Site icon Vistara News

Aishwarya Arjun: ಪತಿ ಜತೆ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ ಐಶ್ವರ್ಯಾ ಸರ್ಜಾ!

Aishwarya Arjun best evening with umapathy ramaiah

ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯಾ ಸರ್ಜಾ (Aishwarya Arjun) ಅವರ ವಿವಾಹ ನಟ ಉಮಾಪತಿ ರಾಮಯ್ಯ ಅವರೊಂದಿಗೆ ಚೆನ್ನೈನಲ್ಲಿ ಸೋಮವಾರ (ಜೂನ್​ 10ರಂದು) ನಡೆದಿತ್ತು. ಇದೀಗ ಮದುವೆ ಬಳಿಕ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಪತಿ ಜೊತೆ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ.

ಸಂಗೀತ ಕಾರ್ಯಕ್ರಮದಲ್ಲಿ ಉಮಾಪತಿ ಮತ್ತು ನಟಿ ಐಶ್ವರ್ಯಾ ಲೈಟ್ ಬಣ್ಣದ ಉಡುಗೆಯಲ್ಲಿ ಮಿಂಚಿದ್ದಾರೆ. ಮಸ್ತ್ ಆಗಿ ಹೆಜ್ಜೆ ಹಾಕಿದೆ ಜೋಡಿ. ಪಾರ್ಟಿ ಫೋಟೋ ಶೇರ್ ಮಾಡಿ ಸುಂದರ ಸಂಜೆ ಎಂದು ನಟಿ ಅಡಿಬರಹ ನೀಡಿದ್ದಾರೆ.

ಇದನ್ನೂ ಓದಿ: Dolly Dhananjay: ಮೈಸೂರಿನಲ್ಲಿ ಡಾಲಿ ಧನಂಜಯ್‌ ಅಭಿನಯದ ‘ಕೋಟಿ’ ಸಿನಿಮಾ ವೀಕ್ಷಿಸಲಿರುವ ಪ್ರತಾಪ್ ಸಿಂಹ!

ಜೂನ್ 14ರಂದು ಆರತಕ್ಷತೆ ಕಾರ್ಯಕ್ರಮ ಚೆನ್ನೈನಲ್ಲಿ ಅದ್ಧೂರಿಯಾಗಿ ಮಾಡಲಾಯ್ತು. ಈ ಸಮಾರಂಭದಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ಉಪೇಂದ್ರ, ರಜನಿಕಾಂತ್, ಶಿವಕಾರ್ತಿಕೇಯನ್, ನಟಿ ಸ್ನೇಹಾ, ವಿಜಯ್ ಸೇತುಪತಿ, ಪ್ರಭುದೇವ ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದರು.

2023ರ ಅಕ್ಟೋಬರ್ 27 ರಂದು ಈ ಇವರಿಬ್ಬರ ಎಂಗೇಜ್​ಮೆಂಟ್​ ಇದೇ ದೇವಸ್ಥಾನದ ಆವರಣದಲ್ಲಿ ನಡೆದಿತ್ತು. ಇವರಿಬ್ಬರು ಹಲವಾರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಮದುವೆಯಾಗಲು ನಿರ್ಧರಿಸಿದ ಅವರು ಕಳೆದ ವರ್ಷ ಎಂಗೇಜ್​ಮೆಂಟ್ ಮಾಡಿಕೊಂಡು ಇದೀಗ ಮದುವೆಯಾಗಿದ್ದಾರೆ. ಐಶ್ವರ್ಯಾ ಮತ್ತು ಉಮಾಪತಿ ಪ್ರೀತಿಗೆ ಎರಡು ಕುಟುಂಬದ ಸಮ್ಮತಿಯಿತ್ತು. ಬಳಿಕ ಅದ್ಧೂರಿಯಾಗಿ ಎಂಗೇಂಜ್‌ಮೆಂಟ್ ನಡೆದಿತ್ತು. ಐಶ್ವಯಾ ಅರ್ಜುನ್​ 2018ರಲ್ಲಿ ‘ಪ್ರೇಮ ಬರಹ’ ಚಿತ್ರದಲ್ಲಿ ನಟಿಸಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು.
Exit mobile version