Site icon Vistara News

Kalki 2898 AD: ಮೂರನೇ ದಿನ ಭರ್ಜರಿ ಗಳಿಕೆ ಕಂಡ ‘ಕಲ್ಕಿ 2898 ಎಡಿ’ ಸಿನಿಮಾ ! 

ಬೆಂಗಳೂರು: ನಾಗ್ ಅಶ್ವಿನ್ ಅವರ ಕಲ್ಕಿ 2898 AD ಜೂನ್ 27 ರಂದು (Kalki 2898 AD) ಬಿಡುಗಡೆಯಾಯಿತು. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್‌ ಬಚ್ಚನ್ ಮತ್ತು ಕಮಲ್ ಹಾಸನ್ ನಟಿಸಿದ ಈ ಚಿತ್ರ ಮೂರು ದಿನಗಳಲ್ಲಿ ಭಾರತದಲ್ಲಿ ಎಲ್ಲಾ ಭಾಷೆಗಳಲ್ಲಿ 220 ಕೋಟಿ ರೂ. ಗಳಿಕೆ ಕಂಡಿದೆ ಎಂದು ವರದಿಯಾಗಿದೆ.

ಕಲ್ಕಿ 2898 AD ತನ್ನ ಆರಂಭಿಕ ದಿನದಲ್ಲಿ 95.3 ಕೋಟಿ ರೂ. ಮತ್ತು ಎರಡನೇ ದಿನ 57.6 ಕೋಟಿ ರೂ. ಭಾರತದಲ್ಲಿ ಗಳಿಕೆ ಕಂಡಿತ್ತು. ನಿನ್ನೆ ಅಂದರೆ ಮೂರನೇ ದಿನ 67.1 ಕೋಟಿ ರೂ. ಗಳಿಸಿ, ಒಟ್ಟು 220 ಕೋಟಿ ವರೆಗೆ ಕಲೆಕ್ಷನ್‌ನಲ್ಲಿ ಏರಿಕೆ ಕಂಡಿದೆ. ಈ ಚಿತ್ರವು ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಎರಡು ದಿನಗಳಲ್ಲಿ 298.5 ಕೋಟಿ ರೂ. ಗಳಿಸಿದೆ. ಭಾನುವಾರದಂದು (ಇಂದು) ಚಿತ್ರ ಯಾವ ರೀತಿ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ. ಕಲ್ಕಿ 2898 AD ಎಲ್ಲಾ ದಕ್ಷಿಣ ಭಾರತದ ಭಾಷೆಗಳಲ್ಲಿ ಮತ್ತು ಹಿಂದಿಯಲ್ಲಿ 2D ಮತ್ತು 3D ನಲ್ಲಿ ಬಿಡುಗಡೆಯಾಗಿದೆ.

ಭಾರತದಲ್ಲಿ ಕೇವಲ ಮೂರು ದಿನಕ್ಕೆ 200 ಕೋಟಿ ಕಲೆಕ್ಷನ್ ಅನ್ನು ದಾಟಿದೆ. ಭಾರತದಲ್ಲಿ ಮೂರು ದಿನದಲ್ಲಿ ‘ಕಲ್ಕಿ’ ಸಿನಿಮಾ ಸುಮಾರು 225 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾತನಾಡಿದ ಕಮಲ್, “ಭಾರತೀಯ ಸಿನಿಮಾ ಜಾಗತಿಕವಾಗಿ ಮನರಂಜನೆ ನೀಡುತ್ತಿದೆ. ಅವುಗಳಲ್ಲಿ ಕಲ್ಕಿ 2898 ಎಡಿ ಸಿನಿಮಾ ಕೂಡ. ನಾಗ್ ಅಶ್ವಿನ್ ಯಾವುದೇ ಧಾರ್ಮಿಕ ಪಕ್ಷಪಾತವಿಲ್ಲದೆ ಪುರಾಣದ ವಿಷಯವನ್ನು ಎಚ್ಚರಿಕೆಯಿಂದ ನಿಭಾಯಿಸಿದ್ದಾರೆ. ಪ್ರಪಂಚದಾದ್ಯಂತ, ಜಪಾನ್, ಚೀನಾ ಮತ್ತು ಗ್ರೀಕ್ ನಾಗರಿಕತೆಗಳು ಮಾತ್ರ ಭಾರತೀಯ ಪರಂಪರೆಯ ಕಥಾಹಂದರದ ಹತ್ತಿರ ಬರಬಹುದು. ಅಶ್ವಿನ್ ಅದರಲ್ಲಿ ಕಥೆಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ ಮತ್ತು ಎಲ್ಲರನ್ನು ಒಟ್ಟಿಗೆ ಸೇರಿಸುವ ಮೂಲಕ ಹೆಚ್ಚು ತಾಳ್ಮೆಯಿಂದ ನಿಭಾಯಿಸಿದ್ದಾರೆʼʼಎಂದರು.

