Site icon Vistara News

Pavithra Jayaram: ಗೆಳೆಯ ಚಂದು ಜತೆ ಪವಿತ್ರ ಜಯರಾಮ್ ರೀಲ್ಸ್ ನೋಡಿದ್ರೆ ಕಣ್ಣು ಒದ್ದೆಯಾಗುತ್ತೆ!

Pavithra Jayaram Last Instagram post to chandrakanth

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani Serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ (Pavithra Jayaram)‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ಅವರ ಪ್ರಿಯತಮ, ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿಯ ಸಾವಿನ ಸುದ್ದಿ ಹೊರಬೀಳುತ್ತಿದ್ದಂತೆ, ಚಂದ್ರಕಾಂತ್‌ ಅವರು ಪವಿತ್ರ ಜಯರಾಮ್ ಜತೆ ರೀಲ್ಸ್‌ ಮಾಡಿರುವ ವಿಡಿಯೊಗಳು ವೈರಲ್‌ ಆಗುತ್ತಿವೆ.

ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ‘ತ್ರಿನಯನಿ’ ನಟಿ ಸೀರೆಯನ್ನು ಧರಿಸಿ ನಟ ಚಂದ್ರಕಾಂತ್‌ ಜತೆ ಪುಟ್ಟಮಲ್ಲಿ ಸಾಂಗ್‌ಗೆ ಹೆಜ್ಜೆ ಹಾಕಿದ್ದರು. ‘ತ್ರಿನಯನಿ’ಯಲ್ಲಿ ಸಹೋದರ ಪಾತ್ರ ನಿಭಾಯಿಸುತ್ತಿದ್ದರು ಚಂದ್ರಕಾಂತ್‌. ಚಂದ್ರಕಾಂತ್‌ ಕೊನೆಯ ಪೋಸ್ಟ್‌ನಲ್ಲಿ “ನನ್ನ ಪ್ರೀತಿ ಯಾವಾಗಲೂ ನಿನಗೆ. ಮಿಸ್ ಯೂ ಪಾಪಾʼʼ ಎಂದು ಬರೆಯಲಾಗಿತ್ತು. ಪೋಸ್ಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ವಿಡಿಯೊ ಡಿಲಿಟ್‌ ಮಾಡಿದ್ದರು ನಟ.

ಇದನ್ನೂ ಓದಿ: Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

ಇದೀ ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಂಧ್ರಪ್ರದೇಶದಲ್ಲಿ (Andhra Pradesh) ಚಂದ್ರಕಾಂತ್‌ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪವಿತ್ರ ಜಯರಾಮ್‌ ಅವರ ನಿಧನದ ಬಳಿಕ ಖಿನ್ನತೆಗೊಳಗಾಗಿದ್ದ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶದ ರಂಗಾರೆಡ್ಡಿ ಜಿಲ್ಲೆ ನರಸಿಂಗ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಅಲ್ಕಾಪುರ ಕಾಲೊನಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ಪವಿತ್ರಾ ಜಯರಾಮ್‌ ಅವರು ಕಾರು ಅಪಘಾತದಲ್ಲಿ ಮೇ 12ರಂದು ಮೃತಪಟ್ಟಿದ್ದರು. ಅದೇ ಕಾರಿನಲ್ಲಿ ಚಂದ್ರಕಾಂತ್‌ ಅವರು ಕೂಡ ತೆರಳುತ್ತಿದ್ದಾರೆ. ಘಟನೆಯ ಬಳಿಕ ನೊಂದಿದ್ದ ಅವರು ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ನಟಿಯ ಅಗಲಿಕೆಯ ನೋವು ತಾಳದೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Kannada New Movie: ಬಹು ನಿರೀಕ್ಷಿತ ʻಪೌಡರ್‌ʼ ಸಿನಿಮಾ ಟೀಸರ್‌ ಔಟ್‌!

ದುರಂತ ಸಾವು

ಆಂಧ್ರಪ್ರದೇಶದ ಕರ್ನೂಲು ಬಳಿ ಮೇ 12ರಂದು ಬೆಳಗ್ಗೆ ಅಪಘಾತ ಸಂಭವಿಸಿತ್ತು. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಚಂದ್ರಕಾಂತ್‌ ಕೂಡ ನಟರಾಗಿದ್ದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ನಿಶ್ಚಯಿಸಿದ್ದರು. ಆದರೆ, ಒಂದೇ ವಾರದಲ್ಲಿ ಇಬ್ಬರೂ ದುರಂತ ಸಾವು ಕಂಡಿದ್ದಾರೆ.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼಎಂದಿದ್ದರು.

Exit mobile version