Thalapathy Vijay: ದಳಪತಿ ವಿಜಯ್‌ ಕೊನೆ ಚಿತ್ರದ ಟ್ರೈಲರ್‌ ಔಟ್‌;  ಅಬ್ಬರಿಸಿದ ನಟ! - Vistara News

ಕಾಲಿವುಡ್

Thalapathy Vijay: ದಳಪತಿ ವಿಜಯ್‌ ಕೊನೆ ಚಿತ್ರದ ಟ್ರೈಲರ್‌ ಔಟ್‌;  ಅಬ್ಬರಿಸಿದ ನಟ!

Thalapathy Vijay: ಈ ಸ್ಪೈ ಥ್ರಿಲ್ಲರ್ ಸಿನಿಮಾ ಗಣೇಶ ಹಬ್ಬದ ಸಂಭ್ರಮದಲ್ಲಿ ಸೆಪ್ಟೆಂಬರ್ 5ಕ್ಕೆ ತೆರೆಗೆ ಬರಲಿದೆ.. ತಂದೆ-ಮಗನಾಗಿ ಡಬಲ್ ರೋಲ್‌ನಲ್ಲಿ ವಿಜಯ್ ಅಬ್ಬರಿಸಿರುವುದನ್ನು ನೋಡಬಹುದು. ಹೆಚ್ಚು ಕಮ್ಮಿ 3 ನಿಮಿಷಗಳ ‘ದಿ ಗೋಟ್’ ಚಿತ್ರದ ಟ್ರೈಲರ್ ಕಿಕ್ ಕೊಡುವಂತಿದೆ.’

VISTARANEWS.COM


on

Thalapathy Vijay plays both father and son in this time travel saga.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ವಿಜಯ್‌ ಅವರು ಸದ್ಯ ‘ಗ್ರೇಟೆಸ್ಟ್ ಆಫ್ ಆಲ್​ ಟೈಮ್’ ((‘Greatest Of All Time (GOAT)’) ) ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ತ್ರಿಶಾ ನಾಯಕಿ. ಈ ಸಿನಿಮಾದಲ್ಲಿ ಪ್ರಭುದೇವ ಮೊದಲಾದವರು ನಟಿಸುತ್ತಿದ್ದಾರೆ. ʻವಿಸಿಲ್‌ ಪೋಡುʼ (Whistle Podu) ಎಂಬ ಶೀರ್ಷಿಕೆಯ ಮೊದಲ ಹಾಡು ಬಿಡುಗಡೆಯಾಗಿ ಸಖತ್‌ ಸೌಂಡ್‌ ಮಾಡಿತ್ತು. ಇದೀಗ ಸಿನಿಮಾದ ಟ್ರೈಲರ್‌ ಬಿಡುಗಡೆ ಆಗಿದೆ.

ಈ ಸ್ಪೈ ಥ್ರಿಲ್ಲರ್ ಸಿನಿಮಾ ಗಣೇಶ ಹಬ್ಬದ ಸಂಭ್ರಮದಲ್ಲಿ ಸೆಪ್ಟೆಂಬರ್ 5ಕ್ಕೆ ತೆರೆಗೆ ಬರಲಿದೆ.. ತಂದೆ-ಮಗನಾಗಿ ಡಬಲ್ ರೋಲ್‌ನಲ್ಲಿ ವಿಜಯ್ ಅಬ್ಬರಿಸಿರುವುದನ್ನು ನೋಡಬಹುದು. ಹೆಚ್ಚು ಕಮ್ಮಿ 3 ನಿಮಿಷಗಳ ‘ದಿ ಗೋಟ್’ ಚಿತ್ರದ ಟ್ರೈಲರ್ ಕಿಕ್ ಕೊಡುವಂತಿದೆ.’ದಿ ಗೋಟ್’ ಚಿತ್ರದಲ್ಲಿ ಸ್ನೇಹಾ, ಪ್ರಭುದೇವಾ, ಪ್ರಶಾಂತ್, ಲೈಲಾ, ಜಯರಾಮ್ ಸೇರಿ ದೊಡ್ಡ ಕಲಾವಿದರ ದಂಡೇ ಇದೆ. ಟ್ರೈಲರ್ ದಳಪತಿ ಅಭಿಮಾನಿಗಳ ಮನಗೆದ್ದಿದ್ದು ಸಿನಿಮಾ ನೋಡಬೇಕು ಎನ್ನುವ ನಿರೀಕ್ಷೆ ಮೂಡಿಸಿದೆ. ಯುವನ್ ಶಂಕರ್ ರಾಜಾ ಸಂಗೀತ, ಸಿದ್ದಾರ್ಥ್ ನುನಿ ಛಾಯಾಗ್ರಹಣ ಚಿತ್ರಕ್ಕಿದೆ.

