Mahesh Babu: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತ ಎಲ್ಲಿ? ಯಾವಾಗ? - Vistara News

South Cinema

Mahesh Babu: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತ ಎಲ್ಲಿ? ಯಾವಾಗ?

Mahesh Babu: ಹೈದರಾಬಾದ್​ನಲ್ಲಿಯೇ ಮುಹೂರ್ತ ಸಮಾರಂಭ ನಡೆಯಲಿದ್ದು, ಹಾಲಿವುಡ್​ನ ಖ್ಯಾತ ನಿರ್ದೇಶಕ ಜೇಮ್ಸ್ ಕ್ಯಾಮರನ್ ಮುಹೂರ್ತಕ್ಕೆ ಅತಿಥಿಯಾಗಿ ಬರಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Mahesh Babu and Rajamouli to work on Financials
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಎಸ್‌.ಎಸ್‌.ರಾಜಮೌಳಿ (S.S. Rajamouliಎನ್ನುವ ಸ್ಟಾರ್‌ ನಿರ್ದೇಶಕರ ಹೆಸರು ಕೇಳದವರು ವಿರಳ. ನಿರ್ದೇಶನಕ್ಕೆ ಹೊಸ ಆಯಾಮ ತಂದುಕೊಟ್ಟವರು ಅವರು. ಟಾಲಿವುಡ್‌ನ ರಾಜಮೌಳಿ ಆ್ಯಕ್ಷನ್‌ ಕಟ್‌ ಹೇಳಿರುವ ಯಾವ ಚಿತ್ರವೂ ಇದುವರೆಗೆ ಫ್ಲಾಪ್‌ ಆಗಿಲ್ಲ ಎನ್ನುವುದು ವಿಶೇಷ. ಹೀಗಾಗಿ ಅವರು ಸಿನಿಮಾ ಮಾಡುತ್ತಾರೆ ಎನ್ನುವಾಗಲೇ ನಿರೀಕ್ಷೆ ಮೂಡುತ್ತದೆ, ಕುತೂಹಲ ಗರಿಗೆದರುತ್ತದೆ. ಸದ್ಯ ಅವರು ಟಾಲಿವುಡ್‌ ಸೂಪರ್‌ ಸ್ಟಾರ್‌ ಮಹೇಶ್‌ ಬಾಬು (Mahesh Babu) ಅವರ ಮುಂದಿನ ಚಿತ್ರ ನಿರ್ದೇಶಿಸಲಿದ್ದಾರೆ. ಸದ್ಯ ಚಿತ್ರಕ್ಕೆ ʼಎಸ್‌.ಎಸ್‌.ಬಿ.ಎಂ. 29ʼ (SSMB 29) ಎನ್ನುವ ತಾತ್ಕಾಲಿಕ ಶೀರ್ಷಿಕೆ ಇಡಲಾಗಿದೆ. ಇದೀಗ ಸಿನಿಮಾದ ಮುಹೂರ್ತ ದಿನಾಂಕ ನಿಗದಿಯಾಗಿದೆ. ರಾಜಮೌಳಿ ಹಾಗೂ ಮಹೇಶ್ ಬಾಬು ನಟನೆಯ ಸಿನಿಮಾದ ಮುಹೂರ್ತ ಯುಗಾದಿ ದಿನದಂದು ನಡೆಯಲಿದೆ ಎಂದು ವರದಿಯಾಗಿದೆ.

ಹೈದರಾಬಾದ್​ನಲ್ಲಿಯೇ ಮುಹೂರ್ತ ಸಮಾರಂಭ ನಡೆಯಲಿದ್ದು, ಹಾಲಿವುಡ್​ನ ಖ್ಯಾತ ನಿರ್ದೇಶಕ ಜೇಮ್ಸ್ ಕ್ಯಾಮರನ್ ಮುಹೂರ್ತಕ್ಕೆ ಅತಿಥಿಯಾಗಿ ಬರಲಿದ್ದಾರೆ ಎನ್ನಲಾಗಿದೆ. ‘ಆರ್​ಆರ್​ಆರ್’ ಸಿನಿಮಾದ ನಾಯಕರಾದ ಜೂ ಎನ್​ಟಿಆರ್, ರಾಮ್ ಚರಣ್ ಅವರ ಜತೆಗೆ ಪ್ರಭಾಸ್, ರಾಣಾ ದಗ್ಗುಬಾಟಿ ಸೇರದಿಂತೆ ಅನೇಕರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಮೊದಲ ಬಾರಿಗೆ ಇಬ್ಬರು ಚಿತ್ರಕ್ಕಾಗಿ ಒಂದಾಗುತ್ತಿರುವುದು ಕೂಡ ನಿರೀಕ್ಷೆ ಹೆಚ್ಚಲು ಮತ್ತೊಂದು ಮುಖ್ಯ ಕಾರಣ. ಇವರ ಸಂಭಾವನೆ ಕಾರಣಕ್ಕೂ ಚಿತ್ರ ಸೆಟ್ಟೇರುವ ಮೊದಲೇ ಸದ್ದು ಮಾಡುತ್ತಿದೆ.

ಇದನ್ನೂ ಓದಿ: Mahesh Babu: ಮಹೇಶ್ ಬಾಬು ಪುತ್ರಿಯ ಹೆಸರಲ್ಲಿ ನಕಲಿ ಖಾತೆ; ಸಾರ್ವಜನಿಕರಿಗೆ ಎಚ್ಚರಿಕೆ ಕೊಟ್ಟ ನಟ!

