Double iSmart Trailer:  ಡಬಲ್ ಇಸ್ಮಾರ್ಟ್ ಟ್ರೈಲರ್‌ ಔಟ್‌; ಅಬ್ಬರಿಸಿದ ಸಂಜಯ್ ದತ್‌! - Vistara News

ಟಾಲಿವುಡ್

Double iSmart Trailer:  ಡಬಲ್ ಇಸ್ಮಾರ್ಟ್ ಟ್ರೈಲರ್‌ ಔಟ್‌; ಅಬ್ಬರಿಸಿದ ಸಂಜಯ್ ದತ್‌!

Double iSmart Trailer:  ಮಿಸ್ಟರ್ ಬಚ್ಚನ್ʼ ನಿರ್ದೇಶಕ ಹ್ಯಾರಿಸ್ ಶಂಕರ್ ಬೇರೆ ಯಾರು ಅಲ್ಲ, ಬದಲಿಗೆ ಪುರಿ ಜಗನ್ನಾಥ್ ಶಿಷ್ಯ. ಒಂದು ಕಾಲದಲ್ಲಿ ಪುರಿ ಬಳಿ ಕೆಲಸ ಕಲಿತ ಹ್ಯಾರಿಸ್ ಶಂಕರ್ ಈಗ ಗುರುವಿಗೆ ತಿರುಮಂತ್ರ ಹಾಕುತ್ತಿದ್ದಾರೆ. ಕೇವಲ ಹ್ಯಾರಿಸ್ ಶಂಕರ್ ಮಾತ್ರ ಅಲ್ಲ, ʻಮಿಸ್ಟರ್ ಬಚ್ಚನ್ʼ ಚಿತ್ರದ ಮೂಲಕ ರವಿತೇಜಾ ಕೂಡ ಪುರಿ ಜಗನ್ನಾಥ್ ಅವರಿಗೆ ಸೆಡ್ಡು ಹೊಡೆದಿದ್ದಾರೆ. ರವಿತೇಜಾ ಅವರಿಂದ ಪುರಿ ಜಗನ್ನಾಥ್ ಇದನ್ನು ನಿರೀಕ್ಷೆ ಮಾಡಿರಲಿಲ್ಲ.

VISTARANEWS.COM


on

Double Ismart Trailer Ram Pothineni Sanjay Dutt
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿರ್ದೇಶಕ ಪೂರಿ ಜಗನ್ನಾಥ್ ನಿರ್ದೇಶನದ ʻಡಬಲ್ ಇಸ್ಮಾರ್ಟ್ʼ (Ram Pothineni) ಸಿನಿಮಾ ಟ್ರೈಲರ್‌ ಬಿಡುಗಡೆಗೊಂಡಿದೆ. ರಾಮ್ ಪೋತಿನೇನಿ (Double iSmart Trailer) ಮತ್ತು ಸಂಜಯ್ ದತ್‌ ಸಖತ್‌ ಹೈಲೈಟ್‌ ಆಗಿದ್ದಾರೆ. ಬಿಗ್‌ ಬುಲ್ ಪಾತ್ರದಲ್ಲಿ ಸಂಜಯ್ ದತ್‌ ಅಬ್ಬರಿಸಿದ್ದಾರೆ.

ಪುರಿ ಅವರ ನೆಚ್ಚಿನ ಹಾಸ್ಯನಟ ಅಲಿ ಕೂಡ ಕೆಲವು ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್‌ಗೆ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆಗಳು ಬಂದವು, ಕೆಲವರು ಇದನ್ನು ‘ಬ್ಲಾಕ್‌ಬಸ್ಟರ್’ ಎಂದು ಕರೆದರು. ಮತ್ತು ಚಿತ್ರವು ಪುರಿ ಮತ್ತು ರಾಮ್ ಇಬ್ಬರಿಗೂ ‘ಕಮ್‌ಬ್ಯಾಕ್’ ಆಗಲಿದೆ ಎಂದು ಆಶಿಸುತ್ತಿದ್ದಾರೆ.

ನಿರ್ದೇಶಕ ಪೂರಿ ಜಗನ್ನಾಥ್ ಮತ್ತು ನಟ ರವಿತೇಜ ಇಟ್ಲು ಶ್ರಾವಣಿ ಸುಬ್ರಮಣ್ಯಂ’ ಮತ್ತುಈಡಿಯಟ್’ ನಂತಹ ಹಿಟ್ ಸಿನಿಮಾಗಳನ್ನು (Mr Bachchan Director) ಒಟ್ಟಿಗೆ ನೀಡಿದವರು. ರವಿತೇಜಾ ಅವರ ʻಮಿಸ್ಟರ್ ಬಚ್ಚನ್ʼ ಮತ್ತು ಪುರಿ ಅವರ ನಿರ್ದೇಶನದ ʻಡಬಲ್ ಇಸ್ಮಾರ್ಟ್ʼ (Ram Pothineni) ಆಗಸ್ಟ್ 15 ರಂದು ತೆಲುಗು ಬಾಕ್ಸ್ ಆಫೀಸ್ನಲ್ಲಿ ಘರ್ಷಣೆಗೆ ಸಿದ್ಧವಾಗಿದೆ (Puri Jagannadh’s directorial ). ‘ಡಬಲ್ ಇಸ್ಮಾರ್ಟ್” ಮತ್ತು ”ಮಿಸ್ಟರ್ ಬಚ್ಚನ್” ತಂಡದ ನಡುವೆ ಶೀತಲ ಸಮರ ಆರಂಭವಾಗಿದೆ.