ಇದನ್ನೂ ಓದಿ: Thalapathy Vijay: ದಳಪತಿ ವಿಜಯ್ ನಟನೆಯ ‘GOAT’ ಚಿತ್ರದ ಟ್ರೈಲರ್‌ ರಿಲೀಸ್‌ ಡೇಟ್‌ ಅನೌನ್ಸ್‌!

ಈ ಚಿತ್ರವನ್ನು ವೆಂಕಟ್ ಪ್ರಭು ನಿರ್ದೇಶನ ಮಾಡುತ್ತಿದ್ದಾರೆ. GOAT’ ಚಿತ್ರದ ಹೊಸ ಪೋಸ್ಟರ್​ನ ತಂಡ ರಿಲೀಸ್ ಮಾಡಿದೆ. ಇದರಲ್ಲಿ ಅವರು ಗನ್ ಹಿಡಿದು ಮಿಂಚಿದ್ದಾರೆ. ಇದರಲ್ಲಿ ಟ್ರೇಲರ್ ರಿಲೀಸ್ ದಿನಾಂಕವನ್ನು ಉಲ್ಲೇಖ ಮಾಡಲಾಗಿದೆ.

ದಳಪತಿ ವಿಜಯ್ ಅವರು ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಪ್ಪ-ಮಗನ ಕಥೆ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ. ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗೋಕೆ ರೆಡಿ ಆಗಿದ್ದಾರೆ. ಈ ಕಾರಣದಿಂದ ಈ ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಅವರು ಇನ್ನೂ ಒಂದು ಸಿನಿಮಾದಲ್ಲಿ ಮಾತ್ರ ನಟಿಸಬಹುದು ಎನ್ನಲಾಗುತ್ತಿದೆ.

ಗೋಟ್’ ನಿರ್ಮಾಣದ ಕೊನೆಯ ಹಂತದಲ್ಲಿದ್ದು, ಚೆನ್ನೈ, ಥೈಲ್ಯಾಂಡ್, ಹೈದರಾಬಾದ್ ಮತ್ತು ಪಾಂಡಿಚೇರಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಜಯ್ ಕೊನೆಯದಾಗಿ ಲೋಕೇಶ್ ಕನಕರಾಜ್ ಅವರ ʻಲಿಯೋʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

ಗೋಟ್’ ಅನ್ನು ಎಜಿಎಸ್ ಎಂಟರ್‌ಟೈನ್‌ಮೆಂಟ್‌ನಿಂದ ಕಲ್ಪತಿ ಎಸ್ ಅಘೋರಂ, ಕಲ್ಪತಿ ಎಸ್ ಗಣೇಶ್ ಮತ್ತು ಕಲ್ಪತಿ ಎಸ್ ಸುರೇಶ್ ಅವರು ಬೃಹತ್ ಬಜೆಟ್‌ನಲ್ಲಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಯುವನ್ ಶಂಕರ್ ರಾಜಾ ಅವರ ಸಂಗೀತ ಸಂಯೋಜನೆ. ಸಿದ್ಧಾರ್ಥ ನುನಿ ಅವರ ಛಾಯಾಗ್ರಹಣ ಮತ್ತು ವೆಂಕಟ್ ರಾಜೇನ್ ಅವರ ಸಂಕಲನವಿದೆ. ದಿ ಗೋಟ್ ಮೇಲೆ ನಿರೀಕ್ಷೆ ಹೆಚ್ಚಿದೆ. ಸೆಪ್ಟೆಂಬರ್ 5 ರಂದು ಗಣೇಶ ಚತುರ್ಥಿಯಂದು ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರ ತಮಿಳು ಮಾತ್ರವಲ್ಲದೆ ತೆಲುಗು, ಹಿಂದಿ ಮತ್ತು ಇತರ ಭಾಷೆಗಳಲ್ಲೂ ಬಿಡುಗಡೆಯಾಗಲಿದೆಎಂದು ವರದಿಯಾಗಿದೆ.