ಈ ನಡುವೆ ʼಎಸ್‌.ಎಸ್‌.ಬಿ.ಎಂ. 29ʼ ಸಿನಿಮಾಕ್ಕಾಗಿ ಮಹೇಶ್‌ ಬಾಬು ದಾಖಲೆಯ ಪ್ರತಿಫಲ ಪಡೆಯುತ್ತಿದ್ದಾರೆ. ಅವರು 60ರಿಂದ 80 ಕೋಟಿ ರೂ. ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿತ್ತು. ಆದರೆ ಅವರು ಸಂಭಾವನೆ ಪಡೆಯುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ಅದರ ಬದಲಾಗಿ ಮಹೇಶ್‌ ಬಾಬು ಚಿತ್ರದ ಲಾಭದಲ್ಲಿ ಶೇರ್‌ ಪಡೆದುಕೊಳ್ಳುವ ಬಗ್ಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಎಸ್‌.ಎಸ್‌.ಬಿ.ಎಂ. 29ʼ ಸಿನಿಮಾದ ಕಥೆ ರಾಮಾಯಣದ ಹನುಮಂತನ ಪಾತ್ರದಿಂದ ಸ್ಫೂರ್ತಿ ಪಡೆದುಕೊಂಡಿದೆ ಎನ್ನಲಾಗುತ್ತಿದೆ. ವಿಜಯೇಂದ್ರ ಪ್ರಸಾದ್‌ ಚಿತ್ರಕ್ಕಾಗಿ ಕಥೆ ಬರೆಯುತ್ತಿದ್ದಾರೆ. ಈ ಸಿನಿಮಾಕ್ಕಾಗಿ ಹಾಲಿವುಡ್‌ ನಟರನ್ನು ಸಂಪರ್ಕಿಸಲಾಗಿದೆ.

ಶೀಘ್ರದಲ್ಲಿಯೇ ಆಫ್ರಿಕಾದಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಭರ್ಜರಿ ಸಾಹಸ ದೃಶ್ಯಗಳು ಈ ಚಿತ್ರದಲ್ಲಿ ಇರಲಿದೆ.2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Allu Arjun: ʻಪುಷ್ಪ 2ʼ ಸಿನಿಮಾಗೆ ಹೆದರಿತಾ ʻಸಿಂಗಂʼ? ಅಜಯ್ ದೇವಗನ್ ಸಿನಿಮಾ ಮುಂದೂಡಿಕೆ!

Allu Arjun: ಈಗಿನ ಮಾಹಿತಿ ಪ್ರಕಾರ, ‘ಸಿಂಗಂ ಅಗೇನ್​’ (Singham Again) ಚಿತ್ರತಂಡ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಂಡಿದೆ ಎಂದು ವರದಿಯಾಗಿದೆ. ದೊಡ್ಡ ತಾರಾ ಬಳಗವೇ ಇದ್ದರೂ ತೆಲುಗು ಚಿತ್ರಕ್ಕೆ ಪೈಪೋಟಿ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ‘ `ಸಿಂಗಂ ಅಗೇನ್​’ ಸಿನಿಮಾಗೆ ರೋಹಿತ್​ ಶೆಟ್ಟಿ ಅವರು ನಿರ್ದೇಶನ ಮಾಡುತ್ತಿದ್ದಾರೆ.

VISTARANEWS.COM


on

Allu Arjun Singam fears Pushpa release postponed
Koo

ಬೆಂಗಳೂರು: ಅಲ್ಲು ಅರ್ಜುನ್ (Allu Arjun) ಅಭಿನಯದ ಪುಷ್ಪ 2 ಸಿನಿಮಾ 2024ರ ಆಗಸ್ಟ್ 15 ರಂದು ಬಿಡುಗಡೆಯಾಗಲಿದೆ ಎಂದು ಪುಷ್ಪ 2 ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ. ಅದೇ ದಿನ ರೋಹಿತ್ ಶೆಟ್ಟಿ ನಿರ್ದೇಶನ, ಅಜಯ್ ದೇವಗನ್ (Ajay Devgn) ನಾಯಕನಾಗಿ ನಟಿಸಿರುವ ʻಸಿಂಗಂ ಅಗೇನ್ʼ ಸಿನಿಮಾ ರಿಲೀಸ್‌ ಆಗಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿತ್ತು. ಈಗಿನ ಮಾಹಿತಿ ಪ್ರಕಾರ, ‘ಸಿಂಗಂ ಅಗೇನ್​’ (Singham Again) ಚಿತ್ರತಂಡ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಂಡಿದೆ ಎಂದು ವರದಿಯಾಗಿದೆ.

ಚಿತ್ರದಲ್ಲಿ ಅಜಯ್ ದೇವಗನ್, ರಣವೀರ್ ಸಿಂಗ್, ಅಕ್ಷಯ್ ಕುಮಾರ್, ಕರೀನಾ ಕಪೂರ್, ಟೈಗರ್ ಶ್ರಾಫ್ ಮತ್ತು ವಿಕ್ಕಿ ಕೌಶಲ್ ನಟಿಸಿದ್ದಾರೆ. ದೊಡ್ಡ ತಾರಾ ಬಳಗವೇ ಇದ್ದರೂ ತೆಲುಗು ಚಿತ್ರಕ್ಕೆ ಪೈಪೋಟಿ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ‘ಸಿಂಗಂ ಅಗೇನ್​’ ಚಿತ್ರ ದೀಪಾವಳಿ ಸಮಯದಲ್ಲಿ ರಿಲೀಸ್‌ ಆಗಲಿದೆ ಎನ್ನಲಾಗುತ್ತಿದೆ. ಒಂದು ಮೂಲದ ಪ್ರಕಾರ ‘ಸಿಂಗಂ ಅಗೇನ್​’ ಸಿನಿಮಾದ ರಿಲೀಸ್ ಡೇಟ್​ ಮುಂದೂಡಿಕೆ ಆಗಲು ‘ಪುಷ್ಪ 2’ ತಂಡದ ಪೈಪೋಟಿ ಕಾರಣ ಅಲ್ಲ. ಅಂದುಕೊಂಡ ವೇಗದಲ್ಲಿ ಈ ಸಿನಿಮಾದ ಕೆಲಸಗಳು ಮುಗಿಯುತ್ತಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: Allu Arjun: `ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!