ʻಮಿಸ್ಟರ್ ಬಚ್ಚನ್ʼ ನಿರ್ದೇಶಕ ಹ್ಯಾರಿಸ್ ಶಂಕರ್ ಬೇರೆ ಯಾರು ಅಲ್ಲ, ಬದಲಿಗೆ ಪುರಿ ಜಗನ್ನಾಥ್ ಶಿಷ್ಯ. ಒಂದು ಕಾಲದಲ್ಲಿ ಪುರಿ ಬಳಿ ಕೆಲಸ ಕಲಿತ ಹ್ಯಾರಿಸ್ ಶಂಕರ್ ಈಗ ಗುರುವಿಗೆ ತಿರುಮಂತ್ರ ಹಾಕುತ್ತಿದ್ದಾರೆ. ಕೇವಲ ಹ್ಯಾರಿಸ್ ಶಂಕರ್ ಮಾತ್ರ ಅಲ್ಲ, ʻಮಿಸ್ಟರ್ ಬಚ್ಚನ್ʼ ಚಿತ್ರದ ಮೂಲಕ ರವಿತೇಜಾ ಕೂಡ ಪುರಿ ಜಗನ್ನಾಥ್ ಅವರಿಗೆ ಸೆಡ್ಡು ಹೊಡೆದಿದ್ದಾರೆ. ರವಿತೇಜಾ ಅವರಿಂದ ಪುರಿ ಜಗನ್ನಾಥ್ ಇದನ್ನು ನಿರೀಕ್ಷೆ ಮಾಡಿರಲಿಲ್ಲ.

ಡಬಲ್ ಇಸ್ಮಾರ್ಟ್” ಚಿತ್ರಕ್ಕೆ ಚಾರ್ಮಿ ಕೌರ್ ಕೂಡ ಬಂಡವಾಳ ಹೂಡಿದ್ದಾರೆ. ಹೀಗಾಗಿಯೇ ಪುರಿ ಜಗನ್ನಾಥ್ ಜೊತೆ ರವಿತೇಜಾ ಮೇಲೆ ಕೋಪ ಮಾಡಿಕೊಂಡಿರುವ ಚಾರ್ಮಿ,ಸದ್ಯಕ್ಕೆ ”ಮಿಸ್ಟರ್ ಬಚ್ಚನ್” ನಿರ್ದೇಶಕ ಹರೀಶ್ ಶಂಕರ್ ಮತ್ತು ನಾಯಕ ರವಿತೇಜಾ ಇಬ್ಬರನ್ನೂ ಸಾಮಾಜಿಕ ಜಾಲತಾಣದಲ್ಲಿ ಅನ್​ಫಾಲೋ ಮಾಡಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ; Actor Kiran Raj: ಕಿರಣ್‌ರಾಜ್‌ `ರಾನಿ’ ಸಿನಿಮಾಗೆ ಯು/ಎ ಸರ್ಟಿಫಿಕೇಟ್; ತೆರೆಗೆ ಯಾವಾಗ?

ಡಬಲ್ ಇಸ್ಮಾರ್ಟ್

ಸೌತ್ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್ ಇಸ್ಮಾರ್ಟ್’ ಚಿತ್ರದಲ್ಲೂ ವಿಲನ್ ಆಗಿ ನಟಿಸಿದ್ದಾರೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಡಬಲ್ ಇಸ್ಮಾರ್ಟ್ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಸ್ಯಾಮ್ ಕೆ. ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಾಹಕರಾಗಿ ದುಡಿದಿದ್ದಾರೆ.
ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ಸ್ ಬ್ಯಾನರ್ ಅಡಿಯಲ್ಲಿ ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿದ್ದಾರೆ. ಆಗಸ್ಟ್-15 ರಂದು ಚಿತ್ರ ಎಲ್ಲೆಡೆ ರಿಲೀಸ್ ಮಾಡಲಾಗುತ್ತಿದೆ. ವಿಶ್ವದಾದ್ಯಂತ ಬರ್ತಿರೋ ಈ ಚಿತ್ರದ ಪ್ರಚಾರ ಕೂಡ ಈಗಾಗಲೇ ಶುರು ಆಗಿದೆ.

2019ರಲ್ಲಿ ‘ಇಸ್ಮಾರ್ಟ್ ಶಂಕರ್’ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರುತ್ತಿದೆ. ಟಾಲಿವುಡ್‌ನಲ್ಲಿ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ.



ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

Filmfare South 2024: ಫಿಲ್ಮ್‌ಫೇರ್ ಅವಾರ್ಡ್ಸ್ ಸೌತ್; ತೆಲುಗು, ತಮಿಳು ಹಾಗೂ ಮಲಯಾಳಂ ಪ್ರಶಸ್ತಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ

Filmfare South 2024: 2023ರಲ್ಲಿ ತೆರೆಕಂಡ ದಕ್ಷಿಣ ಭಾರತದ ಸಿನಿಮಾಗಳಿಗೆ ಫಿಲ್ಮ್‌ಫೇರ್ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಕೆಲವು ಸಿನಿಮಾಗಳು ದಕ್ಷಿಣ ಭಾರತದಲ್ಲಿ ಸಿನಿಪ್ರಿಯರ ಮನಗೆದ್ದಿದೆ. ಅಂತಹ ಸಿನಿಮಾಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

VISTARANEWS.COM


on

Filmfare South 2024 mollywood tollywood 69th Filmfare Awards
Koo

ಬೆಂಗಳೂರು: 2023ರಲ್ಲಿ ತೆರೆಕಂಡು ಜನಪ್ರಿಯತೆ ಗಳಿಸಿದ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯ ಸಿನಿಮಾಗಳಿಗೆ ಪ್ರಶಸ್ತಿಯನ್ನು ನೀಡಲಾಗಿದೆ. 2023ರಲ್ಲಿ ತೆರೆಕಂಡ ದಕ್ಷಿಣ ಭಾರತದ ಸಿನಿಮಾಗಳಿಗೆ ಫಿಲ್ಮ್‌ಫೇರ್ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಕೆಲವು ಸಿನಿಮಾಗಳು ದಕ್ಷಿಣ ಭಾರತದಲ್ಲಿ ಸಿನಿಪ್ರಿಯರ ಮನಗೆದ್ದಿದೆ. ಅಂತಹ ಸಿನಿಮಾಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಫಿಲ್ಮ್‌ಫೇರ್ ತೆಲುಗು ಪ್ರಶಸ್ತಿ ಗೆದ್ದವರ ಸಂಪೂರ್ಣ ಪಟ್ಟಿ

ಅತ್ಯುತ್ತಮ ಸಿನಿಮಾ – ಬಳಗಂ
ಅತ್ಯುತ್ತಮ ನಿರ್ದೇಶಕ – ವೇಣು ಎಲ್ದಂಡಿ ( ಬಳಗಂ)
ಅತ್ಯುತ್ತಮ ಸಿನಿಮಾ (ಕ್ರಿಟಿಕ್ಸ್)- ಬೇಬಿ ( ಸಾಯಿ ರಾಜೇಶ್)
ಅತ್ಯುತ್ತಮ ನಟ – ನಾನಿ ( ದಸರಾ)
ಅತ್ಯುತ್ತಮ ನಟ (ಕ್ರಿಟಿಕ್ಸ್) – ಪ್ರಕಾಶ್ ರಾಜ್ (ರಂಗ ಮಾರ್ತಾಂಡ)
ನವೀನ್ ಪೋಲಿಶೆಟ್ಟಿ ( ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ)
ಅತ್ಯುತ್ತಮ ನಟಿ – ಕೀರ್ತಿ ಸುರೇಶ್ ( ದಸರಾ)
ಅತ್ಯುತ್ತಮ ನಟಿ (ಕ್ರಿಟಿಕ್ಸ್) – ವೈಷ್ಣವಿ ಚೈತನ್ಯ (ಬೇಬಿ)
ಅತ್ಯುತ್ತಮ ಹೊಸ ಪ್ರತಿಭೆ (Male) – ಸಂಗೀತ್ ಶೋಭನ್ (ಮ್ಯಾಡ್)
ಅತ್ಯುತ್ತಮ ಪೋಷಕ ನಟ – ಬ್ರಹ್ಮಾನಂದಂ ( ರಂಗ ಮಾರ್ತಾಂಡ), ರವಿ ತೇಜಾ ( ವಾಲ್ತೇರು ವೀರಯ್ಯ)
ಅತ್ಯುತ್ತಮ ಪೋಷಕ ನಟಿ – ರೂಪಾ ಲಕ್ಷ್ಮಿ (ಬಳಗಂ)
ಅತ್ಯುತ್ತಮ ಸಂಗೀತ ನಿರ್ದೇಶಕ – ವಿಜಯ್ ಬಲ್ಗನಿನ್ (ಬೇಬಿ)
ಅತ್ಯುತ್ತಮ ಸಾಹಿತ್ಯ – ಅನಂತ ಶ್ರೀರಾಮ್ ( ಓ ರೆಂಡು ಪ್ರೇಮ, ಬೇಬಿ)
ಅತ್ಯುತ್ತಮ ಗಾಯಕ – ಶ್ರೀರಾಮ ಚಂದ್ರ (ಬೇಬಿ)
ಅತ್ಯುತ್ತಮ ಗಾಯಕಿ – ಶ್ವೇತಾ ಮೋಹನ್ ( ಸರ್)

ಇದನ್ನೂ ಓದಿ: Workshop: ಬೆಂಗಳೂರಿನಲ್ಲಿ ಆ.10ರಂದು ಸಿನಿಮಾಸಕ್ತರಿಗೆ ಕಾರ್ಯಾಗಾರ

ಫಿಲ್ಮ್‌ಫೇರ್ ತಮಿಳು ಪ್ರಶಸ್ತಿ ಗೆದ್ದವರ ಪಟ್ಟಿ

ಅತ್ಯುತ್ತಮ ಸಿನಿಮಾ – ಚಿತ್ತಾ
ಅತ್ಯುತ್ತಮ ನಿರ್ದೇಶಕ – ಎಸ್‌ ಯು ಅರುಣ್ ಕುಮಾರ್ (ಚಿತ್ತಾ)
ಅತ್ಯುತ್ತಮ ಸಿನಿಮಾ (ಕ್ರಿಟಿಕ್ಸ್)- ವಿದುತಲೈ 1,
ವೆಟ್ರಿ ಮಾರನ್ ಅತ್ಯುತ್ತಮ ನಟ – ವಿಕ್ರಮ್ (ಪೊನ್ನಿಯನ್ ಸೆಲ್ವನ್ 2)
ಅತ್ಯುತ್ತಮ ನಟ (ಕ್ರಿಟಿಕ್ಸ್) – ಸಿದ್ಧಾರ್ಥ್ (ಚಿತ್ತಾ)
ಅತ್ಯುತ್ತಮ ನಟಿ – ನಿಮಿಷಾ ಸಂಜಯನ್ (ಚಿತ್ತಾ)
ಅತ್ಯುತ್ತಮ ನಟಿ (ಕ್ರಿಟಿಕ್ಸ್) – ಐಶ್ವರ್ಯಾ ರಾಜೇಶ್‌, ಅಪರ್ಣ ದಾಸ್
ಅತ್ಯುತ್ತಮ ಪೋಷಕ ನಟ – ಫಹಾದ್ ಫಾಸಿಲ್ (ಮಾಮಣ್ಣನ್)
ಅತ್ಯುತ್ತಮ ಪೋಷಕ ನಟಿ – ಅಂಜಲಿ ನಾಯರ್ (ಚಿತ್ತಾ)
ಅತ್ಯುತ್ತಮ ಸಂಗೀತ ನಿರ್ದೇಶಕ – ಧಿಬು ನಿನನ್ ಥಾಮಸ್, ಸಂತೋಷ್ ನಾರಾಯಣನ್ (ಚಿತ್ತಾ)
ಅತ್ಯುತ್ತಮ ಸಾಹಿತ್ಯ – ಇಳಂಗೊ ಕೃಷ್ಣನ್ ( ಪೊನ್ನಿಯನ್ ಸೆಲ್ವನ್ 2)
ಅತ್ಯುತ್ತಮ ಗಾಯಕ – ಹರಿಚರಣ್ ( ಪೊನ್ನಿಯನ್ ಸೆಲ್ವನ್ 2)
ಅತ್ಯುತ್ತಮ ಗಾಯಕಿ – ಕಾರ್ತಿಕಾ ವೈದ್ಯನಾಥನ್ (ಚಿತ್ತಾ)

