ಬೆಂಗಳೂರು: ಮಲಯಾಳಂ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ( Prithviraj Sukumaran) ಅಭಿನಯದ ಮತ್ತು ಬ್ಲೆಸ್ಸಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ʻಆಡುಜೀವಿತಂʼ (Aadujeevitham Movie) ಮಾರ್ಚ್ 28ರಂದು ಅದ್ಧೂರಿಯಾಗಿ ತೆರೆ ಕಂಡಿದೆ. ಚಿತ್ರವನ್ನು ಕಂಡು ವೀಕ್ಷಕರು ಮೂಕಸ್ಮಿತರಾಗಿದ್ದಾರೆ. ವಿಶೇಷವಾಗಿ ಪೃಥ್ವಿರಾಜ್ ಸುಕುಮಾರನ್ ಅವರ ಅಭಿನಯಕ್ಕೆ ಮನಸೋತಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಪ್ರೇಕ್ಷಕರು ಮೆಚ್ಚುಗೆ ಹೊರಹಾಕಿದ್ದಾರೆ. ಇದೀಗ ಭಾರತದಲ್ಲಿ ಚಿತ್ರದ ಗಳಿಕೆ ಎರಡನೇ ದಿನ 6.50 ಕೋಟಿ ರೂಪಾಯಿ ಆಗಿದೆ. ಈ ಮೂಲಕ ಒಟ್ಟಾರೆ ಕಲೆಕ್ಷನ್ (Aadujeevitham Box Office) 14.10 ಕೋಟಿ ರೂಪಾಯಿ ದಾಟಿದೆ.
ಭಾರತದಲ್ಲಿ ಮೊದಲ ದಿನವೇ ಚಿತ್ರ 7.60 ಕೋಟಿ ಗಳಿಸಿತು. ಎರಡನೇ ದಿನದಲ್ಲಿ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಕೇವಲ 6.50 ಕೋಟಿ ರೂ. ಗಳಿಸಿದೆ ಎಂದು ವರದಿಯಾಗಿದೆ, ಆ ಮೂಲಕ ಬಿಡುಗಡೆಯಾದ ಎರಡು ದಿನಗಳಲ್ಲಿ ಎಲ್ಲಾ ಭಾರತೀಯ ಭಾಷೆಗಳಿಂದ ಒಟ್ಟು 14.10 ಕೋಟಿ ರೂ. ಕಲೆಕ್ಷನ್ ಆಗಿದೆ. ಮಲಯಾಳಂ ಚಿತ್ರರಂಗದಿಂದಲೇ 11.82 ಕೋಟಿ ರೂಪಾಯಿ ಗಳಿಕೆ ಆಗಿದೆ. ಕನ್ನಡದಿಂದ ಕೇವಲ 90 ಲಕ್ಷ ರೂಪಾಯಿ ಕಲೆಕ್ಷನ್ ಆಗಿದೆ. ಈ ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲ್ಮ್ಸ್ ಹಂಚಿಕೆ ಮಾಡಿದೆ. ಮೊದಲ ದಿನ ಶೇ. 57.79 ಆಕ್ಯುಪೆನ್ಸಿ ಇದ್ದರೆ, ಎರಡನೇ ದಿನದ ಆಕ್ಯುಪೆನ್ಸಿ ಶೇ. 75.09ರಷ್ಟು ಇತ್ತು. ಬಹ್ರೇನ್, ಕತಾರ್, ಮತ್ತು ಒಮಾನ್ ಸೇರಿದಂತೆ ʻಆಡುಜೀವಿತಂʼ ಮಾರ್ಚ್ 28ರಂದು ಯುನೈಟೆಡ್ ಅರಬ್ ಎಮಿರೇಟ್ಸ್‌ನ (United Arab Emirates) ಚಿತ್ರಮಂದಿರಗಳಲ್ಲಿ ತೆರೆಕಂಡಿತು.ʼ
ಇದನ್ನೂ ಓದಿ: Prithviraj Sukumaran: ಪೃಥ್ವಿರಾಜ್ ಸುಕುಮಾರನ್ ಅಭಿನಯದ ‘ಆಡುಜೀವಿತಂ’ ಚಿತ್ರಕ್ಕೆ ಪ್ರೇಕ್ಷಕರು ಫಿದಾ!