`ಸಿಂಗಂ ಅಗೇನ್​’ ಸಿನಿಮಾಗೆ ರೋಹಿತ್​ ಶೆಟ್ಟಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅಜಯ್​ ದೇವಗನ್​ ಮಾತ್ರವಲ್ಲದೇ ಅನೇಕ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕರೀನಾ ಕಪೂರ್​ ಖಾನ್​, ದೀಪಿಕಾ ಪಡುಕೋಣೆ ಸಹ ಮುಖ್ಯ ಪಾತ್ರಗಳನ್ನು ಮಾಡುತ್ತಿದ್ದಾರೆ. ಇದೇ ಚಿತ್ರದಲ್ಲಿ ಟೈಗರ್​ ಶ್ರಾಫ್​ ಮತ್ತು ಅಕ್ಷಯ್​ ಕುಮಾರ್​ ಅವರು ಅತಿಥಿ ಪಾತ್ರ ಮಾಡುತ್ತಾರೆ ಎಂಬ ಮಾತು ಕೂಡ ಕೇಳಿಬರುತ್ತಿದೆ. ಹಾಗಾಗಿ ಹಿಂದಿ ಪ್ರೇಕ್ಷಕರ ವಲಯದಲ್ಲಿ ಈ ಚಿತ್ರದ ಬಗ್ಗೆ ಹೈಪ್​ ಹೆಚ್ಚುತ್ತಿದೆ.

ಪುಷ್ಪ-2 ಸಿನಿಮಾದಲ್ಲಿ ಅಲ್ಲು ಅರ್ಜುನ್‌ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದು, ಫಹಾದ್ ಫಾಸಿಲ್, ಅನುಸೂಯ, ಸುನಿಲ್ ಮತ್ತು ಇತರರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಪ್ರೊಡಕ್ಷನ್ ನಡಿ ಮೂಡಿಬರುತ್ತಿರುವ ಪುಷ್ಪ-2 ಸಿನಿಮಾಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

Continue Reading

ಸಿನಿಮಾ

Manvita Kamath: ʻಟಗರು ಪುಟ್ಟಿʼಗೆ ಕಂಕಣ ಭಾಗ್ಯ ಕೂಡಿ ಬಂತು! ವರ ಯಾರು?

Manvita Kamath: ನಟಿ ಮಾನ್ವಿತಾ ಕಾಮತ್ ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಕುಮಾರ್ ಅವರೊಂದಿಗೆ ಸಪ್ತಪದಿ ತುಳಿಯಲಿದ್ದಾರೆ. 2015ರಲ್ಲಿ ತೆರೆಗೆ ಬಂದ ‘ಕೆಂಡಸಂಪಿಗೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ‘ಟಗರು’ ಚಿತ್ರದಲ್ಲಿ ಮಾನ್ವಿತಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಮೊದಲ ಚಿತ್ರದಲ್ಲಿಯೇ ಸೈಮಾ ಪ್ರಶಸ್ತಿ ಪಡೆಯುತ್ತಾರೆ.ʻಚೌಕ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡು, ಕನಕ’, ಟಗರು’ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

VISTARANEWS.COM


on

Manvita Kamath
Koo

ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ (Manvita Kamath) ಸ್ಯಾಂಡಲ್‌ವುಡ್‌ನಲ್ಲಿ ಟಗರು ಪುಟ್ಟಿ ಎಂದೇ ಖ್ಯಾತಿ ಪಡೆದಿದ್ದಾರೆ. ಇದೀಗ ನಟಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ನಟಿ ಮಾನ್ವಿತಾ ಕಾಮತ್ ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಕುಮಾರ್ ಅವರೊಂದಿಗೆ ಸಪ್ತಪದಿ ತುಳಿಯಲಿದ್ದಾರೆ.

ಇದೇ ಮೇ 1 ರಂದು ಅರುಣ್ ಕುಮಾರ್ ಅವರೊಂದಿಗೆ ಹಸಮಣೆ ಏರುತ್ತಿರುವುದಾಗಿ ಖುಷಿಯನ್ನು ಶೇರ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Rameshwaram Cafe Blast: ಯಾರು ಈ ಅಬ್ದುಲ್‌ ಮತೀನ್‌ ತಾಹಾ? ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಮಾಸ್ಟರ್‌ ಮೈಂಡ್‌ ಎಲ್ಲಿಯವನು?

2015ರಲ್ಲಿ ತೆರೆಗೆ ಬಂದ ‘ಕೆಂಡಸಂಪಿಗೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ‘ಟಗರು’ ಚಿತ್ರದಲ್ಲಿ ಮಾನ್ವಿತಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಮೊದಲ ಚಿತ್ರದಲ್ಲಿಯೇ ಸೈಮಾ ಪ್ರಶಸ್ತಿ ಪಡೆಯುತ್ತಾರೆ.

ʻಚೌಕ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡು, ಕನಕ’, ಟಗರು’ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

Continue Reading

ಟಾಲಿವುಡ್

Rashmika Mandanna: ಶ್ವಾನಗಳನ್ನು ಮುದ್ದಾಡಿದ ರಶ್ಮಿಕಾ ಮಂದಣ್ಣ!

