ಬೆಂಗಳೂರು: ʻದಸರಾʼ ಮೂಲಕ ಧಮಾಕ ಎಬ್ಬಿಸಿದ್ದ ನ್ಯಾಚುರಲ್ ಸ್ಟಾರ್ ನಾನಿ (Actor Nani) ಮತ್ತೊಮ್ಮೆ ಅದೇ ತಂಡದ ಜತೆ ಕೈ ಜೋಡಿಸಿದ್ದಾರೆ. ನಾನಿ ಅಭಿನಯಿಸುತ್ತಿರುವ 33ನೇ ಸಿನಿಮಾ ಘೋಷಣೆಯಾಗಿದೆ. ʻದಸರಾʼಗೆ ಆ್ಯಕ್ಷನ್ ಕಟ್ ಹೇಳಿ ಮೊದಲ ಚಿತ್ರದಲ್ಲೇ ನಿರ್ದೇಶಕರಾಗಿ ಖ್ಯಾತಿ ಗಳಿಸಿರುವ ಶ್ರೀಕಾಂತ್ ಒಡೆಲಾ, ನಿರ್ಮಾಪಕ ಸುಧಾಕರ್ ಚೆರುಕುರಿ ಹಾಗೂ ನಾನಿ ಎರಡನೇ ಬಾರಿಗೆ ಒಂದಾಗಿದ್ದಾರೆ. ಈ ಹೊಸ ಪ್ರಾಜೆಕ್ಟ್ ಫಸ್ಟ್ ಲುಕ್ ರಿವೀಲ್ ಆಗಿದೆ.
ಬಾಯಲ್ಲಿ ಸಿಗರೇಟ್, ಸಖತ್ ರಗಡ್ ಲುಕ್‌ನಲ್ಲಿ ನಾನಿ ಕಾಣಿಸಿಕೊಂಡಿದ್ದಾರೆ. ಕೆಂಪು ಬಣ್ಣದ ಪೋಸ್ಟರ್‌ನಲ್ಲಿ ಸಾಕಷ್ಟು ಸಂಖ್ಯೆಯ ಜನರನ್ನು ಕೂಡ ತೋರಿಸಲಾಗಿದೆ. ಮತ್ತೊಂದು ಪವರ್ ಪ್ಯಾಕ್ಡ್ ಆ್ಯಕ್ಷನ್ ನೊಂದಿಗೆ ನಾನಿ ಪರಿಚಯ ಎಂದು ಶ್ರೀಕಾಂತ್ ತಮ್ಮ ಹೊಸ ಪ್ರಾಜೆಕ್ಟ್ ಬಗ್ಗೆ ತಿಳಿಸಿದ್ದಾರೆ.
ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ (SLV ಸಿನಿಮಾಸ್) ನಡಿ ಸುಧಾಕರ್ ಚೆರುಕುರಿ ನಾನಿ 33ನೇ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ನಾನಿ ಈ ಚಿತ್ರದಲ್ಲಿ ಹಿಂದೆಂದೂ ಕಾಣದ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. 2025ಕ್ಕೆ ಸಿನಿಮಾ ತೆರೆಗೆ ತರೋದಿಕ್ಕೆ ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಇದನ್ನೂ ಓದಿ: Actor Nani: ‘ಹಾಯ್ ನಾನ್ನʼ ಚಿತ್ರತಂಡದಿಂದ ವಿಜಯ್-ರಶ್ಮಿಕಾ ಖಾಸಗಿ ಫೋಟೊ ಬಳಕೆ; ನಾನಿ ಹೇಳಿದ್ದೇನು?
ಇದನ್ನೂ ಓದಿ: Actor Nani: ‘ಹಾಯ್ ನಾನ್ನʼ ಚಿತ್ರತಂಡದಿಂದ ವಿಜಯ್-ರಶ್ಮಿಕಾ ಖಾಸಗಿ ಫೋಟೊ ಬಳಕೆ; ನಾನಿ ಹೇಳಿದ್ದೇನು?
‘ದಸರಾ’ ಸಿನಿಮಾ ತೆರೆಕಂಡು ಒಂದು ವರ್ಷವಾಗಿದೆ. ಈ ಖುಷಿಯಲ್ಲಿ ಹೊಸ ಪ್ರಾಜೆಕ್ಟ್ ಅನೌನ್ಸ್ ಮಾಡಲಾಗಿದೆ. ಸದ್ಯ ನಾನಿ 33 ಎಂದು ಟೈಟಲ್ ಇಡಲಾಗಿದೆ. ಕಳೆದ ವರ್ಷ ತೆರೆಗೆ ಬಂದಿದ್ದ ಮಾಸ್ ಆಕ್ಷನ್ ಎಂಟರ್ ಟೈನರ್ ದಸರಾ ಸಿನಿಮಾ ಬಾಕ್ಸಾಫೀಸ್ ನಲ್ಲಿ ಭರ್ಜರಿ ಬೇಟೆಯಾಡಿತ್ತು.
ದಸರಾ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಬಳಿಕ ನ್ಯಾಚುರಲ್ ಸ್ಟಾರ್ ನಾನಿ (Actor Nani) ʻಹಾಯ್ ನಾನ್ನʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ವೈರ ಎಂಟರ್‌ಟೈನ್ಮೆಂಟ್ಸ್ ಬ್ಯಾನರ್‌ನಡಿ ಮೋಹನ್ ಚೆರುಕುರಿ, ಡಾ.ವಿಜೇಂದ್ರ ರೆಡ್ಡಿ ಹಾಗೂ ಮೂರ್ತಿ ಕಲಗಾರ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಸಾನು ಜಾನ್ ವರ್ಗೀಸ್ ISC ಕ್ಯಾಮೆರಾ ವರ್ಕ್ ಚಿತ್ರಕ್ಕಿರಲಿದ್ದು, ಪ್ರವೀಣ್ ಆಂಥೋನಿ ಸಂಕಲನ ಚಿತ್ರಕ್ಕಿರಲಿದೆ. ಈ ಚಿತ್ರದಲ್ಲಿ ಮೃಣಾಲ್ ಠಾಕೂರ್, ಶ್ರುತಿ ಹಾಸನ್, ನಾನಿ ಮೊದಲಾದವರು ನಟಿಸಿದ್ದರು.