ಬೆಂಗಳೂರು: ಗ್ರ್ಯಾಂಡ್ ಪ್ರಿಕ್ಸ್ ಪ್ರೈಜ್ ಪ್ರಶಸ್ತಿ ಕಾನ್ ಸಿನಿಮೋತ್ಸವದ ಎರಡನೇ ಅತ್ಯುತ್ತಮ ಪ್ರಶಸ್ತಿಯಾಗಿದೆ. ಪಾಯಲ್ ಕಪಾಡಿಯಾ ನಿರ್ದೇಶನದ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ (All We Imagine as Light) ಸಿನಿಮಾ ಕಾನ್ನ ಗ್ರ್ಯಾಂಡ್ ಪ್ರಿಕ್ಸ್ ಪ್ರೈಜ್ ಪಡೆದ ಮೊದಲ ಭಾರತೀಯ ಸಿನಿಮಾ ಎನಿಸಿಕೊಂಡಿತ್ತು. ʻ ಆಲ್ ವಿ ಇಮ್ಯಾಜಿನ್ ಆಸ್ ಲೈಟ್ʼನಲ್ಲಿನ ಅಭಿನಯಕ್ಕಾಗಿ ಮಲಯಾಳಂ ನಟಿ ʻಕಣಿ ಕುಸರುತಿʼ (Kani Kusruti ) ಜಾಗತಿಕ ಮೆಚ್ಚುಗೆಯನ್ನು ಗಳಿಸಿದರು. ಕಣಿ ಕುಸರುತಿ ನೀಡಿದ ಸಂದರ್ಶನದಲ್ಲಿ, ʻʻಕಡಿಮೆ ಸಿನಿಮಾಗಳು ನನಗೆ ಆಫರ್ ಬಂದಿದ್ದವು. ಹಾಗೇ ನಿರ್ದೇಶಕ ಸುದೀಪ್ತೋ ಸೇನ್ ಅವರ ʻದಿ ಕೇರಳ ಸ್ಟೋರಿʼ ಸಿನಿಮಾ ಆಡಿಷನ್ ಕರೆ ಬಂದಿತ್ತು. ಅದನ್ನು ಕೂಡ ರಿಜೆಕ್ಟ್ ಮಾಡಿದ್ದೆʼʼಎಂದು ಹೇಳಿಕೊಂಡಿದ್ದಾರೆ.
ನಟಿ ಮಾತನಾಡಿ ʻʻನನಗೆ ಬಂದ ಸಿನಿಮಾಗಳನ್ನು ಮಾತ್ರ ನಾನು ಮಾಡಬಲ್ಲೆ. ಸಜಿನ್ ಬಾಬು ಅವರ 2019 ರ ಬಿಡುಗಡೆಯಾದ ʻಬಿರಿಯಾನಿʼ ಸಿನಿಮಾ ನಟನೆಗೆ ಕೇರಳ ರಾಜ್ಯ ಪ್ರಶಸ್ತಿಯನ್ನು ಗೆದ್ದಿದ್ದೆ. ಆದರೆ ನನಗೆ ಹೊಂದಿಕೆಯಾಗದ ಚಿತ್ರಗಳನ್ನು ಮಾಡದಿರಲು ಪ್ರಯತ್ನಿಸುತ್ತೇನೆ. ಉದಾಹರಣೆಗೆ ಕಳೆದ ವರ್ಷ ಬ್ಲಾಕ್ ಬಸ್ಟರ್ ಹಿಟ್ ಆದ ʻದಿ ಕೇರಳ ಸ್ಟೋರಿʼ ಸಿನಿಮಾ. ನಿರ್ದೇಶಕ ಸುದೀಪ್ತೋ ಸೇನ್ ಅವರು ಆಡಿಷನ್‌ಗೆ ಕರೆದಿದ್ದರು. ಆದರೆ ನಾನು ರಿಜೆಕ್ಟ್ ಮಾಡಿದ್ದೆʼʼ ಎಂದು ಬಹಿರಂಗಪಡಿಸಿದರು.