Rashmika Mandanna: ರಶ್ಮಿಕಾ ಆಗಾಗ ಸಾಕುಪ್ರಾಣಿಗಳ ಚಿತ್ರ ಮತ್ತು ವಿಡಿಯೊಗಳನ್ನು ಹಂಚಿಕೊಳ್ಳುತ್ತಾರೆ. ನಟಿ ಒಮ್ಮೆ ತನ್ನ ಮುದ್ದಿನ ನಾಯಿ ಔರಾ ಜತೆಗಿನ ಬಾಂಧವ್ಯದ ಹಂಚಿಕೊಂಡಿದ್ದರು. ಏಪ್ರಿಲ್ 11 ರಂದು ರಾಷ್ಟ್ರೀಯ ಸಾಕುಪ್ರಾಣಿಗಳ ದಿನವನ್ನು ಸ್ಮರಿಸುತ್ತಾ, ರಶ್ಮಿಕಾ ತಮ್ಮ ಮೆಚ್ಚಿನ ಶ್ವಾನಗಳ ಜತೆ ಇರುವ ವಿಡಿಯೊ ಹಂಚಿಕೊಂಡಿದ್ದಾರೆ. ಈ ಶ್ವಾನಗಳು ಮರಿ ಇದ್ದಾಗ ಹೇಗೆ ಟ್ರೇನ್ ಮಾಡಲಾಗಿತ್ತು ಎಂಬುದನ್ನು ರಶ್ಮಿಕಾ ಮಂದಣ್ಣ ಅವರು ವಿಡಿಯೊ ಮೂಲಕ ತೋರಿಸಿದ್ದಾರೆ.

VISTARANEWS.COM


on

Rashmika Mandanna Loves Her Two pets
Koo

ಬೆಂಗಳೂರು: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna: ) ಅವರು ಪುಷ್ಪ-2 ಸಿನಿಮಾ ಚಿತ್ರೀಕರಣದಲ್ಲಿ ಈಗಾಗಲೇ ಬ್ಯುಸಿಯಾಗಿದ್ದಾರೆ. ಸಿನಿಮಾ ಜತೆಗೆ ನಟಿ ತಮ್ಮ ಪ್ರೀತಿಯ ಶ್ವಾನಗಳ ಜತಗೆ ಸಮಯ ಕಳೆಯುತ್ತಿರುತ್ತಾರೆ. ಇದೀಗ ನಟಿ ತಮ್ಮ ಇನ್‌ಸ್ಟಾದಲ್ಲಿ ಎರಡು ಶ್ವಾನಗಳ (Rashmika Mandanna Loves Her Two pets) ಜತೆ ಇರುವ ವಿಡಿಯೊ ಹಂಚಿಕೊಂಡಿದ್ದಾರೆ. ಈ ಶ್ವಾನಗಳು ಮರಿ ಇದ್ದಾಗ ಹೇಗೆ ಟ್ರೇನ್ ಮಾಡಲಾಗಿತ್ತು ಎಂಬುದನ್ನು ರಶ್ಮಿಕಾ ಮಂದಣ್ಣ ಅವರು ವಿಡಿಯೊ ಮೂಲಕ ತೋರಿಸಿದ್ದಾರೆ. ಈ ವಿಡಿಯೊ ಸಖತ್ ವೈರಲ್ ಆಗಿದೆ.

ಏಪ್ರಿಲ್ 11 ರಂದು ರಾಷ್ಟ್ರೀಯ ಸಾಕುಪ್ರಾಣಿಗಳ ದಿನವನ್ನು ( National Pet Day ) ಸ್ಮರಿಸುತ್ತಾ, ರಶ್ಮಿಕಾ ತಮ್ಮ ಮೆಚ್ಚಿನ ಶ್ವಾನಗಳ ಜತೆ ಇರುವ ವಿಡಿಯೊ ಹಂಚಿಕೊಂಡಿದ್ದಾರೆ. ವಿಡಿಯೊದಲ್ಲಿ ರಶ್ಮಿಕಾ ಮಂದಣ್ಣ ಶ್ವಾನಗಳಿಗೆ ತರಬೇತಿ ನೀಡುತ್ತಿರುವುದನ್ನು ನೋಡಬಹುದು. ಆ ಈ ಕ್ಷಣವನ್ನು ಆನಂದಿಸುತ್ತಿರುವುದನ್ನು ಕಾಣಬಹುದು. “ಇಂದು ಸಾಕುಪ್ರಾಣಿಗಳ ದಿನವಾಗಿದೆ. ಈ ಮುದ್ದಾದ ಶ್ವಾನಗಳಿಗೆ ತರಬೇತಿ ನೀಡಲು ನಾನು ತೆಗೆದುಕೊಂಡ ಸಮಯ ನೆನಪಿಸುತ್ತಿದೆ.”ಎಂದು ಬರೆದುಕೊಂಡಿದ್ದಾರೆ.

ರಶ್ಮಿಕಾ ಆಗಾಗ ಸಾಕುಪ್ರಾಣಿಗಳ ಚಿತ್ರ ಮತ್ತು ವಿಡಿಯೊಗಳನ್ನು ಹಂಚಿಕೊಳ್ಳುತ್ತಾರೆ. ನಟಿ ಒಮ್ಮೆ ತನ್ನ ಮುದ್ದಿನ ನಾಯಿ ಔರಾ ಜತೆಗಿನ ಬಾಂಧವ್ಯದ ಹಂಚಿಕೊಂಡಿದ್ದರು. “ನಾವಿಬ್ಬರೂ ಒಬ್ಬರಿಗೊಬ್ಬರು ಅತ್ಯಂತ ಸಂತೋಷದಿಂದ ಇದ್ದೇವೆ ಎಂದು ನನಗೆ ಅನಿಸುತ್ತದೆ. ಅವಳ ಪ್ರೀತಿಗೆ ಸಾಟಿಯಿಲ್ಲ. ನಾನು ಅಳುವುದನ್ನು ನೋಡಿದಾಗಲೆಲ್ಲ ಅವಳಿಗೆ ಕಣ್ಣೀರು ಬರುತ್ತದೆʼʼಎಂದು ಹೇಳಿಕೊಂಡಿದ್ದರು.

 `ನ್ಯಾಷನಲ್‌ ಕ್ರಶ್‌’ ಕೈಯಲ್ಲಿರುವ ಸಿನಿಮಾಗಳೆಷ್ಟು?

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ಬ್ಯುಸಿ ಕಲಾವಿದೆಯರಲ್ಲಿ ಒಬ್ಬರು. ವಿವಿಧ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಇದೀಗ ಸದ್ದಿಲ್ಲದೆ ತಮ್ಮ ನಾಲ್ಕನೇ ಹಿಂದಿ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಬಾಲಿವುಡ್‌ ನಟ ವಿಕ್ಕಿ ಕೌಶಲ್‌ (Vicky Kaushal) ಜತೆ ಅಭಿನಯಿಸುತ್ತಿರುವ ಮೊದಲ ಚಿತ್ರ ʼಛಾವಾʼ (Chhava)ದ ಶೂಟಿಂಗ್‌ ಅನ್ನು ರಶ್ಮಿಕಾ ಪೂರ್ಣಗೊಳಿಸಿದ್ದಾರೆ.

ಹಿಂದಿ ಮತ್ತು ಮರಾಠಿ ಚಿತ್ರಗಳನ್ನು ನಿರ್ದೇಶಿಸಿರುವ ಲಕ್ಷ್ಮಣ್‌ ಉಟೇಕರ್ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಐತಿಹಾಸಿಕ ಚಿತ್ರ ʼಛಾವಾʼ. ಈ ಮೂಲಕ ಅವರು ಮರಾಠ ಯೋಧ ಛತ್ರಪತಿ ಸಂಭಾಜಿ ಮಹಾರಾಜ್ ಅವರ ಕಥೆಯನ್ನು ತೆರೆ ಮೇಲೆ ತರುತ್ತಿದ್ದಾರೆ. ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ವಿಕ್ಕಿ ಕೌಶಲ್‌ ನಟಿಸುತ್ತಿದ್ದು, ಅವರ ಪತ್ನಿ ಯೇಸುಬಾಯಿಯಾಗಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿ ರಶ್ಮಿಕಾ ಐತಿಹಾಸಿಕ ಚಿತ್ರವೊಂದರ ಭಾಗವಾಗುತ್ತಿದ್ದಾರೆ.

ಸೂಪರ್ ಸ್ಟಾರ್ ಧನುಷ್ (Actor Dhanush) ಅವರ ʻಡಿ 51ʼ ಸಿನಿಮಾ ಟೈಟಲ್‌ ರಿವೀಲ್‌ ಆಗಿದೆ. ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಕನ್ನಡಕ್ಕೂ ಡಬ್ ಆಗಿ ಬಿಡುಗಡೆ ಆಗಲಿದೆ. ಸದ್ಯ ಈ ಚಿತ್ರಕ್ಕೆ ‘ಕುಬೇರ’ ಎನ್ನುವ ಟೈಟಲ್ ಫಿಕ್ಸ್ ಆಗಿದೆ. ನಟ ಧನುಷ್ ಗಡ್ಡ ಬಿಟ್ಟು ನಗುತ್ತ ನೋಡುತ್ತಿರುವ ಪೋಸ್ಟರ್‌ ರಿಲೀಸ್ ಮಾಡಲಾಗಿದೆ. ಈ ಚಿತ್ರಕ್ಕೆ ರಶ್ಮಿಕಾ ನಾಯಕಿ.

ನಟಿ ರಶ್ಮಿಕಾ ಮಂದಣ್ಣ (Rashmika Mandanna) ‘ದಿ ಗರ್ಲ್‌ಫ್ರೆಂಡ್’ ಎಂಬ ರೋಮಾಂಚಕ ಪ್ರೇಮಕಥೆಯಲ್ಲಿ ನಾಯಕಿಯಾಗಿ ನಟಿಸಲು ಸಿದ್ಧರಾಗಿದ್ದಾರೆ. ಏಳು ವರ್ಷಗಳ ವೃತ್ತಿಜೀವನದಲ್ಲಿ ಇದು ನಟಿಯ 24ನೇ ಚಿತ್ರವಾಗಿದೆ. ‘ದಿ ಗರ್ಲ್‌ಫ್ರೆಂಡ್’ ರಶ್ಮಿಕಾ ಅವರ ಸೋಲೊ ಸಿನಿಮಾ ಎನ್ನಲಾಗಿದೆ. ಚಿತ್ರವನ್ನು ರಾಹುಲ್ ರವೀಂದ್ರನ್ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾಗೆ ಕನ್ನಡದ ‘ದಿಯಾ’ ಚಿತ್ರದಲ್ಲಿ ನಟಿಸಿ ಗೆದ್ದಿದ್ದ ನಟ ದೀಕ್ಷಿತ್ ಶೆಟ್ಟಿ ಚಿತ್ರದಲ್ಲಿ ಹೀರೊ ಆಗಿ ನಟಿಸಿದ್ದಾರೆ. ಇತ್ತೀಚೆಗೆ ತೆಲುಗಿನ ‘ದಸರಾ’ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ ನಟ ನಾನಿ ಸ್ನೇಹಿತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading

ಟಾಲಿವುಡ್

Anupama Parameswaran: ಅನುಪಮಾ ಪರಮೇಶ್ವರನ್‌ಗೆ ಜ್ಯೂ.ಎನ್‌ಟಿಆರ್‌ ಫ್ಯಾನ್ಸ್‌ನಿಂದ ಅವಮಾನ!

Anupama Parameswaran: ಜ್ಯೂನಿಯರ್‌ ಎನ್‌ಟಿಆರ್‌ ಭಾಗಿಯಾಗಿದ್ದರಿಂದ ಈವೆಂಟ್‌ಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಅಭಿಮಾನಿಗಳು ತೆಲುಗು ಸೂಪರ್‌ಸ್ಟಾರ್ ಜ್ಯೂನಿಯರ್‌ ಎನ್‌ಟಿಆರ್‌ ವೇದಿಕೆಗೆ ಬರಬೇಕೆಂದು ಒತ್ತಾಯಿಸುತ್ತಲೇ ಇದ್ದರು. ಚಿತ್ರದ ನಾಯಕಿ ಅನುಪಮಾ ಪರಮೇಶ್ವರನ್ ಈ ವೇಳೆ ಭಾಷಣ ಮಾಡಲು ವೇದಿಕೆಯನ್ನು ಏರಿದಾಗ ಅವರಿಗೆ ಮಾತನಾಡಲು ಬಿಡಲೇ ಇಲ್ಲ. ನಟಿ ಭಾಷಣ ಆರಂಭಿಸುವ ಮೊದಲೇ ನಿಮ್ಮ ಭಾಷಣ ಬೇಕಿಲ್ಲ ಎಂದು ಗಲಾಟೆ ಮಾಡಿದ್ದಾರೆ.