ಫಿಲ್ಮ್‌ಫೇರ್ ಮಲಯಾಳಂ ಪ್ರಶಸ್ತಿ ಗೆದ್ದವರ ಸಂಪೂರ್ಣ ಪಟ್ಟಿ

ಅತ್ಯುತ್ತಮ ಸಿನಿಮಾ – 2018
ಅತ್ಯುತ್ತಮ ನಿರ್ದೇಶಕ – ಜೂಡ್ ಆಂಥನಿ ಜೋಸೆಫ್ (2018)
ಅತ್ಯುತ್ತಮ ಸಿನಿಮಾ (ಕ್ರಿಟಿಕ್ಸ್)- ಕಾಥಲ್ ದಿ ಕೋರ್
ಅತ್ಯುತ್ತಮ ನಟ – ಮಮ್ಮುಟ್ಟಿ (ನನ್ಪಕಲ್ ನೆರತು ಮಾಯಕ್ಕಂ)
ಅತ್ಯುತ್ತಮ ನಟ (ಕ್ರಿಟಿಕ್ಸ್) – ಜೋಜು ಜಾರ್ಜ್ಅ
ತ್ಯುತ್ತಮ ನಟಿ – ವಿನ್ಸಿ ಅಲೋಶಿಯಸ್ಅತ್ಯುತ್ತಮ ನಟಿ (ಕ್ರಿಟಿಕ್ಸ್) – ಜ್ಯೋತಿಕಾ
ಅತ್ಯುತ್ತಮ ಪೋಷಕ ನಟ – ಜಗದೀಶ್
ಅತ್ಯುತ್ತಮ ಪೋಷಕ ನಟಿ – ಪೂರ್ಣಿಮಾ ಇಂದ್ರಜಿತ್
ಅತ್ಯುತ್ತಮ ಸಂಗೀತ ನಿರ್ದೇಶಕ – ಸ್ಯಾಮ್ ಸಿಎಸ್
ಅತ್ಯುತ್ತಮ ಸಾಹಿತ್ಯ – ಅನ್ವರ್ ಅಲಿ
ಅತ್ಯುತ್ತಮ ಗಾಯಕ – ಕಪಿಲಾ ಕಪಿಲನ್
ಅತ್ಯುತ್ತಮ ಗಾಯಕಿ – ಕೆ. ಎಸ್. ಚಿತ್ರಾ

Continue Reading

ಟಾಲಿವುಡ್

Ram Gopal Varma: ʻದಿ ಕೇರಳ ಸ್ಟೋರಿʼ ನಾನು ನೋಡಿದ ಅತ್ಯುತ್ತಮ ಚಲನಚಿತ್ರಗಳಲ್ಲಿ ಒಂದು ಎಂದ ರಾಮ್ ಗೋಪಾಲ್ ವರ್ಮಾ!

Ram Gopal Varma: ಕೇರಳದಿಂದ ಕಾಣೆಯಾದ ಹುಡುಗಿಯರ ನಿಜ ಜೀವನದ ಅನುಭವವನ್ನು ಆಧರಿಸಿದೆ ಈ ಸಿನಿಮಾ. ನರ್ಸ್ ಆಗುವ ಕನಸು ಹೊತ್ತ ಶಾಲಿನಿ ಉನ್ನಿಕೃಷ್ಣನ್ ಎಂಬ ಗ್ರಾಮೀಣ ಹುಡುಗಿ, ವಿದೇಶದಲ್ಲಿರುವ ಐಸಿಸ್ ಭಯೋತ್ಪಾದಕ ಶಿಬಿರಕ್ಕೆ ಸೇರಿಹೋದ, ಅಲ್ಲಿಂದ ಹೊರಬರಲಾಗದೆ ಪರಿತಪಿಸುವ ಕತೆಯನ್ನು ಕೇರಳ ಸ್ಟೋರಿ ಹೊಂದಿದೆ. ಕೇರಳದ ಹಿಂದು ಯುವತಿಯರನ್ನು ಕಳ್ಳಸಾಗಣೆ ಮಾಡಿ, ಮತಾಂತರಿಸಿ, ಭಯೋತ್ಪಾದಕ ಶಿಬಿರಗಳಿಗೆ ಕಳುಹಿಸಲಾಗುತ್ತಿದೆ ಎಂಬ ಸುದ್ದಿಗಳು ಸಾಕಷ್ಟಿವೆ. ಅಂಥ ನೈಜ ಪ್ರಕರಣಗಳೂ ವರದಿಯಾಗಿವೆ. ಅದೇ ಹಿನ್ನೆಲೆಯಲ್ಲಿ ಈ ಚಿತ್ರ ಹುಟ್ಟಿಕೊಂಡಿದೆ ಎನ್ನಲಾಗಿದೆ.

VISTARANEWS.COM


on

Ram Gopal Varma calls The Kerala Story one of the best films
Koo

ಬೆಂಗಳೂರು: ಕಳೆದ ವರ್ಷ ಥಿಯೇಟರ್‌ಗಳಲ್ಲಿ ಬಂದ ಅದಾ ಶರ್ಮಾ ಅಭಿನಯದ `ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ (The Kerala Story) ಹಲವಾರು ವಿವಾದಗಳ ನಡುವೆ ಚಿತ್ರಮಂದಿರಗಳಿಗೆ ಅಪ್ಪಳಿಸಿತು. ಕೇರಳದಿಂದ ಕಾಣೆಯಾದ ಹುಡುಗಿಯರ ನಿಜ ಜೀವನದ ಅನುಭವವನ್ನು ಆಧರಿಸಿದೆ ಈ ಸಿನಿಮಾ (Ram Gopal Varma). ಇದೀಗ ಸಂದರ್ಶನದಲ್ಲಿ, ರಾಮ್ ಗೋಪಾಲ್ ವರ್ಮಾ ಅವರು ಈ ಸಿನಿಮಾವನ್ನು ಶ್ಲಾಘಿಸಿದರು. ಬಾಕ್ಸ್‌ ಆಫೀಸ್‌ನಲ್ಲಿ ‘ದಿ ಕೇರಳ ಸ್ಟೋರಿ ₹ 300 ಕೋಟಿ ಗಳಿಸಿದೆ’ ಎಂದು ಅವರು ಹೇಳಿದರು.

