ಬೆಂಗಳೂರು: ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ (Kalki 2898 AD) ಮತ್ತು ಕಮಲ್ ಹಾಸನ್ ಅಭಿನಯದ ಕಲ್ಕಿ 2898 ಎಡಿ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಮೂರನೇ ಅತಿದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದೆ. ಆರಂಭಿಕ ದಿನದಂದು 180 ಕೋಟಿ ರೂ. ಗಳಿಕೆ ಕಂಡಿದೆ. ಕಲ್ಕಿ 2898 ಎಡಿ’ ಚಿತ್ರಕ್ಕೆ ಭಾರತದಲ್ಲಿ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ, ಸಿನಿಮಾ ಭಾರತದಲ್ಲಿ 95 ಕೋಟಿ ರೂಪಾಯಿ ಬಾಚಿಕೊಂಡಿದೆ. ಗ್ರಾಸ್ ಕಲೆಕ್ಷನ್ ಲೆಕ್ಕಾಚಾರ ಕೊಟ್ಟರೆ 115 ಕೋಟಿ ರೂಪಾಯಿ ಆಗುತ್ತದೆ.
ನಾಗ್ ಅಶ್ವಿನ್ ನಿರ್ದೇಶಿಸಿದ ಕಲ್ಕಿ 2898 AD, ಎಲ್ಲಾ ಭಾಷೆಗಳಲ್ಲಿ ಮೊದಲ ದಿನದಲ್ಲಿ ಭಾರತದಲ್ಲಿ ಸುಮಾರು 95 ಕೋಟಿ ರೂಪಾಯಿ ಗಳಿಸಿದೆ, ಆದರೆ ಅದರ ಒಟ್ಟು ಸಂಗ್ರಹವು ಸುಮಾರು 115 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಒಟ್ಟಾರೆಯಾಗಿ, ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಕಲ್ಕಿ 2898 ಎಡಿ ಸಿನಿಮಾ ಹಲವು ಚಿತ್ರಗಳನ್ನು ಹಿಂದಿಕ್ಕಿದೆ. ಅದರಲ್ಲಿ ಕೆಜಿಎಫ್ 2 (ರೂ. 159 ಕೋಟಿ), ಸಲಾರ್ (ರೂ. 158 ಕೋಟಿ), ಲಿಯೋ (ರೂ. 142.75 ಕೋಟಿ) ಸಿನಿಮಾಗಳ ಜಾಗತಿಕ ಆರಂಭಿಕ ದಾಖಲೆಗಳನ್ನು ಹಿಂದಿಕ್ಕಿದೆ. ಆದರೆ, ಮೊದಲ ದಿನದ ಗಳಿಕೆಯಲ್ಲಿ ‘ಆರ್ಆರ್ಆರ್’ (223) ಹಾಗೂ ‘ಬಾಹುಬಲಿ 2’ (217) ಚಿತ್ರವನ್ನು ಹಿಂದಿಕ್ಕಲು ಈ ಸಿನಿಮಾ ಬಳಿ ಸಾಧ್ಯವಾಗಿಲ್ಲ.
ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.
ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!
‘ಕಲ್ಕಿ 2898 ಎಡಿ’ ಚಿತ್ರ ಜೂನ್ 27ರಂದು ರಿಲೀಸ್ ಆಗಿದೆ. ಮೊದಲ ದಿನ ಈ ಚಿತ್ರದ ಲಕ್ಷಾಂತರ ಟಿಕೆಟ್ಗಳು ಮಾರಾಟ ಆಗಿವೆ. ಜನರು ಚಿತ್ರಕ್ಕೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಮಹಾಭಾರತದಿಂದ ಸಿನಿಮಾದ ಕಥೆ ಆರಂಭ ಆಗಲಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನಿ ದತ್ ಬಂಡವಾಳ ಹೂಡಿದ್ದಾರೆ.
ವಿಶ್ವದಾದ್ಯಂತ (world) ತೆರೆಗೆ ಬಂದ ಅತ್ಯಂತ ದುಬಾರಿ ಚಿತ್ರ (film) ʼಕಲ್ಕಿ 2898 ಎಡಿʼ (Kalki 2898AD) ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇದು ಹಿಂದೂ ಧರ್ಮದ (hindu dharma) ವಿಷಯದ ಮೇಲೆ ಕೇಂದ್ರೀಕೃತವಾಗಿರುವುದು. ಭಗವಾನ್ ವಿಷ್ಣುವಿನ (baghavan vishnu) 10ನೇ ಅವತಾರ ಕಲ್ಕಿ (kalki). ಸದಾಚಾರ ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವ ಕಲ್ಕಿ, ಕಲಿಯುಗವನ್ನು ಕೊನೆಗೊಳಿಸಿ ಮತ್ತೆ ಸತ್ಯಯುಗದ ಸುವರ್ಣ ಯುಗವನ್ನು ಪ್ರಾರಂಭಿಸುತ್ತಾನೆ ಎಂದು ನಂಬಲಾಗಿದೆ.
ಲ್ಕಿಯ ಆಗಮನವು ಹಿಂದೂಗಳಲ್ಲಿ ಹೆಚ್ಚು ಚರ್ಚೆಯ ವಿಷಯವಾಗಿದೆ. ಈತ ಕಲಿಯುಗದ ಅಂತ್ಯದಲ್ಲಿ ಕಾಣಿಸಿಕೊಳ್ಳುತ್ತಾನೆ ಎಂದೇ ಭಾವಿಸಲಾಗಿದೆ. ಕಲಿಯುಗ ವಂಚನೆ, ಪಾಪ ಮತ್ತು ಅನೈತಿಕತೆಯಿಂದ ತುಂಬಿರುವ ಯುಗವಾಗಿದೆ. ಇದೀಗ ತೆರೆಗೆ ಬಂದಿರುವ ‘ಕಲ್ಕಿ 2898 ಎಡಿ’ ಈ ಕುರಿತು ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ತೆಲುಗು ಸೂಪರ್‌ಸ್ಟಾರ್ ಪ್ರಭಾಸ್, ಬಾಲಿವುಡ್ ತಾರೆಗಳಾದ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ ಮತ್ತು ತಮಿಳಿನ ಹಿರಿಯ ನಟ ಕಮಲ್ ಹಾಸನ್ ಒಳಗೊಂಡ ಈ ಚಿತ್ರದಲ್ಲಿ ಪೌರಾಣಿಕ ಕಥೆ ಮತ್ತು ವಿಜ್ಞಾನವನ್ನು ಹದವಾಗಿ ಬೆರೆಸಿ ಅದ್ಭುತವಾಗಿ ನಿರ್ಮಿಸಲಾಗಿದೆ. ನಾಗ್ ಅಶ್ವಿನ್ ನಿರ್ದೇಶನದ ಬಹುತೇಕ ಎಲ್ಲಾ ಪ್ರಮುಖ ಪಾತ್ರಗಳನ್ನು ಹಿಂದೂ ಧರ್ಮಗ್ರಂಥಗಳಲ್ಲಿ ಗುರುತಿಸಬಹುದು. ಟ್ರೇಲರ್‌ನಲ್ಲಿ ಭವಿಷ್ಯ ನುಡಿದ ಕಲ್ಕಿಯ ಗುರುತಿನ ಬಗ್ಗೆ ಅಶ್ವಿನ್ ಯಾವುದೇ ಸುಳಿವು ನೀಡಲಿಲ್ಲ.