VISTARANEWS.COM


on

Anupama Parameswaran insulted By Jr NTR Fans tillu square success event
Koo

ಬೆಂಗಳೂರು: ನಟ ಸಾರ್ವಭೌಮʼ ಚಿತ್ರದ ನಟಿ ಅನುಪಮಾ ಪರಮೇಶ್ವರನ್ (Anupama Parameswaran) ಅಭಿನಯದ `ಟಿಲ್ಲು ಸ್ಕ್ವೇರ್’ ಸಿನಿಮಾ 100 ಕೋಟಿ ರೂ. ಗಳಿಕೆ ಕಂಡಿದ್ದು ಗೊತ್ತೇ ಇದೆ. 2002ರಲ್ಲಿ ಬಂದಿದ್ದ `ಡಿಜೆ ಟಿಲ್ಲು’ ಚಿತ್ರದ ಮುಂದುವರಿದ ಭಾಗ ಈ `ಟಿಲ್ಲು ಸ್ಕ್ವೇರ್’. ಸಿದ್ದು ಜೊನ್ನಲಗಡ್ಡ ( Siddhu Jonnalagadda ) ಈ ಚಿತ್ರದ ನಾಯಕ. ಸಿದ್ದು ಜೊನ್ನಲಗಡ್ಡ ಹಾಗೂ ನಟಿ ಅನುಪಮಾ ಪರಮೇಶ್ವರನ್ ಒಟ್ಟಾಗಿ ಕಾಣಿಸಿಕೊಂಡಿರುವ ‘ಟಿಲ್ಲು ಸ್ಕ್ವೇರ್’ (Tillu Square) ಸಿನಿಮಾದಲ್ಲಿ ನಟಿ ಮೈ ಚಳಿ ಬಿಟ್ಟು ನಟಿಸಿದ್ದಾರೆ. ಚಿತ್ರತಂಡ ಇತ್ತೀಚೆಗೆ ಯಶಸ್ಸನ್ನು ಆಚರಿಸಿಲು ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ವೇಳೆ ಜ್ಯೂನಿಯರ್‌ ಎನ್‌ಟಿಆರ್‌ ಅವರು (Jr NTR Fans) ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಜ್ಯೂನಿಯರ್‌ ಎನ್‌ಟಿಆರ್‌ ಫ್ಯಾನ್ಸ್‌ ನಟಿಗೆ ಅವಮಾನ ಮಾಡಿದ್ದಾರೆ.

ಜ್ಯೂನಿಯರ್‌ ಎನ್‌ಟಿಆರ್‌ ಭಾಗಿಯಾಗಿದ್ದರಿಂದ ಈವೆಂಟ್‌ಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಅಭಿಮಾನಿಗಳು ತೆಲುಗು ಸೂಪರ್‌ಸ್ಟಾರ್ ಜ್ಯೂನಿಯರ್‌ ಎನ್‌ಟಿಆರ್‌ ವೇದಿಕೆಗೆ ಬರಬೇಕೆಂದು ಒತ್ತಾಯಿಸುತ್ತಲೇ ಇದ್ದರು. ಚಿತ್ರದ ನಾಯಕಿ ಅನುಪಮಾ ಪರಮೇಶ್ವರನ್ ಈ ವೇಳೆ ಭಾಷಣ ಮಾಡಲು ವೇದಿಕೆಯನ್ನು ಏರಿದಾಗ ಅವರಿಗೆ ಮಾತನಾಡಲು ಬಿಡಲೇ ಇಲ್ಲ. ನಟಿ ಭಾಷಣ ಆರಂಭಿಸುವ ಮೊದಲೇ ನಿಮ್ಮ ಭಾಷಣ ಬೇಕಿಲ್ಲ ಎಂದು ಗಲಾಟೆ ಮಾಡಿದ್ದಾರೆ.

ಇದನ್ನೂ ಓದಿ: Anupama Parameswaran: ಸಿದ್ದು ಜೊನ್ನಲಗಡ್ಡ ತುಟಿಗೆ ಮುತ್ತಿಟ್ಟ ಅನುಪಮಾ ಪರಮೇಶ್ವರನ್!

ನಟಿ ಕೂಡ ವೇದಿಕೆಯಲ್ಲಿ, “ನಾನು ಮಾತನಾಡಬೇಕೇ ಅಥವಾ ಬೇಡವೇ?” ಎಂದು ಪ್ರಶ್ನೆ ಇಟ್ಟಾಗ ನೆರೆದಿದ್ದ ಅಭಿಮಾನಿಗಳು ʻಬೇಡʼ ಎಂದು ಕೂಗಲು ಆರಂಭಿಸಿದ್ದಾರೆ. ಜತೆಗೆ ಜ್ಯೂನಿಯರ್‌ ಎನ್‌ಟಿಆರ್‌ ಮಾತನಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದಾದ ಬಳಿಕ ಅನುಪಮಾ ಅವರು ವೇದಿಕೆಯಲ್ಲಿ ಹೀಗೆ ಅಂದರು. ʻʻಸರಿ ನಾನು ಮಾತನಾಡುವುದಿಲ್ಲ. ಕೇವಲ ಒಂದು ನಿಮಿಷ ತೆಗೆದುಕೊಳ್ಳುತ್ತೇನೆʼʼ ಎಂದರು.