ಸಿನಿಮಾ ವೃತ್ತಿಜೀವನಕ್ಕೆ ದಳಪತಿ ವಿಜಯ್‌ (Thalapathy Vijay) ಅವರು ವಿದಾಯ ಹೇಳಲು ಸಜ್ಜಾಗುತ್ತಿದ್ದಾರೆ. ದಳಪತಿ ವಿಜಯ್‌ ಅವರ 69ನೇ ಸಿನಿಮಾ ಘೋಷಣೆ ಆಗಲಿದೆ. ಇದು ಅವರ ಕೊನೆಯ ಸಿನಿಮಾ ಆಗಿರಲಿದೆ ಎನ್ನಲಾಗುತ್ತಿದೆ. ತಮಿಳು ಚಿತ್ರ ನಟ ದಳಪತಿ ವಿಜಯ್‌ (Thalapathy Vijay) ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿರುವುದು ಗೊತ್ತೇ ಇದೆ. ಪಕ್ಷಕ್ಕೆ ʼತಮಿಳ ವೆಟ್ರಿ ಕಳಗಂʼ (Tamizha Vetri Kazhagam) ಎಂಬ ಹೆಸರನ್ನು ಈಗಾಗಲೇ ಘೋಷಿಸಿದ್ದಾರೆ ನಟ. ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ 2026ರ ರಾಜ್ಯ ಚುನಾವಣೆಯಲ್ಲಿ ವಿಜಯ್‌ ಅವರು ಕಣಕ್ಕೆ ಇಳಿಯಲಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸದೆ 2026ರಲ್ಲಿ ಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

VISTARANEWS.COM


on

ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ. ಅಟ್ಲಿ ಅವರ ಪತ್ನಿ ಪ್ರಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಅಟ್ಲಿ ಹಾಗೂ ಅವರ ಪತ್ನಿ ಪ್ರಿಯಾ ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ಈ ದಂಪತಿ ಎರಡನೇ ಬಾರಿಗೆ ಪೋಷಕರಾಗಿದ್ದು, ಮುದ್ದಾದ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ವಿಶೇಷವೆಂದರೆ, ಅಟ್ಲಿ ನಿರ್ದೇಶನದ ‘ರಾಕಾ’ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಅವರು ತಮ್ಮ ಎರಡನೇ ಪ್ರೆಗ್ನೆನ್ಸಿ ಸುದ್ದಿಯನ್ನು ಹಂಚಿಕೊಂಡ ಮರುದಿನವೇ ಅಟ್ಲೀ ಕೂಡ ಈ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಪ್ರಿಯಾ ಅಟ್ಲಿ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಇಂದು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಟ್ಲಿ ಮತ್ತು ಪ್ರಿಯಾ, ತಮ್ಮ ಮನೆಗೆ ಹೆಣ್ಣು ಮಗುವಿನ ಆಗಮನವಾಗಿರುವುದನ್ನು ಖಚಿತಪಡಿಸಿದ್ದಾರೆ. ಈ ಪೋಸ್ಟ್‌ ಗೆ ‘ಧನ್ಯತೆಯ ಭಾವ ಮೂಡಿದೆ’ ಎಂದು ಕ್ಯಾಪ್ಷನ್ ನೀಡಿದ್ದಾರೆ. ತಮ್ಮ ಮೊದಲ ಪುತ್ರ ಮೀರ್ ಈಗ ದೊಡ್ಡ ಅಣ್ಣನ ಜವಾಬ್ದಾರಿ ವಹಿಸಿಕೊಳ್ಳಲು ಸಜ್ಜಾಗಿರುವ ಮುದ್ದಾದ ಪೋಸ್ಟರ್ ಒಂದನ್ನೂ ಹಂಚಿಕೊಂಡಿರುವುದು ಕುತೂಹಲ ಮೂಡಿಸಿದೆ.
ಅಟ್ಲಿ ಅವರ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಇಡೀ ದೇಶದ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಅಟ್ಲಿ ಮತ್ತು ಪ್ರಿಯಾ ಹಲವು ವರ್ಷಗಳ ಕಾಲ ಪ್ರೀತಿಸಿ 2014ರಲ್ಲಿ ವಿವಾಹವಾಗಿದ್ದರು. ಮದುವೆಯಾದ ಎಂಟು ವರ್ಷಗಳ ನಂತರ 2023ರ ಜನವರಿ 31ರಂದು ದಂಪತಿಗೆ ಮೊದಲ ಪುತ್ರ ಮೀರ್ ಜನಿಸಿದ್ದ. ಈಗ ಎರಡನೇ ಮಗುವಿನ ಆಗಮನವಾಗಿದೆ.
ಚಿತ್ರರಂಗದಲ್ಲಿಯೂ ಅಟ್ಲಿ ಅವರಿಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಈಗ ಅವರು ‘ರಾಕಾ’ ಚಿತ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಮತ್ತು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ.