ರಾಮ್ ಗೋಪಾಲ್ ವರ್ಮಾ ಮಾತನಾಡಿ ʻʻ ಬಹಳ ಹಿಂದೆ, (ಸಂಗೀತ ಸಂಯೋಜಕ) ಎಆರ್ ರೆಹಮಾನ್ ಅವರು ಟ್ಯೂನ್ ಮಾಡುವಾಗ, ಅದು ವರ್ಷದ ಬ್ಲಾಕ್ಬಸ್ಟರ್ ಆಗಲಿದೆ ಎಂದು ಜನ ಭಾವಿಸುತ್ತಾರೆ. ಆದರೆ ಹಾಡು ಬಂದಾಗ ಜನ ನಿರ್ಲಕ್ಷಿಸುತ್ತಾರೆ. ಆದರೆ ಆಹಾಡನ್ನು ಕೆಟ್ಟದ್ದಾಗಿದೆ ಎಂದು ಕರೆಯುವುದಿಲ್ಲ. ಇದನ್ನು ಸಾಬೀತುಪಡಿಸಲು ಹಲವಾರು ಉದಾಹರಣೆಗಳಿವೆ. ನನ್ನ ಎಲ್ಲಾ ಹಿಟ್ ಚಿತ್ರಗಳು , ನನ್ನ ಫ್ಲಾಪ್‌ಗಳು ಉದ್ದೇಶಪೂರ್ವಕವಾಗಿವೆʼʼಎಂದರು.

ಇದನ್ನು ಉದಾಹರಣೆಯೊಂದಿಗೆ ವಿವರಿಸಿದ ರಾಮ್ ಗೋಪಾಲ್ ವರ್ಮಾ ʻʻಕೇರಳ ಸ್ಟೋರಿ ವರ್ಷಗಳಲ್ಲಿ ನೋಡಿದ ಅತ್ಯುತ್ತಮ ಚಲನಚಿತ್ರಗಳಲ್ಲಿ ಒಂದಾಗಿದೆ. ಆದರೆ ಅದೇ ತಂಡ ಮತ್ತೊಂದು ಸಿನಿಮಾ ಮಾಡಿ ಪ್ಲಾಪ್‌ ಆಯ್ತು ಎಂದು ತಿಳಿದು ಆಘಾತವಾಯಿತುʼʼಎಂದರು.

“ಈ ಚಿತ್ರವು ಕೇರಳದ ಕಥೆ ಎಂದು ನನಗೆ ತುಂಬಾ ಸಂತೋಷವಾಯಿತು. ಹಲವು ವರ್ಷಗಳಿಂದ ನಾನು ನೋಡಿದ ಅತ್ಯುತ್ತಮ ಚಿತ್ರಗಳಲ್ಲಿ ಇದೂ ಒಂದು. ನಾನು ನಿರ್ದೇಶಕ (ಸುದೀಪ್ತೋ ಸೇನ್) ಜೊತೆ ಮಾತನಾಡಿದೆ, ನಾನು ನಿರ್ಮಾಪಕ (ವಿಪುಲ್ ಶಾ), ನಟಿ (ಆದಾ ಶರ್ಮಾ) ಜೊತೆ ಮಾತನಾಡಿದೆ. ನಂತರ, ಮುಂದಿನ ಚಿತ್ರ (ಬಸ್ತರ್: ದಿ ನಕ್ಸಲ್ ಸ್ಟೋರಿ) ಬಂದಿತು. ಬಿಡುಗಡೆಯಾಯಿತು ಮತ್ತು ಹೋಯಿತು. ಅದರ ಬಗ್ಗೆ ನನಗೆ ತಿಳಿದಿರಲಿಲ್ಲʼʼಎಂದರು.

ಇದನ್ನೂ ಓದಿ: Wayanad Tragedy: ವಯನಾಡ್ ಭೂಕುಸಿತ; ದಕ್ಷಿಣ ಭಾರತದ ಸಿನಿಮಾ ನಟರಿಂದ ಸಂತ್ರಸ್ತರಿಗೆ ನೆರವಿನ‌ ಮಹಾಪೂರ

ಕೇರಳದಿಂದ ಕಾಣೆಯಾದ ಹುಡುಗಿಯರ ನಿಜ ಜೀವನದ ಅನುಭವವನ್ನು ಆಧರಿಸಿದೆ ಈ ಸಿನಿಮಾ. ನರ್ಸ್ ಆಗುವ ಕನಸು ಹೊತ್ತ ಶಾಲಿನಿ ಉನ್ನಿಕೃಷ್ಣನ್ ಎಂಬ ಗ್ರಾಮೀಣ ಹುಡುಗಿ, ವಿದೇಶದಲ್ಲಿರುವ ಐಸಿಸ್ ಭಯೋತ್ಪಾದಕ ಶಿಬಿರಕ್ಕೆ ಸೇರಿಹೋದ, ಅಲ್ಲಿಂದ ಹೊರಬರಲಾಗದೆ ಪರಿತಪಿಸುವ ಕತೆಯನ್ನು ಕೇರಳ ಸ್ಟೋರಿ ಹೊಂದಿದೆ. ಕೇರಳದ ಹಿಂದು ಯುವತಿಯರನ್ನು ಕಳ್ಳಸಾಗಣೆ ಮಾಡಿ, ಮತಾಂತರಿಸಿ, ಭಯೋತ್ಪಾದಕ ಶಿಬಿರಗಳಿಗೆ ಕಳುಹಿಸಲಾಗುತ್ತಿದೆ ಎಂಬ ಸುದ್ದಿಗಳು ಸಾಕಷ್ಟಿವೆ. ಅಂಥ ನೈಜ ಪ್ರಕರಣಗಳೂ ವರದಿಯಾಗಿವೆ. ಅದೇ ಹಿನ್ನೆಲೆಯಲ್ಲಿ ಈ ಚಿತ್ರ ಹುಟ್ಟಿಕೊಂಡಿದೆ ಎನ್ನಲಾಗಿದೆ.

Continue Reading

ಟಾಲಿವುಡ್

Adivi Sesh: ʻಗೂಢಚಾರಿʼಗೆ ಆರು ವರ್ಷದ ಸಂಭ್ರಮ; ನಟ ಅಡಿವಿ ಶೇಷ್ ಹೇಳಿದ್ದೇನು?