” ನಾನು ಕೇವಲ ಒಂದೇ ಒಂದು ನಿಮಿಷ ತೆಗೆದುಕೊಳ್ಳುತ್ತೇನೆ. ನಿಮ್ಮ ಪ್ರೀತಿಗೆ ಧನ್ಯವಾದಗಳು. ನಾನು ನಿಮ್ಮ ಸಮಯವನ್ನು ಹಾಳು ಮಾಡುವುದಿಲ್ಲ. ಎನ್‌ಟಿಆರ್ ಅವರೇ ನೀವು ಇಲ್ಲಿಗೆ ಬಂದಿದ್ದಕ್ಕೆ ಧನ್ಯವಾದಗಳು. ನನಗೆ ಏನೂ ಬೇಜಾರಾಗಿಲ್ಲ. ಯಾಕೆಂದರೆ, ಅವರ ಭಾವನೆಗಳೇನು ಎನ್ನುವುದು ನಾನು ಅರ್ಥೈಸಿಕೊಳ್ಳಬಲ್ಲೆ.” ಎಂದು ಹೇಳಿ ವೇದಿಕೆ ಇಳಿದರು. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ಕೂಡ ನಟಿಗೆ ಇಂತಹ ಸಂದರ್ಭವನ್ನು ಹ್ಯಾಂಡಲ್‌ ಮಾಡಿದ್ದಕ್ಕೆ ಭೇಷ್‌ ಎನ್ನುತ್ತಿದ್ದಾರೆ.

ಅನುಪಮಾ ನಂತರ ಇನ್‌ಸ್ಟಾಗ್ರಾಮ್‌ನಲ್ಲಿ ಜ್ಯೂನಿಯರ್‌ ಎನ್‌ಟಿಆರ್‌ ಮತ್ತು ನಿರ್ದೇಶಕ ತ್ರಿವಿರಾಮ್ ಶ್ರೀನಿವಾಸ್ ಅವರೊಂದಿಗೆ ಇರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. , “ಜ್ಯೂನಿಯರ್‌ ಎನ್‌ಟಿಆರ್‌, ಮಾಸ್ ಅಪೀಲ್‌ನ ಸಾರಾಂಶ, ಅವರ ಪ್ರತಿಭೆ , ಅವರ ನಟನಾ ಕೌಶಲ್ಯ ,ಮೋಡಿಮಾಡುವ ಡೈಲಾಗ್ ಡೆಲಿವರಿಯವರೆಗೆ ನನ್ನನ್ನು ಯಾವಾಗಲೂ ಮಂತ್ರಮುಗ್ಧಗೊಳಿಸುತ್ತದೆ. ಅವರೊಂದಿಗೆ ವೇದಿಕೆಯನ್ನು ಹಂಚಿಕೊಂಡಿದ್ದು ನನಗೆ ಸಿಕ್ಕ ಆಶೀರ್ವಾದʼʼಎಂದು ಬರೆದಿಕೊಂಡಿದ್ದಾರೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಅನುಪಮಾ ಅವರನ್ನು ಅಭಿಮಾನದ ಹೆಸರಿನಲ್ಲಿ ಅಗೌರವ ತೋರಿದ್ದಾರೆ ಎಂದು ಹಲವರು ಟೀಕಿಸಿದ್ದಾರೆ. “ಇದು ನಟಿಯ ಯಶಸ್ಸಿನ ಸಂತೋಷವನ್ನು ಹಂಚಿಕೊಳ್ಳಲು ಕಾರ್ಯಕ್ರಮವಾಗಿತ್ತು. ಆದರೆ ಅಲ್ಲಿರುವ ಜನರು ತುಂಬಾ ಅಸಭ್ಯವಾಗಿ ವರ್ತಿಸಿದರು. ನಟಿಗೆ ಕೊನೆ ಪಕ್ಷ ಮಾತನಾಡಲು ಬಿಟ್ಟಿಲ್ಲʼʼಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Anupama Parameswaran: ಎದೆ ಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡ ಅನುಪಮಾ ಪರಮೇಶ್ವರನ್; ಇದು ನೀವೇನಾ? ಅಂದ್ರು ನೆಟ್ಟಿಗರು!

ಟಿಲ್ಲು ಸ್ಕ್ವೇರ್’ ಒಳ್ಳೆಯ ಕಥಾಹಂದರ ಮತ್ತು ಆಕರ್ಷಕ ಪ್ರದರ್ಶನ ಪ್ರೇಕ್ಷಕರನ್ನು ಮೋಡಿ ಮಾಡಿದೆ.
ಟಿಲ್ಲು ಸ್ಕ್ವೇರ್‌ನ ನಿರ್ಮಾಪಕರ ಇತ್ತೀಚಿನ ವರದಿಗಳ ಪ್ರಕಾರ, ಚಿತ್ರವು ಈಗಾಗಲೇ ಕೇವಲ 9 ದಿನಗಳಲ್ಲಿ ವಿಶ್ವಾದ್ಯಂತ 100 ಕೋಟಿ ರೂಪಾಯಿಗಳನ್ನು ದಾಟಿದೆ. ತೆಲುಗು ಚಿತ್ರ ಟಿಲ್ಲು ಸ್ಕ್ವೇರ್ 100 ಕೋಟಿ ಗಳಿಸಿದ ಮೊದಲ ಹಾಸ್ಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ʻಜಾತಿ ರತ್ನಲುʼ ಸಿನಿಮಾ ಈ ಮುಂಚೆ ದಾಖಲೆ ಮಾಡಿತ್ತು.

ಟಿಲ್ಲು ಸ್ಕ್ವೇರ್ ಚಿತ್ರವನ್ನ ಮಲ್ಲಿಕ್ ರಾಮ್ ನಿರ್ದೇಶಿಸಿದ್ದಾರೆ. ಸೂರ್ಯದೇವರ ನಾಗ ವಂಶಿ ಹಾಗೂ ಸಾಯಿ ಸೌಜನ್ಯ ಚಿತ್ರವನ್ನ ನಿರ್ಮಾಣ ಮಾಡಿದ್ದಾರೆ. `ಟಿಲ್ಲು ಸ್ಕ್ವೇರ್’ ಸಿನಿಮಾದಲ್ಲಿ ಸಖತ್ ಬೋಲ್ಡ್ ದೃಶ್ಯಗಳು ಇವೆ.