Continue Reading

ಸಿನಿಮಾ

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

Parvati Nair: ಐರ್ಲೆಂಡ್‌ನ ಇಂಡಿಯನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮಿಳು ಥ್ರಿಲ್ಲರ್ “ಊಣ್ ಪರವೈಲ್ ” ಹೆಸರು ಬಿಡುಗಡೆಯಾಗಿದೆ. ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

Parvati Nair to play dual role in suspense thriller un Paravail Tamil film

ಬೆಂಗಳೂರು: ಇತ್ತೀಚೆಗೆ ಐರ್ಲೆಂಡ್, ಡಬ್ಲಿನ್‌ನಲ್ಲಿ ನಡೆದ ಭಾರತೀಯ ಚಲನಚಿತ್ರೋತ್ಸವದಲ್ಲಿ ಬಹುನಿರೀಕ್ಷಿತ ತಮಿಳು ಥ್ರಿಲ್ಲರ್ ಮೂವಿ ” ಊಣ್ ಪರವೈಲ್ ” ಅಧಿಕೃತವಾಗಿ ಬಿಡುಗಡೆಯಾಯಿತು. ತಾಲ್ ಮತ್ತು ಕಹೋ ನಾ ಪ್ಯಾರ್ ಹೈ ಖ್ಯಾತಿಯ ಪ್ರಸಿದ್ಧ ಬಾಲಿವುಡ್ ಛಾಯಾಗ್ರಾಹಕ ಕಬೀರ್ ಲಾಲ್ ನಿರ್ದೇಶಿಸಿದ ಈ ಚಿತ್ರದಲ್ಲಿ ಪಾರ್ವತಿ ನಾಯರ್ (Parvati Nair) ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಅಸಾಧಾರಣ ನಟನಾ ಕೌಶಲ್ಯವನ್ನು ಪ್ರದ‌ರ್ಶಿಸಿದ್ದಾರೆ. ಊಣ್ ಪರವೈಲ್ ಚಿತ್ರವು ಸಸ್ಪೆನ್ಸ್, ರಹಸ್ಯ ಮತ್ತು ಭಾವನಾತ್ಮಕ ನಾಟಕದ ವಿಶಿಷ್ಟ ಮಿಶ್ರಣವಾಗಿದೆ ಎಂದು ಪಾರ್ವತಿ ನಾಯರ್ ಹೇಳಿದರು.

ಪಾರ್ವತಿ ನಾಯರ್‌ ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. “ಭವ್ಯ ಮತ್ತು ದಿವ್ಯಾ ದ್ವಿಪಾತ್ರಗಳನ್ನು ನಿರ್ವಹಿಸುವುದು ಸವಾಲಾಗಿತ್ತು. ಥ್ರಿಲ್ಲರ್‌ ಸಿನಿಮಾದಲ್ಲಿ ನನ್ನ ಅಭಿಯಾನವನ್ನು ಪ್ರದರ್ಶಿಸಲು ರೋಮಾಂಚನಗೊಂಡಿದ್ದೇನೆ ಎಂದಿದ್ದಾರೆ. ಇನ್ನು “ಊಣ್ ಪರವೈಲ್” ನಲ್ಲಿ ಪಾರ್ವತಿ ನಾಯರ್ ಅದ್ಭುತವಾಗಿ ನಟಿಸಿದ್ದಾರೆ. ಎರಡು ವಿಭಿನ್ನ ಪಾತ್ರಗಳಲ್ಲಿ ದಿವ್ಯಾ, ದೃಢಸಂಕಲ್ಪವುಳ್ಳ ಮತ್ತು ರಕ್ಷಿಸುವ ಸಹೋದರಿ ಮತ್ತು ಭವ್ಯಾ, ನಿಗೂಢ ಸಂದರ್ಭಗಳಲ್ಲಿ ದುರಂತ ಅಂತ್ಯವನ್ನು ಎದುರಿಸುವ ದೃಷ್ಟಿಹೀನ ಹುಡುಗಿಯಾಗಿದ್ದಾಳೆ. 