Adivi Sesh: ಸೂಪರ್ ಹಿಟ್ ಸಿನಿಮಾ ಗೂಢಚಾರಿ ಸೀಕ್ವೆಲ್‌ಗೆ ಸ್ವತಃ ಅಡಿವಿ ಶೇಷ್ ಕಥೆ ಬರೆದಿದ್ದು, ‘ಕಾರ್ತೀಕೇಯ- 2’, ‘ಮೇಜರ್’ ಹಾಗೂ ‘ಕಾಶ್ಮೀರಿ ಫೈಲ್ಸ್’ನಂತ ಸೂಪರ್ ಹಿಟ್ ಸಿನಿಮಾ ನಿರ್ಮಾಣ ಮಾಡಿರೋ ದೊಡ್ಡ ನಿರ್ಮಾಣ ಸಂಸ್ಥೆಗಳು ‘ಗೂಢಚಾರಿ- 2’ಗೆ ಬಂಡವಾಳ ಹೂಡುತ್ತಿವೆ. ಪೀಪಲ್ ಮೀಡಿಯಾ ಫ್ಯಾಕ್ಟರಿ, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಮತ್ತು AK ಎಂಟಟೈನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬ್ಯಾನರ್ ನಡಿ ಟಿಜಿ. ವಿಶ್ವಪ್ರಸಾದ್ ಮತ್ತು ಅಭಿಷೇಕ್ ಅಗರ್ ವಾಲ್ ಜಂಟಿಯಾಗಿ ಈ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ.

VISTARANEWS.COM


on

Adivi Sesh Goodachari Turns 6 unveils six stunning looks
Koo

ಬೆಂಗಳೂರು: ತೆಲುಗು ಚಿತ್ರರಂಗದಲ್ಲಿ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’ಗೆ ಆರು ವರ್ಷದ ಸಂಭ್ರಮ. ಶಶಿ ಕಿರಣ್ ಟಿಕ್ಕಾ ನಿರ್ದೇಶನದ ಈ ಸ್ಪೈ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಅಡಿವಿ ಶೇಷ್ (Adivi Sesh) ಹೀರೊ ಆಗಿ ನಟಿಸಿದ್ದರು. ಯಾವುದೇ ನಿರೀಕ್ಷೆ ಇಲ್ಲದೇ ಬಂದ ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿತ್ತು. ಅಂದಾಜು 6 ಕೋಟಿ ರೂ. ಬಜೆಟ್ ಸಿನಿಮಾ 25-30 ಕೋಟಿ ರೂ. ದೋಚಿತ್ತು. ಈಗ ‘ಗೂಢಚಾರಿ’-2 ಸಿನಿಮಾ ನಿರ್ಮಾಣವಾಗುತ್ತಿದೆ. ಈ ಚಿತ್ರ 40ರಷ್ಟು ಮುಕ್ತಾಯಗೊಂಡಿದೆ. ಬಹಳ ಅದ್ಧೂರಿಯಾಗಿ ಗೂಢಚಾರಿ 2 ನಿರ್ಮಾಣ ಮಾಡಲಾಗುತ್ತಿದೆ. ಗೂಢಚಾರಿಗೆ ಆರು ವರ್ಷದ ಸಂಭ್ರಮದಲ್ಲಿ ಗೂಢಚಾರಿ 2 ಸಿನಿಮಾದ ಆರು ಸ್ಟನ್ನಿಂಗ್ ಲುಕ್ ಬಿಡುಗಡೆ ಮಾಡಲಾಗಿದೆ.

ಗೂಢಚಾರಿ 2 ಬಗ್ಗೆ ಮಾತಾನಾಡಿದ ನಾಯಕ ಅಡಿವಿ ಶೇಷ್, ʻʻಗೂಢಚಾರಿ ಹಲವು ಕಾರಣಗಳಿಂದ ವಿಶೇಷ ಚಿತ್ರವಾಗಿದೆ. ಕಳೆದ ಆರು ವರ್ಷಗಳಲ್ಲಿ ನಾನು ಮೆಚ್ಚುಗೆ ಕೇಳದ ಒಂದು ವಾರವೂ ಇರಲಿಲ್ಲ. ಸದ್ಯ ಗೂಢಚಾರಿ 2 ದೊಡ್ಡ ಮಟ್ಟದಲ್ಲಿ ಮೂಡಿ ಬರುತ್ತಿದೆ. G2 ಅಭಿಮಾನಿಗಳಿಗೆ ಸಖತ್ ಟ್ರೀಟ್ ನೀಡಲಿದೆʼʼ ಎಂದು ತಿಳಿಸಿದರು.

ಸೂಪರ್ ಹಿಟ್ ಸಿನಿಮಾ ಗೂಢಚಾರಿ ಸೀಕ್ವೆಲ್‌ಗೆ ಸ್ವತಃ ಅಡಿವಿ ಶೇಷ್ ಕಥೆ ಬರೆದಿದ್ದು, ‘ಕಾರ್ತೀಕೇಯ- 2’, ‘ಮೇಜರ್’ ಹಾಗೂ ‘ಕಾಶ್ಮೀರಿ ಫೈಲ್ಸ್’ನಂತ ಸೂಪರ್ ಹಿಟ್ ಸಿನಿಮಾ ನಿರ್ಮಾಣ ಮಾಡಿರೋ ದೊಡ್ಡ ನಿರ್ಮಾಣ ಸಂಸ್ಥೆಗಳು ‘ಗೂಢಚಾರಿ- 2’ಗೆ ಬಂಡವಾಳ ಹೂಡುತ್ತಿವೆ. ಪೀಪಲ್ ಮೀಡಿಯಾ ಫ್ಯಾಕ್ಟರಿ, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಮತ್ತು AK ಎಂಟಟೈನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬ್ಯಾನರ್ ನಡಿ ಟಿಜಿ. ವಿಶ್ವಪ್ರಸಾದ್ ಮತ್ತು ಅಭಿಷೇಕ್ ಅಗರ್ ವಾಲ್ ಜಂಟಿಯಾಗಿ ಈ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ.

