ಬೆಂಗಳೂರು: ವಿಘ್ನೇಶ್ ಶಿವನ್ ಮತ್ತು ನಯನತಾರಾ (Nayanthara and Vignesh) ಅಕ್ಟೋಬರ್ 9ರಂದು ಅವಳಿ ಮಕ್ಕಳನ್ನು ಪಡೆದರು. ನಟಿ ನಯನತಾರಾ ಇತ್ತೀಚೆಗೆ ತಮ್ಮ ಮಕ್ಕಳಾದ ಉಯಿರ್ ಮತ್ತು ಉಲಗ್ ಅವರ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆದರೀಗ ನಟಿ ಏಕಾಏಕಿ ಇನ್‌ಸ್ಟಾಗ್ರಾಮ್‌ನಲ್ಲಿ ಪತಿ ವಿಘ್ನೇಶ್ ಶಿವನ್‌ನ ಅನ್‌ಫಾಲೋ ಮಾಡಿದ್ದಾರೆ ಎಂದು ವರದಿಯಾಗಿದೆ. ಮಾತ್ರವಲ್ಲ ಭಾವುಕ ಪೋಸ್ಟ್ ಕೂಡ ಹಾಕಿಕೊಂಡಿದ್ದಾರೆ.
ಆದರೆ ಅಸಲಿಗೆ ಹಾಗೇನು ಆಗಿಲ್ಲ. ನಯನತಾರಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ವಿಘ್ನೇಶ್ ಶಿವನ್ ಅವರನ್ನು ಅನ್‌ಫಾಲೋ ಮಾಡಿಯೇ ಇಲ್ಲ. ಇದರ ಸ್ಕ್ರೀನ್ಶಾಟ್ಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಯನತಾರಾ ಅವರಿಗೆ ಆಗದೇ ಇರುವವರ ಕೆಲಸ ಇದು ಎಂದು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ಕೆಲವು ದಿನಗಳಹಿಂದೆ ಜೋಡಿ ಡಿವೋರ್ಸ್ ಪಡೆದುಕೊಳ್ಳುತ್ತಿದೆ ಎಂದು ಸುದ್ದಿಯಾಗಿತ್ತು. ಆದರೀಗ ನಟಿ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, ನಯನತಾರಾ ಒಂದು ಇಂಗ್ಲಿಷ್ ಪೋಸ್ಟ್ ಮಾಡಿದ್ದಾರೆ. “ಅವಳು ಕಣ್ಣೀರಿನ ಮೂಲಕವೂ ಇದು ಆಕೆಗೆ ಸಿಕ್ಕಿದೆ ಎಂದು ಯಾವಾಗಲೂ ಹೇಳುತ್ತಿದ್ದಳು” ಎನ್ನುವ ಅರ್ಥದಲ್ಲಿ ಒಂದು ಕೋಟ್ ಹಾಕಿದ್ದಾರೆ. ಇದಾದ ಬಳಿಕ ನಟಿ ಪತಿ ವಿಘ್ನೇಶ್ ಅವರನ್ನು ಅನ್ ಫಾಲೋ ಮಾಡಿದ್ದಾರೆ ಎಂದು ಸುದ್ದಿ ವೈರಲ್ ಆಗಿದೆ. ಆದರೀಗ ಮತ್ತೆ ನಯನತಾರಾ ಪತಿಯನ್ನು ಫಾಲೋ ಮಾಡುತ್ತಿದ್ದಾರೆ. ನಟಿಯ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನುವ ಚರ್ಚೆ ಶುರುವಾಗಿದೆ.
ಇದನ್ನೂ ಓದಿ: Nayanthara and Vignesh: ಅವಳಿ ಮಕ್ಕಳೊಂದಿಗೆ ಇರುವ ಕ್ಯೂಟ್ ಫೋಟೊ ಹಂಚಿಕೊಂಡ ನಯನತಾರಾ!
ನಯನತಾರಾ ನಟನೆ ಹಾಗೂ ಮಕ್ಕಳ ಜವಾಬ್ದಾರಿ ಎರಡನ್ನು ನಿಭಾಯಿಸುವುದು ಕಷ್ಟವಾದ ಹಿನ್ನೆಲೆ ಮಕ್ಕಳ ಜೊತೆ ಸಮಯ ಕಳೆಯಲು ಕೆಲ ಕಾಲ ನಟಿ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ಮಾತು ಕಾಲಿವುಡ್ ಅಂಗಳದಲ್ಲಿ ಕೇಳಿ ಹರಿದಾಡಿತ್ತು. ಆದರೆ ನಟಿ ʻಜವಾನ್ʼ ಸಿನಿಮಾ ಮೂಲಕ ಮತ್ತೆ ಕಮ್ ಬ್ಯಾಕ್ ಆದರು.
ಇತ್ತೀಚೆಗೆ ಥಿಯೇಟರ್‌ಗಳಲ್ಲಿ ತೆರೆಕಂಡ ಲೇಡಿ ಸೂಪರ್ ಸ್ಟಾರ್ ನಯನತಾರಾ (Actress Nayanthara) ಅಭಿನಯದ ʼಅನ್ನಪೂರ್ಣಿʼ (Annapoorani) ಚಿತ್ರ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಿತ್ತು. ಸಿನಿಮಾ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದೆ ಎಂದು ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಕೇಸ್ ಕೂಡ ದಾಖಲಿಸಿದ್ದರು. ಇದಾದ ಬಳಿಕ ನೆಟ್ಫ್ಲಿಕ್ಸ್ ಎಚ್ಚೆತ್ತುಕೊಂಡಿದ್ದು, ಸಿನಿಮಾವನ್ನು ಡಿಲೀಟ್ ಮಾಡಿತ್ತು. ಇನ್‌ಸ್ಟಾ ಮೂಲಕ ನಟಿ ಕ್ಷಮೆ ಕೂಡ ಕೇಳಿದ್ದರು.
ವಿಘ್ನೇಶ್ ಶಿವನ್ ಪ್ರಸ್ತುತ ʻಲವ್ ಇನ್ಶುರೆನ್ಸ್ ಕಾರ್ಪೊರೇಶನ್ʼ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರದೀಪ್ ರಂಗನಾಥನ್, ಎಸ್.ಜೆ.ಸೂರ್ಯ ಮತ್ತು ಕೃತಿ ಶೆಟ್ಟಿ ಮನರಂಜನಾ ಪಾತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.