ಈ ಹಿಂದೆ ʻಬಿರಿಯಾನಿʼ ಸಿನಿಮಾದಲ್ಲಿ ಕಣಿ ಕುಸರುತಿ ಸಾಕಷ್ಟು ವಿವಾದಗಳನ್ನು ಎದುರಿಸಿದ್ದರು. ಈ ಬಗ್ಗೆಯೂ ನಟಿ ಹೇಳಿಕೊಂಡಿದ್ದಾರೆ. ʻʻಬಿರಿಯಾನಿ ಸಿನಿಮಾ ವೇಳೆ ನಾನು ಆ ಸ್ಕ್ರಿಪ್ಟ್‌ಗೆ ಹೊಂದಿಕೆಯಾಗುವುದಿಲ್ಲ ಎಂದು ನಾನು ನಿರ್ದೇಶಕ ಸಜಿನ್‌ಗೆ ಹೇಳಿದ್ದೆ. ಸಜಿನ್ ಹಿಂದುಳಿದ ಮುಸ್ಲಿಂ ಸಮುದಾಯದಿಂದ ಬಂದವರು. ಅವರು ಅವರ ಸ್ಥಾನದಲ್ಲಿಯೇ ಯೋಚಿಸುತ್ತಿದ್ದರು. ಅವರ ರಾಜಕೀಯವನ್ನು ಮಾತ್ರ ಮಾತನಾಡುತ್ತಿದ್ದರುʼʼಎಂದರು.
ಇದನ್ನೂ ಓದಿ: Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್ ಆದ ಹಾಲಿವುಡ್ ಬ್ಯೂಟಿ ಕೆಂಡಲ್ ಜೆನ್ನರ್!
ಪಾಯಲ್ ನಿರ್ದೇಶನದ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ (All We Imagine as Light) ಸಿನಿಮಾ ಕಾನ್ನ ಗ್ರ್ಯಾಂಡ್ ಪ್ರಿಕ್ಸ್ ಪ್ರೈಜ್ ( Grand Prix At Cannes) ಪಡೆದ ಮೊದಲ ಭಾರತೀಯ ಸಿನಿಮಾ ಎನಿಸಿಕೊಂಡಿದೆ .77ನೇ ಆವೃತ್ತಿಯ ಕಾನ್ ಫಿಲ್ಮ್ಸ್ ಫೆಸ್ಟಿವಲ್ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿತ್ತು. ಸಿನಿಮಾ ಕಾನ್ನಲ್ಲಿ ಪ್ರದರ್ಶನವಾದಾಗ ಬರೋಬ್ಬರಿ ಎಂಟು ನಿಮಿಷಗಳ ಸ್ಟಾಂಡಿಂಗ್ ಓವಿಯೇಷನ್ ಈ ಸಿನಿಮಾಕ್ಕೆ ದೊರೆತಿತ್ತು.
ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಸಿನಿಮಾವು ಮಲಯಾಳಂ-ಹಿಂದಿ ಸಿನಿಮಾ ಆಗಿದೆ. ಆಸ್ಪತ್ರೆಯಲ್ಲಿ ನರ್ಸ್‌ಗಳಾಗಿ ಸೇವೆ ಸಲ್ಲಿಸುವ ಇಬ್ಬರು ರೂಮ್‌ಮೇಟ್‌ಗಳ ಕಥೆ ಇದರಲ್ಲಿದೆ. ಚಿತ್ರವು ಮೂರು ವಿಭಿನ್ನ ಮಹಿಳೆಯರ ನಡುವಿನ ಸ್ನೇಹದ ಕತೆ ಕೂಡ ಇದೆ. ಕನಿ ಕುಸರುತಿ ಮುಂದೆ ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ನಾಗೇಂದ್ರ ಅವರ ಮಲಯಾಳಂ ಸಿರೀಸ್ ಹನಿಮೂನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.