Parvati Nair to play dual role in suspense thriller un Paravail Tamil film

ದಿವ್ಯಾ ತನ್ನ ಸಹೋದರಿ ಭವ್ಯಳ ಸಾವಿನ ಸುತ್ತಲಿನ ಸತ್ಯವನ್ನು ಆಳವಾಗಿ ಪರಿಶೀಲಿಸಿದಾಗ, ಆಕೆಯ ಹಿಂದಿನ ರಹಸ್ಯಗಳು ಮತ್ತು ಸುಳ್ಳಿನ ಸಂಕೀರ್ಣ ಜಾಲವನ್ನು ಬಹಿರಂಗಪಡಿಸುತ್ತಾರೆ. ಊಣ್ ಪರವೈಲ್ ಮಹಿಳಾ ಪ್ರಧಾನ ಚಿತ್ರವಾಗಿದ್ದು ಅದು ಮಹಿಳೆಯರ ಶಕ್ತಿ ಮತ್ತು ಸ್ಥಿತಿಸ್ಥಾಪಕತ್ವದ ಮೇಲೆ ಬೆಳಕು ಚೆಲ್ಲುತ್ತದೆ” ಎಂದು ನಿರ್ದೇಶಕ ಕಬೀರ್ ಲಾಲ್ ಹೇಳಿದರು. “ಪಾರ್ವತಿ ನಾಯರ್ ಅವರ ಗಮನಾರ್ಹ ಅಭಿನಯವು ನಿರೂಪಣೆಗೆ ಆಳ ಮತ್ತು ಸೂಕ್ಷ್ಮತೆಯನ್ನು ತರುತ್ತದೆ. ಪ್ರೇಕ್ಷಕರನ್ನು ಕೊನೆಯವರೆಗೂ ಹಿಡಿದುಇಟ್ಟುಕೊಳ್ಳಲಿದೆ. ಐರ್ಲೆಂಡ್‌ನ ಭಾರತೀಯ ಚಲನಚಿತ್ರೋತ್ಸವದಲ್ಲಿ ಚಲನಚಿತ್ರದ ಬಿಡುಗಡೆಯು ಮತ್ತಷ್ಟು ಉತ್ಸಾಹದಿಂದ ಕೂಡಿತ್ತು. ಉದ್ಯಮದ ತಜ್ಞರು ಮತ್ತು ಚಲನಚಿತ್ರ ಉತ್ಸಾಹಿಗಳು ಚಲನಚಿತ್ರದ ವಿಶಿಷ್ಟತೆಯನ್ನು ಶ್ಲಾಘಿಸಿದರು. 

ಪಾರ್ವತಿ ನಾಯರ್ ಅವರ ಅದ್ವಿತೀಯ ಅಭಿನಯದ ಕಥಾಹಂದರ ಹೊಂದಿರುವ ಈ ಚಿತ್ರ ಭಾರತದಲ್ಲಿ ಡಿಸೆಂಬರ್ 2024 ರೊಳಗೆ ಬಿಡುಗಡೆಗೊಳ್ಳಲಿದೆ. ಊಣ್ ಪರವೈಲ್ ಬಗ್ಗೆ” ಊಣ್ ಪರವೈಲ್” ಅಜಯ್ ಕುಮಾರ್ ಸಿಂಗ್ ಮತ್ತು ರೇಖಾ ಸಿಂಗ್ ನಿರ್ಮಿಸಿದ ತಮಿಳು ಥ್ರಿಲ್ಲರ್ ಆಗಿದೆ. ಚಿತ್ರದ ಹಿಡಿತದ ನಿರೂಪಣೆ ಮತ್ತು ಪಾರ್ವತಿ ನಾಯರ್ ಅವರ ಅಸಾಧಾರಣ ಅಭಿನಯವು ಪ್ರೇಕ್ಷಕರನ್ನು ಅವರ ಆಸನಗಳ ತುದಿಯಲ್ಲಿ ಇರಿಸುವ ಭರವಸೆ ನೀಡುತ್ತದೆ.

Continue Reading

ಸಿನಿಮಾ

Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರು; ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು

Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಧ್ಯರಾತ್ರಿಯೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.

