Site icon Vistara News

Actor Rajinikanth: ʻಸಂಘಿʼ ಎನ್ನುವ ಶಬ್ದ ಕೆಟ್ಟದ್ದು ಎಂದು ನನ್ನ ಮಗಳು ಹೇಳಿಲ್ಲ ; ರಜನಿಕಾಂತ್!

Rajinikanth defends daughter Aishwarya Sanghi

ಬೆಂಗಳೂರು: ನಟ ರಜನಿಕಾಂತ್ ಅವರು ತಮ್ಮ ಮುಂಬರುವ ಚಿತ್ರ ʻಲಾಲ್ ಸಲಾಮ್‌ʼ ಸಿನಿಮಾ ಆಡಿಯೊ ಬಿಡುಗಡೆ ಸಮಾರಂಭದಲ್ಲಿ ಮಗಳು ಐಶ್ವರ್ಯಾ ರಜನಿಕಾಂತ್ ಅವರ ಇತ್ತೀಚಿನ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆಡಿಯೊ ಲಾಂಚ್‌ ವೇಳೆ ‘ನನ್ನ ತಂದೆಯನ್ನು ಸಂಘಿ ಎಂದು ಕರೆಯುವುದನ್ನು ನಿಲ್ಲಿಸಿ’ ಎಂದಿದ್ದಾರೆ ಐಶ್ವರ್ಯಾ. ಆದರೀಗ ಈ ಹೇಳಿಕೆಯನ್ನು ರಜಿನಿಕಾಂತ್‌ ಸಮರ್ಥಿಸಿಕೊಂಡಿದ್ದಾರೆ. ‘ನನ್ನ ಮಗಳು ʻಸಂಘಿʼ ಎನ್ನುವುದು ಕೆಟ್ಟ ಶಬ್ದ ಎಂದು ಎಂದಿಗೂ ಹೇಳಿಲ್ಲ. ನನ್ನ ತಂದೆಯನ್ನು ಏಕೆ ಬ್ರ್ಯಾಂಡ್ ಮಾಡುತ್ತೀರಿ ಎಂದಷ್ಟೇ ಕೇಳಿದ್ದಾರೆ’ ಎಂದಿದ್ದಾರೆ ರಜನಿಕಾಂತ್.

ಆಗಿದ್ದೇನು?

ಐಶ್ವರ್ಯಾ ರಜನಿಕಾಂತ್‌ ಜನವರಿ 26 ರಂದು ಚೆನ್ನೈನಲ್ಲಿ ನಡೆದ ಚಿತ್ರದ ಆಡಿಯೊ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ ʻʻನಾನು ಸಾಮಾನ್ಯವಾಗಿ ಸೋಷಿಯಲ್ ಮೀಡಿಯಾದಿಂದ ದೂರ ಇರುತ್ತೇನೆ. ಆದರೆ ನನ್ನ ತಂಡ ಹೊರಗಡೆ ಏನಾಗುತ್ತಿದೆ ಎಂದು ಅಪ್‌ಡೇಟ್‌ ಮಾಡುತ್ತಲೇ ಇರುತ್ತಾರೆ. ಕೆಲವು ಪೋಸ್ಟ್‌ಗಳನ್ನು ತೋರಿಸುತ್ತಲೇ ಇರುತ್ತಾರೆ. ಅವುಗಳನ್ನು ನೋಡಿ ನನಗೆ ಕೋಪ ಬರುತ್ತಿತ್ತು. ನಾವೂ ಮನುಷ್ಯರು. ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ನನ್ನ ತಂದೆ ʻಸಂಘಿʼ ಎಂದು ಕರೆದಿದ್ದಾರೆ. ಅದರ ಅರ್ಥವೇನೆಂದು ನನಗೆ ತಿಳಿದಿರಲಿಲ್ಲ, ನಂತರ ನಾನು ʻಸಂಘಿʼ ಪದದ ಅರ್ಥ ತಿಳಿದಾಗ, ನಿರ್ದಿಷ್ಟ ರಾಜಕೀಯ ಪಕ್ಷವನ್ನು ಬೆಂಬಲಿಸುವ ಜನರನ್ನು ಸಂಘಿ ಎಂದು ಕರೆಯುತ್ತಾರೆ ಎಂದು ಹೇಳಿದರು. ಅಷ್ಟೇ ಅಲ್ಲದೇ ʻಸಂಘಿʼ ಆಗಿದ್ದರೆ ಲಾಲ್ ಸಲಾಂ ಅಂಥ ಸಿನಿಮಾ ಮಾಡುತ್ತಿರಲಿಲ್ಲ’ ಎಂದಿದ್ದಾರೆ ಐಶ್ವರ್ಯಾ. ಮಗಳ ಹೇಳಿಕೆ ಕೇಳಿ ರಜನಿಕಾಂತ್ ಅವರು ಕಣ್ಣೀರು ಹಾಕಿದ್ದರು. ಈ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ: Actor Rajinikanth: ರಜನಿಕಾಂತ್‌ ಅಭಿನಯದ ʼವೆಟ್ಟೈಯನ್‌ʼ ಚಿತ್ರದ ಪೋಸ್ಟರ್‌ ರಿಲೀಸ್‌; ಇಲ್ಲಿದೆ ತಲೈವಾ ಹೊಸ ಲುಕ್‌

ಈಗ ರಜನಿಕಾಂತ್ ಅವರು ಈ ವಿಚಾರವಾಗಿ ಮಾತನಾಡಿದ್ದಾರೆ.‘ನನ್ನ ಮಗಳು ಸಂಘಿ ಎನ್ನುವುದು ಕೆಟ್ಟ ಶಬ್ದ ಎಂದು ಎಂದಿಗೂ ಹೇಳಿಲ್ಲ. ನನ್ನ ತಂದೆಯನ್ನು ಏಕೆ ಬ್ರ್ಯಾಂಡ್ ಮಾಡುತ್ತೀರಿ ಎಂದಷ್ಟೇ ಕೇಳಿದ್ದಾರೆ’ ಎಂದಿದ್ದಾರೆ ರಜನಿಕಾಂತ್.

ರಜನಿಕಾಂತ್ ಮಗಳು ಐಶ್ವರ್ಯಾ ರಜನಿಕಾಂತ್ (Aishwarya Rajinikanth) ನಿರ್ದೇಶನದ ಲಾಲ್ ಸಲಾಮ್‌ (Lal Salaam Poster) ಚಿತ್ರದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಪಿಲ್ ದೇವ್ ಅತಿಥಿ ಪಾತ್ರವನ್ನು ನಿರ್ವಹಿಸಿದ್ದಾರೆ.ಲಾಲ್ ಸಲಾಮ್ ಲೈಕಾ ಪ್ರೊಡಕ್ಷನ್ಸ್ ನಿರ್ಮಿಸಿದೆ. ಎ ಸುಬಾಸ್ಕರನ್ ಪ್ರಸ್ತುತಪಡಿಸಿದ್ದಾರೆ. ಲಾಲ್ ಸಲಾಮ್ ತಮಿಳು, ತೆಲುಗು, ಹಿಂದಿ, ಮಲಯಾಳಂ ಮತ್ತು ಕನ್ನಡದಲ್ಲಿ ಬಿಡುಗಡೆಯಾಗಲಿದೆ. ಸ್ನೇಹ ಮತ್ತು ಕ್ರಿಕೆಟ್ ಸುತ್ತ ಸುತ್ತುವ ಈ ಚಿತ್ರದಲ್ಲಿ ರಜನಿಕಾಂತ್ ʻಮೊಯ್ದೀನ್ ಭಾಯ್ʼ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಐಶ್ವರ್ಯ, ವಿಷ್ಣು ಮತ್ತು ವಿಕ್ರಾಂತ್ ಅವರ ಮೊದಲ ಸಹಯೋಗದಲ್ಲಿ ಎಆರ್ ರೆಹಮಾನ್ ಸಂಗೀತ ಸಂಯೋಜಿಸುತ್ತಿದ್ದಾರೆ.

ಲಾಲ್ ಸಲಾಮ್‌ ಸಿನಿಮಾ ಮೂಲಕ ಐಶ್ವರ್ಯಾ ರಜನಿಕಾಂತ್‌ ಏಳು ವರ್ಷಗಳ ನಂತರ ನಿರ್ದೇಶನಕ್ಕೆ ಮರಳಿದ್ದಾರೆ. ಐಶ್ವರ್ಯಾ ಅವರ ಕೊನೆಯ ನಿರ್ದೇಶನದ ಪ್ರಾಜೆಕ್ಟ್ ತಮಿಳು ಆ್ಯಕ್ಷನ್-ಥ್ರಿಲ್ಲರ್ ʻವೈ ರಾಜಾ ವೈʼ. ಇದರಲ್ಲಿ ಧನುಷ್ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ರಜನಿಕಾಂತ್​ ಅವರು ಭಾರತೀಯ ಸಿನಿಮಾ ಕ್ಷೇತ್ರದ ದಿಗ್ಗಜ ಎನಿಸಿಕೊಂಡಿದ್ದರೆ, ಕಪಿಲ್​ ದೇವ್ ಅವರು ವಿಶ್ವ ಕ್ರಿಕೆಟ್​ನ ಶ್ರೇಷ್ಠ ಆಟಗಾರ. ಅವರಿಬ್ಬರೂ ಜತೆಯಾಗಿ ನಟಿಸಿರುವ ಸಿನಿಮಾವನ್ನು ವೀಕ್ಷಿಸಲು ಅಭಿಮಾನಿಗಳು ಕಾಯುತ್ತಿದ್ದಾರೆ.

Exit mobile version