ಇದನ್ನೂ ಓದಿ: Wayanad Tragedy: ವಯನಾಡ್ ಭೂಕುಸಿತ; ದಕ್ಷಿಣ ಭಾರತದ ಸಿನಿಮಾ ನಟರಿಂದ ಸಂತ್ರಸ್ತರಿಗೆ ನೆರವಿನ‌ ಮಹಾಪೂರ

‘ಗೂಢಚಾರಿ’ ಚಿತ್ರದಲ್ಲಿ ಅಡಿವಿ ಶೇಷ್ ಜೊತೆ ಶೋಬಿತಾ ಧೂಲಿಪಾಲ, ಜಗಪತಿ ಬಾಬು, ಪ್ರಕಾಶ್ ರಾಜ್ ಸೇರಿದಂತೆ ಸಾಕಷ್ಟು ಕಲಾವಿದರು ನಟಿಸಿದ್ದರು. ಸೂಪರ್ ಸಿನಿಮಾ ಸೀಕ್ವೆಲ್‌ನಲ್ಲೇ ನಟಿಸಿ ಮತ್ತೊಮ್ಮೆ ಗೆಲ್ಲುವ ಉತ್ಸಾಹದಲ್ಲಿ ಅಡಿವಿ ಶೇಷ್ ಇದ್ದಾರೆ. ಅಡಿವಿ ಶೇಷ್ ನಟನೆಯ ‘ಮೇಜರ್’ ಚಿತ್ರದ ಎಡಿಟರ್ ವಿನಯ್ ಕುಮಾರ್ ಸಿರಿಗಿನೀದಿ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. 2025ರಲ್ಲಿ ಗೂಢಚಾರಿ 2 ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Continue Reading

ಟಾಲಿವುಡ್

Jr NTR -Janhvi Kapoor: ರೊಮ್ಯಾಂಟಿಕ್​ ಆಗಿ ಕಾಣಿಸಿಕೊಂಡ ಜ್ಯೂನಿಯರ್‌ ಎನ್‌ಟಿಆರ್- ಜಾಹ್ನವಿ; ಆ.5ಕ್ಕೆ ಚಿತ್ರತಂಡದಿಂದ ಗಿಫ್ಟ್‌!​

Jr NTR -Janhvi Kapoor: ಜ್ಯೂನಿಯರ್‌ ಎನ್‌ಟಿಆರ್‌, ಸೈಫ್ ಅಲಿ ಖಾನ್ ಮತ್ತು ಜಾನ್ವಿ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ದೇವರ’ ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ. 2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು.

VISTARANEWS.COM


on

Jr NTR -Janhvi Kapoor Devara Song take centre stage
Koo

ಬೆಂಗಳೂರು: ಟಾಲಿವುಡ್‌ ನಟ ಜ್ಯೂನಿಯರ್‌ ಎನ್‌ಟಿಆರ್ (Jr NTR -Janhvi Kapoor) ಜತೆ ದೇವರ ಸಿನಿಮಾಗಾಗಿ ಜಾಹ್ನವಿ ಕಪೂರ್‌ ತೆರೆ ಹಂಚಿಕೊಂಡಿರುವುದು ಗೊತ್ತೇ ಇದೆ. ಇದೀಗ ‘ದೇವರ: ಪಾರ್ಟ್​ 1’ ಸಿನಿಮಾ (Devara: Part 1) ʼಎರಡನೇ ಹಾಡಿನಲ್ಲಿ ಜೂನಿಯರ್ ಎನ್​ಟಿಆರ್​ ಮತ್ತು ಜಾಹ್ನವಿ ಕಪೂರ್‌ ಅವರು ರೊಮ್ಯಾಂಟಿಕ್​ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇದರ ಝಲಕ್​ ತೋರಿಸಲು ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. 

ಹೊಸದಾಗಿ ಅನಾವರಣಗೊಂಡ ಪೋಸ್ಟರ್‌ನಲ್ಲಿ ಜೋಡಿ ರೊಮ್ಯಾಂಟಿಕ್‌ ಆಗಿ ಕಂಡಿದೆ. ಕಾಡಿನ ಹಿನ್ನೆಲೆ, ಬಿಳಿ ಧರಿಸಿನಲ್ಲಿ ಕ್ಯೂಟ್‌ ಆಗಿ ಕಂಡಿದೆ ಜೋಡಿ. ಜ್ಯೂನಿಯರ್‌ ಎನ್‌ಟಿಆರ್ ಅವರು ಜಾಹ್ನವಿಯನ್ನು ಹಿಡಿದುಕೊಂಡಿದ್ದಾರೆ. ಇದರಲ್ಲಿ ಅವರಿಬ್ಬರ ಜೋಡಿಯನ್ನು ನೋಡಿ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು ಆಗಿದೆ. ಇದು ಆ್ಯಕ್ಷನ್​ ಸಿನಿಮಾ ಆಗಿದ್ದರೂ ಕೂಡ ಜಾನ್ವಿ ಕಪೂರ್​ ಜೊತೆ ಜೂನಿಯರ್​ ಎನ್​ಟಿಆರ್​ ಅವರ ರೊಮ್ಯಾಂಟಿಕ್​ ಕೆಮಿಸ್ಟ್ರಿ ಹೇಗಿರಲಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.ಅನಿರುದ್ಧ್ ರವಿಚಂದರ್​ ಅವರು ‘ದೇವರ: ಪಾರ್ಟ್​ 1’ ಸಿನಿಮಾಗೆ ಸಂಗೀತ ನೀಡಿದ್ದಾರೆ. ಇದು ಪ್ಯಾನ್​ ಇಂಡಿಯಾ ಸಿನಿಮಾ. ತೆಲುಗಿನ ಜೊತೆ ಕನ್ನಡ, ಹಿಂದಿ, ತಮಿಳು ಮುಂತಾದ ಭಾಷೆಯಲ್ಲಿ ಈ ಚಿತ್ರ ರಿಲೀಸ್​ ಆಗಲಿದೆ. ಆಗಸ್ಟ್​ 5ರಂದು ಈ ಸಿನಿಮಾದಿಂದ ಎರಡನೇ ಹಾಡು ರಿಲೀಸ್​ ಆಗಲಿದೆ.

