ಬೆಂಗಳೂರು: ಕಾಲಿವುಡ್ ನಟ ಸೂರ್ಯ (Actor Suriya) ನಟನೆಯ ʻಕಂಗುವʼ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಅಕ್ಟೋಬರ್ 10ರಂದು ವಿಶ್ವಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಇದೇ ಸಂದರ್ಭದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಮಾರ್ಟಿನ್’ ಸಿನಿಮಾ (Kanguva Release Date) ಬಿಡುಗಡೆ ಆಗುತ್ತಿದೆ. ತಮಿಳಿನ ಜತೆಗೆ ಕನ್ನಡ, ತೆಲುಗು, ಹಿಂದಿ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗುತ್ತಿದೆ. ಹೀಗಾಗಿ, ಕನ್ನಡದ ‘ಮಾರ್ಟಿನ್’ ಜೊತೆ ಈ ಚಿತ್ರ ಕ್ಲ್ಯಾಶ್ ಆಗಲಿದೆ.
ನಟ ಸೂರ್ಯ ಅವರ ಬಹು ನಿರೀಕ್ಷಿತ ಫ್ಯಾಂಟಸಿ ಚಿತ್ರ ಕಂಗುವ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ.
ಮೂಲಗಳ ಪ್ರಕಾರ ಅಮೆಜಾನ್ ಪ್ರೈಂ ಸಂಸ್ಥೆ ಬರೋಬ್ಬರಿ 80 ಕೋಟಿ ರೂ. ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.
ಈ ಚಿತ್ರವನ್ನು ಸಿರುತೈ ಶಿವ ನಿರ್ದೇಶಿಸಿದ್ದಾರೆ. ರಜನಿಕಾಂತ್ ನಾಯಕತ್ವದ ಆ್ಯಕ್ಷನ್ ಡ್ರಾಮಾ ʻಅಣ್ಣಾತ್ತೆʼ ಸಿನಿಮಾ ಬಳಿಕ ಈ ಸಿನಿಮಾ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಸಿನಿಮಾವನ್ನು 2ಡಿ ಮತ್ತು 3ಡಿಯಲ್ಲಿ ಚಿತ್ರೀಕರಿಸಲಾಗುತ್ತಿದೆ. ಸೂರ್ಯ 42 ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿದ್ದಾರೆ. ಈ ಚಿತ್ರವನ್ನು ಕೆ.ಇ.ಜ್ಞಾನವೇಲ್ ರಾಜಾ ಅವರ ಸ್ಟುಡಿಯೋ ಗ್ರೀನ್, ಯುವಿ ಕ್ರಿಯೇಷನ್ಸ್ ಸಹಯೋಗದಲ್ಲಿ ನಿರ್ಮಿಸಲಾಗಿದೆ.
ಅಕ್ಟೋಬರ್ 11 ಕ್ಕೆ ಮಾರ್ಟಿನ್ ಸಿನಿಮಾ ಬಿಡುಗಡೆ
ಅಕ್ಟೋಬರ್ 11 ಕ್ಕೆ ಮಾರ್ಟಿನ್ ಸಿನಿಮಾ ಬಿಡುಗಡೆ ಆಗಲಿದೆ . ಧ್ರುವ ಸರ್ಜಾ ಅಭಿನಯದ 5ನೇ ಚಿತ್ರ ಮಾರ್ಟಿನ್. ಎ.ಪಿ.ಅರ್ಜುನ್ ನಿರ್ದೇಶನದ ಮಾರ್ಟಿನ್ 5 ಭಾಷೆಯಲ್ಲಿ ರಿಲೀಸ್ ಆಗಲಿದೆ. ಆ ಮೂಲಕ 2024 ರ ಹೈವೋಲ್ಟೇಜ್ ಸಿನಿಮಾ ಇದಾಗಲಿದೆ. ಪೊಗರು ಸಿನಿಮಾ ಬಳಿಕ 3 ವರ್ಷಗಳ ನಂತರ ಬೆಳ್ಳಿತೆರೆ ಮೇಲೆ ಧ್ರುವ ಸರ್ಜಾ ಅವರ ಮತ್ತೊಂದು ಸಿನಿಮಾ ಬಿಡುಗಡೆಯಾಗಲಿದೆ. ಮಾರ್ಟಿನ್ ಚಿತ್ರಕ್ಕೆ ಖ್ಯಾತ ಬಹುಭಾಷಾ ನಟ ಅರ್ಜುನ್ ಸರ್ಜಾ ಕಥೆ ಬರೆದಿದ್ದು, ವಾಸವಿ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ. ಮೆಹ್ತಾ ಈ ಚಿತ್ರ ನಿರ್ಮಿಸಿದ್ದಾರೆ.
ಸತ್ಯ ಹೆಗಡೆ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಿತ್ರದ ತಾರಾಬಳಗದಲ್ಲಿ ಅನ್ವೇಶಿ ಜೈನ್, ಜಾರ್ಜಿಯ ಆಂಡ್ರಿಯಾನಿ, ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಪಾಠಕ್ ಮುಂತಾದವರಿದ್ದಾರೆ.