Site icon Vistara News

Anushka Shetty: ಅನುಷ್ಕಾ-ಪ್ರಭಾಸ್ ಡೀಪ್​ಫೇಕ್ ಫೋಟೊ ವೈರಲ್‌; ಕೇಸ್‌ ದಾಖಲು!

Anushka Shetty Parents Complaint After Her Deepfake Photos

ಬೆಂಗಳೂರು: ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ (Anushka Shetty) ದಕ್ಷಿಣ ಚಿತ್ರರಂಗದ ಕ್ಯೂಟ್‌ ಜೋಡಿ ಎಂತಲೇ ಕರೆಯಲ್ಪಡುತ್ತಾರೆ. ಕಳೆದ ಕೆಲವು ವರ್ಷಗಳಿಂದ ಜೋಡಿ ರಿಲೇಶನ್‌ಶಿಪ್‌ನಲ್ಲಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. ಬಳಿಕ ತಾವು ಉತ್ತಮ ಸ್ನೇಹಿತರು ಎಂದು ಹೇಳಿಕೊಂಡಿದ್ದರು. ಸ್ವಲ್ಪದಿನಗಳಿಂದ ಸೋಷಿಯಲ್‌ ಮೀಡಿಯಾದಲ್ಲಿ ಅನುಷ್ಕಾ ಮತ್ತು ಪ್ರಭಾಸ್​ ಅವರ ಮದುವೆಯ ಫೋಟೊಗಳು ವೈರಲ್​ ಆಗುತ್ತಿವೆ. ಈ ಫೋಟೋ ವೈರಲ್​ ಆಗುತ್ತಿದ್ದಂತೆಯೇ, ಅನುಷ್ಕಾ ಪೋಷಕರು ಪೊಲೀಸರ ಬಳಿ ದೂರು ದಾಖಲಿಸಲಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಹಲವು ವರ್ಷಗಳಿಂದ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಸಂಬಂಧದಲ್ಲಿದ್ದಾರೆ ಎಂಬ ವದಂತಿ ಹರಡಿತ್ತು. ಆದರೆ, ತಾವು ಸ್ನೇಹಿತರಾಗಿದ್ದು, ನಮ್ಮ ಮಧ್ಯೆ ಇನ್ನೇನೂ ಇಲ್ಲ ಎಂದು ಜೋಡಿ ಸ್ಪಷ್ಟಪಡಿಸಿದೆ. ಅನುಷ್ಕಾ ಹಾಗೂ ಪ್ರಭಾಸ್ ‘ಮಿರ್ಚಿ’ ಮೊದಲಾದ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಇವರು ಒಟ್ಟಾಗಿ ನಟಿಸಿದ ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಸಿನಿಮಾ ದೊಡ್ಡ ಯಶಸ್ಸು ಕಂಡಿತು. ಅಭಿಮಾನಿಗಳು ಮಾತ್ರ ಈ ಜೋಡಿ ಒಂದಾದರೆ ಚೆಂದ ಎಂದು ಆಗಾಗ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ.

ಇದೀಗ ಅನುಷ್ಕಾ ಅವರ ಡೀಪ್​ಫೇಕ್ ಫೋಟೋ ವೈರಲ್ ಆಗಿದೆ.ಅನುಷ್ಕಾ ಹಾಗೂ ಪ್ರಭಾಸ್ ಮದುವೆಯಾಗಿ ಅವರಿಗೆ ಮಕ್ಕಳು ಇರುವಂಥ ಫೋಟೋ ಸೃಷ್ಟಿ ಮಾಡಲಾಗಿದೆ. ಇದೇ ವಿಚಾರವಾಗಿ ಅನುಷ್ಕಾ ಶೆಟ್ಟಿ ಪೋಷಕರು ಪೊಲೀಸರ ಬಳಿ ದೂರು ದಾಖಲಿಸಲಿದ್ದಾರೆ. ಸುಳ್ಳು ಸುದ್ದಿ ಹಾಗೂ ನಕಲಿ ಫೋಟೋಗಳನ್ನು ವೈರಲ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Bangalore Kambala: ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ ಸೇರಿ ಹಲವು ತಾರೆಯರು ಕಂಬಳಕ್ಕೆ ಭಾಗಿ!

ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರ ಡೀಪ್​ಫೇಕ್ ವೀಡಿಯೋ ವೈರಲ್ ಆಗುತ್ತಿದ್ದಂತೆ ಹಲವರು ಇದಕ್ಕೆ ಪ್ರತಿಕ್ರಿಯಿಸಿದ್ದರು. ಈಗ ಅನುಷ್ಕಾ ಅವರ ಡೀಪ್​ಫೇಕ್ ಫೋಟೋ ವೈರಲ್ ಆಗಿದೆ.

ಕಠಿಣ ಕ್ರಮಕ್ಕೆ ಕೇಂದ್ರ ಸರ್ಕಾರ ಚಿಂತನೆ

ಡೀಪ್‌ಫೇಕ್‌ ವಿಡಿಯೊಗಳು ಆತಂಕ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ವಿಡಿಯೊ ಪಸರಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಚಿಂತನೆ ನಡೆಸಿತ್ತು. ಡೀಪ್‌ಫೇಕ್‌ ಈಗ ಸಮಾಜಕ್ಕೆ ಮಾರಕವಾಗುತ್ತಿದೆ. ಇದು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹಾಗಾಗಿ, ಕ್ಷಿಪ್ರವಾಗಿ ಕಠಿಣ ಕ್ರಮ ತೆಗೆದುಕೊಳ್ಳುವ ಅವಶ್ಯಕತೆ ಇದೆ. ಇದರ ದಿಸೆಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಮುಂಬರುವ ದಿನಗಳಲ್ಲಿ ಡೀಪ್‌ಫೇಕ್‌ ನಿಯಂತ್ರಣದ, ಕ್ರಮ ತೆಗೆದುಕೊಳ್ಳುವುದರ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಮುಂಬರುವ ಡಿಸೆಂಬರ್‌ನಲ್ಲಿ ಇದರ ಕುರಿತು ಮತ್ತಷ್ಟು ಚರ್ಚಿಸಲಾಗುತ್ತದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನೂ ಇದಕ್ಕಾಗಿ ಬಳಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿತ್ತು.

Exit mobile version