Continue Reading
Advertisement
Chikkaballapur Lok Sabha Constituency BJP Candidate Dr K Sudhakar is campaigning in various places today
ಚಿಕ್ಕಬಳ್ಳಾಪುರ20 mins ago

Lok Sabha Election 2024: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ರಿಂದ ಏ.13ರಂದು ಪ್ರಚಾರ

Union Minister Pralhad Joshi statement
ಹುಬ್ಬಳ್ಳಿ21 mins ago

Lok Sabha Election 2024: ದೇಶದ್ರೋಹಿ ಕೃತ್ಯ ನಿಗ್ರಹಕ್ಕೆ ಮೋದಿ ಸರ್ಕಾರವೇ ಬೇಕು: ಪ್ರಲ್ಹಾದ್‌ ಜೋಶಿ

Union Minister Pralhad Joshi latest statement in hubli
ಕರ್ನಾಟಕ23 mins ago

Lok Sabha Election 2024: ರಾಜ್ಯದಲ್ಲಿ ಕಾಂಗ್ರೆಸ್ 3ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲಲ್ಲ: ಪ್ರಲ್ಹಾದ್‌ ಜೋಶಿ ಸವಾಲು

Rashtrotthana Hospital adopts Dozi technology to provide greater safety to patients
ಕರ್ನಾಟಕ25 mins ago

Rashtrotthana Parishat: ಡೋಝಿ ತಂತ್ರಜ್ಞಾನ ಅಳವಡಿಸಿಕೊಂಡ ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆ

Iran- israel War
ದೇಶ29 mins ago

Iran- Israel War : ಮುಂದಿನ 48 ಗಂಟೆಗಳೊಳಗೆ ಇರಾನ್-ಇಸ್ರೇಲ್ ಭೀಕರ ಯುದ್ಧ ಶುರು!

Rain News
ಪ್ರಮುಖ ಸುದ್ದಿ38 mins ago

Rain News: ರಾಜ್ಯದ ವಿವಿಧೆಡೆ ಮಳೆ ಆರ್ಭಟ; ಸಿಡಿಲು ಬಡಿದು ಗದಗದಲ್ಲಿ 20, ಶಿವಮೊಗ್ಗದಲ್ಲಿ 18 ಕುರಿ ಸಾವು

SK Jain
ಕರ್ನಾಟಕ55 mins ago

SK Jain: ಅನಾರೋಗ್ಯದಿಂದ ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್ ನಿಧನ

IPL 2024
ಪ್ರಮುಖ ಸುದ್ದಿ1 hour ago

IPL 2024 : ಆನ್​ಫೀಲ್ಡ್​ ಅಂಪೈರ್​ ಜತೆ ವಾಗ್ವಾದ ನಡೆಸಿದ ರಿಷಭ್ ಪಂತ್​; ಏನಾಯಿತು ಅವರಿಗೆ?

Lok Sabha Election 2024 Will your vote get respect and dignity if you vote for BJP CM Siddaramaiah question
Lok Sabha Election 20242 hours ago

Lok Sabha Election 2024: ಬಿಜೆಪಿಗೆ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ, ಘನತೆ ಬರುತ್ತಾ? ಸಿಎಂ ಪ್ರಶ್ನೆ

David Warner
ಕ್ರೀಡೆ2 hours ago

David Warner : ಬಾಹುಬಲಿ ರಾಜಮೌಳಿ ನಿರ್ದೇಶನದಲ್ಲಿ ಕ್ರಿಕೆಟಿಗ ಡೇವಿಡ್​ ವಾರ್ನರ್ ಆ್ಯಕ್ಟಿಂಗ್​; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rameshwaram Cafe Blast Fake IDs created and captured bombers hiding in Kolkata
ಕ್ರೈಂ10 hours ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ18 hours ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 day ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20241 day ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಹೂಡಿಕೆ ವ್ಯವಹಾರದಲ್ಲಿ ಅಧಿಕ ಲಾಭ

Ugadi 2024
ಬಾಗಲಕೋಟೆ3 days ago

Ugadi 2024 : ಬೀಳಗಿಯ ಎಕ್ಕೆ ಎಲೆ ಭವಿಷ್ಯ; ಈಶಾನ್ಯ, ಪಶ್ಚಿಮ ಭಾಗದಲ್ಲಿ ಭಾರಿ ಕಂಟಕ!

ugadi 2024
ಧಾರವಾಡ3 days ago

Ugadi 2024 : ಹನುಮನಕೊಪ್ಪದಲ್ಲಿ ಭವಿಷ್ಯ ನುಡಿದ ಬೊಂಬೆ! ಮುಂದಿನ ಪ್ರಧಾನಿ ಯಾರಾಗ್ತಾರೆ?

Dina Bhavishya
ಭವಿಷ್ಯ4 days ago

Dina Bhavishya : ನೂತನ ಸಂವತ್ಸರದಲ್ಲಿ ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ

Dina Bhavishya
ಭವಿಷ್ಯ5 days ago

Dina Bhavishya : ಅತಿರೇಕದ ಮಾತು ಈ ರಾಶಿಯವರಿಗೆ ಒಳ್ಳೆಯದಲ್ಲ

Rockstar Bull of bull festival king fame passes away
ಹಾವೇರಿ5 days ago

Rockstar Bull: ಹೋರಿ ಹಬ್ಬದ ಕಿಂಗ್ ಖ್ಯಾತಿಯ ರಾಕ್‌ ಸ್ಟಾರ್‌ ಬುಲ್‌ ಇನ್ನಿಲ್ಲ; ಬೊಮ್ಮಾಯಿ ಕಂಬನಿ

ಟ್ರೆಂಡಿಂಗ್‌