ಬೆಂಗಳೂರು: ಹಿರಿಯ ನಟ ಮೋಹನ್‌ಲಾಲ್ (Actor Mohanlal) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ಆರೋಗ್ಯ ತೊಂದರೆ ಕಾರಣ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ಶ್ವಾಸಕೋಶದ ವೈರಲ್ ಸೋಂಕು ಇದೆ ಎಂದು ಹೇಳಿರುವುದಾಗಿ ವರದಿಯಾಗಿದೆ.
ಐದು ದಿನಗಳವರೆಗೆ ವಿಶ್ರಾಂತಿಗೆ ತಿಳಿಸಲಾಗಿದೆ. ಸಾರ್ವಜನಿಕ ಭೇಟಿ ತಪ್ಪಿಸಲು ಮತ್ತು ಸೂಚಿಸಲಾದ ಔಷಧಿ ಸೂಚನೆ ಅನುಸರಿಸಲು ಸಲಹೆ ನೀಡಲಾಗಿದೆ. ಆಸ್ಪತ್ರೆಯ ಅಧಿಕೃತ ಹೇಳಿಕೆಯನ್ನು ಶ್ರೀಧರ್ ಪಿಳ್ಳೈ ಹಂಚಿಕೊಂಡಿದ್ದಾರೆ.
‘ಎಲ್ 2: ಎಂಪುರಾನ್’ ಮತ್ತು ಅವರ ನಿರ್ದೇಶನದ ಚೊಚ್ಚಲ ‘ಬರೋಜ್’ ನ ಪೋಸ್ಟ್-ಪ್ರೊಡಕ್ಷನ್ ಚಿತ್ರೀಕರಣವನ್ನು ಮುಗಿಸಿದ ನಂತರ, ಮೋಹನ್ ಲಾಲ್ ಗುಜರಾತ್‌ನಿಂದ ಕೊಚ್ಚಿಗೆ ಮರಳಿದ್ದರು. ಅಲ್ಲಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು ಎನ್ನಲಾಗಿದೆ. ಇತ್ತೀಚಿನ ವೈದ್ಯಕೀಯ ವರದಿಗಳ ಪ್ರಕಾರ ನಟ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: Kannada New Movie: ಹೊಸ ಪ್ರತಿಭೆಗಳ ಸಿನಿಮಾ ‘ವೈಕುಂಠ ಸಮಾರಾಧನೆʼ; ಕನ್ನಡದಲ್ಲಿ ಹೀಗೊಂದು ಚಿತ್ರ!
ಸಿನಿಮಾ ವಿಚಾರಕ್ಕೆ ಬಂದರೆ ʻಬರೋಜ್ʼ ಚಿತ್ರವು ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದೆ. ಇದು ನಟನ ಮೊದಲ ನಿರ್ದೇಶನದ ಸಿನಿಮಾ. ಈ ಚಲನಚಿತ್ರವನ್ನು ಆರಂಭದಲ್ಲಿ ಮಾರ್ಚ್ 28, 2024 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.
ಬರೋಜ್ʼ ಸಿನಿಮಾವನ್ನು ಮೋಹನ್ ಲಾಲ್ ಅವರೇ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ನಾಯಕರಾಗಿಯೂ ನಟಿಸಿದ್ದಾರೆ. ಬರೋಜ್ 2018ರಲ್ಲಿ ಘೋಷಿಸಲಾಯಿತು. ಅಂತಿಮವಾಗಿ ಐದು ವರ್ಷಗಳ ನಂತರ ಸೆಟ್ಟೇರಿದೆ. ಮೈ ಡಿಯರ್ ಕುಟ್ಟಿಚತನ್ ಚಲನಚಿತ್ರ ನಿರ್ಮಾಪಕ ಜಿಜೋ ಪುನ್ನೂಸ್ ಆರಂಭದಲ್ಲಿ ಚಿತ್ರದ ನಿರ್ದೇಶಕ ಎಂದು ಹೇಳಲಾಗಿತ್ತು. 3ಡಿ ಫ್ಯಾಂಟಸಿ ಈ ಸಿನಿಮಾದ ಛಾಯಾಗ್ರಹಣವನ್ನು ಸಂತೋಷ್ ಶಿವನ್ ನಿರ್ವಹಿಸುತ್ತಿದ್ದರೆ, ಲಿಡಿಯನ್ ನಾದಸ್ವರನ್ ಮತ್ತು ಮಾರ್ಕ್ ಕಿಲಿಯನ್ ಸಂಗೀತ ಸಂಯೋಜಿಸಿದ್ದಾರೆ. ಇದನ್ನು ಆಶೀರ್ವಾದ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಆಂಟೋನಿ ಪೆರುಂಬವೂರ್ ನಿರ್ಮಿಸುತ್ತಿದ್ದಾರೆ.
ಮಾಲಿವುಡ್ ಸ್ಟಾರ್ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್‌ಲಾಲ್ ಜತೆ ನಟಿಸುತ್ತಿದ್ದಾರೆ. ಮೋಹನ್‌ಲಾಲ್ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ.