Site icon Vistara News

Manjummel Boys: ಕನ್ನಡದಲ್ಲೂ ಬರಲಿದೆ ʻಮಂಜುಮ್ಮೆಲ್ ಬಾಯ್ಸ್ʼ? ಒಟಿಟಿಗೆ ಯಾವಾಗ?

Manjummel Boys ott malayalam to premiere on may

ಬೆಂಗಳೂರು: ʼಮಂಜುಮ್ಮೇಲ್ ಬಾಯ್ಸ್’ (Manjummel Boys) ಸಾರ್ವಕಾಲಿಕ ಅತಿ ಹೆಚ್ಚು ಹಣ ಗಳಿಸಿದ ಮಲಯಾಳಂ ಚಿತ್ರವಾಗಿ ಹೊರಹೊಮ್ಮಿತ್ತು. ಮಂಜುಮ್ಮೇಲ್ ಬಾಯ್ಸ್’ ಸಿನಿಮಾವನ್ನು ಪ್ರೇಕ್ಷಕರು ಮಾತ್ರವೇ ಅಲ್ಲದೆ ಸಿನಿಮಾ ಸೆಲೆಬ್ರಿಟಿಗಳು, ಸ್ಟಾರ್ ನಟರು ಸಹ ನೋಡಿ ಮೆಚ್ಚಿಕೊಂಡಿದ್ದರು. ಇದೀಗ ‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾ ಡಿಸ್ನಿ ಪ್ಲಸ್ ಹಾಟ್‌ಸ್ಟರ್‌ನಲ್ಲಿ ಮೇ 3ರಂದು ಸ್ಟ್ರೀಮಿಂಗ್ ಆಗುವುದು ಬಹುತೇಕ ಖಚಿತ ಎಂದು ವರದಿಯಾಗಿದೆ. ಫೆಬ್ರವರಿ 22ರಂದು ತೆರೆಗೆ ಬಂದಿದ್ದ ಸಿನಿಮಾ ಈಗಾಗಲೇ 50 ದಿನ ಪೂರೈಸಿದೆ. ಸದ್ಯ ತೆಲುಗು, ತಮಿಳು, ಕನ್ನಡಕ್ಕೂ ಸಿನಿಮಾ ಡಬ್ ಆಗಿದ್ದು ಏಕಕಾಲಕ್ಕೆ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎನ್ನುವ ಚರ್ಚೆ ನಡೆಯುತ್ತಿದೆ.

ರಜನಿಕಾಂತ್​ಗೆ ಬಹಳ ಇಷ್ಟವಾಗಿತ್ತು ಸಿನಿಮಾ

ಇತ್ತೀಚೆಗಷ್ಟೇ, ಮಂಜುಮ್ಮೆಲ್ ಬಾಯ್ಸ್ ನಿರ್ದೇಶಕ ಚಿದಂಬರಂ ಪೊದುವಾಲ್ (Chidambaram Poduval) ಮತ್ತು ತಂಡ ಸೂಪರ್‌ಸ್ಟಾರ್ ರಜನಿಕಾಂತ್ (Superstar Rajinikanth ) ಅವರನ್ನು ಚೆನ್ನೈನಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ಮಂಜುಮ್ಮೇಲ್ ಬಾಯ್ಸ್’ ಸೂಪರ್ ಸ್ಟಾರ್ ರಜನಿಕಾಂತ್​ಗೆ ಬಹಳ ಇಷ್ಟವಾಗಿದ್ದು, ಚಿತ್ರತಂಡವನ್ನು ಮನೆಗೆ ಆಹ್ವಾನಿಸಿ ಸತ್ಕರಿಸಿದ್ದರು.

ಇದನ್ನೂ ಓದಿ: Manjummel Boys: ʼಮಂಜುಮ್ಮೇಲ್ ಬಾಯ್ಸ್’ ತಂಡಕ್ಕೆ ರಜನಿಕಾಂತ್‌ ಸತ್ಕಾರ!

ಏನಿದು ಕಥೆ?

ಸೌಬಿನ್ ಶಬೀರ್ ಸಿನಿಮಾ ನಿರ್ಮಾಣ ಮಾಡಿದ್ದಾರೆ. 2006ರಲ್ಲಿ ಕೇರಳದಿಂದ ತಮಿಳುನಾಡಿನ ಕೊಡೈಕೆನಲ್​ಗೆ ಫ್ರೆಂಡ್ಸ್ ಗ್ರೂಪ್ ಒಂದು ಟ್ರಿಪ್ ಹೊರಡುತ್ತದೆ. ʻಡೆವಿಲ್ಸ್ ಕಿಚನ್ʼ ಹೆಸರಿನ ಗುಹೆಯಲ್ಲಿ ಸುಭಾಷ್ ಎಂಬಾತ ಬೀಳುತ್ತಾನೆ. ಆತನ ರಕ್ಷಿಸಲು ಫ್ರೆಂಡ್ಸ್ ಪ್ರಯತ್ನಿಸುತ್ತಾರೆ. ಇದರಲ್ಲಿ ಸಕ್ಸೆಸ್‌ ಆಗ್ತಾರಾ? ಇಲ್ಲವಾ ಎಂಬುದೇ ಕಥೆ. ಮಲಯಾಳಂ ಮಾತ್ರವಲ್ಲದೆ ತಮಿಳುನಾಡಿನಲ್ಲೂ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದೆ. ಈ ಚಿತ್ರ ತಮಿಳಿಗೂ ಡಬ್ ಆಗಿ ರಿಲೀಸ್ ಆಗಿದೆ.ಸೌಬಿನ್ ಶಾಹಿರ್, ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಮತ್ತು ಜೀನ್ ಪಾಲ್ ಲಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಚಿದಂಬರಂ ಪೊದುವಾಲ್ ಅವರ ಎರಡನೇ ನಿರ್ದೇಶನ ಸಿನಿಮಾ ಇದು. ಈ ಮುಂಚೆ ʻಜೇನ್‌ಮ್ಯಾನ್ʼ ಹೆಚ್ಚು ಮೆಚ್ಚುಗೆ ಪಡೆದುಕೊಂಡಿತ್ತು. ಸುಶಿನ್ ಶ್ಯಾಮ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

Exit mobile version