ಇದನ್ನೂ ಓದಿ: Kannada New Movie: ಸೆನ್ಸಾರ್ ಅಂಗಳದಲ್ಲಿ ‘ಬ್ಯಾಕ್ ಬೆಂಚರ್ಸ್’ ಸಿನಿಮಾ!


ಚಿತ್ರದಲ್ಲಿ ಪ್ರಭಾಸ್ ಭೈರವನಾಗಿ, ದೀಪಿಕಾ SUM-80 ಆಗಿ, ಅಮಿತಾಭ್‌ ಅಶ್ವತ್ಥಾಮನಾಗಿ ಮತ್ತು ಕಮಲ್ ಸುಪ್ರೀಂ ಯಾಸ್ಕಿನ್ ಆಗಿ ನಟಿಸಿದ್ದಾರೆ. ಚಿತ್ರದಲ್ಲಿ ದಿಶಾ ಪಟಾನಿ ರಾಕ್ಸಿಯಾಗಿ ನಟಿಸಿದ್ದಾರೆ. ವಿಜಯ್ ದೇವರಕೊಂಡ, ಮೃಣಾಲ್ ಠಾಕೂರ್, ದುಲ್ಕರ್ ಸಲ್ಮಾನ್, ಫರಿಯಾ ಅಬ್ದುಲ್ಲಾ ಮತ್ತು ಇತರರು ಅತಿಥಿ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಕರ್ನಾಟಕದಲ್ಲಿ ‘ಕಲ್ಕಿ2898 AD’ ಸಿನಿಮಾ ಅತೀ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಿತ್ತು. ಕನ್ನಡದಲ್ಲಿ ದೊಡ್ಡ ಸಿನಿಮಾಗಳು ಇಲ್ಲದೇ ಇರುವುದರಿಂದ ಕರ್ನಾಟಕದಲ್ಲಿ ಸುಮಾರು 444 ಸ್ಕ್ರೀನ್‌ಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ 219 ಸ್ಕ್ರೀನ್‌ಗಳಲ್ಲಿ ತೆಲುಗು, 100 ಸ್ಕ್ರೀನ್‌ಗಳಲ್ಲಿ ಕನ್ನಡ, 85 ಸ್ಕ್ರೀನ್‌ಗಳಲ್ಲಿ ಹಿಂದಿ, 40 ಸ್ಕ್ರೀನ್‌ಗಳಲ್ಲಿ ತಮಿಳು ಭಾಷೆಯ ಕಲ್ಕಿ ರಿಲೀಸ್ ಆಗಿದ್ದವು. ಈ ನಾಲ್ಕು ಭಾಷೆಗಳಿಂದ ಕರ್ನಾಟಕದಲ್ಲಿ ‘ಕಲ್ಕಿ2898 AD’ ಗಳಿಸಿದ್ದು ಬರೋಬ್ಬರಿ 6.7 ಕೋಟಿ ರೂಪಾಯಿ (Nett) ಎಂದು ಟ್ರೇಡ್ ಎಕ್ಸ್‌ಪರ್ಟ್‌ಗಳು ಲೆಕ್ಕ ಕೊಟ್ಟಿದ್ದಾರೆ.

ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.

ವಿಶ್ವದಾದ್ಯಂತ (world) ತೆರೆಗೆ ಬಂದ ಅತ್ಯಂತ ದುಬಾರಿ ಚಿತ್ರ (film) ʼಕಲ್ಕಿ 2898 ಎಡಿʼ (Kalki 2898AD) ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇದು ಹಿಂದೂ ಧರ್ಮದ (hindu dharma) ವಿಷಯದ ಮೇಲೆ ಕೇಂದ್ರೀಕೃತವಾಗಿರುವುದು. ಭಗವಾನ್ ವಿಷ್ಣುವಿನ (baghavan vishnu) 10ನೇ ಅವತಾರ ಕಲ್ಕಿ (kalki). ಸದಾಚಾರ ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವ ಕಲ್ಕಿ, ಕಲಿಯುಗವನ್ನು ಕೊನೆಗೊಳಿಸಿ ಮತ್ತೆ ಸತ್ಯಯುಗದ ಸುವರ್ಣ ಯುಗವನ್ನು ಪ್ರಾರಂಭಿಸುತ್ತಾನೆ ಎಂದು ನಂಬಲಾಗಿದೆ.

Exit mobile version