ಜ್ಯೂನಿಯರ್‌ ಎನ್‌ಟಿಆರ್‌, ಸೈಫ್ ಅಲಿ ಖಾನ್ ಮತ್ತು ಜಾನ್ವಿ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ದೇವರ’ ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ. 2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಕೂಡ ಜ್ಯೂನಿಯರ್ ಎನ್​ಟಿಆರ್ ನಾಯಕನಾಗಿದ್ದರು. ಅದಾದ ಮೇಲೆ ಕೊರಟಾಲ ಶಿವ ಅವರೊಟ್ಟಿಗೆ ಜ್ಯೂ.ಎನ್​ಟಿಆರ್ ಯಾವುದೇ ಸಿನಿಮಾವನ್ನೂ ಮಾಡಿರಲಿಲ್ಲ.

ಇದನ್ನೂ ಓದಿ: Kannada New Movie: ʻಟೆನೆಂಟ್’ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌; ಸೋನು ಗೌಡ ನಾಯಕಿ!

ವರ ಸಿನಿಮಾದಲ್ಲಿ ಜ್ಯೂನಿಯರ್ ಎನ್​ಟಿಆರ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಯೂ ಇದೆ. ಅಪ್ಪ-ಮಗ ಎರಡೂ ಪಾತ್ರದಲ್ಲಿ ಇವರೇ ಅಭಿನಯ ಮಾಡಲಿದ್ದಾರಂತೆ. ಇದೊಂದು ಪಕ್ಕಾ ಆ್ಯಕ್ಷನ್​ ಚಿತ್ರದಂತೆ ಕಾಣಿಸುತ್ತಿದೆ. ಯುವಸುಧಾ ಆರ್ಟ್ಸ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಆರ್ಟ್ಸ್ ಈ ಚಿತ್ರವನ್ನು ನಿರ್ಮಿಸಿದ್ದು, ನಂದಮೂರಿ ಕಲ್ಯಾಣ್ ರಾಮ್ ಅವರು ಪ್ರಸ್ತುತಪಡಿಸಿದ್ದಾರೆ.

ಈ ಚಿತ್ರದ OTT ಹಕ್ಕುಗಳನ್ನು ಸ್ಟ್ರೀಮಿಂಗ್ ಕಂಪನಿ ನೆಟ್ಫ್ಲಿಕ್ಸ್ ಭಾರಿ ಬೆಲೆಗೆ ಪಡೆದುಕೊಂಡಿದೆ. ಮಾಹಿತಿಯ ಪ್ರಕಾರ, ನೆಟ್ಫ್ಲಿಕ್ಸ್ 155 ಕೋಟಿ ರೂಪಾಯಿ ನೀಡಿ ಈ ಚಿತ್ರದ OTT ಹಕ್ಕುಗಳನ್ನು ಪಡೆದುಕೊಂಡಿದೆ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Continue Reading
Advertisement
Physical Abuse
ವಿಜಯಪುರ10 mins ago

Physical Abuse : ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದವನಿಗೆ ಚಪ್ಪಲಿ ಏಟು

Sex Racket
Latest14 mins ago

Sex Racket: ಹೋಟೆಲ್‍ನಲ್ಲಿ ಸೆಕ್ಸ್ ದಂಧೆ ಪತ್ತೆ; ನಗ್ನ ಸ್ಥಿತಿಯಲ್ಲಿದ್ದ 10 ಜೋಡಿಗಳು ಪೊಲೀಸ್‌ ಬಲೆಗೆ!

Duniya Vijay- Ganesh To Combined together make Movie in future
ಸ್ಯಾಂಡಲ್ ವುಡ್15 mins ago

Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್‌ ಕಟ್‌!

Cloudburst
ದೇಶ17 mins ago

Cloudburst: ಮೇಘಸ್ಫೋಟದಿಂದ ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ; 40ಕ್ಕೂ ಹೆಚ್ಚು ಮಂದಿ ನಾಪತ್ತೆ

Viral Video
Latest21 mins ago

Viral Video: ಅಳುತ್ತಿರುವ ಹುಡುಗನನ್ನು ಸಮಾಧಾನಪಡಿಸಿದ ನಾಯಿ ಮರಿ! ಆನಂದ್‌ ಮಹೀಂದ್ರಾ ಹಂಚಿಕೊಂಡ ವಿಡಿಯೊ ಇದು

Valmiki Corporation Scam
ಪ್ರಮುಖ ಸುದ್ದಿ31 mins ago

Valmiki Corporation scam: ವಾಲ್ಮೀಕಿ ನಿಗಮ ಹಗರಣ; ಕೋರ್ಟ್‌ಗೆ 3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎಸ್‌ಐಟಿ

Indian stock market
ಪ್ರಮುಖ ಸುದ್ದಿ32 mins ago

Stock Market News: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ, ರೂ.17.03 ಲಕ್ಷ ಕೋಟಿ ನಷ್ಟ

Kannada New Movie idu enta lokavayya movie Kannada ananth nag
ಸಿನಿಮಾ51 mins ago

Kannada New Movie: ʻಇದು ಎಂಥಾ ಲೋಕವಯ್ಯʼ ಸಿನಿಮಾ ಬಿಡುಗಡೆಗೆ ಸಜ್ಜು; ತಂಡಕ್ಕೆ ನಟ ಅನಂತ್ ನಾಗ್ ಸಾಥ್‌!

Nursing student dies
ಕರ್ನಾಟಕ58 mins ago

Nursing Student Dies: 6ನೇ ಮಹಡಿಯಿಂದ ಬಿದ್ದು ನರ್ಸಿಂಗ್‌ ವಿದ್ಯಾರ್ಥಿನಿ ಸಾವು

Stock Market
ವಾಣಿಜ್ಯ1 hour ago

Stock Market: ಷೇರುಪೇಟೆ ಮಹಾ ಪತನ; ಸೆನ್ಸೆಕ್ಸ್‌ 2,000 ಅಂಕ ಕುಸಿತ; 17 ಲಕ್ಷ ಕೋಟಿ ರೂ. ಲಾಸ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