪ್ರಮುಖ ವಿತರಕರೊಂದಿಗೆ ಕೈಜೋಡಿಸಿದೆ.