VISTARANEWS.COM


on

Superstar Rajinikanth is unwell Family members admitted to hospital in the middle of the night

ಸೂಪರ್‌ ಸ್ಟಾರ್‌ ರಜನಿಕಾಂತ್ (Actor Rajinikanth) ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಜನಿಕಾಂತ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ (ಸೆ.30) ಮಧ್ಯರಾತ್ರಿ ತಲೈವಾ ರಜನಿಕಾತ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೈದ್ಯ ಡಾ. ಸಾಯಿ ಸತೀಶ್ ಅವರು ರಜನಿಕಾಂತ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ರಜನಿಕಾಂತ್​ಗೆ ಕಾರ್ಡಿಯಾಕ್​ ಕ್ಯಾಥ್​ ಲ್ಯಾಬ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್‌ ಅಭಿನಯಿಸಿರುವ ವೆಟ್ಟೈಯನ್​​​ ಸಿನಿಮಾದ ಆಡಿಯೋ ಲಾಂಚ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ರಜನಿಕಾಂತ್‌ಗೆ 73 ವರ್ಷ ವಯಸ್ಸು ಆಗಿದೆ. ಇಂದು ಸಂಜೆ ಅಥವಾ ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Mallikarjun Kharge: ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಅಸ್ವಸ್ಥಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ

ಕೂಲಿ ಚಿತ್ರದಲ್ಲಿ ಸೂಪರ್‌ ಸ್ಟಾರ್‌ ತಲೈವಾ ಜತೆಗೆ ರಿಯಲ್ ಸ್ಟಾರ್

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಹೊಸ ಸಿನಿಮಾ ಕೂಲಿಯಲ್ಲಿ ಕನ್ನಡದ ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯಿಸಲಿದ್ದಾರೆ. ಈ ಕುರಿತು ಉಪೇಂದ್ರ ಅವರು ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ.

Real Star Upendra Acting with Superstar Rajinikanth Coolie Movie

ಕೂಲಿ ಸಿನಿಮಾವು ತಮಿಳು, ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರಲಿದೆ. ಲೋಕೇಶ್ ಕನಕರಾಜ್‌ ಡೈರೆಕ್ಷನ್‌ನಲ್ಲಿ ಕೂಲಿ ಸಿನಿಮಾ ಮೂಡಿಬರುತ್ತಿದೆ.

Real Star Upendra Acting with Superstar Rajinikanth Coolie Movie

ತಲೈವಾ ರಜನಿಕಾಂತ್‌ ಅವರ 171ನೇ ಸಿನಿಮಾ ಕೂಲಿ ಆಗಿದೆ. ಜೈಲರ್‌ನಂತಹ ಬ್ಲಾಕ್ ಬಸ್ಟರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದ ಸನ್ ಪಿಕ್ಚರ್ಸ್ ಕೂಲಿಯನ್ನು ನಿರ್ಮಿಸಲಿದೆ.

Real Star Upendra Acting with Superstar Rajinikanth Coolie Movie

ರಜನಿಕಾಂತ್‌ ಮತ್ತು ಲೋಕೇಶ್ ಕನಕರಾಜ್‌ ಕಾಂಬಿನೇಷನ್‌ನ ‘ಕೂಲಿ’ ಸಿನಿಮಾದಲ್ಲಿ ಕನ್ನಡದ ಸೂಪರ್‌ ಸ್ಟಾರ್‌ ಉಪೇಂದ್ರ ನಟಿಸಲಿದ್ದಾರೆ.

ಈ ಕುರಿತು ಉಪೇಂದ್ರ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಕೂಲಿ ಸಿನಿಮಾದ ಪೋಸ್ಟರ್‌ ಹಾಕಿ ತಿಳಿಸಿದ್ದಾರೆ. ತಲೈವಾ ರಜಿನಿಕಾಂತ್‌ ನಟನೆಯ ಕೂಲಿ ಚಿತ್ರದಲ್ಲಿ ಉಪೇಂದ್ರ ಕಲೀಷ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ.