RECORD WEEKEND & FASTEST 50 CRORES LOADING 🔥🔥🔥
— AB George (@AbGeorge_) March 29, 2024
PHENOMENAL RUN. 2 DAYS 30+ CRORES 🥵🥵🥵
DESERT STORM IN THE BOX OFFICE #TheGoatLife #Aadujeevitham https://t.co/zfEq07vRHY
ಆಡು ಜೀವಿತಂ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ ಕಥೆ ಆಧರಿಸಿದ ಚಿತ್ರವಾಗಿದೆ.
ಆಡು ಜೀವಿತಂ ಚಿತ್ರದ ಕಥೆ ವಲಸಿಗರ ಸಮಸ್ಯೆ ಸುತ್ತ ಸುತ್ತುತ್ತದೆ. ದುಡಿಮೆಗಾಗಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಪಟ್ಟಂತ ಕಷ್ಟಗಳು ಆತನ ಪಾಸ್‌ಪೋರ್ಟ್ ಕಸಿದು ಆತನಿಗೆ ಕೊಟ್ಟಂತಹ ಹಿಂಸೆಗಳು, ಆ ಬಿಸಿಲಿನ ಮರುಭೂಮಿಯಲ್ಲಿ ಆತ ಅನುಭವಿಸಿದ ಸಂಕಷ್ಟಗಳ ಕಥನವೇ ಈ ಆಡು ಜೀವಿತಂ.
ಇದನ್ನೂ ಓದಿ: Aadujeevitham Movie: ರಿಲೀಸ್‌ಗೆ ಸಜ್ಜಾಗುತ್ತಿದೆ ʻಆಡುಜೀವಿತಂʼ!
I'm literally out of words.. Love you @PrithviOfficial ❤️
— 𝗔𝗺𝗮𝗹 (@amal__online) March 30, 2024
Watched the film last night and I'm still not out of it.Felt a pain in my throat whenever (Prithvi)Najeeb cries. Blessy once again proved why he is the best. A great cinema and an Outstanding performance.#Aadujeevitham pic.twitter.com/oJ9ETytFBi
ಏನಿದೆ ಆಡುಜೀವಿತಂ ಸಿನಿಮಾ ಕಥೆ?
ಹಣ ಸಂಪಾದಿಸಲು ಸೌದಿ ಅರೇಬಿಯಾಕ್ಕೆ ಹೋದ ಭಾರತೀಯ ವಲಸೆ ಕಾರ್ಮಿಕ ನಜೀಬ್ ಮುಹಮ್ಮದ್ ನಿಜ ಜೀವನದ ಘಟನೆ ಇದು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ವಿಧಿಯ ವೈಚಿತ್ರ್ಯದಿಂದಾಗಿ ನಜೀಬ್ ಗುಲಾಮನ ಬದುಕನ್ನು ಬದುಕಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಅವನು ಮರುಭೂಮಿಯ ಮಧ್ಯದಲ್ಲಿ ಮೇಕೆಗಳನ್ನು ಮೇಯಿಸಬೇಕಾಗುತ್ತದೆ. ಆಡು ಜೀವಿತಂ ಅಂದರೆ ಆಡಿನ ಬದುಕು ಅಂಥ ಅರ್ಥ. ಇಂಗ್ಲಿಷ್‌ನಲ್ಲಿ ಇದರ ಟೈಟಲ್ GOAT LIFE ಎಂದಿದೆ.
ಪರ್ಷಿಯನ್ ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಮನೆಗೆ ಕಳುಹಿಸುವಷ್ಟು ಹಣ ಸಂಪಾದಿಸುವುದು ನಜೀಬ್ ಅವರ ಕನಸಾಗಿತ್ತು. ಆದರೆ, ಸೌದಿ ಮರುಭೂಮಿಯ ಮಧ್ಯದಲ್ಲಿ ಆಡುಗಳನ್ನು ಮೇಯಿಸುವ ಗುಲಾಮಗಿರಿಯ ಕೆಲಸಕ್ಕೆ ಒಡ್ಡಿಕೊಳ್ಳಬೇಕಾದ ಅನಿವಾರ್ಯತೆ ಏನು ಬಂತು? ಅವನು ಕೊನೆಗೂ ತನ್ನನ್ನು ತಾನು ಹೇಗೆ ಬಂಧಮುಕ್ತಗೊಳಿಸಿಕೊಳ್ಳುತ್ತಾನೆ ಎನ್ನುವುದೊಂದು ದೊಡ್ಡ ಹೋರಾಟದ ಕಥೆ.