ಬೆಂಗಳೂರು: ʼಮಂಜುಮ್ಮೇಲ್ ಬಾಯ್ಸ್’ (Manjummel Boys) ಮಲಯಾಳಂ ಸಿನಿಮಾ ಹಿಟ್ ಕಂಡಿದೆ. ಸಾರ್ವಕಾಲಿಕ ಅತಿ ಹೆಚ್ಚು ಹಣ ಗಳಿಸಿದ ಮಲಯಾಳಂ ಚಿತ್ರವಾಗಿ ಹೊರಹೊಮ್ಮಿದೆ. . ಈ ಚಿತ್ರದ ನಿರ್ಮಾಪಕರಿಗೆ ತೊಂದರೆ ಎದುರಾಗಿತ್ತು. ಈ ಸಿನಿಮಾ ತಂಡದ ವಿರುದ್ಧ ಇಳಯರಾಜ ಅವರು ಕೇಸ್ ಹಾಕಿದ್ದರು. ಈ ಕೇಸ್ನಲ್ಲಿ ಅವರಿಗೆ ಜಯ ಆಗಿದೆ.
ಮಂಜುಮ್ಮೆಲ್ ಬಾಯ್ಸ್’ ನಿರ್ಮಾಪಕರಾದ ಸೌಬಿನ್ ಶಾಹಿರ್, ಬಾಬು ಶಾಹಿರ್ ಮತ್ತು ಶಾನ್ ಆಂಟೋನಿ ಅವರು ಚಿತ್ರದಲ್ಲಿನ ‘ಗುಣ’ ಚಿತ್ರದ ‘ಕಣ್ಮಣಿ ಅನ್ಬೋಡು’ ಹಾಡನ್ನು ಅನಧಿಕೃತವಾಗಿ ಬಳಸಿದ್ದಕ್ಕಾಗಿ ಸಂಯೋಜಕ ಇಳಯರಾಜ ಅವರಿಗೆ 60 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಿದ್ದಾರೆ ಎಂದು ವರದಿಯಾಗಿದೆ.
‘ಮಂಜುಮ್ಮೇಲ್ ಬಾಯ್ಸ್’ ಕಥೆ ಸಾಗೋದು ಗುಣ ಗುಹೆಯಲ್ಲಿ. ಹೀಗಾಗಿ, ‘ಗುಣ’ ಚಿತ್ರದಲ್ಲಿ ಬಳಕೆ ಆದ ‘ಕಣ್ಮಣಿ..’ ಸಾಂಗ್ನ ತಂಡದವರು ಬಳಕೆ ಮಾಡಿಕೊಂಡಿದ್ದರು. ಇದಕ್ಕೆ ಮ್ಯೂಸಿಕ್ ಕಂಪನಿಯಿಂದ ಒಪ್ಪಿಗೆ ಕೂಡ ಪಡೆದಿದ್ದರು. ಆದರೆ, ಇವರು ಇಳಯರಾಜ ಅವರ ಒಪ್ಪಿಗೆ ಪಡೆದಿರಲಿಲ್ಲ. ಈ ಕಾರಣದಿಂದಲೇ ಇಳಯರಾಜ ಅವರು ಕೋರ್ಟ್ನಲ್ಲಿ ಕೇಸ್ ಹಾಕಿ, ತಂಡದವರು ಎರಡು ಕೋಟಿ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು.
ʻಮ್ಯೂಸಿಕ್ ಕಂಪನಿಯಿಂದ ಈ ಹಾಡಿನ ಬಳಕೆಗೆ ಹಕ್ಕನ್ನು ಪಡೆದಿದ್ದೇವೆ’ ಎಂದು ಸಿನಿಮಾ ತಂಡದ ಪರ ವಕೀಲರು ಹೇಳಿದರು. ಇದಕ್ಕೆ ಪ್ರತಿವಾದ ಮಂಡಿಸಿದ ಇಳಯರಾಜ ಪರ ವಕೀಲರು, ‘ಇಳಯರಾಜ ಅವರು ಮಾಡಿದ ಕೆಲಸಗಳಿಗೆ ಅವರು ಕೂಡ ಹಕ್ಕನ್ನು ಹೊಂದಿದ್ದಾರೆ’ ಎಂದರು. ಹೀಗಾಗಿ, ಇಳಯರಾಜ ಅವರು ಈ ಹಾಡನ್ನು ಬಳಸಲು ‘ಮಂಜುಮ್ಮೇಲ್ ಬಾಯ್ಸ್’ ತಂಡಕ್ಕೆ ಯಾವುದೇ ಒಪ್ಪಿಗೆ ನೀಡಿರಲಿಲ್ಲ.
ಇದನ್ನೂ ಓದಿ: Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್ ಕಟ್!
ಸೌಬಿನ್ ಶಬೀರ್ ಸಿನಿಮಾ ನಿರ್ಮಾಣ ಮಾಡಿದ್ದಾರೆ. 2006ರಲ್ಲಿ ಕೇರಳದಿಂದ ತಮಿಳುನಾಡಿನ ಕೊಡೈಕೆನಲ್ಗೆ ಫ್ರೆಂಡ್ಸ್ ಗ್ರೂಪ್ ಒಂದು ಟ್ರಿಪ್ ಹೊರಡುತ್ತದೆ. ʻಡೆವಿಲ್ಸ್ ಕಿಚನ್ʼ ಹೆಸರಿನ ಗುಹೆಯಲ್ಲಿ ಸುಭಾಷ್ ಎಂಬಾತ ಬೀಳುತ್ತಾನೆ. ಆತನ ರಕ್ಷಿಸಲು ಫ್ರೆಂಡ್ಸ್ ಪ್ರಯತ್ನಿಸುತ್ತಾರೆ. ಇದರಲ್ಲಿ ಸಕ್ಸೆಸ್ ಆಗ್ತಾರಾ? ಇಲ್ಲವಾ ಎಂಬುದೇ ಕಥೆ. ಮಲಯಾಳಂ ಮಾತ್ರವಲ್ಲದೆ ತಮಿಳುನಾಡಿನಲ್ಲೂ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದೆ. ಈ ಚಿತ್ರ ತಮಿಳಿಗೂ ಡಬ್ ಆಗಿ ರಿಲೀಸ್ ಆಗಿದೆ.ಸೌಬಿನ್ ಶಾಹಿರ್, ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಮತ್ತು ಜೀನ್ ಪಾಲ್ ಲಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಚಿದಂಬರಂ ಪೊದುವಾಲ್ ಅವರ ಎರಡನೇ ನಿರ್ದೇಶನ ಸಿನಿಮಾ ಇದು. ಈ ಮುಂಚೆ ʻಜೇನ್‌ಮ್ಯಾನ್ʼ ಹೆಚ್ಚು ಮೆಚ್ಚುಗೆ ಪಡೆದುಕೊಂಡಿತ್ತು. ಸುಶಿನ್ ಶ್ಯಾಮ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.