ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ (National award winning) ನಿರ್ದೇಶಕ ಬ್ಲೆಸ್ಸಿ (Director blessy) ಸಾರಥ್ಯದ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಮತ್ತು ಅಮಲಾ ಪಾಲ್ (Amala Paul) ನಟನೆಯ ವಿಭಿನ್ನ ಮತ್ತು ಬಹು ನಿರೀಕ್ಷೆಯ ಚಿತ್ರ ಆಡು ಜೀವಿತಂ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾ ಏಪ್ರಿಲ್ 10ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಸಿನಿಮಾದ ಎರಡು ಪೋಸ್ಟರ್ ಹಾಗೂ ಟೀಸರ್ ಬಿಡುಗಡೆಯಾಗಿದೆ. ಇದೀಗ ಸಿನಿಮಾದ ʻಸೌಂಡ್ ಡಿಸೈನ್ʼಬಗ್ಗೆ ಸೌಂಡ್ ಡಿಸೈನರ್ ಆಗಿರುವ ರೆಸುಲ್ ಪೂಕುಟ್ಟಿ ಒಂದು ಸಣ್ಣ ವಿಡಿಯೊ ಹಂಚಿಕೊಂಡಿದ್ದಾರೆ. ʻಆಡುಜೀವಿತಂ ಪ್ರತಿ ಫ್ರೇಮ್ ಭಾವನಾತ್ಮಕ ರೋಲರ್ ಕೋಸ್ಟರ್ ಆಗಿದೆʼಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ.
ʻಆಡು ಜೀವಿತಂʼ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ ಕಥೆ ಆಧರಿಸಿದ ಚಿತ್ರವಾಗಿದೆ.
ʻಆಡು ಜೀವಿತಂʼ ಚಿತ್ರದ ಕಥೆ ವಲಸಿಗರ ಸಮಸ್ಯೆ ಸುತ್ತ ಸುತ್ತುತ್ತದೆ. ದುಡಿಮೆಗಾಗಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಪಟ್ಟಂತ ಕಷ್ಟಗಳು ಆತನ ಪಾಸ್‌ಪೋರ್ಟ್ ಕಸಿದು ಆತನಿಗೆ ಕೊಟ್ಟಂತಹ ಹಿಂಸೆಗಳು, ಆ ಬಿಸಿಲಿನ ಮರುಭೂಮಿಯಲ್ಲಿ ಆತ ಅನುಭವಿಸಿದ ಸಂಕಷ್ಟಗಳ ಕಥನವೇ ಈ ಆಡು ಜೀವಿತಂ.
ಇದನ್ನೂ ಓದಿ: Prithviraj Sukumaran: ವಲಸೆ ಕಥೆ ಹೊತ್ತ ಆಡುಜೀವಿತಂ ರಿಲೀಸ್ ಡೇಟ್ ಅನೌನ್ಸ್!
#AaduJeevitham shaping up. From the maestro @arrahman to the master craftman #Blessy every frame is an emotional rollercoaster. Kudos to @PrithviOfficial and @Amala_ams pic.twitter.com/WFGTylOGdl
— resul pookutty (@resulp) January 29, 2024
ಏನಿದೆ ಆಡುಜೀವಿತಂ ಸಿನಿಮಾ ಕಥೆ?
ಹಣ ಸಂಪಾದಿಸಲು ಸೌದಿ ಅರೇಬಿಯಾಕ್ಕೆ ಹೋದ ಭಾರತೀಯ ವಲಸೆ ಕಾರ್ಮಿಕ ನಜೀಬ್ ಮುಹಮ್ಮದ್ ನಿಜ ಜೀವನದ ಘಟನೆ ಇದು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ವಿಧಿಯ ವೈಚಿತ್ರ್ಯದಿಂದಾಗಿ ನಜೀಬ್ ಗುಲಾಮನ ಬದುಕನ್ನು ಬದುಕಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಅವನು ಮರುಭೂಮಿಯ ಮಧ್ಯದಲ್ಲಿ ಮೇಕೆಗಳನ್ನು ಮೇಯಿಸಬೇಕಾಗುತ್ತದೆ. ಆಡು ಜೀವಿತಂ ಅಂದರೆ ಆಡಿನ ಬದುಕು ಅಂಥ ಅರ್ಥ. ಇಂಗ್ಲಿಷ್‌ನಲ್ಲಿ ಇದರ ಟೈಟಲ್ GOAT LIFE ಎಂದಿದೆ.
ಪರ್ಷಿಯನ್ ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಮನೆಗೆ ಕಳುಹಿಸುವಷ್ಟು ಹಣ ಸಂಪಾದಿಸುವುದು ನಜೀಬ್ ಅವರ ಕನಸಾಗಿತ್ತು. ಆದರೆ, ಸೌದಿ ಮರುಭೂಮಿಯ ಮಧ್ಯದಲ್ಲಿ ಆಡುಗಳನ್ನು ಮೇಯಿಸುವ ಗುಲಾಮಗಿರಿಯ ಕೆಲಸಕ್ಕೆ ಒಡ್ಡಿಕೊಳ್ಳಬೇಕಾದ ಅನಿವಾರ್ಯತೆ ಏನು ಬಂತು? ಅವನು ಕೊನೆಗೂ ತನ್ನನ್ನು ತಾನು ಹೇಗೆ ಬಂಧಮುಕ್ತಗೊಳಿಸಿಕೊಳ್ಳುತ್ತಾನೆ ಎನ್ನುವುದೊಂದು ದೊಡ್ಡ ಹೋರಾಟದ ಕಥೆ. ಅವನು ಸೆರೆಮನೆ ಸೇರಿ, ಅಲ್ಲಿಂದ ತಪ್ಪಿಸಿಕೊಳ್ಳುವ ಸಾಹಸ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ.
ಈ ಸಿನಿಮಾಕ್ಕಾಗಿ ನಿರ್ದೇಶಕ ಬ್ಲೆಸ್ಸಿ ಅವರು ತುಂಬಾ ಅಧ್ಯಯನ ಮಾಡಿದ್ದಾರೆ. ಈ ಕಥೆ ಅವರನ್ನು ಕಳೆದ 15 ವರ್ಷಗಳಿಂದ ಕೊರೆಯುತ್ತಿತ್ತಂತೆ. ಅಂತೆಯೇ ಅವರ ಕನಸಿನಲ್ಲಿ ಬಂದ ಚಿತ್ರದಂತೆ ತಮ್ಮನ್ನು ಮಾರ್ಪಾಡು ಮಾಡಿಕೊಂಡು ಹೊಸ ವ್ಯಕ್ತಿಯ ರೂಪದಲ್ಲಿ ಹೊಸ ಲುಕ್‌ನಲ್ಲಿ ಬಂದಿದ್ದಾರೆ ನಟ ಪೃಥ್ವಿರಾಜ್ ಸುಕುಮಾರನ್.