Real Star Upendra Acting with Superstar Rajinikanth Coolie Movie

ನಿಮ್ಮ ಆಶೀರ್ವಾದದಿಂದ ನನ್ನ ಗುರು ನನ್ನ ಸೂಪರ್‌ ಸ್ಟಾರ್‌ ರಜಿನಿ ಸರ್‌ ಜತೆಗೆ ಕೂಲಿ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಫೀಲಿಂಗ್‌‌ ಬ್ಲೆಸ್ಡ್ ಅಂತ ಲೋಕೇಶ್‌ ಕನಕರಾಜ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Upendra : ಕೂಲಿ ಚಿತ್ರದಲ್ಲಿ ಸೂಪರ್‌ ಸ್ಟಾರ್‌ ತಲೈವಾ ಜತೆಗೆ ರಿಯಲ್ ಸ್ಟಾರ್; ಕಲೀಷ ಪಾತ್ರದಲ್ಲಿ ಮಿಂಚಲಿರುವ ಉಪೇಂದ್ರ

Actor Upendra : ಸೂಪರ್‌ ಸ್ಟಾರ್‌ ತಲೈವಾ ರಜಿನಿಕಾಂತ್‌ ಜತೆಗೆ ರಿಯಲ್ ಸ್ಟಾರ್ ಉಪೇಂದ್ರ ಮಿಂಚಲಿದ್ದಾರೆ. ಕೂಲಿ ಚಿತ್ರದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Real Star Upendra Acting with Superstar Rajinikanth Coolie Movie

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಹೊಸ ಸಿನಿಮಾ ಕೂಲಿಯಲ್ಲಿ ಕನ್ನಡದ ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯಿಸಲಿದ್ದಾರೆ. ಈ ಕುರಿತು ಉಪೇಂದ್ರ ಅವರು ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ.

Real Star Upendra Acting with Superstar Rajinikanth Coolie Movie

ಕೂಲಿ ಸಿನಿಮಾವು ತಮಿಳು, ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರಲಿದೆ. ಲೋಕೇಶ್ ಕನಕರಾಜ್‌ ಡೈರೆಕ್ಷನ್‌ನಲ್ಲಿ ಕೂಲಿ ಸಿನಿಮಾ ಮೂಡಿಬರುತ್ತಿದೆ.

Real Star Upendra Acting with Superstar Rajinikanth Coolie Movie

ತಲೈವಾ ರಜನಿಕಾಂತ್‌ ಅವರ 171ನೇ ಸಿನಿಮಾ ಕೂಲಿ ಆಗಿದೆ. ಜೈಲರ್‌ನಂತಹ ಬ್ಲಾಕ್ ಬಸ್ಟರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದ ಸನ್ ಪಿಕ್ಚರ್ಸ್ ಕೂಲಿಯನ್ನು ನಿರ್ಮಿಸಲಿದೆ.

Real Star Upendra Acting with Superstar Rajinikanth Coolie Movie

ರಜನಿಕಾಂತ್‌ ಮತ್ತು ಲೋಕೇಶ್ ಕನಕರಾಜ್‌ ಕಾಂಬಿನೇಷನ್‌ನ ‘ಕೂಲಿ’ ಸಿನಿಮಾದಲ್ಲಿ ಕನ್ನಡದ ಸೂಪರ್‌ ಸ್ಟಾರ್‌ ಉಪೇಂದ್ರ ನಟಿಸಲಿದ್ದಾರೆ.

ಈ ಕುರಿತು ಉಪೇಂದ್ರ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಕೂಲಿ ಸಿನಿಮಾದ ಪೋಸ್ಟರ್‌ ಹಾಕಿ ತಿಳಿಸಿದ್ದಾರೆ. ತಲೈವಾ ರಜಿನಿಕಾಂತ್‌ ನಟನೆಯ ಕೂಲಿ ಚಿತ್ರದಲ್ಲಿ ಉಪೇಂದ್ರ ಕಲೀಷ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ.

Real Star Upendra Acting with Superstar Rajinikanth Coolie Movie

ನಿಮ್ಮ ಆಶೀರ್ವಾದದಿಂದ ನನ್ನ ಗುರು ನನ್ನ ಸೂಪರ್‌ ಸ್ಟಾರ್‌ ರಜಿನಿ ಸರ್‌ ಜತೆಗೆ ಕೂಲಿ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಫೀಲಿಂಗ್‌‌ ಬ್ಲೆಸ್ಡ್ ಅಂತ ಲೋಕೇಶ್‌ ಕನಕರಾಜ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Continue Reading
Advertisement
Latest8 hours ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ10 hours ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest12 hours ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest12 hours ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ1 day ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest1 day ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest1 day ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ2 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ2 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ2 days ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